ಙ್ಞಾನೋಕ್ತಿಗಳು 14 : 1 (OCVKN)
ಜ್ಞಾನಿಯಾದ ಸ್ತ್ರೀಯು ತನ್ನ ಮನೆಯನ್ನು ಕಟ್ಟುತ್ತಾಳೆ; ಬುದ್ಧಿಹೀನಳೋ ತನ್ನ ಕೈಗಳಿಂದಲೇ ಅದನ್ನು ಕಿತ್ತುಹಾಕುತ್ತಾಳೆ.
ಙ್ಞಾನೋಕ್ತಿಗಳು 14 : 2 (OCVKN)
ತನ್ನ ಯಥಾರ್ಥತೆಯಲ್ಲಿ ನಡೆಯುವವನು ಯೆಹೋವ ದೇವರಿಗೆ ಭಯಪಡುತ್ತಾನೆ, ಆದರೆ ಅವರನ್ನು ತಿರಸ್ಕರಿಸುವವರು ತಮ್ಮ ಮಾರ್ಗಗಳಲ್ಲಿ ಮೋಸ ಹೋಗುತ್ತಾರೆ.
ಙ್ಞಾನೋಕ್ತಿಗಳು 14 : 3 (OCVKN)
ಬುದ್ಧಿಹೀನನ ಬಾಯಿಯಲ್ಲಿ ಗರ್ವದ ಅಂಕುರವಿದೆ, ಆದರೆ ಜ್ಞಾನವಂತರ ತುಟಿಗಳು ಅವರನ್ನು ಕಾಪಾಡುವುವು.
ಙ್ಞಾನೋಕ್ತಿಗಳು 14 : 4 (OCVKN)
ಎತ್ತುಗಳು ಇಲ್ಲದೆ ಇರುವಲ್ಲಿ ಗೋದಲಿಯು ಶುಚಿಯಾಗಿರುತ್ತದೆ, ಆದರೆ ಎತ್ತಿನ ಬಲದಿಂದಲೇ ಬೆಳೆಯು ಹೇರಳವಾಗಿ ವೃದ್ಧಿಯಾಗುತ್ತದೆ.
ಙ್ಞಾನೋಕ್ತಿಗಳು 14 : 5 (OCVKN)
ಪ್ರಾಮಾಣಿಕ ಸಾಕ್ಷಿಯು ಸುಳ್ಳಾಡನು, ಆದರೆ ಸುಳ್ಳುಸಾಕ್ಷಿಯು ಅಸತ್ಯವನ್ನೇ ಆಡುವನು.
ಙ್ಞಾನೋಕ್ತಿಗಳು 14 : 6 (OCVKN)
ಅಪಹಾಸ್ಯ ಮಾಡುವವನು ಜ್ಞಾನವನ್ನು ಹುಡುಕಿದರೂ ಅದನ್ನು ಕಂಡುಕೊಳ್ಳುವುದಿಲ್ಲ, ಆದರೆ ವಿವೇಚಿಸುವವನಿಗೆ ಜ್ಞಾನವು ಸುಲಭವಾಗಿದೆ.
ಙ್ಞಾನೋಕ್ತಿಗಳು 14 : 7 (OCVKN)
ನೀನು ಬುದ್ಧಿಹೀನನ ತುಟಿಗಳಲ್ಲಿ ಪರಿಜ್ಞಾನವನ್ನು ಕಾಣದೆ ಹೋದರೆ, ಅವನ ಬಳಿಯಿಂದ ಹೊರಟು ಹೋಗು.
ಙ್ಞಾನೋಕ್ತಿಗಳು 14 : 8 (OCVKN)
ಜಾಣನ ಜ್ಞಾನವು ತನ್ನ ಮಾರ್ಗಗಳಿಗೆ ಆಲೋಚನೆ ನೀಡುತ್ತದೆ. ಮೂಢರ ಬುದ್ಧಿಹೀನತೆಯು ಮೋಸಕರ.
ಙ್ಞಾನೋಕ್ತಿಗಳು 14 : 9 (OCVKN)
ಬುದ್ಧಿಹೀನರು ಪಾಪಪರಿಹಾರವನ್ನು ಅಪಹಾಸ್ಯ ಮಾಡುವರು, ಆದರೆ ನೀತಿವಂತರಿಗೆ ದಯೆಯಿದೆ.
ಙ್ಞಾನೋಕ್ತಿಗಳು 14 : 10 (OCVKN)
ಹೃದಯಕ್ಕೆ ತನ್ನ ವ್ಯಥೆಯು ಗೊತ್ತು; ಪರನು ಅದರ ಸಂತೋಷದಲ್ಲಿ ಪಾಲಾಗುವುದಿಲ್ಲ.
ಙ್ಞಾನೋಕ್ತಿಗಳು 14 : 11 (OCVKN)
ದುಷ್ಟರ ಮನೆಯು ನಾಶವಾಗುವುದು, ಆದರೆ ಯಥಾರ್ಥವಂತರ ಗುಡಾರವು ಏಳಿಗೆಯಾಗುವುದು.
