ಕೀರ್ತನೆಗಳು 104 : 1 (OCVKN)
ನನ್ನ ಮನವೇ, ಯೆಹೋವ ದೇವರನ್ನು ಸ್ತುತಿಸು. ನನ್ನ ದೇವರಾದ ಯೆಹೋವ ದೇವರೇ, ನೀವು ಬಹಳ ದೊಡ್ಡವರಾಗಿದ್ದೀರಿ; ಘನತೆಯಿಂದಲೂ, ಪ್ರಭಾವದಿಂದಲೂ ಭೂಷಿತನಾಗಿರುವೆ.
ಕೀರ್ತನೆಗಳು 104 : 2 (OCVKN)
ದೇವರು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುತ್ತಾರೆ, ಆಕಾಶವನ್ನು ಗುಡಾರದ ಹಾಗೆ ಹರಡಿಸಿದ್ದಾರೆ.
ಕೀರ್ತನೆಗಳು 104 : 3 (OCVKN)
ದೇವರು ನೀರಿನ ಮೇಲೆ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾರೆ. ಮೋಡಗಳನ್ನು ತಮ್ಮ ರಥವಾಗಿ ಮಾಡುತ್ತಾರೆ. ಗಾಳಿಯ ರೆಕ್ಕೆಗಳ ಮೇಲೆ ಸವಾರಿ ಮಾಡುತ್ತಾರೆ.
ಕೀರ್ತನೆಗಳು 104 : 4 (OCVKN)
ಅವರು ಗಾಳಿಗಳನ್ನು ತಮ್ಮ ದೂತರಾಗಿ ಮಾಡಿದ್ದಾರೆ, ಅಗ್ನಿ ಜ್ವಾಲೆಯನ್ನು ತಮ್ಮ ಸೇವಕರಾಗಿಯೂ ಮಾಡಿಕೊಂಡಿದ್ದಾರೆ.
ಕೀರ್ತನೆಗಳು 104 : 5 (OCVKN)
ಯುಗಯುಗಾಂತರಗಳಿಗೂ ಅದು ಕದಲದ ಹಾಗೆ, ದೇವರು ಭೂಮಿಯನ್ನು ಅದರ ಅಸ್ತಿವಾರಗಳ ಮೇಲೆ ಸ್ಥಾಪಿಸಿದ್ದಾರೆ.
ಕೀರ್ತನೆಗಳು 104 : 6 (OCVKN)
ಜಲಗಾಧವು ವಸ್ತ್ರದ ಹಾಗೆ ಅದನ್ನು ಮುಚ್ಚಿದೆ; ಬೆಟ್ಟಗಳ ಮೇಲೆ ಜಲರಾಶಿಗಳು ನಿಂತವು.
ಕೀರ್ತನೆಗಳು 104 : 7 (OCVKN)
ನಿಮ್ಮ ಗದರಿಕೆಯಿಂದ ಜಲರಾಶಿ ಓಡಿ ಹೋದವು; ನಿಮ್ಮ ಗುಡುಗಿನ ಶಬ್ದದಿಂದ ಅವು ಓಡಿ ಹೋದವು.
ಕೀರ್ತನೆಗಳು 104 : 8 (OCVKN)
ಜಲರಾಶಿಗಳು ಬೆಟ್ಟಗಳಿಗೆ ಏರಿ, ತಗ್ಗುಗಳಿಗೆ ಇಳಿದು, ನೀವು ಅವುಗಳಿಗೆ ಸ್ಥಾಪಿಸಿದ ಸ್ಥಳಕ್ಕೆ ಹೋದವು.
ಕೀರ್ತನೆಗಳು 104 : 9 (OCVKN)
ಅವು ದಾಟದ ಹಾಗೆಯೂ, ಭೂಮಿಯನ್ನು ಮುಚ್ಚುವುದಕ್ಕೆ ತಿರುಗಿ ಬಾರದ ಹಾಗೆಯೂ ನೀವು ಮೇರೆಯನ್ನು ಇಟ್ಟಿದ್ದೀರಿ.
