ಙ್ಞಾನೋಕ್ತಿಗಳು 26 : 1 (OCVKN)
ಬೇಸಿಗೆಯಲ್ಲಿ ಹಿಮದಂತೆಯೂ, ಸುಗ್ಗಿಯಲ್ಲಿ ಮಳೆಯಂತೆಯೂ ಬುದ್ಧಿಹೀನನಿಗೆ ಮಾನವು ಸರಿಯಲ್ಲ.
ಙ್ಞಾನೋಕ್ತಿಗಳು 26 : 2 (OCVKN)
ಅಲೆದಾಡುವ ಪಕ್ಷಿಯಂತೆಯೂ, ಹಾರಾಡುವ ಬಾನಕ್ಕಿಯಂತೆಯೂ ಕಾರಣವಿಲ್ಲದೆ ಕೊಡುವ ಶಾಪವು ತಗಲದು.
ಙ್ಞಾನೋಕ್ತಿಗಳು 26 : 3 (OCVKN)
ಕುದುರೆಗೆ ಬಾರುಗೋಲು, ಕತ್ತೆಗೆ ಕಡಿವಾಣವು, ಮೂಢನ ಬೆನ್ನಿಗೆ ಬೆತ್ತ.
ಙ್ಞಾನೋಕ್ತಿಗಳು 26 : 4 (OCVKN)
ಮೂಢನ ಮೂರ್ಖತನಕ್ಕೆ ತಕ್ಕಂತೆ ಉತ್ತರಿಸಬೇಡ; ಇಲ್ಲವಾದರೆ ನೀನೂ ಅವನಿಗೆ ಸಮಾನನಾದೀಯೆ.
ಙ್ಞಾನೋಕ್ತಿಗಳು 26 : 5 (OCVKN)
ಮೂಢನ ಮೂರ್ಖತನಕ್ಕೆ ತಕ್ಕಂತೆ ಉತ್ತರಕೊಡು; ಇಲ್ಲವಾದರೆ ತನ್ನನ್ನು ಜ್ಞಾನಿಯೆಂದು ಎಣಿಸಿಕೊಂಡಾನು.
ಙ್ಞಾನೋಕ್ತಿಗಳು 26 : 6 (OCVKN)
ಬುದ್ಧಿಹೀನನ ಮೂಲಕ ವರ್ತಮಾನ ಕಳುಹಿಸುವವನು ತನ್ನ ಪಾದಗಳನ್ನು ತಾನೇ ಕಡಿದುಕೊಂಡು ಇಲ್ಲವೆ ಕೇಡನ್ನು ಕುಡಿಯುತ್ತಾನೆ.
ಙ್ಞಾನೋಕ್ತಿಗಳು 26 : 7 (OCVKN)
ಕುಂಟನ ಕಾಲುಗಳು ಜೋಲಾಡುವ ಹಾಗೆಯೇ, ಬುದ್ಧಿಹೀನರ ಬಾಯಲ್ಲಿ ಜ್ಞಾನೋಕ್ತಿಯು ಇರುತ್ತದೆ.
ಙ್ಞಾನೋಕ್ತಿಗಳು 26 : 8 (OCVKN)
ಮೂಢನಿಗೆ ಕೊಡುವ ಮಾನವು ಕವಣಿಯಲ್ಲಿಟ್ಟ ಕಲ್ಲಿನ ಹಾಗೆ.
ಙ್ಞಾನೋಕ್ತಿಗಳು 26 : 9 (OCVKN)
ಕುಡುಕನ ಕೈಯಲ್ಲಿ ಮುಳ್ಳು ಕೋಲಿನಂತೆ ಬುದ್ಧಿಹೀನರ ಬಾಯಲ್ಲಿ ಜ್ಞಾನೋಕ್ತಿಯು ಇರುವುದು.
