ಙ್ಞಾನೋಕ್ತಿಗಳು 4 : 1 (OCVKN)
ಹೇಗಾದರೂ ಜ್ಞಾನವನ್ನು ಪಡೆಯಿರಿ ಮಕ್ಕಳೇ, ತಂದೆಯ ಶಿಕ್ಷಣವನ್ನು ಕೇಳಿರಿ; ತಿಳುವಳಿಕೆಯನ್ನು ಗ್ರಹಿಸಲಿಕ್ಕೆ ಗಮನಕೊಡಿರಿ.
ಙ್ಞಾನೋಕ್ತಿಗಳು 4 : 2 (OCVKN)
ಏಕೆಂದರೆ ನಾನು ನಿಮಗೆ ಸದುಪದೇಶವನ್ನು ಮಾಡುವೆನು, ನನ್ನ ಉಪದೇಶವನ್ನು ಬಿಟ್ಟುಬಿಡಬೇಡಿರಿ.
ಙ್ಞಾನೋಕ್ತಿಗಳು 4 : 3 (OCVKN)
ನಾನೂ ಕೂಡ ನನ್ನ ತಂದೆಗೆ ನೆಚ್ಚಿನ ಮಗನೂ ನನ್ನ ತಾಯಿಗೆ ಮುದ್ದು ಮಗನೂ ಆಗಿದ್ದೆನು.
ಙ್ಞಾನೋಕ್ತಿಗಳು 4 : 4 (OCVKN)
ನನ್ನ ತಂದೆ ನನಗೆ ಬೋಧಿಸಿ ಹೇಳಿದ್ದೇನೆಂದರೆ, “ನನ್ನ ಮಾತುಗಳನ್ನು ಮನಃಪೂರ್ವಕವಾಗಿ ಪಾಲಿಸು; ನನ್ನ ಆಜ್ಞೆಗಳನ್ನು ಕೈಗೊಳ್ಳು, ಆಗ ನೀನು ಬಾಳುವೆ.
ಙ್ಞಾನೋಕ್ತಿಗಳು 4 : 5 (OCVKN)
ಜ್ಞಾನವನ್ನು ಪಡೆ, ತಿಳುವಳಿಕೆಯನ್ನು ಸಂಪಾದಿಸು; ನನ್ನ ಮಾತುಗಳನ್ನು ಮರೆಯದಿರು, ಅವುಗಳಿಂದ ದೂರವಾಗಬೇಡ.
ಙ್ಞಾನೋಕ್ತಿಗಳು 4 : 6 (OCVKN)
ಜ್ಞಾನವನ್ನು ಬಿಟ್ಟುಬಿಡಬೇಡ, ಆಕೆ* ಆಕೆ ಅಂದರೆ ಜ್ಞಾನ ನಿನ್ನನ್ನು ಕಾಪಾಡುವಳು; ಆಕೆಯನ್ನು ಪ್ರೀತಿಸು, ಆಕೆ ನಿನ್ನನ್ನು ಕಾಯುವಳು.
ಙ್ಞಾನೋಕ್ತಿಗಳು 4 : 7 (OCVKN)
ಜ್ಞಾನವೇ ಮುಖ್ಯವಾದದ್ದು, ಆದ್ದರಿಂದ ಜ್ಞಾನವನ್ನು ಸಂಪಾದಿಸು; ನಿನ್ನಲ್ಲಿರುವ ಎಲ್ಲಾ ಸಂಪತ್ತನ್ನು ವ್ಯಯಮಾಡಿದರೂ ತಿಳುವಳಿಕೆಯನ್ನು ಪಡೆದುಕೋ.
ಙ್ಞಾನೋಕ್ತಿಗಳು 4 : 8 (OCVKN)
ಜ್ಞಾನವನ್ನು ನೀನು ಅಮೂಲ್ಯವೆಂದು ಎಣಿಸು, ಆಕೆಯು ನಿನ್ನನ್ನು ಮೇಲೆತ್ತುವಳು; ಆಕೆಯನ್ನು ನೀನು ಅಪ್ಪಿಕೊ, ಆಕೆಯು ನಿನ್ನನ್ನು ಘನಪಡಿಸುವಳು.