ಕೀರ್ತನೆಗಳು 104 : 10 (OCVKN)
ಬುಗ್ಗೆಗಳನ್ನು ಹಳ್ಳಗಳಿಗೆ ಕಳುಹಿಸುತ್ತೀರಿ. ಅವು ಬೆಟ್ಟಗಳ ನಡುವೆ ಹರಿಯುತ್ತವೆ.
ಕೀರ್ತನೆಗಳು 104 : 11 (OCVKN)
ಅವು ಕಾಡಿನ ಮೃಗಗಳಿಗೆಲ್ಲಾ ನೀರು ಕುಡಿಸುತ್ತವೆ; ಕಾಡುಕತ್ತೆಗಳು ತಮ್ಮ ದಾಹವನ್ನು ತೀರಿಸಿಕೊಳ್ಳುತ್ತವೆ.
ಕೀರ್ತನೆಗಳು 104 : 12 (OCVKN)
ಆಕಾಶದ ಪಕ್ಷಿಗಳು, ಅವುಗಳ ಹತ್ತಿರ ವಾಸವಾಗಿದ್ದು, ಕೊಂಬೆಗಳ ಮಧ್ಯದಲ್ಲಿಂದ ಹಾಡುತ್ತವೆ.
ಕೀರ್ತನೆಗಳು 104 : 13 (OCVKN)
ದೇವರು ಬೆಟ್ಟಗಳಿಗೆ ತಮ್ಮ ಉಪ್ಪರಿಗೆಗಳೊಳಗಿಂದ ನೀರು ಹಾಕುತ್ತಾರೆ. ಅವರ ಕೆಲಸಗಳ ಫಲದಿಂದ ಭೂಮಿಯು ತೃಪ್ತಿಯಾಗುತ್ತದೆ.
ಕೀರ್ತನೆಗಳು 104 : 14 (OCVKN)
ದೇವರು ಪಶುಗಳಿಗೋಸ್ಕರ ಹುಲ್ಲನ್ನೂ, ಮನುಷ್ಯನ ವ್ಯವಸಾಯಕ್ಕೋಸ್ಕರ ಪಲ್ಯಗಳನ್ನೂ ಮೊಳೆಸುತ್ತಾರೆ. ಹೀಗೆ ಭೂಮಿಯೊಳಗಿಂದ ಆಹಾರವನ್ನು ಬರಮಾಡುತ್ತಾರೆ.
ಕೀರ್ತನೆಗಳು 104 : 15 (OCVKN)
ದ್ರಾಕ್ಷಾರಸವು ಮನುಷ್ಯ ಹೃದಯವನ್ನು ಸಂತೋಷಪಡಿಸುತ್ತದೆ; ಎಣ್ಣೆಯು ಮಾನವನ ಮುಖವನ್ನು ಪ್ರಕಾಶಿಸುವಂತೆ ಮಾಡುತ್ತದೆ; ರೊಟ್ಟಿಯು ಮನುಷ್ಯನ ಪ್ರಾಣಕ್ಕೆ ಆಧಾರವಾಗುತ್ತದೆ.
ಕೀರ್ತನೆಗಳು 104 : 16 (OCVKN)
ಯೆಹೋವ ದೇವರು ನೆಟ್ಟ ಮರಗಳಾದ ಲೆಬನೋನಿನ ದೇವದಾರು ವೃಕ್ಷಗಳಿಗೆ ಬೇಕಾದಷ್ಟು ಜಲವಿರುತ್ತದೆ.
ಕೀರ್ತನೆಗಳು 104 : 17 (OCVKN)
ಅಲ್ಲಿ ಹಕ್ಕಿಗಳು ಗೂಡು ಕಟ್ಟುತ್ತವೆ; ತುರಾಯಿ ಗಿಡಗಳಲ್ಲಿ ಬಕಪಕ್ಷಿಗಳು ವಾಸಿಸುತ್ತವೆ.
