ಕೀರ್ತನೆಗಳು 102 : 1 (OCVKN)
ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ; ನನ್ನ ಮೊರೆಯು ನಿಮಗೆ ಮುಟ್ಟಲಿ.
ಕೀರ್ತನೆಗಳು 102 : 2 (OCVKN)
ನನಗೆ ಇಕ್ಕಟ್ಟು ಇರುವ ದಿವಸದಲ್ಲಿ ನಿಮ್ಮ ಮುಖವನ್ನು ನನಗೆ ಮರೆಮಾಡಬೇಡಿರಿ, ಸಹಾಯಮಾಡಿರಿ; ನಾನು ಕರೆಯುವಾಗ ನನ್ನ ಕಡೆಗೆ ತಿರುಗಿರಿ, ಬೇಗನೇ ನನಗೆ ಉತ್ತರಕೊಡಿರಿ.
ಕೀರ್ತನೆಗಳು 102 : 3 (OCVKN)
ನನ್ನ ದಿವಸಗಳು ಹೊಗೆಯಂತೆ ಕಳೆದುಹೋಗುತ್ತವೆ; ನನ್ನ ಎಲುಬುಗಳು ಬೂದಿ ಮುಚ್ಚಿದ ಕೆಂಡದಂತೆ ಸುಟ್ಟುಹೋಗಿವೆ.
ಕೀರ್ತನೆಗಳು 102 : 4 (OCVKN)
ನನ್ನ ಹೃದಯವು ಬಾಡಿಹೋಗಿ ಹುಲ್ಲಿನ ಹಾಗೆ ಒಣಗಿಹೋಗಿದೆ; ನಾನು ಊಟಮಾಡುವುದಕ್ಕೆ ಸಹ ಮರೆತುಬಿಡುತ್ತೇನೆ.
ಕೀರ್ತನೆಗಳು 102 : 5 (OCVKN)
ನಾನು ನನ್ನ ನಿಟ್ಟುಸಿರಿನಿಂದ ಮೊರೆಯಿಡುತ್ತಿದ್ದೇನೆ. ನನ್ನಲ್ಲಿ ಎಲುಬು ತೊಗಲು ಮಾತ್ರ ಉಳಿದಿರುತ್ತವೆ.
ಕೀರ್ತನೆಗಳು 102 : 6 (OCVKN)
ನಾನು ಅರಣ್ಯದ ಗೂಬೆಗೆ ಸಮಾನನಾಗಿದ್ದೇನೆ; ನಾನು ಹಾಳೂರಿನ ಗೂಬೆಯ ಹಾಗಿದ್ದೇನೆ.
ಕೀರ್ತನೆಗಳು 102 : 7 (OCVKN)
ನಿದ್ರೆಯಿಲ್ಲದೆ ಬಳಲುತ್ತಿದ್ದೇನೆ; ಮಾಳಿಗೆಯ ಮೇಲಿರುವ ಒಂಟಿಯಾದ ಪಕ್ಷಿಯ ಹಾಗಿದ್ದೇನೆ.
ಕೀರ್ತನೆಗಳು 102 : 8 (OCVKN)
ದಿನವೆಲ್ಲಾ ನನ್ನ ಶತ್ರುಗಳು ನನ್ನನ್ನು ನಿಂದಿಸುತ್ತಾರೆ; ನನ್ನ ಮೇಲೆ ಕೋಪಿಸಿಕೊಳ್ಳುವವರೆಲ್ಲರು ನನಗೆ ವಿರೋಧವಾಗಿ ಶಪಿಸುತ್ತಾರೆ.
ಕೀರ್ತನೆಗಳು 102 : 9 (OCVKN)
ನಿಮ್ಮ ದುಃಖ ಬೇಸರದ ನಿಮಿತ್ತ, ಬೂದಿಯನ್ನು ರೊಟ್ಟಿಯಂತೆ ತಿಂದಿದ್ದೇನೆ; ನನ್ನ ಪಾನವನ್ನು ಕಣ್ಣೀರಿನಿಂದ ಬೆರೆಸಿದ್ದೇನೆ.