ಙ್ಞಾನೋಕ್ತಿಗಳು 26 : 10 (OCVKN)
ಮೂಢರನ್ನೂ ದಾರಿಹೋಕರನ್ನೂ ಕೂಲಿಗೆ ಕರೆಯುವವನು ಯಾರಿಗಾದರೂ ತಗಲಲಿ ಎಂದು ಬಾಣ ಎಸೆಯುವ ಬಿಲ್ಲುಗಾರನಂತೆ.
ಙ್ಞಾನೋಕ್ತಿಗಳು 26 : 11 (OCVKN)
ತಾನು ಕಕ್ಕಿದ್ದಕ್ಕೆ ನಾಯಿಯು ತಿರುಗುವಂತೆ ಮೂಢನು ತನ್ನ ಮೂಢತನಕ್ಕೆ ಹಿಂದಿರುಗುತ್ತಾನೆ.
ಙ್ಞಾನೋಕ್ತಿಗಳು 26 : 12 (OCVKN)
ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ಕಾಣುತ್ತಿದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ.
ಙ್ಞಾನೋಕ್ತಿಗಳು 26 : 13 (OCVKN)
ಸೋಮಾರಿಯು, “ದಾರಿಯಲ್ಲಿ ಸಿಂಹವಿದೆ, ಬೀದಿಗಳಲ್ಲಿ ಭೀಕರ ಸಿಂಹ ಇದೆ,” ಎಂದು ಹೇಳುತ್ತಾನೆ.
ಙ್ಞಾನೋಕ್ತಿಗಳು 26 : 14 (OCVKN)
ಬಾಗಿಲು ತಿರುಗುಣಿಗಳ ಮೇಲೆ ಹೇಗೆ ತಿರುಗುತ್ತದೋ, ಹಾಗೆಯೇ ಸೋಮಾರಿಯು ತನ್ನ ಹಾಸಿಗೆಯ ಮೇಲೆ ಹೊರಳಾಡುತ್ತಾನೆ.
ಙ್ಞಾನೋಕ್ತಿಗಳು 26 : 15 (OCVKN)
ಸೋಮಾರಿಯು ತಟ್ಟೆಯಲ್ಲಿ ತನ್ನ ಕೈಯನ್ನು ಹಾಕಿ, ತಿರುಗಿ ಅದನ್ನು ತನ್ನ ಬಾಯಿಗೆ ತರಲಾರದಷ್ಟು ಆಯಾಸಪಡುತ್ತಾನೆ.
ಙ್ಞಾನೋಕ್ತಿಗಳು 26 : 16 (OCVKN)
ಜ್ಞಾನದಿಂದ ಉತ್ತರಿಸಬಲ್ಲ ಏಳು ಜನರಿಗಿಂತ, ತಾನೇ ಜ್ಞಾನಿ ಎಂದು ಸೋಮಾರಿಯು ಭಾವಿಸುತ್ತಾನೆ.
ಙ್ಞಾನೋಕ್ತಿಗಳು 26 : 17 (OCVKN)
ಒಬ್ಬನು ಹಾದುಹೋಗುತ್ತಾ ತನಗೆ ಸಂಬಂಧಿಸದೇ ಇರುವ ವ್ಯಾಜ್ಯದಲ್ಲಿ ತಲೆಹಾಕುವವನು ನಾಯಿಯ ಕಿವಿ ಹಿಡಿದವನಂತೆ ಇದ್ದಾನೆ.
ಙ್ಞಾನೋಕ್ತಿಗಳು 26 : 18 (OCVKN)
(18-19)ತನ್ನ ನೆರೆಯವನನ್ನು ಮೋಸಗೊಳಿಸಿ, “ಇದು ತಮಾಷೆಗೋಸ್ಕರ ಮಾಡುತ್ತೇನೆ,” ಎಂದು ಹೇಳುವವನು, ಕೊಳ್ಳಿಗಳನ್ನೂ, ಬಾಣಗಳನ್ನೂ, ಸಾವನ್ನೂ ಬೀರುವ ಹುಚ್ಚನಂತೆಯೇ.