ಙ್ಞಾನೋಕ್ತಿಗಳು 14 : 12 (OCVKN)
ಮನುಷ್ಯ ದೃಷ್ಟಿಗೆ ಸರಿ ತೋರುವ ಒಂದು ಮಾರ್ಗವಿದೆ, ಆದರೆ ಅದರ ಅಂತ್ಯವು ಮರಣದ ಮಾರ್ಗಗಳೇ.
ಙ್ಞಾನೋಕ್ತಿಗಳು 14 : 13 (OCVKN)
ನಗೆಯಲ್ಲಿಯೂ ಹೃದಯವು ದುಃಖದಿಂದ ಇರುವುದು, ಅದರ ಉಲ್ಲಾಸದ ಅಂತ್ಯವು ಸಂತಾಪವೇ.
ಙ್ಞಾನೋಕ್ತಿಗಳು 14 : 14 (OCVKN)
ಭ್ರಷ್ಟನು ತನ್ನ ದುಷ್ಕರ್ಮಗಳಿಂದ ದಣಿಯನು, ಒಳ್ಳೆಯವನು ತನ್ನಲ್ಲಿ ತಾನೇ ತೃಪ್ತಿಹೊಂದುವನು.
ಙ್ಞಾನೋಕ್ತಿಗಳು 14 : 15 (OCVKN)
ಅರಿವಿಲ್ಲದವರು ಯಾವ ಮಾತನ್ನಾದರೂ ನಂಬುತ್ತಾರೆ, ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.
ಙ್ಞಾನೋಕ್ತಿಗಳು 14 : 16 (OCVKN)
ಜ್ಞಾನಿಯು ಯೆಹೋವ ದೇವರಿಗೆ ಭಯಪಟ್ಟು ಕೆಟ್ಟತನದಿಂದ ದೂರ ಹೋಗುವನು, ಆದರೆ ಬುದ್ಧಿಹೀನನು ಯೋಚಿಸದೆ ಆತ್ಮವಿಶ್ವಾಸದಿಂದ ನಡೆಯುವನು.
ಙ್ಞಾನೋಕ್ತಿಗಳು 14 : 17 (OCVKN)
ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುತ್ತಾನೆ, ಜನರು ಕುಯುಕ್ತಿಯುಳ್ಳವನನ್ನು ಹಗೆ ಮಾಡುತ್ತಾರೆ.
ಙ್ಞಾನೋಕ್ತಿಗಳು 14 : 18 (OCVKN)
ಅರಿವಿಲ್ಲದವರು ಮೂರ್ಖತನಕ್ಕೆ ಬಾಧ್ಯರಾಗುತ್ತಾರೆ, ಆದರೆ ಜಾಣರು ಪರಿಜ್ಞಾನದಿಂದ ಆವರಿಸುತ್ತಾರೆ.
ಙ್ಞಾನೋಕ್ತಿಗಳು 14 : 19 (OCVKN)
ದುಷ್ಟರು ಒಳ್ಳೆಯವರಿಗೆ ಬಾಗುತ್ತಾರೆ, ದುಷ್ಟರು ನೀತಿವಂತರ ದ್ವಾರಗಳಲ್ಲಿ ಅಡ್ಡ ಬೀಳುತ್ತಾರೆ.
ಙ್ಞಾನೋಕ್ತಿಗಳು 14 : 20 (OCVKN)
ಬಡವನು ಅವನ ನೆರೆಯವನಿಂದಲೇ ಕಡೆಗಣಿಸಲಾಗುವನು; ಆದರೆ ಐಶ್ವರ್ಯವಂತನಿಗೆ ಬಹುಜನ ಮಿತ್ರರು.
ಙ್ಞಾನೋಕ್ತಿಗಳು 14 : 21 (OCVKN)
ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪಮಾಡುತ್ತಾನೆ, ಬಡವರ ಮೇಲೆ ಕನಿಕರ ತೋರಿಸುವವನು ಧನ್ಯನು.
ಙ್ಞಾನೋಕ್ತಿಗಳು 14 : 22 (OCVKN)
ಕೆಟ್ಟದ್ದನ್ನು ಕಲ್ಪಿಸುವವರು ದಾರಿ ತಪ್ಪುವುದಿಲ್ಲವೇ? ಆದರೆ ಒಳ್ಳೆಯದನ್ನು ಕಲ್ಪಿಸುವವರಿಗೆ ಪ್ರೀತಿ ಸತ್ಯತೆಯು ಇರುವುವು.
ಙ್ಞಾನೋಕ್ತಿಗಳು 14 : 23 (OCVKN)
ಎಲ್ಲಾ ಪ್ರಯಾಸದಲ್ಲಿ ಲಾಭವಿದೆ, ಹರಟೆ ಮಾತು ಬಡತನಕ್ಕೆ ಮಾತ್ರ ದಾರಿ.
