ಕೀರ್ತನೆಗಳು 103 : 1 (OCVKN)
ನನ್ನ ಮನವೇ, ಯೆಹೋವ ದೇವರನ್ನು ಕೊಂಡಾಡು; ನನ್ನ ಅಂತರಾತ್ಮವೇ ಅವರ ಪರಿಶುದ್ಧ ನಾಮವನ್ನು ಸ್ತುತಿಸು.
ಕೀರ್ತನೆಗಳು 103 : 2 (OCVKN)
ನನ್ನ ಮನವೇ, ಯೆಹೋವ ದೇವರನ್ನು ಕೊಂಡಾಡು; ಅವರ ಉಪಕಾರಗಳಲ್ಲಿ ಒಂದನ್ನೂ ಮರೆತುಬಿಡಬೇಡ.
ಕೀರ್ತನೆಗಳು 103 : 3 (OCVKN)
ದೇವರು ನಿಮ್ಮ ಪಾಪಗಳನ್ನೆಲ್ಲಾ ಕ್ಷಮಿಸುತ್ತಾರೆ. ನಿಮ್ಮ ರೋಗಗಳನ್ನೆಲ್ಲಾ ವಾಸಿಮಾಡುತ್ತಾರೆ.
ಕೀರ್ತನೆಗಳು 103 : 4 (OCVKN)
ದೇವರು ನಿಮ್ಮ ಜೀವವನ್ನು ಪಾತಾಳದಿಂದ ವಿಮೋಚಿಸುವರು; ಪ್ರೀತಿ ಅನುಕಂಪವನ್ನು ನಿನಗೆ ಕಿರೀಟವಾಗಿ ಶೃಂಗರಿಸುವರು.
ಕೀರ್ತನೆಗಳು 103 : 5 (OCVKN)
ನಿಮ್ಮ ಯೌವನವು ಹದ್ದಿನ ಹಾಗೆ ನವೀಕರಿಸುವಂತೆ ಮಾಡುವರು. ಅವರು ನಿಮ್ಮ ಆಶೆಗಳನ್ನು ಒಳ್ಳೆಯವುಗಳಿಂದ ತೃಪ್ತಿಪಡಿಸುವರು.
ಕೀರ್ತನೆಗಳು 103 : 6 (OCVKN)
ಯೆಹೋವ ದೇವರು ಕುಗ್ಗಿದವರೆಲ್ಲರಿಗೂ ನೀತಿಯನ್ನೂ, ನ್ಯಾಯವನ್ನೂ ಕಾರ್ಯರೂಪಕ್ಕೆ ತರುವರು.
ಕೀರ್ತನೆಗಳು 103 : 7 (OCVKN)
ಅವರು ತಮ್ಮ ಮಾರ್ಗಗಳನ್ನು ಮೋಶೆಗೂ, ತಮ್ಮ ಕ್ರಿಯೆಗಳನ್ನು ಇಸ್ರಾಯೇಲರಿಗೂ ಪ್ರಕಟಿಸಿದರು:
ಕೀರ್ತನೆಗಳು 103 : 8 (OCVKN)
ಯೆಹೋವ ದೇವರು, ಅನುಕಂಪವೂ ದಯೆಯೂ ದೀರ್ಘಶಾಂತಿಯೂ ಪೂರ್ಣ ಪ್ರೀತಿಯೂ ಉಳ್ಳವರಾಗಿದ್ದಾರೆ.
ಕೀರ್ತನೆಗಳು 103 : 9 (OCVKN)
ಅವರು ಯಾವಾಗಲೂ ತಪ್ಪುಹುಡುಕುವವರಲ್ಲ; ದೇವರು ತಮ್ಮ ಕೋಪವನ್ನು ಎಂದೆಂದಿಗೂ ಕೂಡಿಟ್ಟುಕೊಳ್ಳುವವರು ಅಲ್ಲ;
ಕೀರ್ತನೆಗಳು 103 : 10 (OCVKN)
ದೇವರು ನಮ್ಮ ಪಾಪಗಳಿಗೆ ಸರಿಯಾಗಿ ನಮ್ಮನ್ನು ಶಿಕ್ಷಿಸಲಿಲ್ಲ; ನಮ್ಮ ಅಧರ್ಮಗಳ ಪ್ರಕಾರ ನಮಗೆ ಮುಯ್ಯಿತೀರಿಸಲಿಲ್ಲ.
ಕೀರ್ತನೆಗಳು 103 : 11 (OCVKN)
ಏಕೆಂದರೆ, ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ದೇವರ ಪ್ರೀತಿಯು ತಮಗೆ ಭಯಪಡುವವರ ಮೇಲೆ ಅಷ್ಟು ಮಹೋನ್ನತವಾಗಿದೆ;
ಕೀರ್ತನೆಗಳು 103 : 12 (OCVKN)
ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ, ಅವರು ನಮ್ಮ ಅತಿಕ್ರಮಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾರೆ.
