ಙ್ಞಾನೋಕ್ತಿಗಳು 19 : 1 (OCVKN)
ಬುದ್ಧಿಹೀನನ ವಕ್ರ ತುಟಿಗಳಿಗಿಂತ, ನಿರ್ದೋಷವಾಗಿ ನಡೆಯುವ ಬಡವನು ಉತ್ತಮ.
ಙ್ಞಾನೋಕ್ತಿಗಳು 19 : 2 (OCVKN)
ಪರಿಜ್ಞಾನವಿಲ್ಲದ ಆಸಕ್ತಿಯು ಯುಕ್ತವಲ್ಲ; ತನ್ನ ಹೆಜ್ಜೆಗಳಲ್ಲಿ ದುಡುಕುವವನು ದಾರಿ ತಪ್ಪುವನು.
ಙ್ಞಾನೋಕ್ತಿಗಳು 19 : 3 (OCVKN)
ಮನುಷ್ಯನ ಬುದ್ಧಿಹೀನತೆ ಅವನ ದುರ್ಗತಿಗೆ ದಾರಿಯಾಗಿದೆ, ಆದರೂ ಅವನ ಹೃದಯವು ಯೆಹೋವ ದೇವರಿಗೆ ವಿರೋಧವಾಗಿ ಉರಿಗೊಳ್ಳುತ್ತದೆ.
ಙ್ಞಾನೋಕ್ತಿಗಳು 19 : 4 (OCVKN)
ಸಂಪತ್ತು ಅನೇಕ ಮಂದಿ ಸ್ನೇಹಿತರನ್ನು ಮಾಡಿಕೊಳ್ಳುತ್ತದೆ; ಆದರೆ ಬಡವನು ತನ್ನ ಆಪ್ತಸ್ನೇಹಿತನಿಂದ ದೂರವಾಗುತ್ತಾನೆ.
ಙ್ಞಾನೋಕ್ತಿಗಳು 19 : 5 (OCVKN)
ಸುಳ್ಳುಸಾಕ್ಷಿಯು ದಂಡನೆಯನ್ನು ಹೊಂದದಿರನು; ಸುಳ್ಳಾಡುವವನು ತಪ್ಪಿಸಿಕೊಳ್ಳದೆ ಇರಲಾರನು.
ಙ್ಞಾನೋಕ್ತಿಗಳು 19 : 6 (OCVKN)
ಅನೇಕರು ಅಧಿಪತಿಯಿಂದ ಸಹಾಯ ಪಡೆಯುತ್ತಾರೆ. ಕಾಣಿಕೆಗಳನ್ನು ಕೊಡುವವನಿಗೆ ಪ್ರತಿಯೊಬ್ಬನೂ ಸ್ನೇಹಿತನೇ.
ಙ್ಞಾನೋಕ್ತಿಗಳು 19 : 7 (OCVKN)
ಬಡವನ ಬಂಧುಗಳೆಲ್ಲರು ಅವನನ್ನು ಹಗೆ ಮಾಡುತ್ತಾರೆ; ತನ್ನ ಸ್ನೇಹಿತರು ತನ್ನಿಂದ ಎಷ್ಟೋ ಹೆಚ್ಚಾಗಿ ದೂರ ಹೋಗುತ್ತಾರಲ್ಲವೇ? ಮಾತುಗಳಿಂದ ಅವನು ಮೊರೆಯಿಟ್ಟು ಹಿಂಬಾಲಿಸಿದರೂ ಅವನಿಗೆ ಏನೂ ದೊರಕದು.
ಙ್ಞಾನೋಕ್ತಿಗಳು 19 : 8 (OCVKN)
ಜ್ಞಾನವನ್ನು ಸಂಪಾದಿಸಿಕೊಳ್ಳುವವನು ತನ್ನ ಪ್ರಾಣವನ್ನೇ ಪ್ರೀತಿಸುತ್ತಾನೆ; ತಿಳುವಳಿಕೆಯನ್ನು ಪ್ರೀತಿಸುವವನು ಶೀಘ್ರದಲ್ಲೇ ಏಳಿಗೆ ಹೊಂದುತ್ತಾನೆ.
ಙ್ಞಾನೋಕ್ತಿಗಳು 19 : 9 (OCVKN)
ಸುಳ್ಳುಸಾಕ್ಷಿಯು ಶಿಕ್ಷೆಹೊಂದದೇ ಇರುವುದಿಲ್ಲ; ಸುಳ್ಳಾಡುವವನು ಹಾಳಾಗಿ ಹೋಗುವನು.
