ಙ್ಞಾನೋಕ್ತಿಗಳು 11 : 1 (OCVKN)
ಮೋಸದ ತಕ್ಕಡಿ ಯೆಹೋವ ದೇವರಿಗೆ ಅಸಹ್ಯವಾಗಿದೆ; ಆದರೆ ನ್ಯಾಯದ ತೂಕ ಅವರಿಗೆ ಮೆಚ್ಚುಗೆ.
ಙ್ಞಾನೋಕ್ತಿಗಳು 11 : 2 (OCVKN)
ಗರ್ವ ಬಂದಾಗ ನಾಚಿಕೆಯೂ ಬರುತ್ತದೆ; ಆದರೆ ದೀನತೆಯೊಂದಿಗೆ ಜ್ಞಾನ ಬರುವುದು.
ಙ್ಞಾನೋಕ್ತಿಗಳು 11 : 3 (OCVKN)
ಯಥಾರ್ಥವಂತರ ಪ್ರಾಮಾಣಿಕತೆ ಅವರನ್ನು ನಡೆಸುವುದು; ಅಪನಂಬಿಗಸ್ತರ ಕಪಟತನವೇ ಅವರನ್ನು ನಾಶಪಡಿಸುವುದು.
ಙ್ಞಾನೋಕ್ತಿಗಳು 11 : 4 (OCVKN)
ಉಗ್ರತೆಯ ದಿನದಲ್ಲಿ ಸಂಪತ್ತು ಲಾಭಕರವಾಗುವುದಿಲ್ಲ; ಆದರೆ ನೀತಿಯ ನಡತೆ ಮರಣದಿಂದ ವಿಮೋಚಿಸುವುದು.
ಙ್ಞಾನೋಕ್ತಿಗಳು 11 : 5 (OCVKN)
ನಿಷ್ಕಳಂಕರ ನೀತಿಯು ಅವರ ಮಾರ್ಗವನ್ನು ಸರಾಗ ಮಾಡುವುದು; ಆದರೆ ದುಷ್ಟರು ತಮ್ಮ ದುಷ್ಟತ್ವದಿಂದಲೇ ಬೀಳುವರು.
ಙ್ಞಾನೋಕ್ತಿಗಳು 11 : 6 (OCVKN)
ಯಥಾರ್ಥವಂತರ ನೀತಿಯು ಅವರನ್ನು ಬಿಡಿಸುವುದು; ಆದರೆ ಅಪನಂಬಿಗಸ್ತರು ದುಷ್ಟ ಆಸೆಗಳಿಂದ ಸಿಕ್ಕಿಹಾಕಿಕೊಳ್ಳುತ್ತಾರೆ.
ಙ್ಞಾನೋಕ್ತಿಗಳು 11 : 7 (OCVKN)
ದುಷ್ಟನು ಸಾಯುವಾಗ ಅವನ ನಿರೀಕ್ಷೆಗಳು ಹಾಳಾಗುವುವು; ತನ್ನ ಬಲದಿಂದ ನಿರೀಕ್ಷಿಸಿದ್ದೆಲ್ಲವೂ ಇಲ್ಲದಂತಾಗುವುದು.
ಙ್ಞಾನೋಕ್ತಿಗಳು 11 : 8 (OCVKN)
ನೀತಿವಂತನು ಇಕ್ಕಟ್ಟಿನಿಂದ ತಪ್ಪಿಸಿಕೊಳ್ಳುತ್ತಾನೆ, ದುಷ್ಟನು ಅದರ ಸ್ಥಳದಲ್ಲಿ ಸಿಕ್ಕಿಬೀಳುವನು.
ಙ್ಞಾನೋಕ್ತಿಗಳು 11 : 9 (OCVKN)
ಒಬ್ಬ ಭಕ್ತಿಹೀನನು ಬಾಯಿಂದ ತನ್ನ ನೆರೆಯವನನ್ನು ಹಾಳು ಮಾಡುತ್ತಾನೆ, ಆದರೆ ನೀತಿವಂತನು ತಿಳುವಳಿಕೆಯ ಮೂಲಕ ಬಿಡಿಸಲಾಗುವನು.
ಙ್ಞಾನೋಕ್ತಿಗಳು 11 : 10 (OCVKN)
ನೀತಿವಂತರು ಅಭಿವೃದ್ಧಿಹೊಂದಿದರೆ, ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ, ಜಯೋತ್ಸವ ಉಂಟಾಗುತ್ತದೆ.
ಙ್ಞಾನೋಕ್ತಿಗಳು 11 : 11 (OCVKN)
ಯಥಾರ್ಥವಂತರ ಆಶೀರ್ವಾದದಿಂದ ಪಟ್ಟಣವು ಪ್ರಗತಿಯಾಗುತ್ತದೆ, ಆದರೆ ದುಷ್ಟರ ಬಾಯಿಂದ ಅದು ನಾಶವಾಗುತ್ತದೆ.
