ಙ್ಞಾನೋಕ್ತಿಗಳು 2 : 1 (OCVKN)
ಜ್ಞಾನದಿಂದ ಆಗುವ ನೈತಿಕ ಲಾಭಗಳು ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ, ನನ್ನ ಆಜ್ಞೆಗಳನ್ನು ನಿನ್ನಲ್ಲಿ ಕಾದಿರಿಸು.
ಙ್ಞಾನೋಕ್ತಿಗಳು 2 : 2 (OCVKN)
ನೀನು ಜ್ಞಾನಕ್ಕೆ ಕಿವಿಗೊಟ್ಟು, ತಿಳುವಳಿಕೆಗೆ ನಿನ್ನ ಹೃದಯವನ್ನು ತಿರುಗಿಸು,
ಙ್ಞಾನೋಕ್ತಿಗಳು 2 : 3 (OCVKN)
ಹೌದು, ನೀನು ಒಳನೋಟಕ್ಕಾಗಿ ಮೊರೆಯಿಟ್ಟು, ತಿಳುವಳಿಕೆಗಾಗಿ ನಿನ್ನ ಸ್ವರವೆತ್ತಿ,
ಙ್ಞಾನೋಕ್ತಿಗಳು 2 : 4 (OCVKN)
ಬೆಳ್ಳಿಯಂತೆ ನೀನು ಅದನ್ನು ಹಂಬಲಿಸಿದರೆ, ನಿಗೂಢ ನಿಕ್ಷೇಪದಂತೆ ನೀನು ಅದಕ್ಕಾಗಿ ಹುಡುಕಿದರೆ,
ಙ್ಞಾನೋಕ್ತಿಗಳು 2 : 5 (OCVKN)
ಆಗ ನೀನು ಯೆಹೋವ ದೇವರ ಭಯಭಕ್ತಿಯನ್ನು ತಿಳಿದುಕೊಳ್ಳುವೆ; ದೇವರ ಅರಿವನ್ನು ಕಂಡುಕೊಳ್ಳುವೆ.
ಙ್ಞಾನೋಕ್ತಿಗಳು 2 : 6 (OCVKN)
ಏಕೆಂದರೆ ಯೆಹೋವ ದೇವರೇ ಜ್ಞಾನವನ್ನು ಕೊಡುತ್ತಾರೆ; ಅವರ ಬಾಯಿಂದಲೇ ಅರಿವೂ ತಿಳುವಳಿಕೆಯೂ ಹೊರಟುಬರುತ್ತವೆ.
ಙ್ಞಾನೋಕ್ತಿಗಳು 2 : 7 (OCVKN)
ನೀತಿವಂತರಿಗೋಸ್ಕರ ದೇವರು ಸುಜ್ಞಾನವನ್ನು ಕೂಡಿಸಿಡುವರು, ನಿರ್ದೋಷಿಯಾಗಿ ನಡೆದುಕೊಳ್ಳುವವರಿಗೆ ದೇವರು ಗುರಾಣಿಯಾಗಿದ್ದಾರೆ.
ಙ್ಞಾನೋಕ್ತಿಗಳು 2 : 8 (OCVKN)
ನ್ಯಾಯವಂತರ ದಾರಿಗಳನ್ನು ದೇವರು ಕಾಯುತ್ತಾರೆ; ತಮ್ಮ ನಂಬಿಗಸ್ತರ ಮಾರ್ಗವನ್ನು ಭದ್ರಪಡಿಸುತ್ತಾರೆ.
ಙ್ಞಾನೋಕ್ತಿಗಳು 2 : 9 (OCVKN)
ಆಗ ನೀನು ಸರಿಯಾದದ್ದನ್ನೂ ನ್ಯಾಯವನ್ನೂ ಯುಕ್ತವಾದದ್ದನ್ನು ಅರ್ಥಮಾಡಿಕೊಳ್ಳುವೆ, ಮಾತ್ರವಲ್ಲದೆ ಪ್ರತಿಯೊಂದು ಸನ್ಮಾರ್ಗವನ್ನೂ ತಿಳಿದುಕೊಳ್ಳುವೆ.
ಙ್ಞಾನೋಕ್ತಿಗಳು 2 : 10 (OCVKN)
ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿಸಿ, ನಿನ್ನ ಪ್ರಾಣಕ್ಕೆ ತಿಳುವಳಿಕೆಯು ಹಿತಕರವಾಗಿರುವುದು.
ಙ್ಞಾನೋಕ್ತಿಗಳು 2 : 11 (OCVKN)
ನಿನ್ನ ವಿವೇಚನೆಯು ನಿನ್ನನ್ನು ಭದ್ರವಾಗಿ ಕಾಯುವುದು; ತಿಳುವಳಿಕೆಯು ನಿನ್ನನ್ನು ಕಾಪಾಡುವುದು.
