ಙ್ಞಾನೋಕ್ತಿಗಳು 8 : 1 (OCVKN)
ಜ್ಞಾನದ ಕರೆ ಜ್ಞಾನವು ಕರೆಯುತ್ತದಲ್ಲವೋ? ತಿಳುವಳಿಕೆ ಎಂಬಾಕೆಯು ತನ್ನ ಸ್ವರವನ್ನು ಎತ್ತಿ ಕೂಗಿ ಕರೆಯುವುದಿಲ್ಲವೋ?
ಙ್ಞಾನೋಕ್ತಿಗಳು 8 : 2 (OCVKN)
ಉನ್ನತ ಸ್ಥಳಗಳ ತುದಿಯಲ್ಲಿಯೂ, ಹಾದಿಗಳ ಸಂಧಿಗಳಲ್ಲಿಯೂ ನಿಂತುಕೊಳ್ಳುತ್ತಾಳೆ.
ಙ್ಞಾನೋಕ್ತಿಗಳು 8 : 3 (OCVKN)
ಪಟ್ಟಣದ ಪ್ರವೇಶ ದ್ವಾರಗಳಲ್ಲಿಯೂ ಒಳಗೆ ಬರುವಾಗ ಅವಳು ಸ್ವರವೆತ್ತಿ ಹೇಳುವುದೇನೆಂದರೆ,
ಙ್ಞಾನೋಕ್ತಿಗಳು 8 : 4 (OCVKN)
“ಮನುಷ್ಯರೇ, ನಾನು ಕರೆಯುತ್ತಿರುವುದು ನಿಮ್ಮನ್ನೇ, ಮಾನವರಿಗಾಗಿಯೇ ನಾನು ಧ್ವನಿಗೈಯುತ್ತೇನೆ.
ಙ್ಞಾನೋಕ್ತಿಗಳು 8 : 5 (OCVKN)
ಮುಗ್ಧರೇ, ಜ್ಞಾನವನ್ನು ಗ್ರಹಿಸಿರಿ. ಬುದ್ಧಿಹೀನರೇ, ನೀವು ತಿಳುವಳಿಕೆಯ ಹೃದಯದವರಾಗಿರಿ.
ಙ್ಞಾನೋಕ್ತಿಗಳು 8 : 6 (OCVKN)
ಕೇಳಿರಿ, ಉತ್ಕೃಷ್ಟ ಸಂಗತಿಗಳನ್ನು ನಾನು ಮಾತಾಡುವೆನು; ನ್ಯಾಯವಾದ ಸಂಗತಿಗಳಿಗಾಗಿ ನನ್ನ ತುಟಿಗಳನ್ನು ತೆರೆಯುವೆನು.
ಙ್ಞಾನೋಕ್ತಿಗಳು 8 : 7 (OCVKN)
ನನ್ನ ಬಾಯಿಯು ಸತ್ಯವನ್ನು ಮಾತಾಡುವುದು; ನನ್ನ ತುಟಿಗಳಿಗೆ ಕೆಟ್ಟತನವು ಅಸಹ್ಯವಾಗಿದೆ.
ಙ್ಞಾನೋಕ್ತಿಗಳು 8 : 8 (OCVKN)
ನನ್ನ ಬಾಯಿಯ ಮಾತುಗಳೆಲ್ಲಾ ನೀತಿಯುಕ್ತವಾಗಿವೆ; ಮೂರ್ಖತನವಾಗಲಿ, ವಕ್ರತೆಯಾಗಲಿ ಅವುಗಳಲ್ಲಿ ಇಲ್ಲ.
ಙ್ಞಾನೋಕ್ತಿಗಳು 8 : 9 (OCVKN)
ವಿವೇಚಿಸುವವನಿಗೆ ನನ್ನ ಎಲ್ಲ ಮಾತುಗಳು ನೇರವಾಗಿರುವುದು. ತಿಳುವಳಿಕೆ ಉಳ್ಳವನಿಗೆ ಅವು ಪ್ರಾಮಾಣಿಕವಾಗಿಯೂ ಇರುವುದು.
