ಙ್ಞಾನೋಕ್ತಿಗಳು 12 : 1 (OCVKN)
ಶಿಸ್ತನ್ನು ಪ್ರೀತಿಸುವವನು ಪರಿಜ್ಞಾನವನ್ನು ಪ್ರೀತಿಸುವವನಾಗಿದ್ದಾನೆ, ಆದರೆ ತಿದ್ದುವಿಕೆಯನ್ನು ಹಗೆಮಾಡುವವನು ದಡ್ಡನು.
ಙ್ಞಾನೋಕ್ತಿಗಳು 12 : 2 (OCVKN)
ಒಳ್ಳೆಯವನು ಯೆಹೋವ ದೇವರ ದಯೆಯನ್ನು ಹೊಂದುತ್ತಾನೆ, ಆದರೆ ಕುಯುಕ್ತಿ ಮಾಡುವವನನ್ನು ಅವರು ದುಷ್ಟನೆಂದು ಖಂಡಿಸುತ್ತಾರೆ.
ಙ್ಞಾನೋಕ್ತಿಗಳು 12 : 3 (OCVKN)
ಒಬ್ಬ ಮನುಷ್ಯನು ದುಷ್ಟತನದಿಂದ ಸ್ಥಿರವಾಗುವುದಿಲ್ಲ. ಆದರೆ ನೀತಿವಂತರನ್ನು ಕಿತ್ತುಹಾಕಲಾಗುವುದಿಲ್ಲ.
ಙ್ಞಾನೋಕ್ತಿಗಳು 12 : 4 (OCVKN)
ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ; ಆದರೆ ನಾಚಿಕೆ ಪಡಿಸುವವಳು ಅವನ ಎಲುಬುಗಳಿಗೆ ಕ್ಷಯ ರೋಗದಂತೆ ಇರುವಳು.
ಙ್ಞಾನೋಕ್ತಿಗಳು 12 : 5 (OCVKN)
ನೀತಿವಂತರ ಯೋಜನೆಗಳು ನ್ಯಾಯವಾಗಿವೆ; ದುಷ್ಟರ ಸಲಹೆ ಮೋಸಭರಿತ.
ಙ್ಞಾನೋಕ್ತಿಗಳು 12 : 6 (OCVKN)
ದುಷ್ಟರ ಮಾತುಗಳು ರಕ್ತಕ್ಕೆ ಹೊಂಚು, ಯಥಾರ್ಥವಂತರ ನುಡಿ ಅವರನ್ನು ಬಿಡಿಸುವುದು.
ಙ್ಞಾನೋಕ್ತಿಗಳು 12 : 7 (OCVKN)
ದುಷ್ಟರು ನೆಲಕ್ಕುರುಳಿ ನಿರ್ಮೂಲರಾಗುವರು, ಆದರೆ ನೀತಿವಂತರ ಮನೆಯು ಸ್ಥಿರವಾಗಿ ನಿಲ್ಲುವುದು.
ಙ್ಞಾನೋಕ್ತಿಗಳು 12 : 8 (OCVKN)
ತನ್ನ ಜ್ಞಾನಕ್ಕನುಸಾರವಾಗಿ ಮನುಷ್ಯನು ಗೌರವ ಹೊಂದುವನು; ವಕ್ರಹೃದಯವುಳ್ಳವನು ಕಡೆಗಣಿಸಲಾಗುವನು.
ಙ್ಞಾನೋಕ್ತಿಗಳು 12 : 9 (OCVKN)
ಹೊಟ್ಟೆಗೆ ಕೊರತೆ ಇದ್ದು ತನ್ನನ್ನು ತಾನೇ ಘನಪಡಿಸಿಕೊಳ್ಳುವವನಿಗಿಂತಲೂ ಸಾಮಾನ್ಯ ಸೇವಕನೇ ಮೇಲು.