ಙ್ಞಾನೋಕ್ತಿಗಳು 26 : 19 (OCVKN)
ಙ್ಞಾನೋಕ್ತಿಗಳು 26 : 20 (OCVKN)
ಕಟ್ಟಿಗೆ ಇಲ್ಲದಿರುವಲ್ಲಿ ಬೆಂಕಿಯು ಆರಿಹೋಗುತ್ತದೆ; ಹಾಗೆಯೇ ಚಾಡಿಕೋರನು ಇಲ್ಲದಿರುವಲ್ಲಿ ಜಗಳ ಶಮನವಾಗುವುದು.
ಙ್ಞಾನೋಕ್ತಿಗಳು 26 : 21 (OCVKN)
ಕೆಂಡಗಳಿಗೆ ಇದ್ದಲು, ಬೆಂಕಿಗೆ ಕಟ್ಟಿಗೆ; ಹಾಗೆಯೇ ಜಗಳವನ್ನು ಕೆರಳಿಸುವಂತೆ ಕಲಹ ಮಾಡುವವನು ಇರುವನು.
ಙ್ಞಾನೋಕ್ತಿಗಳು 26 : 22 (OCVKN)
ಚಾಡಿಕೋರನ ಮಾತುಗಳು ರುಚಿಕರ ಭಕ್ಷ್ಯದ ಹಾಗೆ ಹೊಟ್ಟೆಯ ಅಂತರ್ಭಾಗಗಳಿಗೆ ಇಳಿಯುತ್ತವೆ.
ಙ್ಞಾನೋಕ್ತಿಗಳು 26 : 23 (OCVKN)
ಕೆಟ್ಟ ಹೃದಯದಿಂದ ಸವಿನುಡಿಯುವ ತುಟಿಯು, ಬೆಳ್ಳಿಯ ಹೊದಿಕೆಯಿಂದ ಮುಚ್ಚಲ್ಪಟ್ಟ ಬೋಕಿಯಂತೆ ಇದೆ.
ಙ್ಞಾನೋಕ್ತಿಗಳು 26 : 24 (OCVKN)
ಶತ್ರುಗಳು ತಮ್ಮ ತುಟಿಗಳಿಂದ ವೇಷ ಧರಿಸುತ್ತಾರೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾರೆ.
ಙ್ಞಾನೋಕ್ತಿಗಳು 26 : 25 (OCVKN)
ಸವಿಮಾತನ್ನಾಡಿದರೆ ಅವನನ್ನು ನಂಬಬೇಡ; ಏಕೆಂದರೆ ಅವನ ಹೃದಯದಲ್ಲಿ ಏಳು ಅಸಹ್ಯ ಕಾರ್ಯಗಳಿವೆ.
ಙ್ಞಾನೋಕ್ತಿಗಳು 26 : 26 (OCVKN)
ಅವನ ಹಗೆತನವು ಮೋಸದಿಂದ ಮುಚ್ಚಲ್ಪಟ್ಟಿದ್ದರೂ, ಅವನ ಕೆಟ್ಟತನವು ಸಭೆಯಲ್ಲಿ ಬಯಲಾಗುವುದು.
ಙ್ಞಾನೋಕ್ತಿಗಳು 26 : 27 (OCVKN)
ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುತ್ತಾನೆ; ಕಲ್ಲು ಹೊರಳಿಸುವವನ ಮೇಲೆಯೇ ಅದು ತಿರುಗಿ ಹೊರಳುವುದು.
ಙ್ಞಾನೋಕ್ತಿಗಳು 26 : 28 (OCVKN)
ಸುಳ್ಳು ನಾಲಿಗೆಯವನು ತಾನು ಬಾಧಿಸಿದವರನ್ನೇ ಹಗೆ ಮಾಡುವನು; ಮುಖಸ್ತುತಿ ಮಾಡುವ ಬಾಯಿಯು ನಾಶವನ್ನುಂಟುಮಾಡುತ್ತದೆ.
❮
❯