ಙ್ಞಾನೋಕ್ತಿಗಳು 14 : 24 (OCVKN)
ಜ್ಞಾನವಂತರ ಕಿರೀಟವೇ ಅವರ ಸಂಪತ್ತು, ಆದರೆ ಬುದ್ಧಿಹೀನರ ಬುದ್ಧಿಹೀನತೆಯು ಅವರ ಮೂರ್ಖತನವನ್ನು ನೀಡುತ್ತದೆ.
ಙ್ಞಾನೋಕ್ತಿಗಳು 14 : 25 (OCVKN)
ಸತ್ಯಸಾಕ್ಷಿಯು ಪ್ರಾಣಗಳನ್ನು ರಕ್ಷಿಸುತ್ತಾನೆ, ಸುಳ್ಳುಸಾಕ್ಷಿಯು ಮೋಸಗಾರನು.
ಙ್ಞಾನೋಕ್ತಿಗಳು 14 : 26 (OCVKN)
ಯೆಹೋವ ದೇವರಿಗೆ ಭಯಪಡುವವನು ಭದ್ರಕೋಟೆಯನ್ನು ಹೊಂದಿದ್ದಾನೆ. ಆತನ ಮಕ್ಕಳಿಗೆ ಆಶ್ರಯವು ಇರುವುದು.
ಙ್ಞಾನೋಕ್ತಿಗಳು 14 : 27 (OCVKN)
ಯೆಹೋವ ದೇವರ ಭಯವು ಜೀವದ ಬುಗ್ಗೆಯಾಗಿದೆ. ಅದು ಮನುಷ್ಯನನ್ನು ಮರಣದ ಪಾಶಗಳಿಂದ ತಿರುಗಿಸುತ್ತದೆ.
ಙ್ಞಾನೋಕ್ತಿಗಳು 14 : 28 (OCVKN)
ಜನಸಮೂಹದಲ್ಲಿ ಅರಸನ ಘನತೆ ಇದೆ. ಆದರೆ ಜನರ ಕೊರತೆಯಲ್ಲಿ ರಾಜಪುತ್ರನ ನಾಶ.
ಙ್ಞಾನೋಕ್ತಿಗಳು 14 : 29 (OCVKN)
ತಾಳ್ಮೆಯುಳ್ಳವನು ಬಹು ವಿವೇಕಿ, ಮುಂಗೋಪಿಯು ಮೂರ್ಖತನವನ್ನು ಎತ್ತಿಹಿಡಿಯುವನು.
ಙ್ಞಾನೋಕ್ತಿಗಳು 14 : 30 (OCVKN)
ಶಾಂತ ಹೃದಯವು ದೇಹಕ್ಕೆ ಜೀವ; ಆದರೆ ಮತ್ಸರವು ಎಲುಬುಗಳಿಗೆ ಕ್ಷಯ.
ಙ್ಞಾನೋಕ್ತಿಗಳು 14 : 31 (OCVKN)
ಬಡವರನ್ನು ಹಿಂಸಿಸುವವನು, ತನ್ನ ಸೃಷ್ಟಿಕರ್ತನನ್ನು ಹೀನೈಸುವನು, ಆದರೆ ಬಡವರನ್ನು ಕನಿಕರಿಸುವವನು ದೇವರನ್ನು ಸನ್ಮಾನಿಸುವನು.
ಙ್ಞಾನೋಕ್ತಿಗಳು 14 : 32 (OCVKN)
ದುಷ್ಟನು ತನ್ನ ಆಪತ್ಕಾಲದಲ್ಲಿ ಹಾಳಾಗುತ್ತಾನೆ, ಆದರೆ ನೀತಿವಂತನಿಗೆ ಮರಣದಲ್ಲಿಯೂ ಆಶ್ರಯ ಇದೆ.
ಙ್ಞಾನೋಕ್ತಿಗಳು 14 : 33 (OCVKN)
ತಿಳುವಳಿಕೆಯುಳ್ಳವನ ಹೃದಯದಲ್ಲಿ ಜ್ಞಾನವು ನೆಲೆಯಾಗಿದೆ, ಆದರೆ ಮೂರ್ಖರಲ್ಲಿ ಜ್ಞಾನವು ಕಂಡುಬರುವುದಿಲ್ಲ.
ಙ್ಞಾನೋಕ್ತಿಗಳು 14 : 34 (OCVKN)
ನೀತಿಯು ಜನಾಂಗವನ್ನು ವೃದ್ಧಿಮಾಡುತ್ತದೆ; ಆದರೆ ಯಾವ ಪ್ರಜೆಗಾದರೂ ಪಾಪವು ಅವಮಾನವಾಗಿದೆ.
ಙ್ಞಾನೋಕ್ತಿಗಳು 14 : 35 (OCVKN)
ಜ್ಞಾನವುಳ್ಳ ಸೇವಕನ ಕಡೆಗೆ ಅರಸನ ದಯೆ ಇದೆ; ಆದರೆ ಮಾನಗೇಡಿ ಸೇವಕನ ಮೇಲೆ ಅರಸನ ಕೋಪ ಎರಗುತ್ತದೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35