ಙ್ಞಾನೋಕ್ತಿಗಳು 12 : 10 (OCVKN)
ನೀತಿವಂತನು ತನ್ನ ಪ್ರಾಣಿಗಳಿಗೂ ಕಾಳಜಿ ತೋರುವನು; ಆದರೆ ದುಷ್ಟರ ಕರುಣೆಯ ಕಾರ್ಯಗಳು ಕ್ರೂರತನವೇ.
ಙ್ಞಾನೋಕ್ತಿಗಳು 12 : 11 (OCVKN)
ತನ್ನ ಹೊಲವನ್ನು ವ್ಯವಸಾಯ ಮಾಡುವವನು ಆಹಾರದಿಂದ ತೃಪ್ತಿಹೊಂದುವನು, ಆದರೆ ವ್ಯರ್ಥ ಕಾರ್ಯವನ್ನು ಹಿಂಬಾಲಿಸುವವನು ವಿವೇಕಶೂನ್ಯನು.
ಙ್ಞಾನೋಕ್ತಿಗಳು 12 : 12 (OCVKN)
ದುಷ್ಟರು ಕೆಟ್ಟವರ ಭದ್ರಕೋಟೆಯನ್ನು ಅಪೇಕ್ಷಿಸುತ್ತಾರೆ; ಆದರೆ ನೀತಿವಂತರ ಬೇರು ಫಲವನ್ನು ಕೊಡುತ್ತದೆ.
ಙ್ಞಾನೋಕ್ತಿಗಳು 12 : 13 (OCVKN)
ದುಷ್ಟನು ತನ್ನ ತಪ್ಪು ಮಾತುಗಳಿಂದ ಬಲೆಗೆ ಬೀಳುವನು, ಆದರೆ ನೀತಿವಂತರು ಇಕ್ಕಟ್ಟಿನೊಳಗಿಂದ ತಪ್ಪಿಸಿಕೊಳ್ಳುವರು.
ಙ್ಞಾನೋಕ್ತಿಗಳು 12 : 14 (OCVKN)
ತನ್ನ ಬಾಯಿಯ ಫಲದ ಮುಖಾಂತರ ಒಬ್ಬ ಮನುಷ್ಯನು ಒಳ್ಳೆಯದರಿಂದ ತೃಪ್ತನಾಗುವನು, ಮನುಷ್ಯನ ಕೈಕೆಲಸಗಳು ಅವನಿಗೆ ಪ್ರತಿಫಲವನ್ನು ಕೊಡುವುವು.
ಙ್ಞಾನೋಕ್ತಿಗಳು 12 : 15 (OCVKN)
ಮೂರ್ಖನ ಮಾರ್ಗವು ತನ್ನ ಕಣ್ಣುಗಳಿಗೆ ಸರಿಯಾಗಿದೆ, ಆದರೆ ಜ್ಞಾನಿಯು ಸಲಹೆಗೆ ಕಿವಿಗೊಡುವನು.
ಙ್ಞಾನೋಕ್ತಿಗಳು 12 : 16 (OCVKN)
ಮೂರ್ಖನ ಕೋಪವು ತಟ್ಟನೆ ರಟ್ಟಾಗುವುದು, ಆದರೆ ಜಾಣನು ಅವಮಾನವನ್ನು ನಿರ್ಲಕ್ಷಿಸುತ್ತಾನೆ.
ಙ್ಞಾನೋಕ್ತಿಗಳು 12 : 17 (OCVKN)
ಒಬ್ಬ ಪ್ರಾಮಾಣಿಕ ಸಾಕ್ಷಿ ಸತ್ಯವನ್ನು ಹೇಳುತ್ತಾನೆ, ಆದರೆ ಸುಳ್ಳುಸಾಕ್ಷಿಯು ಸುಳ್ಳನ್ನು ಹೇಳುತ್ತಾನೆ.
ಙ್ಞಾನೋಕ್ತಿಗಳು 12 : 18 (OCVKN)
ಅಜಾಗರೂಕತೆಯ ಮಾತುಗಳು ಖಡ್ಗಗಳಂತೆ ಚುಚ್ಚುತ್ತವೆ, ಆದರೆ ಜ್ಞಾನವಂತರ ನಾಲಿಗೆಯು ಸ್ವಸ್ಥತೆಯನ್ನು ತರುವುದು.