ಕೀರ್ತನೆಗಳು 103 : 13 (OCVKN)
ಒಬ್ಬ ತಂದೆಯು ತಮ್ಮ ಮಕ್ಕಳ ಮೇಲೆ ಅನುಕಂಪಗೊಳ್ಳುವಂತೆ, ಯೆಹೋವ ದೇವರು ತಮಗೆ ಭಯಪಡುವವರ ಮೇಲೆ ಅನುಕಂಪ ತೋರಿಸುವವರಾಗಿದ್ದಾರೆ.
ಕೀರ್ತನೆಗಳು 103 : 14 (OCVKN)
ದೇವರು ನಮ್ಮ ಪ್ರಕೃತಿಯನ್ನು ಬಲ್ಲವರಾಗಿದ್ದಾರೆ; ನಾವು ಧೂಳಾಗಿದ್ದೇವೆಂದು ಅವರು ನೆನಪುಮಾಡಿ ಕೊಳ್ಳುತ್ತಾರೆ.
ಕೀರ್ತನೆಗಳು 103 : 15 (OCVKN)
ಮನುಷ್ಯನ ಆಯುಷ್ಕಾಲವು ಹುಲ್ಲಿನಂತಿದೆ, ಅವನು ಹೊಲದ ಹೂವಿನ ಹಾಗೆಯೇ ಶೋಭಿಸುತ್ತಾನೆ;
ಕೀರ್ತನೆಗಳು 103 : 16 (OCVKN)
ಗಾಳಿಯು ಅದರ ಮೇಲೆ ಬೀಸುತ್ತಲೇ ಹೂವು ಇಲ್ಲದೆ ಹೋಗುತ್ತದೆ; ಅದು ಇದ್ದ ಸ್ಥಳವನ್ನು ಪುನಃ ಕಾಣುವುದಿಲ್ಲ.
ಕೀರ್ತನೆಗಳು 103 : 17 (OCVKN)
ಆದರೆ ಯೆಹೋವ ದೇವರ ಪ್ರೀತಿಯು ಅವರಿಗೆ ಭಯಪಡುವವರ ಮೇಲೆ ಯುಗಯುಗಾಂತರಕ್ಕೂ ಇರುವುದು, ಅವರ ನೀತಿಯು ಮಕ್ಕಳ ಮಕ್ಕಳಿಗೂ ನೆಲೆಸಿರುವುದು.
ಕೀರ್ತನೆಗಳು 103 : 18 (OCVKN)
ದೇವರ ಒಡಂಬಡಿಕೆಯನ್ನು ಕೈಕೊಂಡು, ಅವರ ಸೂತ್ರಗಳನ್ನು ಪಾಲಿಸಲು ನೆನಸುವವರಿಗೂ ಅವರ ನೀತಿಯು ನೆಲೆಸಿರುವುದು.
ಕೀರ್ತನೆಗಳು 103 : 19 (OCVKN)
ಯೆಹೋವ ದೇವರು ಪರಲೋಕದಲ್ಲಿ ತಮ್ಮ ಸಿಂಹಾಸನವನ್ನು ಸ್ಥಾಪಿಸಿದ್ದಾರೆ, ಅವರ ಸಾಮ್ರಾಜ್ಯದ ಆಳಿಕೆಯು ಎಲ್ಲರ ಮೇಲೆ ಇರುವುದು.
ಕೀರ್ತನೆಗಳು 103 : 20 (OCVKN)
ದೇವರ ದೂತರೇ, ಅವರ ಮಾತನ್ನು ಕೇಳಿ, ಅವರಿಗೆ ವಿಧೇಯರಾಗುವ ಪರಾಕ್ರಮಿಗಳೇ, ಯೆಹೋವ ದೇವರನ್ನು ಸ್ತುತಿಸಿರಿ.
ಕೀರ್ತನೆಗಳು 103 : 21 (OCVKN)
ದೇವರ ಇಷ್ಟವನ್ನು ನಡೆಸುವ ಸೇವಕರೇ, ಅವರ ಎಲ್ಲಾ ಸೈನ್ಯಗಳೇ, ಯೆಹೋವ ದೇವರನ್ನು ಸ್ತುತಿಸಿರಿ.
ಕೀರ್ತನೆಗಳು 103 : 22 (OCVKN)
ದೇವರ ಆಳಿಕೆಯ ಎಲ್ಲಾ ಕಡೆಗಳಲ್ಲಿಯೂ ಇರುವುದು. ಅವರ ಎಲ್ಲಾ ಸೃಷ್ಟಿಗಳೇ, ಯೆಹೋವ ದೇವರನ್ನು ಸ್ತುತಿಸಿರಿ. ನನ್ನ ಮನವೇ, ಯೆಹೋವ ದೇವರನ್ನು ಕೊಂಡಾಡು.
❮
❯
1
2
3
4
5
6
7
8
9
10
11
12
13
14
15
16
17
18
19
20
21
22