ಙ್ಞಾನೋಕ್ತಿಗಳು 8 : 10 (OCVKN)
ಬೆಳ್ಳಿಗಿಂತ ನನ್ನ ಬೋಧನೆಯನ್ನು ಆರಿಸಿಕೋ ಉತ್ತಮ ಬಂಗಾರಕ್ಕಿಂತ ಮಿಗಿಲಾದ ತಿಳುವಳಿಕೆಯನ್ನು ಪಡೆದುಕೋ.
ಙ್ಞಾನೋಕ್ತಿಗಳು 8 : 11 (OCVKN)
ಏಕೆಂದರೆ ಮಾಣಿಕ್ಯಗಳಿಗಿಂತ ಜ್ಞಾನವು ಅಮೂಲ್ಯವಾದದ್ದು. ಅಪೇಕ್ಷಿಸತಕ್ಕ ಯಾವ ವಸ್ತುಗಳನ್ನು ಅದಕ್ಕೆ ಹೋಲಿಸಲಾಗದು.
ಙ್ಞಾನೋಕ್ತಿಗಳು 8 : 12 (OCVKN)
“ಜ್ಞಾನವೆಂಬ ನಾನು ವಿವೇಕದೊಂದಿಗೆ ವಾಸವಾಗಿದ್ದೇನೆ. ತಿಳುವಳಿಕೆಯನ್ನೂ ವಿವೇಚನೆಯನ್ನೂ ನಾನು ಹೊಂದಿದ್ದೇನೆ.
ಙ್ಞಾನೋಕ್ತಿಗಳು 8 : 13 (OCVKN)
ಕೆಟ್ಟದ್ದನ್ನು ಹಗೆ ಮಾಡುವುದೇ ಯೆಹೋವ ದೇವರ ಭಯವಾಗಿದೆ; ಗರ್ವ, ಅಹಂಕಾರ, ಕೆಟ್ಟನಡವಳಿಕೆ, ವಕ್ರ ಭಾಷಣಗಳನ್ನು ನಾನು ಹಗೆಮಾಡುತ್ತೇನೆ.
ಙ್ಞಾನೋಕ್ತಿಗಳು 8 : 14 (OCVKN)
ಸಮಾಲೋಚನೆಯೂ ಒಳ್ಳೆಯ ನ್ಯಾಯವೂ ನನ್ನಲ್ಲಿದೆ. ನನ್ನಲ್ಲಿ ಒಳನೋಟವೂ ಶಕ್ತಿಯೂ ಇವೆ.
ಙ್ಞಾನೋಕ್ತಿಗಳು 8 : 15 (OCVKN)
ನನ್ನ ಮೂಲಕ ರಾಜರು ಆಳುವರು; ಪ್ರಧಾನರು ನ್ಯಾಯವಾದ ತೀರ್ಪು ಕೊಡುವರು.
ಙ್ಞಾನೋಕ್ತಿಗಳು 8 : 16 (OCVKN)
ನನ್ನಿಂದ ಅಧಿಪತಿಗಳು ಆಳುತ್ತಾರೆ, ಕೀರ್ತಿವಂತರೆಲ್ಲರೂ ಭೂಮಿಯ ಮೇಲೆ ಆಳುವರು.
ಙ್ಞಾನೋಕ್ತಿಗಳು 8 : 17 (OCVKN)
ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ; ಹಂಬಲಿಸಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.
ಙ್ಞಾನೋಕ್ತಿಗಳು 8 : 18 (OCVKN)
ಐಶ್ವರ್ಯವೂ ಘನತೆಯೂ, ಶಾಶ್ವತ ಸಂಪತ್ತು ಹಾಗೂ ಸಮೃದ್ಧಿಯು ನನ್ನೊಂದಿಗಿವೆ.