ಙ್ಞಾನೋಕ್ತಿಗಳು 12 : 19 (OCVKN)
ಸತ್ಯದ ತುಟಿಯು ಸದಾ ಸ್ಥಿರಗೊಳ್ಳುವುದು, ಸುಳ್ಳಾಡುವ ನಾಲಿಗೆಯು ಕ್ಷಣಿಕ.
ಙ್ಞಾನೋಕ್ತಿಗಳು 12 : 20 (OCVKN)
ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ; ಸಮಾಧಾನದ ಆಲೋಚನೆಯನ್ನು ಹೇಳುವವರಿಗೆ ಸಂತೋಷ.
ಙ್ಞಾನೋಕ್ತಿಗಳು 12 : 21 (OCVKN)
ನೀತಿವಂತನಿಗೆ ಯಾವ ಕೇಡೂ ಸಂಭವಿಸದು, ಆದರೆ ದುಷ್ಟರು ಕೇಡಿನಿಂದ ತುಂಬಿಕೊಳ್ಳುವರು.
ಙ್ಞಾನೋಕ್ತಿಗಳು 12 : 22 (OCVKN)
ಸುಳ್ಳಾಡುವ ತುಟಿಗಳು ಯೆಹೋವ ದೇವರಿಗೆ ಅಸಹ್ಯವಾಗಿವೆ; ಆದರೆ ಸತ್ಯವಂತರಲ್ಲಿ ಅವರು ಆನಂದಿಸುತ್ತಾರೆ.
ಙ್ಞಾನೋಕ್ತಿಗಳು 12 : 23 (OCVKN)
ಜಾಣನು ತನ್ನ ಜ್ಞಾನವನ್ನು ಗುಪ್ತಪಡಿಸುತ್ತಾನೆ; ಆದರೆ ಮೂರ್ಖನ ಹೃದಯವು ಮೂರ್ಖತನವನ್ನು ಹೇಳುತ್ತದೆ.
ಙ್ಞಾನೋಕ್ತಿಗಳು 12 : 24 (OCVKN)
ಚುರುಕು ಕೈಯುಳ್ಳವನು ಆಳುವನು; ಸೋಮಾರಿಗಳು ಗುಲಾಮರಾಗುವರು.
ಙ್ಞಾನೋಕ್ತಿಗಳು 12 : 25 (OCVKN)
ಆತಂಕವು ಹೃದಯವನ್ನು ಕುಗ್ಗಿಸುವುದು, ಆದರೆ ಕನಿಕರದ ಮಾತು ಹುರಿದುಂಬಿಸುವುದು.
ಙ್ಞಾನೋಕ್ತಿಗಳು 12 : 26 (OCVKN)
ನೀತಿವಂತರು ತಮ್ಮ ಸ್ನೇಹಿತರನ್ನು ಎಚ್ಚರಿಕೆಯಿಂದ ಆರಿಸುತ್ತಾರೆ, ಆದರೆ ದುಷ್ಟರ ಮಾರ್ಗವು ಅವರನ್ನು ತಪ್ಪು ದಾರಿಗೆ ಎಳೆಯುತ್ತದೆ.
ಙ್ಞಾನೋಕ್ತಿಗಳು 12 : 27 (OCVKN)
ಸೋಮಾರಿಯು ಬೇಟೆಯಾಡಿದ್ದನ್ನು ಬೇಯಿಸುವುದಿಲ್ಲ, ಆದರೆ ಶ್ರಮಪಡುವವರು ಅದನ್ನು ತೃಪ್ತಿಯಿಂದ ತಿನ್ನುತ್ತಾರೆ.
ಙ್ಞಾನೋಕ್ತಿಗಳು 12 : 28 (OCVKN)
ನೀತಿಯ ಮಾರ್ಗದಲ್ಲಿ ಜೀವವಿದೆ; ಅದರ ದಾರಿಯಲ್ಲಿ ಮರಣವೇ ಇಲ್ಲ.
❮
❯