ಙ್ಞಾನೋಕ್ತಿಗಳು 7 : 1 (OCVKN)
ವ್ಯಭಿಚಾರಿಣಿಯ ವಿರುದ್ಧ ಎಚ್ಚರಿಕೆ ಮಗನೇ, ನನ್ನ ಮಾತುಗಳನ್ನು ಅನುಸರಿಸಿ, ನನ್ನ ಆಜ್ಞೆಗಳನ್ನು ನಿನ್ನಲ್ಲಿ ಇಟ್ಟುಕೋ.
ಙ್ಞಾನೋಕ್ತಿಗಳು 7 : 2 (OCVKN)
ನನ್ನ ಆಜ್ಞೆಗಳನ್ನು ಅನುಸರಿಸಿ ಬಾಳು; ನಿನ್ನ ಕಣ್ಣುಗುಡ್ಡೆಯಂತೆ ನನ್ನ ಕಟ್ಟಳೆಗಳನ್ನು ಕಾಪಾಡು.
ಙ್ಞಾನೋಕ್ತಿಗಳು 7 : 3 (OCVKN)
ಅವುಗಳನ್ನು ನಿನ್ನ ಬೆರಳುಗಳಿಗೆ ಉಂಗುರವಾಗಿಟ್ಟುಕೋ; ನಿನ್ನ ಹೃದಯದ ಹಲಗೆಯಲ್ಲಿ ಅವುಗಳನ್ನು ಬರೆ.
ಙ್ಞಾನೋಕ್ತಿಗಳು 7 : 4 (OCVKN)
ಜ್ಞಾನಕ್ಕೆ, “ನೀನು ನನ್ನ ಸಹೋದರಿ,” ಎಂದೂ, ಒಳನೋಟಕ್ಕೆ, “ನನ್ನ ಬಂಧು” ಎಂದೂ ಹೇಳು.
ಙ್ಞಾನೋಕ್ತಿಗಳು 7 : 5 (OCVKN)
ಅವು ವ್ಯಭಿಚಾರಿಣಿಯಿಂದಲೂ ಸವಿಮಾತನಾಡುವ ದಾರಿತಪ್ಪಿದ ಸ್ತ್ರೀಯಿಂದಲೂ ನಿನ್ನನ್ನು ಕಾಪಾಡುತ್ತವೆ.
ಙ್ಞಾನೋಕ್ತಿಗಳು 7 : 6 (OCVKN)
ನಾನು ನನ್ನ ಮನೆಯ ಕಿಟಿಕಿಯ ಜಾಲರಿಯಿಂದ ಇಣಕಿ ನೋಡಿದಾಗ,
ಙ್ಞಾನೋಕ್ತಿಗಳು 7 : 7 (OCVKN)
ಮುಗ್ಧರ ನಡುವೆ, ಯುವಕರ ಮಧ್ಯದಲ್ಲಿ, ತಿಳುವಳಿಕೆಯಿಲ್ಲದ ಯೌವನಸ್ಥನನ್ನು ಕಂಡೆನು.
ಙ್ಞಾನೋಕ್ತಿಗಳು 7 : 8 (OCVKN)
ಅವನು ಅವಳ ಮೂಲೆ ಮನೆಯ ದಿಕ್ಕಿನಲ್ಲಿ ಬೀದಿಯಿಂದ ಹಾದುಹೋಗುತ್ತಿದ್ದನು.
ಙ್ಞಾನೋಕ್ತಿಗಳು 7 : 9 (OCVKN)
ಸಂಜೆಯ ಮಬ್ಬಿನಲ್ಲಿ ರಾತ್ರಿಯ ಕತ್ತಲೆಯು ಕವಿಯುತ್ತಿತ್ತು.
ಙ್ಞಾನೋಕ್ತಿಗಳು 7 : 10 (OCVKN)
ಇಗೋ, ವೇಶ್ಯೆಯ ವಸ್ತ್ರವನ್ನು ಧರಿಸಿಕೊಂಡು ಒಬ್ಬ ಕಪಟ ಸ್ತ್ರೀಯು ಅವನನ್ನು ಎದುರುಗೊಂಡಳು.