ಙ್ಞಾನೋಕ್ತಿಗಳು 8 : 19 (OCVKN)
ನನ್ನ ಫಲವು ಬಂಗಾರಕ್ಕಿಂತಲೂ, ನನ್ನ ಆದಾಯವು ಉತ್ತಮವಾದ ಬೆಳ್ಳಿಗಿಂತಲೂ ಶ್ರೇಷ್ಠವಾಗಿವೆ.
ಙ್ಞಾನೋಕ್ತಿಗಳು 8 : 20 (OCVKN)
ನೀತಿಯ ಮಾರ್ಗದಲ್ಲಿಯೂ ನ್ಯಾಯದ ದಾರಿ ನಡುವೆಯೂ ನಾನು ನಡೆಯುತ್ತೇನೆ.
ಙ್ಞಾನೋಕ್ತಿಗಳು 8 : 21 (OCVKN)
ನನ್ನನ್ನು ಪ್ರೀತಿಸುವವರು ಸಂಪತ್ತನ್ನು ಬಾಧ್ಯವಾಗಿ ಹೊಂದುವರು. ನಾನು ಅವರ ಬೊಕ್ಕಸಗಳನ್ನು ತುಂಬಿಸುವೆನು.
ಙ್ಞಾನೋಕ್ತಿಗಳು 8 : 22 (OCVKN)
“ಯೆಹೋವ ದೇವರು ತಮ್ಮ ಸೃಷ್ಟಿಕ್ರಮದಲ್ಲಿ ನನ್ನನ್ನು ಮೊದಲು ನಿರ್ಮಿಸಿದರು, ದೇವರ ಪುರಾತನ ಕಾರ್ಯಗಳಲ್ಲಿ ನಾನೇ ಮೊದಲು;
ಙ್ಞಾನೋಕ್ತಿಗಳು 8 : 23 (OCVKN)
ಪ್ರಾರಂಭದಲ್ಲಿ ಜಗದುತ್ಪತ್ತಿಗೆ ಮುಂಚೆಯೇ ಅನಾದಿಕಾಲದಲ್ಲಿ ದೇವರು ನನ್ನನ್ನು ಸೃಷ್ಟಿಸಿದರು.
ಙ್ಞಾನೋಕ್ತಿಗಳು 8 : 24 (OCVKN)
ಆಗಾಧಗಳು ಇಲ್ಲದೆ ಇರುವಾಗ ನಾನು ಹುಟ್ಟಿ ಬಂದೆನು, ನೀರಿನ ಬುಗ್ಗೆಗಳು ಇಲ್ಲದೆ ಇರುವಾಗಲೇ ನಾನಿದ್ದೆನು.
ಙ್ಞಾನೋಕ್ತಿಗಳು 8 : 25 (OCVKN)
ಪರ್ವತಗಳು ಸ್ಥಾಪಿತವಾಗುವುದಕ್ಕಿಂತ ಮುಂಚೆಯೂ ಬೆಟ್ಟಗುಡ್ಡಗಳಿಗಿಂತ ಮೊದಲು ನಾನು ಜನಿಸಿದೆನು.
ಙ್ಞಾನೋಕ್ತಿಗಳು 8 : 26 (OCVKN)
ಭೂಮಿಯನ್ನೂ ಹೊಲಗಳನ್ನೂ ಲೋಕದ ಅಣುಗಳನ್ನೂ ಅವರು ನಿರ್ಮಿಸದೆ ಇರುವಾಗಲೇ ನಾನು ಜನಿಸಿದೆನು.
