ಙ್ಞಾನೋಕ್ತಿಗಳು 25 : 1 (OCVKN)
ಮತ್ತಷ್ಟು ಸೊಲೊಮೋನನ ಜ್ಞಾನೋಕ್ತಿಗಳು
ಙ್ಞಾನೋಕ್ತಿಗಳು 25 : 2 (OCVKN)
ಯೆಹೂದದ ಅರಸನಾದ ಹಿಜ್ಕೀಯನ ಲೇಖಕರು ಬರೆದಿರುವ ಇವು ಕೂಡ ಸೊಲೊಮೋನನ ಜ್ಞಾನೋಕ್ತಿಗಳೇ. ವಿಷಯವನ್ನು ರಹಸ್ಯ ಮಾಡುವುದು ದೇವರ ಮಹಿಮೆ. ಒಂದು ವಿಷಯವನ್ನು ಹುಡುಕುವುದು ರಾಜರ ಮಹಿಮೆ.
ಙ್ಞಾನೋಕ್ತಿಗಳು 25 : 3 (OCVKN)
ಆಕಾಶದ ಎತ್ತರವನ್ನು, ಭೂಮಿಯ ಆಳವನ್ನು ಯಾರೂ ಗ್ರಹಿಸಲು ಸಾಧ್ಯವಿಲ್ಲ. ಹಾಗೆಯೇ ಅರಸರ ಹೃದಯವು ಅಗೋಚರ.
ಙ್ಞಾನೋಕ್ತಿಗಳು 25 : 4 (OCVKN)
ಬೆಳ್ಳಿಯಿಂದ ಕಲ್ಮಷವನ್ನು ತೆಗೆದುಹಾಕಿದರೆ, ಅಕ್ಕಸಾಲಿಗನಿಗೆ ಬೇಕಾದ ಪಾತ್ರೆಯು ರೂಪಗೊಳ್ಳುವುದು.
ಙ್ಞಾನೋಕ್ತಿಗಳು 25 : 5 (OCVKN)
ಅರಸನ ಸನ್ನಿಧಾನದಿಂದ ದುಷ್ಟರನ್ನು ತೆಗೆದುಹಾಕಿದರೆ, ಆಗ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವುದು.
ಙ್ಞಾನೋಕ್ತಿಗಳು 25 : 6 (OCVKN)
ಅರಸನ ಸನ್ನಿಧಿಯಲ್ಲಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ದೊಡ್ಡವರಿಗೆ ಏರ್ಪಡಿಸಿದ ಸ್ಥಾನವನ್ನು ಕೇಳಬೇಡ.
ಙ್ಞಾನೋಕ್ತಿಗಳು 25 : 7 (OCVKN)
ಘನವಂತರ ಸನ್ನಿಧಿಯಲ್ಲಿ ನಿನ್ನನ್ನು ತಗ್ಗಿಸಿಕೊಳ್ಳುವುದಕ್ಕಿಂತ, “ಮೇಲಕ್ಕೆ ಬಾ,” ಎಂದು ಅರಸನು ನಿನಗೆ ಹೇಳುವುದು ಲೇಸು. ನೀವು ಏನನ್ನೋ ಕಂಡಿದ್ದರಿಂದ,
ಙ್ಞಾನೋಕ್ತಿಗಳು 25 : 8 (OCVKN)
ದುಡುಕಿ ವ್ಯಾಜ್ಯಮಾಡುವುದಕ್ಕಾಗಿ ಹೋಗಬೇಡ. ಏಕೆಂದರೆ ನಿನ್ನ ನೆರೆಯವನು ನಿನ್ನನ್ನು ಅವಮಾನ ಮಾಡಿದಾಗ, ನೀನು ಕಡೆಯಲ್ಲಿ ಏನು ಮಾಡುವೆ?
