ಙ್ಞಾನೋಕ್ತಿಗಳು 5 : 1 (OCVKN)
ವ್ಯಭಿಚಾರವನ್ನು ಕುರಿತು ಎಚ್ಚರಿಕೆ ಮಗನೇ, ನನ್ನ ಜ್ಞಾನಕ್ಕೆ ಗಮನಕೊಡು; ನನ್ನ ಒಳನೋಟದ ಮಾತುಗಳಿಗೆ ಕಿವಿಗೊಡು.
ಙ್ಞಾನೋಕ್ತಿಗಳು 5 : 2 (OCVKN)
ಆಗ ನಿನ್ನ ವಿವೇಚನೆಯನ್ನು ಉಳಿಸಿಕೊಳ್ಳುವೆ. ನಿನ್ನ ತುಟಿಗಳು ತಿಳುವಳಿಕೆಯನ್ನು ಕಾಪಾಡುವವು.
ಙ್ಞಾನೋಕ್ತಿಗಳು 5 : 3 (OCVKN)
ಏಕೆಂದರೆ ಜಾರಿಣಿಯ ತುಟಿಗಳು ಜೇನುಗರೆಯುವುದು; ಅವಳ ಮಾತು ಎಣ್ಣೆಗಿಂತಲೂ ಮೃದು.
ಙ್ಞಾನೋಕ್ತಿಗಳು 5 : 4 (OCVKN)
ಆದರೆ ಅಂತ್ಯದಲ್ಲಿ ಅವಳು ಮಾಚಿಪತ್ರೆಯಂತೆ ಕಹಿಯೂ, ಇಬ್ಬಾಯಿ ಖಡ್ಗದಂತೆ ಹರಿತವೂ ಆಗಿರುವಳು.
ಙ್ಞಾನೋಕ್ತಿಗಳು 5 : 5 (OCVKN)
ಅವಳ ಪಾದಗಳು ಮರಣದ ಕಡೆಗೆ ಇಳಿದುಹೋಗುತ್ತವೆ; ಅವಳ ಹೆಜ್ಜೆಗಳು ನೇರವಾಗಿ ಪಾತಾಳಕ್ಕೆ ನಡೆಸುತ್ತವೆ.
ಙ್ಞಾನೋಕ್ತಿಗಳು 5 : 6 (OCVKN)
ಜೀವಮಾರ್ಗದ ವಿಚಾರ ಅವಳಿಗಿಲ್ಲ; ಆದ್ದರಿಂದ ಅವಳ ಮಾರ್ಗಗಳು ಚಂಚಲವಾಗಿವೆ, ಅದರ ಅರಿವೂ ಅವಳಿಗಿಲ್ಲ.
ಙ್ಞಾನೋಕ್ತಿಗಳು 5 : 7 (OCVKN)
ಮಕ್ಕಳಿರಾ, ನನ್ನ ಕಡೆಗೆ ಈಗ ಕಿವಿಗೊಡಿರಿ; ನನ್ನ ಬಾಯಿಯ ಮಾತುಗಳಿಂದ ದೂರವಾಗಬೇಡಿರಿ.
ಙ್ಞಾನೋಕ್ತಿಗಳು 5 : 8 (OCVKN)
ಅವಳ ಕಡೆಯಿಂದ ನಿನ್ನ ದಾರಿಯನ್ನು ದೂರಮಾಡು; ಅವಳ ಮನೆಯ ಬಾಗಿಲ ಹತ್ತಿರಕ್ಕೆ ಹೋಗದೆ ಇರು.
ಙ್ಞಾನೋಕ್ತಿಗಳು 5 : 9 (OCVKN)
ನೀನು ನಿನ್ನ ಗೌರವವನ್ನು ಬೇರೆಯವರಿಗೆ ಕಳೆಯಬೇಡ, ನಿನ್ನ ಘನತೆನ್ನು ಕ್ರೂರನಿಗೂ ಕೊಡಬೇಡ.
ಙ್ಞಾನೋಕ್ತಿಗಳು 5 : 10 (OCVKN)
ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳದಂತೆ ಎಚ್ಚರಿಕೆ, ನಿನ್ನ ಪ್ರಯಾಸದ ಫಲವು ಪರರ ಮನೆ ಸೇರದಂತೆ ನೋಡಿಕೋ.
ಙ್ಞಾನೋಕ್ತಿಗಳು 5 : 11 (OCVKN)
ನಿನ್ನ ಜೀವನದ ಅಂತ್ಯದಲ್ಲಿ ನಿನ್ನ ದೇಹವೂ ಕ್ಷೀಣಿಸಿದಾಗ, ನೀನು ನರಳಬೇಕಾದೀತು.
ಙ್ಞಾನೋಕ್ತಿಗಳು 5 : 12 (OCVKN)
ಆಗ ನೀನು, “ಶಿಸ್ತನ್ನು ನಾನು ಎಷ್ಟೋ ಹಗೆ ಮಾಡಿದೆ; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು.
