ಕೀರ್ತನೆಗಳು 106 : 1 (OCVKN)
ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರಿಗೆ ಉಪಕಾರಸ್ತುತಿ ಮಾಡಿರಿ; ಅವರು ಒಳ್ಳೆಯವರು. ಅವರ ಪ್ರೀತಿ ಶಾಶ್ವತವಾಗಿರುವುದು.
ಕೀರ್ತನೆಗಳು 106 : 2 (OCVKN)
ಯೆಹೋವ ದೇವರ ಪರಾಕ್ರಮ ಕ್ರಿಯೆಗಳನ್ನು ಪ್ರಕಟಿಸಿರಿ, ದೇವರನ್ನು ತಕ್ಕಂತೆ ಸ್ತುತಿಸುವವರು ಯಾರಿಗೆ ಸಾಧ್ಯ?
ಕೀರ್ತನೆಗಳು 106 : 3 (OCVKN)
ನ್ಯಾಯವನ್ನು ಕಾಪಾಡಿಕೊಂಡು ಯಾವಾಗಲೂ ಸರಿಯಾದವುಗಳನ್ನು ಪಾಲಿಸುವವರು ಧನ್ಯರು.
ಕೀರ್ತನೆಗಳು 106 : 4 (OCVKN)
ದೇವರೇ, ನಿಮ್ಮ ಜನರ ಮೇಲಿರುವ ಮೆಚ್ಚುಗೆಯಿಂದ ನನ್ನನ್ನು ಜ್ಞಾಪಕಮಾಡಿಕೊಳ್ಳಿರಿ, ನಿಮ್ಮ ರಕ್ಷಣೆಯಿಂದ ನನ್ನನ್ನು ದರ್ಶಿಸಿರಿ.
ಕೀರ್ತನೆಗಳು 106 : 5 (OCVKN)
ಯೆಹೋವ ದೇವರೇ, ನಾನು ನೀವು ಆಯ್ದುಕೊಂಡವರ ಸುಖವನ್ನು ಕಂಡು, ನಿಮ್ಮ ಜನರ ಸಂತೋಷದೊಂದಿಗೆ ಸಂತೋಷಿಸಿ, ನಿಮ್ಮ ಸ್ವಕೀಯರ ಸಂಗಡ ಹೊಗಳಿಕೊಳ್ಳುವೆನು.
ಕೀರ್ತನೆಗಳು 106 : 6 (OCVKN)
ನಮ್ಮ ಪಿತೃಗಳಂತೆ ನಾವು ಕೂಡಾ ಪಾಪಮಾಡಿದ್ದೇವೆ; ಅಕ್ರಮ ಮಾಡಿದ್ದೇವೆ; ದುಷ್ಟಕೃತ್ಯಗಳನ್ನು ನಡೆಸಿದ್ದೇವೆ.
ಕೀರ್ತನೆಗಳು 106 : 7 (OCVKN)
ನಮ್ಮ ಪಿತೃಗಳು ಈಜಿಪ್ಟಿನಲ್ಲಿ ನಿಮ್ಮ ಅದ್ಭುತಗಳಿಗೆ ಲಕ್ಷಕೊಡದೆ, ನಿಮ್ಮ ಕರುಣಾತಿಶಯವನ್ನು ನೆನಸದೆ, ಸಮುದ್ರದ ಬಳಿಯಲ್ಲಿ ಅಂದರೆ ಕೆಂಪುಸಮುದ್ರದ ಹತ್ತಿರ ತಿರುಗಿಬಿದ್ದರು.
ಕೀರ್ತನೆಗಳು 106 : 8 (OCVKN)
ಆದರೂ ದೇವರು ತಮ್ಮ ಮಹಾಶಕ್ತಿಯನ್ನು ಅವರಿಗೆ ತಿಳಿಯಮಾಡುವ ಹಾಗೆ, ತಮ್ಮ ಹೆಸರಿನ ನಿಮಿತ್ತ ಅವರನ್ನು ರಕ್ಷಿಸಿದರು.
ಕೀರ್ತನೆಗಳು 106 : 9 (OCVKN)
ದೇವರು ಕೆಂಪು ಸಮುದ್ರವನ್ನು ಗದರಿಸಲು, ಅದು ಒಣಗಿ ಹೋಯಿತು; ಹೀಗೆ ಮರುಭೂಮಿಯಲ್ಲಿ ನಡೆದು ಹೋದಂತೆ ಜಲಾಗಾಧದಲ್ಲಿ ಇಸ್ರಾಯೇಲರನ್ನು ನಡೆಸಿದರು.
ಕೀರ್ತನೆಗಳು 106 : 10 (OCVKN)
ವೈರಿಯ ಕೈಯೊಳಗಿಂದ ಅವರನ್ನು ರಕ್ಷಿಸಿದರು, ಶತ್ರುವಿನ ಕೈಯಿಂದ ಅವರನ್ನು ಬಿಡುಗಡೆ ಮಾಡಿದರು.
ಕೀರ್ತನೆಗಳು 106 : 11 (OCVKN)
ಪ್ರವಾಹಗಳು ಅವರ ವೈರಿಗಳನ್ನು ಮುಚ್ಚಿಬಿಟ್ಟವು, ವೈರಿಗಳಲ್ಲಿ ಒಬ್ಬನೂ ಉಳಿಯಲಿಲ್ಲ.
