ಙ್ಞಾನೋಕ್ತಿಗಳು 17 : 1 (OCVKN)
ವಿವಾದದೊಂದಿಗೆ ತುಂಬಿದ ಔತಣದ ಮನೆಗಿಂತ, ಶಾಂತಿ ಸಮಾಧಾನದ ಒಣ ತುತ್ತು ಮೇಲು.
ಙ್ಞಾನೋಕ್ತಿಗಳು 17 : 2 (OCVKN)
ನಾಚಿಕೆಪಡಿಸುವ ಮಗನ ಮೇಲೆ ಜಾಣನಾದ ಸೇವಕನು ಆಳುವವನಾಗಿ ಸಹೋದರರಲ್ಲಿ ಬಾಧ್ಯತೆಗೆ ಪಾಲುಗಾರನಾಗುವನು.
ಙ್ಞಾನೋಕ್ತಿಗಳು 17 : 3 (OCVKN)
ಸೋಸುವುದಕ್ಕೆ ಬೆಳ್ಳಿಗೆ ಕುಲುಮೆ ಪುಟ, ಬಂಗಾರಕ್ಕೆ ಆವಿಗೆ; ಆದರೆ ಯೆಹೋವ ದೇವರು ಹೃದಯಗಳನ್ನು ಪರಿಶೋಧಿಸುತ್ತಾರೆ.
ಙ್ಞಾನೋಕ್ತಿಗಳು 17 : 4 (OCVKN)
ಕೇಡು ಮಾಡುವವನು ಕೆಟ್ಟ ಮಾತುಗಳಿಗೆ ಕಿವಿಗೊಡುತ್ತಾನೆ; ಸುಳ್ಳುಗಾರನು ನೀಚವಾದ ನಾಲಿಗೆಗೆ ಕಿವಿಗೊಡುವನು.
ಙ್ಞಾನೋಕ್ತಿಗಳು 17 : 5 (OCVKN)
ಬಡವರನ್ನು ಹಾಸ್ಯಮಾಡುವವನು, ತನ್ನನ್ನು ಸೃಷ್ಟಿಸಿದ ಯೆಹೋವ ದೇವರನ್ನು ನಿಂದಿಸುತ್ತಾನೆ; ಬೇರೆಯವರ ವಿಪತ್ತುಗಳಿಗೆ ಸಂತೋಷಿಸುವವನು ಶಿಕ್ಷೆಯನ್ನು ಹೊಂದುವನು.
ಙ್ಞಾನೋಕ್ತಿಗಳು 17 : 6 (OCVKN)
ಮಕ್ಕಳ ಮಕ್ಕಳು ವೃದ್ಧರಿಗೆ ಕಿರೀಟ; ಮಕ್ಕಳ ಭೂಷಣವು ಅವರ ತಂದೆತಾಯಿಗಳೇ.
ಙ್ಞಾನೋಕ್ತಿಗಳು 17 : 7 (OCVKN)
ಉತ್ತಮವಾದ ಪದಗಳು ಮೂರ್ಖನಿಗೆ ಸೂಕ್ತವಲ್ಲ; ಆಳುವವನಿಗೆ ಸುಳ್ಳಾಡುವ ತುಟಿಗಳು ಇನ್ನೂ ಎಷ್ಟೋ ಆಯುಕ್ತವಲ್ಲವೇ.
ಙ್ಞಾನೋಕ್ತಿಗಳು 17 : 8 (OCVKN)
ಕೊಡುವವನ ಕಣ್ಣಿಗೆ ಲಂಚವು ಆಕರ್ಷಣೆಯಾಗಿದೆ; ಪ್ರತಿ ತಿರುವಿನಲ್ಲಿಯೂ ಯಶಸ್ಸು ಬರುತ್ತದೆ ಎಂದು ಅವರು ಭಾವಿಸುತ್ತಾರೆ.
ಙ್ಞಾನೋಕ್ತಿಗಳು 17 : 9 (OCVKN)
ದೋಷವನ್ನು ಕ್ಷಮಿಸುವವನು ಪ್ರೀತಿಯನ್ನು ಹುಡುಕುತ್ತಾನೆ; ಆದರೆ ದೋಷವನ್ನು ಎತ್ತಿ ಆಡುವವನು ಸ್ನೇಹಿತರಿಂದ ಪ್ರತ್ಯೇಕಗೊಳ್ಳುತ್ತಾನೆ.