ಙ್ಞಾನೋಕ್ತಿಗಳು 11 : 12 (OCVKN)
ಜ್ಞಾನವಿಲ್ಲದವನು ತನ್ನ ನೆರಯವನನ್ನು ಹೀನೈಸುತ್ತಾನೆ, ಆದರೆ ತಿಳುವಳಿಕೆಯುಳ್ಳವನು ಮೌನವಾಗಿರುತ್ತಾನೆ.
ಙ್ಞಾನೋಕ್ತಿಗಳು 11 : 13 (OCVKN)
ಚಾಡಿಕೋರನು ರಹಸ್ಯಗಳನ್ನು ಬಹಿರಂಗಪಡಿಸುತ್ತಾನೆ, ಆದರೆ ನಂಬಿಗಸ್ತನು ಆ ಸಂಗತಿಯನ್ನು ಮುಚ್ಚುತ್ತಾನೆ.
ಙ್ಞಾನೋಕ್ತಿಗಳು 11 : 14 (OCVKN)
ಆಲೋಚನೆ ಇಲ್ಲದೆ ಇರುವಲ್ಲಿ ಜನರು ಬೀಳುತ್ತಾರೆ, ಆದರೆ ಸಲಹೆಗಾರರ ಸಮೂಹದಲ್ಲಿ ಭದ್ರತೆ ಇದೆ.
ಙ್ಞಾನೋಕ್ತಿಗಳು 11 : 15 (OCVKN)
ಅನ್ಯನಿಗೆ ಹೊಣೆಯಾಗುವವನು ಹಾನಿಗೆ ಗುರಿಯಾಗುತ್ತಾನೆ, ಹೊಣೆಗಾರನಾಗಿರದವನು ಸುರಕ್ಷಿತವಾಗಿರುವನು.
ಙ್ಞಾನೋಕ್ತಿಗಳು 11 : 16 (OCVKN)
ದಯೆಯುಳ್ಳ ಸ್ತ್ರೀಯು ತನ್ನ ಗೌರವವನ್ನು ಸಂಪಾದಿಸಿಕೊಳ್ಳುತ್ತಾಳೆ, ನಿಷ್ಕರುಣ ವ್ಯಕ್ತಿ ಸಂಪತ್ತನ್ನು ಮಾತ್ರ ಪಡೆದುಕೊಳ್ಳುತ್ತಾನೆ.
ಙ್ಞಾನೋಕ್ತಿಗಳು 11 : 17 (OCVKN)
ದಯೆಯುಳ್ಳವನು ತನಗೆ ತಾನೇ ಒಳ್ಳೆಯದನ್ನು ಮಾಡಿಕೊಳ್ಳುತ್ತಾನೆ, ಕಠೋರಿಯು ತನ್ನ ಶರೀರವನ್ನು ಬಾಧಿಸಿಕೊಳ್ಳುತ್ತಾನೆ.
ಙ್ಞಾನೋಕ್ತಿಗಳು 11 : 18 (OCVKN)
ದುಷ್ಟನು ಮೋಸದ ಸಂಬಳವನ್ನು ಸಂಪಾದಿಸುತ್ತಾನೆ, ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹವಾದ ಬಹುಮಾನವಿರುವುದು.
ಙ್ಞಾನೋಕ್ತಿಗಳು 11 : 19 (OCVKN)
ನೀತಿವಂತನ ಮಾರ್ಗಗಳಲ್ಲಿ ಅಚಲವಾಗಿರುವವನು ಜೀವ ಹೊಂದುತ್ತಾನೆ, ಕೆಟ್ಟದ್ದನ್ನು ಬೆನ್ನಟ್ಟುವವನು ತನ್ನ ಮರಣವನ್ನು ಬೆನ್ನಟ್ಟುತ್ತಾನೆ.
ಙ್ಞಾನೋಕ್ತಿಗಳು 11 : 20 (OCVKN)
ವಕ್ರ ಹೃದಯವುಳ್ಳವರು ಯೆಹೋವ ದೇವರಿಗೆ ಅಸಹ್ಯವಾದವರು, ಆದರೆ, ಸನ್ಮಾರ್ಗದಲ್ಲಿ ಯಥಾರ್ಥವಾಗಿ ಇರುವವರಲ್ಲಿ ಅವರು ಆನಂದಿಸುತ್ತಾರೆ.
ಙ್ಞಾನೋಕ್ತಿಗಳು 11 : 21 (OCVKN)
ದುಷ್ಟನಿಗೆ ಶಿಕ್ಷೆ ತಪ್ಪುವುದಿಲ್ಲ; ನೀತಿವಂತರ ವಂಶವು ಬಿಡುಗಡೆ ಹೊಂದುವುದು.