ಙ್ಞಾನೋಕ್ತಿಗಳು 25 : 9 (OCVKN)
ನಿನ್ನ ನೆರೆಯವನೊಂದಿಗೆ ನಿನ್ನ ವ್ಯಾಜ್ಯವನ್ನು ಚರ್ಚಿಸು; ಇನ್ನೊಬ್ಬರ ಗುಟ್ಟನ್ನು ಬಹಿರಂಗಪಡಿಸಬೇಡ,
ಙ್ಞಾನೋಕ್ತಿಗಳು 25 : 10 (OCVKN)
ಅದನ್ನು ಕೇಳುವವನು ನಿನ್ನನ್ನು ಅವಮಾನಕ್ಕೆ ಗುರಿಪಡಿಸಿಯಾನು; ನಿನ್ನ ಅಪಕೀರ್ತಿಯು ಹೋಗದೆ ಇದ್ದೀತು.
ಙ್ಞಾನೋಕ್ತಿಗಳು 25 : 11 (OCVKN)
ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ.
ಙ್ಞಾನೋಕ್ತಿಗಳು 25 : 12 (OCVKN)
ಕೇಳುವ ಕಿವಿಗೆ ಜ್ಞಾನಿಯ ತಿದ್ದುವಿಕೆಯು ಬಂಗಾರದ ಮುರು; ಚೊಕ್ಕ ಬಂಗಾರದ ಆಭರಣ.
ಙ್ಞಾನೋಕ್ತಿಗಳು 25 : 13 (OCVKN)
ಸುಗ್ಗಿಯ ಕಾಲದಲ್ಲಿ ಹಿಮದ ಶೀತದ ಹಾಗೆ ತನ್ನನ್ನು ಕಳುಹಿಸುವವರಿಗೆ ನಂಬಿಗಸ್ತನಾದ ಸೇವಕನಿದ್ದಾನೆ; ಏಕೆಂದರೆ ತನ್ನ ಯಜಮಾನರ ಪ್ರಾಣವನ್ನು ಅವನು ನವಚೈತನ್ಯಗೊಳಿಸುತ್ತಾನೆ.
ಙ್ಞಾನೋಕ್ತಿಗಳು 25 : 14 (OCVKN)
ದಾನ ಕೊಡದೆ ಕೊಟ್ಟಿದ್ದೇನೆಂದು ಹೊಗಳಿಕೊಳ್ಳುವವನು, ಮಳೆ ಇಲ್ಲದ ಮೋಡಗಳ ಮತ್ತು ಗಾಳಿಯ ಹಾಗೆ ಇದ್ದಾನೆ.
ಙ್ಞಾನೋಕ್ತಿಗಳು 25 : 15 (OCVKN)
ತಾಳ್ಮೆಯ ಮೂಲಕ ಪ್ರಭುವನ್ನು ಒಲಿಸಿಕೊಳ್ಳಬಹುದು; ಮೃದುವಾದ ಮಾತು ಎಲುಬನ್ನು ಮುರಿಯುತ್ತದೆ.
ಙ್ಞಾನೋಕ್ತಿಗಳು 25 : 16 (OCVKN)
ಜೇನನ್ನು ಕಂಡುಕೊಂಡಿದ್ದೀಯಾ? ಅದನ್ನು ನಿನಗೆ ತೃಪ್ತಿಯಾಗುವಷ್ಟೇ ತಿನ್ನು; ಹೊಟ್ಟೆ ತುಂಬಾ ತಿಂದರೆ ಕಾರಬೇಕಾದೀತು.
ಙ್ಞಾನೋಕ್ತಿಗಳು 25 : 17 (OCVKN)
ನಿನ್ನ ನೆರೆಯವನ ಮನೆಗೆ ಅಪರೂಪಕ್ಕೆ ಹೆಜ್ಜೆ ಇಡು; ಇಲ್ಲವಾದರೆ ನಿನ್ನ ವಿಷಯವಾಗಿ ಅವನು ಬೇಸರಗೊಂಡು ನಿನ್ನನ್ನು ಹಗೆಮಾಡಾನು.
ಙ್ಞಾನೋಕ್ತಿಗಳು 25 : 18 (OCVKN)
ತನ್ನ ನೆರೆಯವನಿಗೆ ವಿರೋಧವಾಗಿ ಸುಳ್ಳುಸಾಕ್ಷಿ ಹೇಳುವವನು ಚಮಟಿಗೆ, ಖಡ್ಗ, ಹರಿತವಾದ ಬಾಣವಾಗಿದ್ದಾನೆ.