ಕೀರ್ತನೆಗಳು 102 : 10 (OCVKN)
ಇದಕ್ಕೆ ಕಾರಣ ನೀವು ಗಮನ ಕೊಡದಿರುವುದೇ. ನೀವು ನನಗೆ ಲಕ್ಷ್ಯಕೊಡುತ್ತಾಯಿಲ್ಲ.
ಕೀರ್ತನೆಗಳು 102 : 11 (OCVKN)
ನನ್ನ ದಿವಸಗಳು ಸಾಯಂಕಾಲದ ನೆರಳಿನ ಹಾಗಿವೆ; ನಾನು ಹುಲ್ಲಿನ ಹಾಗೆ ಒಣಗುತಿದ್ದೇನೆ.
ಕೀರ್ತನೆಗಳು 102 : 12 (OCVKN)
ಆದರೆ ನೀವು ಯೆಹೋವ ದೇವರೇ, ಎಂದೆಂದಿಗೂ ಇರುತ್ತೀರಿ; ನಿಮ್ಮ ಪ್ರಸಿದ್ಧ ಕಾರ್ಯಗಳು ತಲತಲಾಂತರಕ್ಕೂ ಇರುತ್ತವೆ.
ಕೀರ್ತನೆಗಳು 102 : 13 (OCVKN)
ನೀವು ಎದ್ದು ಚೀಯೋನನ್ನು ಕನಿಕರಿಸುವಿರಿ; ಅದನ್ನು ಕರುಣಿಸುವ ಕಾಲ ಇದೇ; ಹೌದು, ನೀವು ನಿರ್ಣಯಿಸಿದ ಸಮಯವು ಬಂದಿದೆ.
ಕೀರ್ತನೆಗಳು 102 : 14 (OCVKN)
ಅದು ಕಲ್ಲು ಕುಪ್ಪೆಯಾಗಿ ಹೋಗಿದ್ದರೂ, ನಿಮ್ಮ ಸೇವಕರಿಗೆ ಅತಿ ಪ್ರಿಯವಾಗಿದೆ; ಅದರ ಧೂಳಿಗೆ ಅವರು ಮರಗುತ್ತಾರೆ.
ಕೀರ್ತನೆಗಳು 102 : 15 (OCVKN)
ಜನಾಂಗಗಳು ಯೆಹೋವ ದೇವರ ಹೆಸರಿಗೂ, ಭೂರಾಜರೆಲ್ಲರೂ ನಿಮ್ಮ ಮಹಿಮೆಗೂ ಭಯಪಡುವರು.
ಕೀರ್ತನೆಗಳು 102 : 16 (OCVKN)
ಏಕೆಂದರೆ ಯೆಹೋವ ದೇವರು ಚೀಯೋನನ್ನು ಮರಳಿ ಕಟ್ಟುವರು; ಅವರು ತಮ್ಮ ಮಹಿಮೆಯಲ್ಲಿ ಕಾಣಿಸಿಕೊಳ್ಳುವರು.
ಕೀರ್ತನೆಗಳು 102 : 17 (OCVKN)
ಅವರು ದಿಕ್ಕಿಲ್ಲದವರ ಪ್ರಾರ್ಥನೆಗೆ ಕಿವಿಗೊಡುತ್ತಾರೆ; ದೇವರು ಅವರ ಪ್ರಾರ್ಥನೆಯನ್ನು ತಿರಸ್ಕರಿಸುವುದಿಲ್ಲ.
ಕೀರ್ತನೆಗಳು 102 : 18 (OCVKN)
ಇದು ಮುಂದಿನ ಸಂತತಿಗೋಸ್ಕರ ಲಿಖಿತವಾಗಿರಲಿ; ಹುಟ್ಟಲಿಕ್ಕಿರುವ ಜನರು ಯೆಹೋವ ದೇವರನ್ನು ಸ್ತುತಿಸಲಿ.
ಕೀರ್ತನೆಗಳು 102 : 19 (OCVKN)
ಯೆಹೋವ ದೇವರು ಉನ್ನತವಾದ ಪವಿತ್ರ ಸ್ಥಾನದಿಂದ ಕೆಳಕ್ಕೆ ನೋಡಿದ್ದಾರೆ; ಅವರು ಪರಲೋಕದಿಂದ ಭೂಮಿಯನ್ನು ದೃಷ್ಟಿಸಿದ್ದಾರೆ.