ಙ್ಞಾನೋಕ್ತಿಗಳು 8 : 27 (OCVKN)
ಅವರು ಆಕಾಶಗಳನ್ನು ಸಿದ್ಧಪಡಿಸಿದಾಗ ಸಾಗರದ ಮೇಲೆ ಚಕ್ರವನ್ನು ಹಾಕಿದಾಗ,
ಙ್ಞಾನೋಕ್ತಿಗಳು 8 : 28 (OCVKN)
ಮೇಲೆ ಮೇಘಗಳನ್ನು ಅವರು ಸ್ಥಾಪಿಸಿದಾಗ ಅಗಾಧದ ಬುಗ್ಗೆಗಳನ್ನು ಅವರು ಬಲಪಡಿಸಿದಾಗ,
ಙ್ಞಾನೋಕ್ತಿಗಳು 8 : 29 (OCVKN)
ಪ್ರವಾಹಗಳು ತನ್ನ ಆಜ್ಞೆಯನ್ನು ಮೀರದಂತೆ ಸಮುದ್ರಕ್ಕೆ ಅವರು ಮೇರೆಯನ್ನು ಮಾಡಿ ಭೂಮಿಯ ಅಸ್ತಿವಾರಗಳನ್ನು ನೇಮಿಸಿದಾಗ, ನಾನು ಅಲ್ಲಿ ಇದ್ದೆನು.
ಙ್ಞಾನೋಕ್ತಿಗಳು 8 : 30 (OCVKN)
ಆಗ ನಾನು ಅವರೊಂದಿಗೆ ಕುಶಲ ಶಿಲ್ಪಿಯಂತೆ ಅವರ ಹತ್ತಿರ ಇದ್ದೆನು. ಅವರ ಸನ್ನಿಧಿಯಲ್ಲಿ ಯಾವಾಗಲೂ ಆನಂದಿಸುತ್ತಾ ಅನುದಿನವೂ ಸಂತೋಷಿಸುತ್ತಿದ್ದೆನು.
ಙ್ಞಾನೋಕ್ತಿಗಳು 8 : 31 (OCVKN)
ಅವರ ಭೂಮಿಯ ವಾಸಸ್ಥಳದ ಭಾಗದಲ್ಲಿ ಸಂತೋಷಿಸುತ್ತಿದ್ದೆನು; ಮಾನವರೊಂದಿಗೆ ಆನಂದಿಸುತ್ತಿದ್ದೆನು.
ಙ್ಞಾನೋಕ್ತಿಗಳು 8 : 32 (OCVKN)
“ಆದ್ದರಿಂದ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.
ಙ್ಞಾನೋಕ್ತಿಗಳು 8 : 33 (OCVKN)
ನನ್ನ ಬೋಧನೆಯನ್ನು ಕೇಳಿ ಬುದ್ಧಿವಂತರಾಗಿರಿ; ಅದನ್ನು ನೀವು ತಿರಸ್ಕರಿಸಬೇಡಿರಿ.
ಙ್ಞಾನೋಕ್ತಿಗಳು 8 : 34 (OCVKN)
ನನ್ನ ದ್ವಾರಗಳ ಬಳಿಯಲ್ಲಿ ಪ್ರತಿದಿನ ಕಾಯುತ್ತಾ, ನನ್ನ ಬಾಗಿಲುಗಳ ನಿಲುವುಗಳಲ್ಲಿ ನಿರೀಕ್ಷಿಸುತ್ತಾ, ನನ್ನ ಮಾತುಗಳನ್ನು ಕೇಳುವವರು ಧನ್ಯರು.
ಙ್ಞಾನೋಕ್ತಿಗಳು 8 : 35 (OCVKN)
ಏಕೆಂದರೆ ನನ್ನನ್ನು ಕಂಡುಕೊಳ್ಳುವವನು ಜೀವವನ್ನು ಕಂಡುಕೊಂಡು ಯೆಹೋವ ದೇವರ ಕೃಪೆಯನ್ನು ಹೊಂದುವನು.
ಙ್ಞಾನೋಕ್ತಿಗಳು 8 : 36 (OCVKN)
ಆದರೆ ನನ್ನನ್ನು ಬಿಟ್ಟು ದೂರಹೋಗುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ, ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.”
❮
❯