ಙ್ಞಾನೋಕ್ತಿಗಳು 19 : 10 (OCVKN)
ಬುದ್ಧಿಹೀನನಿಗೆ ಭೋಗಜೀವನವು ಯುಕ್ತವಲ್ಲ; ಅಧಿಪತಿಗಳ ಮೇಲೆ ದೊರೆತನ ಮಾಡುವುದು ಸೇವಕನಿಗೆ ಯುಕ್ತವೇ ಅಲ್ಲ.
ಙ್ಞಾನೋಕ್ತಿಗಳು 19 : 11 (OCVKN)
ಮನುಷ್ಯನ ಜ್ಞಾನವು ತಾಳ್ಮೆಯನ್ನು ನೀಡುತ್ತದೆ; ಅಪರಾಧವನ್ನು ಲಕ್ಷಿಸದೆ ಇರುವುದು ಅವನಿಗೆ ಮಹಿಮೆಯಾಗಿದೆ.
ಙ್ಞಾನೋಕ್ತಿಗಳು 19 : 12 (OCVKN)
ಅರಸನ ಕೋಪವು ಸಿಂಹದ ಘರ್ಜನೆಯಂತಿದೆ; ಆದರೆ ಅವನ ದಯೆಯು ಹುಲ್ಲಿನ ಮೇಲಿರುವ ಇಬ್ಬನಿಯಂತಿದೆ.
ಙ್ಞಾನೋಕ್ತಿಗಳು 19 : 13 (OCVKN)
ಬುದ್ಧಿಹೀನನಾದ ಮಗನು ತನ್ನ ತಂದೆಗೆ ಹಾನಿಕರನು; ಜಗಳವಾಡುವ ಹೆಂಡತಿ ಯಾವಾಗಲೂ ತೊಟ್ಟಿಕ್ಕುವ ಹನಿ.
ಙ್ಞಾನೋಕ್ತಿಗಳು 19 : 14 (OCVKN)
ಮನೆಯೂ ಸಂಪತ್ತೂ ಪಿತೃಗಳ ಸ್ವಾಸ್ತ್ಯವು; ವಿವೇಕಿಯಾದ ಹೆಂಡತಿಯು ಯೆಹೋವ ದೇವರಿಂದಲೇ.
ಙ್ಞಾನೋಕ್ತಿಗಳು 19 : 15 (OCVKN)
ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುತ್ತದೆ; ಸೋಮಾರಿಯು ಹಸಿವೆಗೊಳ್ಳುವನು.
ಙ್ಞಾನೋಕ್ತಿಗಳು 19 : 16 (OCVKN)
ಯಾರು ಆಜ್ಞೆಗಳನ್ನು ಪಾಲಿಸುತ್ತಾನೋ ಅವನು ತನ್ನ ಜೀವವನ್ನು ಉಳಿಸಿಕೊಳ್ಳುತ್ತಾನೆ, ಆದರೆ ಅವುಗಳನ್ನು ಅಸಡ್ಡೆ ಮಾಡುವವನು ಸಾಯುವನು.
ಙ್ಞಾನೋಕ್ತಿಗಳು 19 : 17 (OCVKN)
ಬಡವರಿಗೆ ದಯೆ ತೋರಿಸುವವನು ಯೆಹೋವ ದೇವರಿಗೆ ಸಾಲ ಕೊಡುತ್ತಾನೆ; ಆತನು ಅವನ ಉಪಕಾರಕ್ಕಾಗಿ ಪ್ರತ್ಯುಪಕಾರ ಮಾಡುವನು.
ಙ್ಞಾನೋಕ್ತಿಗಳು 19 : 18 (OCVKN)
ಇನ್ನೂ ನಿರೀಕ್ಷೆ ಇರುವಾಗಲೇ ನಿನ್ನ ಮಗನನ್ನು ಶಿಕ್ಷಿಸು; ಅವನ ಮರಣಕ್ಕೆ ನೀನು ಕಾರಣನಾಗಬೇಡ.
ಙ್ಞಾನೋಕ್ತಿಗಳು 19 : 19 (OCVKN)
ಕೋಪಿಷ್ಟನು ಶಿಕ್ಷೆಯನ್ನು ಅನುಭವಿಸುವನು; ಅವನನ್ನು ನೀನು ಬಿಡಿಸಿದರೆ, ತಿರುಗಿ ನೀನು ಬಿಡಿಸಬೇಕಾಗುವುದು.