ಙ್ಞಾನೋಕ್ತಿಗಳು 7 : 11 (OCVKN)
ಅವಳು ಕೂಗಾಟದವಳು, ಹಟಮಾರಿ; ಅವಳ ಪಾದಗಳು ಮನೆಯಲ್ಲಿ ನಿಲ್ಲುವುದೇ ಇಲ್ಲ.
ಙ್ಞಾನೋಕ್ತಿಗಳು 7 : 12 (OCVKN)
ಒಮ್ಮೆ ಬೀದಿಯಲ್ಲಿ ಮತ್ತೊಮ್ಮೆ ಚೌಕಗಳಲ್ಲಿ ಹೀಗೆ ಅವಳು ಮೂಲೆ ಮೂಲೆಗೂ ಹೊಂಚು ಹಾಕುತ್ತಾಳೆ.
ಙ್ಞಾನೋಕ್ತಿಗಳು 7 : 13 (OCVKN)
ಅವಳು ಆ ಯುವಕನನ್ನು ಹಿಡಿದುಕೊಂಡು ಮುದ್ದಿಟ್ಟು, ನಾಚಿಕೆಯಿಲ್ಲದೆ ಅವಳು ಹೀಗೆನ್ನುತ್ತಾಳೆ:
ಙ್ಞಾನೋಕ್ತಿಗಳು 7 : 14 (OCVKN)
“ಈ ದಿವಸ ನನ್ನ ಹರಕೆಗಳನ್ನು ನಾನು ಸಲ್ಲಿಸಿದ್ದೇನೆ. ನಾನು ನನ್ನ ಸಮಾಧಾನದ ಯಜ್ಞವನ್ನು ಅರ್ಪಿಸಿದ್ದೇನೆ.
ಙ್ಞಾನೋಕ್ತಿಗಳು 7 : 15 (OCVKN)
ಆದಕಾರಣ ನಾನು ನಿನ್ನನ್ನು ಎದುರುಗೊಳ್ಳುವುದಕ್ಕೆ ಬಂದೆನು; ಅತ್ಯಾಶೆಯಿಂದ ನಿನ್ನನ್ನು ಹುಡುಕಿ ಕಂಡುಕೊಂಡಿದ್ದೇನೆ.
ಙ್ಞಾನೋಕ್ತಿಗಳು 7 : 16 (OCVKN)
ಈಜಿಪ್ಟಿನ ನಯವಾದ ನಾರು ಮಡಿಯಿಂದಲೂ ನನ್ನ ಹಾಸಿಗೆಯನ್ನು ಅಲಂಕರಿಸಿದ್ದೇನೆ.
ಙ್ಞಾನೋಕ್ತಿಗಳು 7 : 17 (OCVKN)
ರಕ್ತಬೋಳ, ಅಗರು, ಲವಂಗ, ಚಕ್ಕೆಗಳಿಂದ ನನ್ನ ಹಾಸಿಗೆಯನ್ನು ಸುವಾಸನೆಗೊಳಿಸಿದ್ದೇನೆ.
ಙ್ಞಾನೋಕ್ತಿಗಳು 7 : 18 (OCVKN)
ಬಾ, ಬೆಳಗಿನವರೆಗೂ ತೃಪ್ತಿಯಾಗುವ ತನಕ ಪ್ರೀತಿಯ ವಶದಲ್ಲಿ ತುಂಬಿಕೊಂಡು ಕಾಮ ವಿಲಾಸಗಳಿಂದ ನಾವು ಸಂತೋಷಿಸೋಣ.
ಙ್ಞಾನೋಕ್ತಿಗಳು 7 : 19 (OCVKN)
ಏಕೆಂದರೆ ಯಜಮಾನನು ಮನೆಯಲ್ಲಿ ಇಲ್ಲ; ಅವನು ದೀರ್ಘ ಪ್ರಯಾಣದಲ್ಲಿದ್ದಾನೆ.