ಙ್ಞಾನೋಕ್ತಿಗಳು 2 : 12 (OCVKN)
ಜ್ಞಾನವು ದುಷ್ಟರ ಮಾರ್ಗಗಳಿಂದಲೂ, ವಕ್ರರ ಮಾತುಗಳಿಂದಲೂ ಕಾಪಾಡುವುದು.
ಙ್ಞಾನೋಕ್ತಿಗಳು 2 : 13 (OCVKN)
ಅವರು ಕತ್ತಲೆಯ ಹಾದಿಗಳಲ್ಲಿ ನಡೆಯುವುದಕ್ಕೆ ನೇರವಾದ ದಾರಿಗಳನ್ನು ತೊರೆದುಬಿಡುತ್ತಾರೆ.
ಙ್ಞಾನೋಕ್ತಿಗಳು 2 : 14 (OCVKN)
ಅವರು ಕೆಟ್ಟದ್ದನ್ನು ಮಾಡುವುದಕ್ಕೆ ಸಂತೋಷಿಸುತ್ತಾರೆ. ಕೇಡಿನ ವಕ್ರತನದಲ್ಲಿ ಆನಂದಿಸುತ್ತಾರೆ.
ಙ್ಞಾನೋಕ್ತಿಗಳು 2 : 15 (OCVKN)
ಅವರ ಮಾರ್ಗಗಳು ವಕ್ರವಾಗಿವೆ; ತಮ್ಮ ನಡತೆಗಳಲ್ಲಿ ಅವರು ತಪ್ಪಿಹೋಗಿದ್ದಾರೆ.
ಙ್ಞಾನೋಕ್ತಿಗಳು 2 : 16 (OCVKN)
ಜಾರಿಣಿಯಿಂದಲೂ ದಾರಿತಪ್ಪಿದ ಪರಸ್ತ್ರೀಯ ವಶೀಕರಣದ ಮಾತುಗಳಿಂದಲೂ ಜ್ಞಾನವು ನಿನ್ನನ್ನು ರಕ್ಷಿಸುವುದು.
ಙ್ಞಾನೋಕ್ತಿಗಳು 2 : 17 (OCVKN)
ಅವಳು ತನ್ನ ಯೌವನ ಕಾಲದ ಪತಿಯನ್ನು ತ್ಯಜಿಸಿದ್ದಾಳೆ, ದೇವರ ಸನ್ನಿಧಿಯಲ್ಲಿ ಮಾಡಿಕೊಂಡ ಒಡಂಬಡಿಕೆಯನ್ನೂ ಕಡೆಗಣಿಸಿದ್ದಾಳೆ.
ಙ್ಞಾನೋಕ್ತಿಗಳು 2 : 18 (OCVKN)
ಏಕೆಂದರೆ ಅವಳ ಮನೆ ಮರಣ ಮಾರ್ಗ. ಅವಳ ದಾರಿ ಮೃತರ ಕಡೆಗೂ ನಡೆಸುತ್ತವೆ.
ಙ್ಞಾನೋಕ್ತಿಗಳು 2 : 19 (OCVKN)
ಅವಳ ಬಳಿಗೆ ಹೋಗುವ ಯಾವನೂ ಹಿಂದಿರುಗುವುದಿಲ್ಲ; ಜೀವಮಾರ್ಗಗಳನ್ನು ಅಂಥವರು ಹಿಡಿಯುವುದೇ ಇಲ್ಲ.
ಙ್ಞಾನೋಕ್ತಿಗಳು 2 : 20 (OCVKN)
ಆದ್ದರಿಂದ ಒಳ್ಳೆಯವರ ಮಾರ್ಗದಲ್ಲಿ ನೀನು ನಡೆಯುವೆ ನೀತಿವಂತರ ದಾರಿಯನ್ನು ನೀನು ಹಿಡಿಯುವೆ.
ಙ್ಞಾನೋಕ್ತಿಗಳು 2 : 21 (OCVKN)
ಏಕೆಂದರೆ ಪ್ರಾಮಾಣಿಕರು ದೇಶದಲ್ಲಿ ವಾಸಿಸುವರು, ನಿರ್ದೋಷಿಗಳು ಅದರಲ್ಲಿ ನೆಲೆಯಾಗಿ ಇರುವರು.
ಙ್ಞಾನೋಕ್ತಿಗಳು 2 : 22 (OCVKN)
ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲಾಗುವರು; ದ್ರೋಹಿಗಳು ಬೇರುಸಹಿತವಾಗಿ ಕಿತ್ತುಹಾಕಲಾಗುವರು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22