ಕೀರ್ತನೆಗಳು 104 : 18 (OCVKN)
ಎತ್ತರವಾದ ಬೆಟ್ಟಗಳು ಕಾಡುಮೇಕೆಗಳಿಗೆ, ಬೆಟ್ಟದ ಮೊಲಗಳಿಗೆ ಬಂಡೆಗಳು ಆಶ್ರಯವಾಗಿವೆ.
ಕೀರ್ತನೆಗಳು 104 : 19 (OCVKN)
ದೇವರೇ, ಕಾಲಗಳ ಸೂಚನೆಗಾಗಿ ಚಂದ್ರನನ್ನು ಸೃಷ್ಟಿಸಿದ್ದೀರಿ, ಸೂರ್ಯನು ತನ್ನ ಅಸ್ತಮಾನವನ್ನು ತಿಳಿದಿದ್ದಾನೆ.
ಕೀರ್ತನೆಗಳು 104 : 20 (OCVKN)
ನೀವು ಕತ್ತಲನ್ನು ಬರಮಾಡುತ್ತೀರಿ, ಆಗ ರಾತ್ರಿಯಾಗುತ್ತದೆ; ಅದರಲ್ಲಿ ಅಡವಿಯ ಮೃಗಗಳೆಲ್ಲಾ ಸಂಚರಿಸುತ್ತವೆ.
ಕೀರ್ತನೆಗಳು 104 : 21 (OCVKN)
ಸಿಂಹದ ಮರಿಗಳು ಬೇಟೆಗೋಸ್ಕರವೂ, ದೇವರಿಂದ ತಮ್ಮ ಆಹಾರವನ್ನು ಹುಡುಕುವುದಕ್ಕೋಸ್ಕರವೂ ಗರ್ಜಿಸುತ್ತವೆ.
ಕೀರ್ತನೆಗಳು 104 : 22 (OCVKN)
ಸೂರ್ಯೋದಯವಾಗಲು ಅವು ಕೂಡಿಬಂದು ತಮ್ಮ ಗವಿಗಳಲ್ಲಿ ಮಲಗಿಕೊಳ್ಳುತ್ತವೆ.
ಕೀರ್ತನೆಗಳು 104 : 23 (OCVKN)
ಮನುಷ್ಯನು ತನ್ನ ಕೆಲಸಕ್ಕೆ ಹೊರಟುಹೋಗಿ ಸಾಯಂಕಾಲದವರೆಗೆ ದುಡಿಯುತ್ತಾನೆ.
ಕೀರ್ತನೆಗಳು 104 : 24 (OCVKN)
ಯೆಹೋವ ದೇವರೇ, ನಿಮ್ಮ ಕೆಲಸಗಳು ಎಷ್ಟೋ ಇವೆ! ಅವುಗಳನ್ನೆಲ್ಲಾ ಜ್ಞಾನದಿಂದ ಉಂಟುಮಾಡಿದ್ದೀರಿ, ಭೂಮಿಯು ನಿಮ್ಮ ಸಂಪತ್ತಿನಿಂದ ತುಂಬಿದೆ.
ಕೀರ್ತನೆಗಳು 104 : 25 (OCVKN)
ದೊಡ್ಡದೂ, ವಿಶಾಲವಾದದ್ದೂ ಆದ ಸಮುದ್ರವಿದೆ; ಅದರಲ್ಲಿ ಲೆಕ್ಕವಿಲ್ಲದಷ್ಟು ಜೀವಜಂತುಗಳೂ, ಸಣ್ಣ ದೊಡ್ಡ ಜಲಚರಗಳೂ ಇವೆ.
ಕೀರ್ತನೆಗಳು 104 : 26 (OCVKN)
ಅದರಲ್ಲಿ ಹಡಗುಗಳು ಹೋಗುತ್ತವೆ; ಅದರಲ್ಲಿ ಆಡುವುದಕ್ಕೆ ನೀವು ರೂಪಿಸಿದ ಲಿವ್ಯಾತಾನ ತಿಮಿಂಗಲವು ಇದೆ.