ಙ್ಞಾನೋಕ್ತಿಗಳು 5 : 13 (OCVKN)
ನನ್ನ ಬೋಧಕರ ಸ್ವರಕ್ಕೆ ನಾನು ವಿಧೇಯನಾಗದೆ ಹೋದೆ. ನನ್ನ ಉಪದೇಶಕರಿಗೆ ನಾನು ಕಿವಿಗೊಡದೆ ಹೋದೆ.
ಙ್ಞಾನೋಕ್ತಿಗಳು 5 : 14 (OCVKN)
ನಾನು ದೇವರ ಸಭೆಯಲ್ಲಿ ಗಂಭೀರ ಸಮಸ್ಯೆಗೆ ಒಳಗಾದೆ,” ಎಂದು ಹೇಳುವೆ.
ಙ್ಞಾನೋಕ್ತಿಗಳು 5 : 15 (OCVKN)
ನಿನ್ನ ಸ್ವಂತ ಕೊಳದ ನೀರನ್ನು ಕುಡಿ, ನಿನ್ನ ಸ್ವಂತ ಬಾವಿಯೊಳಗಿಂದ ಉಕ್ಕಿಬರುವ ಜಲವನ್ನು ಕುಡಿ.
ಙ್ಞಾನೋಕ್ತಿಗಳು 5 : 16 (OCVKN)
ನಿನ್ನ ಬುಗ್ಗೆಗಳು ಬೀದಿಗಳಲ್ಲಿ ಹರಡುವುದು ಯುಕ್ತವೋ? ನೀರಿನ ಒರತೆಗಳು ಬೀದಿಚೌಕಗಳಲ್ಲಿ ಹರಿಯುವುದು ಸರಿಯೇ?
ಙ್ಞಾನೋಕ್ತಿಗಳು 5 : 17 (OCVKN)
ಅವು ನಿನಗೆ ಸ್ವಂತವಾಗಿರಲಿ; ಪರರು ಭಾಗಿಗಳಾಗಿರಬಾರದು.
ಙ್ಞಾನೋಕ್ತಿಗಳು 5 : 18 (OCVKN)
ನಿನ್ನ ಬುಗ್ಗೆಯು ಆಶೀರ್ವಾದ ಹೊಂದಲಿ; ನಿನ್ನ ಆನಂದವು ಯೌವನದ ಕಾಲದ ಹೆಂಡತಿಯೊಂದಿಗಿರಲಿ.
ಙ್ಞಾನೋಕ್ತಿಗಳು 5 : 19 (OCVKN)
ಆಕೆಯು ಮನೋಹರವಾದ ಹರಿಣಿ, ಅಂದವಾದ ಜಿಂಕೆಯ ಹಾಗೆಯೂ; ಆಕೆಯ ಎದೆಯು ನಿನ್ನನ್ನು ಸದಾ ತೃಪ್ತಿಪಡಿಸಲಿ; ಆಕೆಯ ಪ್ರೀತಿಯಿಂದ ನೀನು ಸದಾ ಪರವಶನಾಗಿರು.
ಙ್ಞಾನೋಕ್ತಿಗಳು 5 : 20 (OCVKN)
ಮಗನೇ, ಬೇರೆಯವನ ಹೆಂಡತಿಗೆ ವಶವಾಗುವುದೇಕೆ? ಅನ್ಯಳ ಎದೆಯನ್ನೇಕೆ ಅಪ್ಪಿಕೊಳ್ಳುವೆ?
ಙ್ಞಾನೋಕ್ತಿಗಳು 5 : 21 (OCVKN)
ನಿನ್ನ ಮಾರ್ಗಗಳು ಯೆಹೋವ ದೇವರ ಮುಂದೆಯೇ ಇವೆ. ಅವರು ನಿನ್ನ ಮಾರ್ಗಗಳನ್ನೆಲ್ಲಾ ಪರೀಕ್ಷಿಸುತ್ತಾರೆ.
ಙ್ಞಾನೋಕ್ತಿಗಳು 5 : 22 (OCVKN)
ದುಷ್ಟನನ್ನು ಅವನ ಸ್ವಂತ ದ್ರೋಹಗಳೇ ಹಿಡಿಯುತ್ತವೆ; ತನ್ನ ಪಾಪಗಳ ಪಾಶಗಳೇ ಅವನನ್ನು ಬಂಧಿಸುತ್ತದೆ.
ಙ್ಞಾನೋಕ್ತಿಗಳು 5 : 23 (OCVKN)
ಶಿಸ್ತುಪಾಲನೆಯಿಲ್ಲದೆ ಅವನು ನಾಶವಾಗುವನು; ತನ್ನ ಅತಿಮೂರ್ಖತನದಿಂದಲೇ ತಪ್ಪಿಹೋಗುವನು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23