ಙ್ಞಾನೋಕ್ತಿಗಳು 7 : 20 (OCVKN)
ಅವನು ತನ್ನೊಂದಿಗೆ ಹಣದ ಗಂಟನ್ನು ತೆಗೆದುಕೊಂಡು ಹೋಗಿದ್ದಾನೆ; ಹುಣ್ಣಿಮೆಗೆ ಮುಂಚೆ ಅವನು ಮನೆಗೆ ಬರುವುದಿಲ್ಲ.”
ಙ್ಞಾನೋಕ್ತಿಗಳು 7 : 21 (OCVKN)
ಮನವೊಲಿಸುವ ಮಾತುಗಳಿಂದ ಅವಳು ಅವನನ್ನು ದಾರಿ ತಪ್ಪಿಸಿ, ಅವಳು ತನ್ನ ಮೋಹಕ ಮಾತುಗಳಿಂದ ಅವನನ್ನು ಆಕರ್ಷಿಸುತ್ತಾಳೆ.
ಙ್ಞಾನೋಕ್ತಿಗಳು 7 : 22 (OCVKN)
ಎತ್ತು ವಧೆಯ ಸ್ಥಾನಕ್ಕೆ ಹೋಗುವಂತೆ, ಅಥವಾ ಜಿಂಕೆಯು* ಜಿಂಕೆಯು ಹಿಬ್ರೂವಿನಲ್ಲಿ ಮಾಡಿದ ಭಾಷಾಂತರ ಮೂರ್ಖನು ಬಲೆಗೆ ಸಿಕ್ಕಿಬೀಳುವಂತೆ,
ಙ್ಞಾನೋಕ್ತಿಗಳು 7 : 23 (OCVKN)
ಅವನು ತನ್ನ ಪ್ರಾಣವು ಅಪಾಯದಲ್ಲಿರುವುದನ್ನು ತಿಳಿಯದೆ, ಒಂದು ಬಾಣವು ತನ್ನ ಕಾಳಿಜವನ್ನು ತಿವಿಯುವವರೆಗೆ, ಪಕ್ಷಿಯು ಬಲೆಯ ಕಡೆಗೆ ಓಡುವ ಹಾಗೆ ಅವನು ತಟ್ಟನೆ ಅವಳ ಹಿಂದೆ ಹೋಗುತ್ತಾನೆ.
ಙ್ಞಾನೋಕ್ತಿಗಳು 7 : 24 (OCVKN)
ಆದ್ದರಿಂದ ನನ್ನ ಮಕ್ಕಳೇ, ನನಗೆ ಕಿವಿಗೊಡಿರಿ, ನನ್ನ ಮಾತುಗಳನ್ನು ಆಲಿಸಿರಿ.
ಙ್ಞಾನೋಕ್ತಿಗಳು 7 : 25 (OCVKN)
ಅವಳ ಮಾರ್ಗಗಳಿಗೆ ನಿಮ್ಮ ಹೃದಯವು ತಿರುಗದೆ ಇರಲಿ; ತಪ್ಪಿಯೂ ಅವಳ ದಾರಿಯಲ್ಲಿ ಹೋಗಬೇಡಿರಿ.
ಙ್ಞಾನೋಕ್ತಿಗಳು 7 : 26 (OCVKN)
ಏಕೆಂದರೆ ಅನೇಕರು ಅವಳಿಗೆ ಬಲಿಯಾಗಿ ಬಿದ್ದಿದ್ದಾರೆ. ಬಲಿಷ್ಠರಾದ ಅನೇಕ ಪುರುಷರು ಅವಳಿಂದ ಹತರಾಗಿದ್ದಾರೆ.
ಙ್ಞಾನೋಕ್ತಿಗಳು 7 : 27 (OCVKN)
ಅವಳ ಮನೆಯು ಪಾತಾಳಕ್ಕೆ ಹೆದ್ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದು ಹೋಗುತ್ತದೆ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27