ಕೀರ್ತನೆಗಳು 102 : 20 (OCVKN)
ಅವರು ಸೆರೆಯವರ ಗೋಳಾಟವನ್ನು ಕೇಳಿ, ಮರಣದಂಡನೆಗೆ ಪಾತ್ರನಾದವರನ್ನು ಬಿಡಿಸುವರು,
ಕೀರ್ತನೆಗಳು 102 : 21 (OCVKN)
ಬಿಡುಗಡೆಯಾದವರು ಚೀಯೋನಿನಲ್ಲಿ ಯೆಹೋವ ದೇವರ ನಾಮವನ್ನು ಸಾರುವಂತೆಯೂ, ಯೆರೂಸಲೇಮಿನಲ್ಲಿ ತಮ್ಮ ಸ್ತೋತ್ರವನ್ನು ಪ್ರಕಟಿಸುವಂತೆಯೂ ಮಾಡಿದ್ದಾರೆ.
ಕೀರ್ತನೆಗಳು 102 : 22 (OCVKN)
ಜನಾಂಗಗಳೂ, ರಾಜ್ಯಗಳೂ ಕೂಡಿಬಂದು ಇವರೊಡನೆ ಯೆಹೋವ ದೇವರನ್ನು ಸೇವಿಸುತ್ತವೆ, ಎಂದು ಹೇಳಲಾಗುವುದು.
ಕೀರ್ತನೆಗಳು 102 : 23 (OCVKN)
ದೇವರು ನನ್ನ ಜೀವಮಾನದ ಬಲವನ್ನು ಕುಂದಿಸಿದ್ದಾರೆ, ನನ್ನ ದಿನಗಳನ್ನೂ ಕಡಿಮೆ ಮಾಡಿದ್ದಾರೆ.
ಕೀರ್ತನೆಗಳು 102 : 24 (OCVKN)
ಆದ್ದರಿಂದ ನಾನು, “ನನ್ನ ದೇವರೇ, ನನ್ನ ಆಯುಷ್ಯದ ಮಧ್ಯದಲ್ಲಿ ನನ್ನನ್ನು ತೆಗೆದುಕೊಳ್ಳಬೇಡಿರಿ; ನಿಮ್ಮ ವರ್ಷಗಳು ತಲತಲಾಂತರಗಳಿಗೂ ಇವೆ.
ಕೀರ್ತನೆಗಳು 102 : 25 (OCVKN)
ಆದಿಯಲ್ಲಿ ನೀವು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀರಿ; ಆಕಾಶಗಳು ನಿಮ್ಮ ಕೈಕೆಲಸಗಳಾಗಿವೆ.
ಕೀರ್ತನೆಗಳು 102 : 26 (OCVKN)
ಅವು ನಾಶವಾಗುವುವು; ಆದರೆ ನೀವು ಸದಾಕಾಲವೂ ಜೀವಿಸುತ್ತೀರಿ. ಅವುಗಳೆಲ್ಲಾ ವಸ್ತ್ರದ ಹಾಗೆ ಹಳೆಯದಾಗುವುದು; ಅಂಗಿಯ ಹಾಗೆ ಅವುಗಳನ್ನು ಬದಲಾಯಿಸುವಿರಿ; ಅವು ತೆಗೆದುಹಾಕಲಾಗುವುದು.
ಕೀರ್ತನೆಗಳು 102 : 27 (OCVKN)
ಆದರೆ ನೀವು ಏಕರೀತಿಯಾಗಿದ್ದೀರಿ. ನಿಮ್ಮ ವರ್ಷಗಳು ಮುಗಿದುಹೋಗುವುದಿಲ್ಲ.
ಕೀರ್ತನೆಗಳು 102 : 28 (OCVKN)
ನಿಮ್ಮ ಸೇವಕರ ಮಕ್ಕಳು ನಿಮ್ಮ ಸನ್ನಿಧಿಯಲ್ಲಿ ಬದುಕುವರು; ಅವರ ಸಂತತಿಯು ನಿಮ್ಮ ಮುಂದೆ ನೆಲೆಯಾಗಿರುವುದು.”
❮
❯