ಙ್ಞಾನೋಕ್ತಿಗಳು 4 : 9 (OCVKN)
ಆಕೆಯನ್ನು ನಿನ್ನ ತಲೆಗೆ ಮಹಿಮೆಯ ಕಿರೀಟವಾಗಿರುವಳು; ಆಕೆಯನ್ನು ನಿನಗೆ ಘನತೆಯ ಕಿರೀಟವನ್ನು ಸಮರ್ಪಿಸುವಳು.”
ಙ್ಞಾನೋಕ್ತಿಗಳು 4 : 10 (OCVKN)
ಮಗನೇ, ಆಲಿಸಿ ನನ್ನ ಮಾತುಗಳನ್ನು ಸ್ವೀಕರಿಸು, ಆಗ ನಿನ್ನ ಜೀವನದ ವರ್ಷಗಳು ಹೆಚ್ಚುವವು.
ಙ್ಞಾನೋಕ್ತಿಗಳು 4 : 11 (OCVKN)
ಜ್ಞಾನ ಮಾರ್ಗದಲ್ಲಿ ನಾನು ನಿನಗೆ ಶಿಕ್ಷಣಕೊಡುವೆನು, ನೇರ ಮಾರ್ಗಗಳಲ್ಲಿ ನಿನ್ನನ್ನು ಮುನ್ನಡಿಸುವೆನು.
ಙ್ಞಾನೋಕ್ತಿಗಳು 4 : 12 (OCVKN)
ನೀನು ನಡೆಯುವಾಗ ನಿನ್ನ ಹೆಜ್ಜೆಗೆ ತಡೆಯಾಗದು; ನೀನು ಓಡುವಾಗ ಮುಗ್ಗರಿಸಿ ಬೀಳುವುದಿಲ್ಲ.
ಙ್ಞಾನೋಕ್ತಿಗಳು 4 : 13 (OCVKN)
ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ; ಸದುಪದೇಶವನ್ನು ಕಾಪಾಡಿಕೋ, ಏಕೆಂದರೆ ಅದು ನಿನ್ನ ಜೀವವಾಗಿದೆ.
ಙ್ಞಾನೋಕ್ತಿಗಳು 4 : 14 (OCVKN)
ದುಷ್ಟರ ದಾರಿಯೊಳಗೆ ನೀನು ಪ್ರವೇಶಿಸದಿರು ಕೆಟ್ಟವರ ಮಾರ್ಗದಲ್ಲಿ ನೀನು ಹೋಗಬೇಡ.
ಙ್ಞಾನೋಕ್ತಿಗಳು 4 : 15 (OCVKN)
ಆ ದಾರಿಯಿಂದ ತೊಲಗು, ಅದರ ಪಕ್ಕದಲ್ಲಿ ಹಾದು ಹೋಗಬೇಡ; ಅದರಿಂದ ತಪ್ಪಿಸಿಕೊಂಡು, ನಿನ್ನ ಮಾರ್ಗದಲ್ಲಿ ಮುಂದೆ ನಡೆ.
ಙ್ಞಾನೋಕ್ತಿಗಳು 4 : 16 (OCVKN)
ಕೇಡು ಮಾಡದಿದ್ದರೆ ದುಷ್ಟರಿಗೆ ನಿದ್ರೆಬಾರದು; ಯಾರನ್ನಾದರೂ ಬೀಳಿಸದಿದ್ದರೆ, ಅವರಿಗೆ ನಿದ್ರೆ ಹತ್ತುವುದಿಲ್ಲ.
ಙ್ಞಾನೋಕ್ತಿಗಳು 4 : 17 (OCVKN)
ಅವರಿಗೆ ದುಷ್ಟತನವೇ ಆಹಾರ, ಬಲಾತ್ಕಾರವೇ ಅವರಿಗೆ ದ್ರಾಕ್ಷಾರಸ.