ಙ್ಞಾನೋಕ್ತಿಗಳು 17 : 10 (OCVKN)
ಬುದ್ಧಿಹೀನನ ಬೆನ್ನಿಗೆ ನೂರು ಪೆಟ್ಟುಗಳಿಗಿಂತ ಜ್ಞಾನಿಗೆ ಒಂದು ಗದರಿಕೆಯ ಮಾತು ಹೆಚ್ಚಾಗಿ ನಾಟುತ್ತದೆ.
ಙ್ಞಾನೋಕ್ತಿಗಳು 17 : 11 (OCVKN)
ತಿರುಗಿ ಬೀಳುವವನು ಕೆಟ್ಟದ್ದಕ್ಕೇ ತವಕಪಡುತ್ತಾನೆ; ಆದಕಾರಣ ಮರಣ ದೂತರನ್ನು ಅವನ ವಿರುದ್ಧ ಕಳುಹಿಸಲಾಗುವದು.
ಙ್ಞಾನೋಕ್ತಿಗಳು 17 : 12 (OCVKN)
ತನ್ನ ಮೂಢತೆಯಲ್ಲಿರುವ ಬುದ್ಧಿಹೀನನನ್ನು ಸಂಧಿಸುವುದಕ್ಕಿಂತ ಮರಿಗಳನ್ನು ಕಳೆದುಕೊಂಡ ಕರಡಿಯನ್ನು ಸಂಧಿಸುವುದು ಮೇಲು.
ಙ್ಞಾನೋಕ್ತಿಗಳು 17 : 13 (OCVKN)
ಉಪಕಾರಕ್ಕೆ ಅಪಕಾರವನ್ನು ಮಾಡುವವನ ಮನೆಯಿಂದ ಕೇಡು ತೊಲಗುವುದೇ ಇಲ್ಲ.
ಙ್ಞಾನೋಕ್ತಿಗಳು 17 : 14 (OCVKN)
ಕಲಹದ ಪ್ರಾರಂಭವು ಆಣೆಕಟ್ಟು ಒಡೆದಂತೆ ಇರುವುದು; ಆದಕಾರಣ ಆ ಕಲಹಕ್ಕೆ ಕೈಹಾಕುವುದಕ್ಕಿಂತ ಮುಂಚೆ ಅದನ್ನು ಬಿಟ್ಟುಬಿಡು.
ಙ್ಞಾನೋಕ್ತಿಗಳು 17 : 15 (OCVKN)
ದುಷ್ಟರನ್ನು ನೀತಿವಂತರೆಂದು ನಿರ್ಣಯಿಸುವವನು, ನೀತಿವಂತರನ್ನು ಖಂಡಿಸುವವನೂ ಇವರಿಬ್ಬರೂ ಯೆಹೋವ ದೇವರಿಗೆ ಅಸಹ್ಯ.
ಙ್ಞಾನೋಕ್ತಿಗಳು 17 : 16 (OCVKN)
ಜ್ಞಾನವನ್ನು ಸಂಪಾದಿಸುವುದಕ್ಕೆ ಬುದ್ಧಿಹೀನನ ಕೈಯಲ್ಲಿ ಹಣ ಏಕೆ? ಅವನಿಗೆ ಕಲಿಯಲು ಮನಸ್ಸಿಲ್ಲವಲ್ಲ.
ಙ್ಞಾನೋಕ್ತಿಗಳು 17 : 17 (OCVKN)
ಸ್ನೇಹಿತನು ಎಲ್ಲಾ ಸಮಯದಲ್ಲಿ ಪ್ರೀತಿಸುತ್ತಾನೆ; ಆಪತ್ತಿನಲ್ಲಿ ಸಹಾಯಮಾಡುವಗೋಸ್ಕರ ಸಹೋದರನು ಹುಟ್ಟಿದ್ದಾನೆ.
ಙ್ಞಾನೋಕ್ತಿಗಳು 17 : 18 (OCVKN)
ಬುದ್ಧಿಹೀನನು ಕೈ ಕುಲುಕಿ ತನ್ನ ನೆರೆಯವನಿಗೆ ಜಾಮಿನನಾಗುತ್ತಾನೆ.