ಙ್ಞಾನೋಕ್ತಿಗಳು 11 : 22 (OCVKN)
ಹಂದಿಯ ಮೂಗಿಗೆ ಬಂಗಾರದ ಮೂಗುತಿಯು ಹೇಗೋ, ಹಾಗೆಯೇ ವಿವೇಕವಿಲ್ಲದ ಸ್ತ್ರೀಗೆ ಸೌಂದರ್ಯವು.
ಙ್ಞಾನೋಕ್ತಿಗಳು 11 : 23 (OCVKN)
ನೀತಿವಂತರ ಅಪೇಕ್ಷೆಯು ಶುಭಕ್ಕಾಸ್ಪದ, ದುಷ್ಟರ ಅಪೇಕ್ಷೆಯು ತೀರ್ಪಿಗೀಡು.
ಙ್ಞಾನೋಕ್ತಿಗಳು 11 : 24 (OCVKN)
ಒಬ್ಬನು ತನ್ನ ಸಂಪತ್ತನ್ನು ಉದಾರವಾಗಿ ವ್ಯಯಮಾಡಿದರೂ ಅವನು ವೃದ್ಧಿಯಾಗುತ್ತಾನೆ, ಆದರೆ ಇನ್ನೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನು ಬಡತನಕ್ಕೆ ಬರುತ್ತಾನೆ.
ಙ್ಞಾನೋಕ್ತಿಗಳು 11 : 25 (OCVKN)
ಉದಾರಿಯು ಅಭಿವೃದ್ಧಿ ಹೊಂದುವನು; ಬೇರೆಯವರಿಗೆ ಚೈತನ್ಯ ಕೊಡುವವನು ಚೈತನ್ಯ ಹೊಂದುವನು.
ಙ್ಞಾನೋಕ್ತಿಗಳು 11 : 26 (OCVKN)
ಧಾನ್ಯವನ್ನು ಬಚ್ಚಿಟ್ಟುಕೊಳ್ಳುವವನನ್ನು ಜನರು ಶಪಿಸುವರು; ಆದರೆ ಅದನ್ನು ಮಾರುವವನ ಮೇಲೆ ಆಶೀರ್ವಾದವು ನೆಲೆಯಾಗಿರುವುದು.
ಙ್ಞಾನೋಕ್ತಿಗಳು 11 : 27 (OCVKN)
ಒಳ್ಳೆಯದನ್ನು ಸೂಕ್ಷ್ಮವಾಗಿ ಹುಡುಕುವವನು ದಯೆಯನ್ನು ಹೊಂದುತ್ತಾನೆ; ಆದರೆ ಕೇಡನ್ನು ಹುಡುಕುವವನಿಗೆ ಕೇಡೇ ಆಗುವುದು.
ಙ್ಞಾನೋಕ್ತಿಗಳು 11 : 28 (OCVKN)
ತನ್ನ ಐಶ್ವರ್ಯದಲ್ಲಿ ಭರವಸೆ ಇಡುವವನು ಬಿದ್ದುಹೋಗುವನು, ಆದರೆ ನೀತಿವಂತರು ಹಸಿರೆಲೆಯ ಹಾಗೆ ಚಿಗುರುವರು.
ಙ್ಞಾನೋಕ್ತಿಗಳು 11 : 29 (OCVKN)
ತನ್ನ ಮನೆಯವರನ್ನು ಬಾಧಿಸುವವನು ಗಾಳಿಯನ್ನು ಬಾಧ್ಯವಾಗಿ ಹೊಂದುವನು; ಮೂರ್ಖನು ಜ್ಞಾನನಿಗೆ ಸೇವಕನಾಗಿರುವನು.
ಙ್ಞಾನೋಕ್ತಿಗಳು 11 : 30 (OCVKN)
ನೀತಿವಂತರ ಫಲವು ಜೀವವೃಕ್ಷ; ಆತ್ಮಗಳನ್ನು ಗೆಲ್ಲುವವನು ಜ್ಞಾನಿಯಾಗಿದ್ದಾನೆ.
ಙ್ಞಾನೋಕ್ತಿಗಳು 11 : 31 (OCVKN)
ಇಗೋ, ಭೂಮಿಯ ಮೇಲೆ ನೀತಿವಂತರು ತಮ್ಮ ಫಲವನ್ನು ಹೊಂದಲಿಕ್ಕಿರುವಾಗ, ದುಷ್ಟರು ಮತ್ತು ಪಾಪಿಗಳು ಎಷ್ಟೋ ಹೆಚ್ಚಾಗಿ ತಮ್ಮ ಫಲವನ್ನು ಹೊಂದುತ್ತಾರೆ.
❮
❯