ಙ್ಞಾನೋಕ್ತಿಗಳು 4 : 18 (OCVKN)
ನೀತಿವಂತರ ಮಾರ್ಗವು ಮುಂಜಾನೆಯ ಸೂರ್ಯನ ಬೆಳಕಿನಂತೆ ಇದ್ದು, ದಿನದ ಪೂರ್ಣ ಬೆಳಕಿನವರೆಗೂ ಪ್ರಕಾಶಿಸಿ ಹೊಳೆಯುತ್ತಾ ಇರುವುದು.
ಙ್ಞಾನೋಕ್ತಿಗಳು 4 : 19 (OCVKN)
ಆದರೆ, ದುಷ್ಟರ ಮಾರ್ಗವು ಕಗ್ಗತ್ತಲಿನಂತಿದೆ. ಅವರು ಯಾವುದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು.
ಙ್ಞಾನೋಕ್ತಿಗಳು 4 : 20 (OCVKN)
ಮಗನೇ, ನನ್ನ ಮಾತುಗಳಿಗೆ ಗಮನಕೊಡು; ನನ್ನ ನುಡಿಗಳಿಗೆ ಕಿವಿಗೊಡು.
ಙ್ಞಾನೋಕ್ತಿಗಳು 4 : 21 (OCVKN)
ಆ ನುಡಿಗಳು ನಿನ್ನ ಕಣ್ಣುಗಳಿಂದ ತಪ್ಪಿ ಹೋಗದಿರಲಿ; ಅವುಗಳನ್ನು ನಿನ್ನ ಹೃದಯದೊಳಗೆ ಇಟ್ಟುಕೋ.
ಙ್ಞಾನೋಕ್ತಿಗಳು 4 : 22 (OCVKN)
ಏಕೆಂದರೆ ಆ ನುಡಿಗಳನ್ನು ಕಂಡುಕೊಳ್ಳುವವರಿಗೆ ಅವು ಜೀವವೂ, ದೇಹಕ್ಕೆಲ್ಲಾ ಆರೋಗ್ಯವೂ ಆಗಿವೆ.
ಙ್ಞಾನೋಕ್ತಿಗಳು 4 : 23 (OCVKN)
ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ; ಏಕೆಂದರೆ ಅದರೊಳಗಿಂದ ನಿನ್ನ ಕೃತ್ಯಗಳು ಜೀವಧಾರೆಯಾಗಿ ಹೊರಡುತ್ತವೆ.
ಙ್ಞಾನೋಕ್ತಿಗಳು 4 : 24 (OCVKN)
ವಕ್ರಮಾತುಗಳನ್ನು ನಿನ್ನ ಬಾಯಿಂದ ತೊಲಗಿಸಿ; ಕೆಟ್ಟ ಮಾತುಗಳು ನಿನ್ನ ತುಟಿಗಳಿಂದ ದೂರವಿರಲಿ.
ಙ್ಞಾನೋಕ್ತಿಗಳು 4 : 25 (OCVKN)
ನಿನ್ನ ದೃಷ್ಟಿ ನೇರವಾಗಿಯೇ ನೋಡಲಿ; ನಿನ್ನ ನೋಟವು ನೇರವಾಗಿ ನಿನ್ನ ಮುಂದೆಯೇ ನಾಟಿರಲಿ.
ಙ್ಞಾನೋಕ್ತಿಗಳು 4 : 26 (OCVKN)
ನೀನು ನಡೆಯುವ ದಾರಿಯ ಬಗ್ಗೆ ಗಮನವಿರಲಿ; ನೀನು ಕೈಗೊಳ್ಳುವ ಹಾದಿ ಸ್ಥಿರವಾಗಿರಲಿ.
ಙ್ಞಾನೋಕ್ತಿಗಳು 4 : 27 (OCVKN)
ನಿನ್ನ ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಕಾಲುಗಳು ದೂರವಿರಲಿ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27