ಕೀರ್ತನೆಗಳು 104 : 27 (OCVKN)
ದೇವರೇ, ನೀವು ಅವುಗಳ ಆಹಾರವನ್ನು ತಕ್ಕ ಕಾಲದಲ್ಲಿ ಕೊಡುವ ಹಾಗೆ, ಅವುಗಳೆಲ್ಲಾ ನಿಮ್ಮನ್ನು ಕಾದುಕೊಂಡಿರುತ್ತವೆ.
ಕೀರ್ತನೆಗಳು 104 : 28 (OCVKN)
ನೀವು ಅವುಗಳಿಗೆ ಕೊಡಲು ಅವು ಕೂಡಿ ಬರುತ್ತವೆ; ನೀವು ನಿಮ್ಮ ಕೈ ತೆರೆಯಲು, ಒಳ್ಳೆಯವುಗಳಿಂದ ತೃಪ್ತಿ ಹೊಂದುತ್ತವೆ.
ಕೀರ್ತನೆಗಳು 104 : 29 (OCVKN)
ನೀವು ನಿಮ್ಮ ಮುಖವನ್ನು ಮರೆಮಾಡಲು, ಅವು ಹೆದರುತ್ತವೆ. ನೀವು ಅವುಗಳ ಶ್ವಾಸವನ್ನು ತೆಗೆದುಬಿಡಲು, ಸತ್ತು ಹೋಗಿ, ಮಣ್ಣುಪಾಲಾಗುತ್ತವೆ.
ಕೀರ್ತನೆಗಳು 104 : 30 (OCVKN)
ನೀವು ನಿಮ್ಮ ಶ್ವಾಸವನ್ನು ಕಳುಹಿಸಲು, ಜೀವಜಂತುಗಳು ಹುಟ್ಟುತ್ತವೆ; ಹೀಗೆ ನೀವು ಭೂಮಿಯನ್ನು ನೂತನಗೊಳಿಸುತ್ತೀರಿ.
ಕೀರ್ತನೆಗಳು 104 : 31 (OCVKN)
ಯೆಹೋವ ದೇವರ ಮಹಿಮೆಯು ಯುಗಯುಗಕ್ಕೂ ಇರಲಿ; ಯೆಹೋವ ದೇವರು ತಮ್ಮ ಕೆಲಸಗಳಲ್ಲಿ ಸಂತೋಷಪಡಲಿ.
ಕೀರ್ತನೆಗಳು 104 : 32 (OCVKN)
ಅವರು ಭೂಮಿಯನ್ನು ದೃಷ್ಟಿಸಲು, ಅದು ನಡುಗುತ್ತದೆ; ಬೆಟ್ಟಗಳನ್ನು ಮುಟ್ಟಲು, ಅವು ಹೊಗೆ ಹಾಯುತ್ತವೆ.
ಕೀರ್ತನೆಗಳು 104 : 33 (OCVKN)
ನಾನು ಜೀವಿತ ಕಾಲವೆಲ್ಲಾ ಯೆಹೋವ ದೇವರಿಗೆ ಹಾಡುತ್ತಿರುವೆನು. ನಾನು ಬದುಕಿರುವವರೆಗೆ ದೇವರನ್ನು ಸ್ತುತಿಸುತ್ತಿರುವೆನು.
ಕೀರ್ತನೆಗಳು 104 : 34 (OCVKN)
ದೇವರ ವಿಷಯವಾದ ನನ್ನ ಧ್ಯಾನವು ಮಧುರವಾಗಿರುವುದು; ನಾನು ಯೆಹೋವ ದೇವರಲ್ಲಿ ಸಂತೋಷ ಪಡುವೆನು.
ಕೀರ್ತನೆಗಳು 104 : 35 (OCVKN)
ಪಾಪಿಗಳು ಭೂಮಿಯೊಳಗಿಂದ ಮುಗಿದು ಹೋಗಲಿ; ದುಷ್ಟರು ಇಲ್ಲದೆ ಹೋಗಲಿ. ನನ್ನ ಮನವೇ, ಯೆಹೋವ ದೇವರನ್ನು ಸ್ತುತಿಸು. ಯೆಹೋವ ದೇವರಿಗೆ ಸ್ತೋತ್ರವಾಗಲಿ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35