ಙ್ಞಾನೋಕ್ತಿಗಳು 17 : 19 (OCVKN)
ಕಲಹವನ್ನು ಪ್ರೀತಿಮಾಡುವವನು ಪಾಪವನ್ನು ಪ್ರೀತಿಮಾಡುತ್ತಾನೆ; ತನ್ನ ಗೋಡೆಯನ್ನು ಹೆಚ್ಚಿಸಿಕೊಳ್ಳುವವನು ನಾಶನವನ್ನು ಆಮಂತ್ರಿಸುತ್ತಾನೆ.
ಙ್ಞಾನೋಕ್ತಿಗಳು 17 : 20 (OCVKN)
ವಕ್ರಹೃದಯವುಳ್ಳವನು ಸಮೃದ್ಧಿಯನ್ನು ಹೊಂದುವುದಿಲ್ಲ; ಮೋಸದ ನಾಲಿಗೆಯುಳ್ಳವನು ಹಾನಿಗೆ ಬೀಳುವನು.
ಙ್ಞಾನೋಕ್ತಿಗಳು 17 : 21 (OCVKN)
ಬುದ್ಧಿಹೀನ ಹೆತ್ತವನಿಗೆ ವ್ಯಥೆ; ಬುದ್ಧಿಹೀನನ ತಂದೆಗೆ ಸಂತೋಷವಿರುವುದಿಲ್ಲ.
ಙ್ಞಾನೋಕ್ತಿಗಳು 17 : 22 (OCVKN)
ಹರ್ಷಹೃದಯವು ಒಳ್ಳೆಯ ಔಷಧ; ಆದರೆ ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.
ಙ್ಞಾನೋಕ್ತಿಗಳು 17 : 23 (OCVKN)
ನ್ಯಾಯದ ಮಾರ್ಗಗಳನ್ನು ತಿರುಗಿಸಿಬಿಡುವುದಕ್ಕೆ ದುಷ್ಟನು ಗುಪ್ತವಾಗಿ ಲಂಚವನ್ನು ತೆಗೆದುಕೊಳ್ಳುತ್ತಾನೆ.
ಙ್ಞಾನೋಕ್ತಿಗಳು 17 : 24 (OCVKN)
ವಿವೇಕಿಯು ಜ್ಞಾನವನ್ನು ತನ್ನ ಮುಂದೆ ಇಟ್ಟುಕೊಳ್ಳುತ್ತಾನೆ. ಆದರೆ ಬುದ್ಧಿಹೀನ ಕಣ್ಣುಗಳು ಭೂಮಿಯ ಅಂತ್ಯಗಳಲ್ಲಿ ಅಲೆಯುವವು.
ಙ್ಞಾನೋಕ್ತಿಗಳು 17 : 25 (OCVKN)
ಬುದ್ಧಿಹೀನನಾದ ಮಗನು ತನ್ನ ತಂದೆಗೆ ದುಃಖವೂ, ತನ್ನನ್ನು ಹೆತ್ತವಳಿಗೆ ಕಹಿಯೂ ಆಗಿದ್ದಾನೆ.
ಙ್ಞಾನೋಕ್ತಿಗಳು 17 : 26 (OCVKN)
ನೀತಿವಂತನಿಗೆ ದಂಡ ವಿಧಿಸುವುದು ಒಳ್ಳೆಯದಲ್ಲದಿದ್ದರೆ, ಖಂಡಿತವಾಗಿಯೂ ಪ್ರಾಮಾಣಿಕ ಅಧಿಕಾರಿಗಳನ್ನು ಹೊಡೆಯುವುದು ಸರಿಯಲ್ಲ.
ಙ್ಞಾನೋಕ್ತಿಗಳು 17 : 27 (OCVKN)
ಪರಿಜ್ಞಾನ ಹೊಂದಿರುವವನು ಮಿತವಾಗಿ ಮಾತನಾಡುತ್ತಾನೆ; ತಿಳುವಳಿಕೆಯನ್ನು ಹೊಂದಿರುವವನು ಶ್ರೇಷ್ಠವಾದ ಆತ್ಮವುಳ್ಳವನಾಗಿದ್ದಾನೆ.
ಙ್ಞಾನೋಕ್ತಿಗಳು 17 : 28 (OCVKN)
ಬುದ್ಧಿಹೀನನು ಮೌನವಾಗಿದ್ದರೆ ಜ್ಞಾನಿಯೆನಿಸಿಕೊಳ್ಳುವನು; ತನ್ನ ತುಟಿಗಳನ್ನು ಬಿಗಿ ಹಿಡಿಯುವವನು ವಿವೇಕಿ ಎನಿಸಿಕೊಳ್ಳುವನು.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28