ಙ್ಞಾನೋಕ್ತಿಗಳು 19 : 20 (OCVKN)
ಬುದ್ಧಿವಾದವನ್ನು ಕೇಳಿ, ಶಿಕ್ಷಣವನ್ನು ಅಂಗೀಕರಿಸು; ಕಡೆಯಲ್ಲಿ ನೀನು ಜ್ಞಾನಿಯಾಗುವೆ.
ಙ್ಞಾನೋಕ್ತಿಗಳು 19 : 21 (OCVKN)
ಮನುಷ್ಯನ ಹೃದಯದಲ್ಲಿ ಅನೇಕ ಯೋಜನೆಗಳಿವೆ; ಆದರೂ ಯೆಹೋವ ದೇವರ ಸಂಕಲ್ಪವೇ ಈಡೇರುವುದು.
ಙ್ಞಾನೋಕ್ತಿಗಳು 19 : 22 (OCVKN)
ನಿಷ್ಠೆಯು ಮನುಷ್ಯನನ್ನು ಆಕರ್ಷಕನನ್ನಾಗಿ ಮಾಡುತ್ತದೆ. ಬಡವನು ಸುಳ್ಳುಗಾರನಿಗಿಂತ ಲೇಸು.
ಙ್ಞಾನೋಕ್ತಿಗಳು 19 : 23 (OCVKN)
ಯೆಹೋವ ದೇವರ ಭಯವು ಜೀವದಾಯಕವು; ಆಗ ಅವನು ತೃಪ್ತನಾಗಿ ನೆಲೆಗೊಳ್ಳುವನು; ಅವನಿಗೆ ಕೇಡು ಸಂಭವಿಸುವುದಿಲ್ಲ.
ಙ್ಞಾನೋಕ್ತಿಗಳು 19 : 24 (OCVKN)
ಮೈಗಳ್ಳನು ಪಾತ್ರೆಯೊಳಗೆ ತನ್ನ ಕೈಯನ್ನು ಮುಳುಗಿಸಿ, ಅವನು ಅದನ್ನು ಮತ್ತೆ ತನ್ನ ಬಾಯಿಗೆ ತರುವುದಿಲ್ಲ!
ಙ್ಞಾನೋಕ್ತಿಗಳು 19 : 25 (OCVKN)
ಪರಿಹಾಸ್ಯಗಾರನನ್ನು ಹೊಡೆದರೆ, ಮುಗ್ಧರು ಎಚ್ಚರಗೊಳ್ಳುವರು; ವಿವೇಕಿಯನ್ನು ಗದರಿಸಿದರೆ, ಅವನು ಪರಿಜ್ಞಾನವನ್ನು ಗ್ರಹಿಸುವನು.
ಙ್ಞಾನೋಕ್ತಿಗಳು 19 : 26 (OCVKN)
ಯಾರು ತಂದೆಯನ್ನು ದೋಚಿಕೊಂಡು ತಾಯಿಯನ್ನು ಓಡಿಸುವರೋ ನಾಚಿಕೆಯನ್ನುಂಟುಮಾಡಿ, ನಿಂದೆಯನ್ನು ತರುತ್ತಾರೆ.
ಙ್ಞಾನೋಕ್ತಿಗಳು 19 : 27 (OCVKN)
ಮಗನೇ, ನೀನು ಬುದ್ಧಿವಾದಕ್ಕೆ ಲಕ್ಷ್ಯಕೊಡದಿದ್ದರೆ, ಪರಿಜ್ಞಾನದ ಮಾತುಗಳಿಂದ ದಾರಿತಪ್ಪುವೆ.
ಙ್ಞಾನೋಕ್ತಿಗಳು 19 : 28 (OCVKN)
ಭ್ರಷ್ಟನ ಸಾಕ್ಷಿಯು ನ್ಯಾಯತೀರ್ಪನ್ನು ಗೇಲಿ ಮಾಡುತ್ತದೆ; ದುಷ್ಟನ ಬಾಯಿಯು ದ್ರೋಹವನ್ನು ನುಂಗುವುದು.
ಙ್ಞಾನೋಕ್ತಿಗಳು 19 : 29 (OCVKN)
ಪರಿಹಾಸ್ಯಗಾರರಿಗೆ ನ್ಯಾಯ ತೀರ್ಪುಗಳೂ, ಬುದ್ಧಿಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29