ಙ್ಞಾನೋಕ್ತಿಗಳು 25 : 19 (OCVKN)
ಕಷ್ಟಕಾಲದಲ್ಲಿ ಅಪನಂಬಿಗಸ್ತನಾದ ಮನುಷ್ಯನಲ್ಲಿಯ ಭರವಸೆಯು ಮುರಿದ ಹಲ್ಲು, ಕೀಲು ತಪ್ಪಿದ ಪಾದವು.
ಙ್ಞಾನೋಕ್ತಿಗಳು 25 : 20 (OCVKN)
ಮನಗುಂದಿದವನಿಗೆ ಸಂಗೀತ ಹಾಡುವುದು ಚಳಿಯಲ್ಲಿ ಬಟ್ಟೆ ಬಿಚ್ಚಿದ ಹಾಗೆಯೂ ಹುಳಿ ಉಪ್ಪನ್ನು ಗಾಯಕ್ಕೆ ಹಚ್ಚಿದಂತೆಯೂ.
ಙ್ಞಾನೋಕ್ತಿಗಳು 25 : 21 (OCVKN)
ನಿನ್ನ ಶತ್ರು ಹಸಿದಿದ್ದರೆ ಉಣ್ಣುವುದಕ್ಕೆ ಅವನಿಗೆ ಊಟಕೊಡು; ಅವನು ಬಾಯಾರಿದ್ದರೆ ಕುಡಿಯುವುದಕ್ಕೆ ನೀರು ಕೊಡು.
ಙ್ಞಾನೋಕ್ತಿಗಳು 25 : 22 (OCVKN)
ಏಕೆಂದರೆ ಅದು ಅವನ ತಲೆಯ ಮೇಲೆ ಉರಿಯುವ ಬೆಂಕಿಯ ಕೆಂಡಗಳನ್ನು ಸುರಿಯುವಂತಿರುವುದು; ಯೆಹೋವ ದೇವರು ನಿನಗೆ ಪ್ರತಿಫಲ ಕೊಡುವರು.
ಙ್ಞಾನೋಕ್ತಿಗಳು 25 : 23 (OCVKN)
ಅನಿರೀಕ್ಷಿತ ಮಳೆಯನ್ನು ತರುವ ಉತ್ತರದ ಗಾಳಿಯಂತೆ ಚಾಡಿಯ ನಾಲಿಗೆ ಕೋಪದ ಮುಖ ಮಾಡುತ್ತದೆ.
ಙ್ಞಾನೋಕ್ತಿಗಳು 25 : 24 (OCVKN)
ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವುದಕ್ಕಿಂತ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದು ಲೇಸು.
ಙ್ಞಾನೋಕ್ತಿಗಳು 25 : 25 (OCVKN)
ಬಾಯಾರಿದವನಿಗೆ ತಣ್ಣೀರು ಹೇಗೋ ದೂರದೇಶದಿಂದ ಬಂದ ಒಳ್ಳೆಯ ಸಮಾಚಾರವು ಹಾಗೆಯೇ.
ಙ್ಞಾನೋಕ್ತಿಗಳು 25 : 26 (OCVKN)
ದುಷ್ಟರ ಮುಂದೆ ನೀತಿವಂತನು ಸೋಲುವುದು, ಕೆಸರಿನ ಬುಗ್ಗೆಗೂ ಕೊಳಕು ಒರತೆಗೂ ಸಮಾನ.
ಙ್ಞಾನೋಕ್ತಿಗಳು 25 : 27 (OCVKN)
ಜೇನನ್ನು ಹೆಚ್ಚಾಗಿ ತಿನ್ನುವುದು ಹಿತವಲ್ಲ; ಹಾಗೆಯೇ ಮನುಷ್ಯರು ಸ್ವಂತ ಗೌರವವನ್ನು ಹುಡುಕುವುದು ಗೌರವವಲ್ಲ.
ಙ್ಞಾನೋಕ್ತಿಗಳು 25 : 28 (OCVKN)
ತನ್ನ ಸ್ವಂತ ಆತ್ಮವನ್ನು ಆಳದಿರುವವನು, ಗೋಡೆ ಬಿದ್ದ ಹಾಳೂರಿಗೆ ಸಮಾನ.
❮
❯