ಕೀರ್ತನೆಗಳು 106 : 12 (OCVKN)
ಆಗ ಅವರು ದೇವರ ಮಾತುಗಳನ್ನು ನಂಬಿ, ದೇವರಿಗೆ ಸ್ತೋತ್ರವನ್ನು ಹಾಡಿದರು.
ಕೀರ್ತನೆಗಳು 106 : 13 (OCVKN)
ಆದರೆ ಬೇಗನೇ ದೇವರು ಮಾಡಿದ ಕೆಲಸಗಳನ್ನು ಮರೆತುಬಿಟ್ಟು, ದೇವರ ಸಂಕಲ್ಪಕ್ಕೆ ಅವರು ಕಾದುಕೊಳ್ಳದೆ ಹೋದರು.
ಕೀರ್ತನೆಗಳು 106 : 14 (OCVKN)
ಮರುಭೂಮಿಯಲ್ಲಿ ದುರಾಶೆಯಿಂದ ಆಶಿಸಿ, ಹಾಳು ಪ್ರದೇಶದಲ್ಲಿ ದೇವರನ್ನು ಪರೀಕ್ಷಿಸಿದರು.
ಕೀರ್ತನೆಗಳು 106 : 15 (OCVKN)
ಆಗ ದೇವರು ಅವರ ಬೇಡಿಕೆಯಂತೆಯೇ ಅವರಿಗೆ ಕೊಟ್ಟುಬಿಟ್ಟರು; ಆದರೆ ಅವರ ದೇಹಕ್ಕೆ ಭೀಕರ ರೋಗವನ್ನು ಸಹ ಅನುಮತಿಸಿದರು.
ಕೀರ್ತನೆಗಳು 106 : 16 (OCVKN)
ಇಸ್ರಾಯೇಲರು ಪಾಳೆಯದಲ್ಲಿ ಮೋಶೆಯ ಮೇಲೆಯೂ, ಯೆಹೋವ ದೇವರಿಗೆ ಪ್ರತಿಷ್ಠಿತನಾದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಟ್ಟರು.
ಕೀರ್ತನೆಗಳು 106 : 17 (OCVKN)
ಆಗ ಭೂಮಿಯು ಬಾಯಿತೆರೆದು ದಾತಾನನನ್ನು ನುಂಗಿ, ಅಬೀರಾಮನ ಗುಂಪನ್ನು ಮುಚ್ಚಿಬಿಟ್ಟಿತು.
ಕೀರ್ತನೆಗಳು 106 : 18 (OCVKN)
ಬೆಂಕಿಯು ಅವರ ಗುಂಪಿನಲ್ಲಿ ಉರಿದು, ಜ್ವಾಲೆಯು ದುಷ್ಟರನ್ನು ಸುಟ್ಟಿತು.
ಕೀರ್ತನೆಗಳು 106 : 19 (OCVKN)
ಅವರು ಹೋರೇಬಿನಲ್ಲಿ ಎರಕದ ಕರುವನ್ನು ಮಾಡಿ, ಆ ವಿಗ್ರಹಕ್ಕೆ ಅಡ್ಡಬಿದ್ದರು.
ಕೀರ್ತನೆಗಳು 106 : 20 (OCVKN)
ಹೀಗೆ ಅವರು ತಮ್ಮ ಮಹಿಮೆಯುಳ್ಳ ದೇವರನ್ನು ಹುಲ್ಲು ತಿನ್ನುವ ಎತ್ತಿನ ರೂಪಕ್ಕೆ ಬದಲಾಯಿಸಿದರು.
ಕೀರ್ತನೆಗಳು 106 : 21 (OCVKN)
ಅವರು ತಮ್ಮನ್ನು ರಕ್ಷಿಸಿದ ದೇವರನ್ನು ಬೇಗ ಮರೆತುಬಿಟ್ಟರು. ಹೌದು, ಈಜಿಪ್ಟ್ ದೇಶದಲ್ಲಿ ಮಹತ್ಕಾರ್ಯಗಳನ್ನೂ,
ಕೀರ್ತನೆಗಳು 106 : 22 (OCVKN)
ಹಾಮ ದೇಶದಲ್ಲಿ ಅದ್ಭುತಗಳನ್ನೂ, ಕೆಂಪುಸಮುದ್ರದ ಬಳಿಯಲ್ಲಿ ಅತಿಶಯವಾದವುಗಳನ್ನೂ ಮಾಡಿದ ದೇವರನ್ನು ಮರೆತುಬಿಟ್ಟರು.
ಕೀರ್ತನೆಗಳು 106 : 23 (OCVKN)
ಆದ್ದರಿಂದ ದೇವರು ಅವರಿಗೆ ಪೂರ್ಣದಂಡನೆ ಕೊಡುವುದಾಗಿ ಹೇಳಿದರು. ಆದರೆ ಅವರು ಆಯ್ದುಕೊಂಡ ಮೋಶೆಯು, ದೇವರ ಕಠಿಣ ತೀರ್ಮಾನವನ್ನು ಶಾಂತಪಡಿಸಲು ಆಪತ್ತಿನಲ್ಲಿ ದೇವರ ಮುಂದೆ ಮಧ್ಯಸ್ಥನಾಗಿ ನಿಂತುಕೊಂಡನು.
ಕೀರ್ತನೆಗಳು 106 : 24 (OCVKN)
ಹೌದು, ಇಸ್ರಾಯೇಲರು ಮನೋಹರವಾದ ದೇಶವನ್ನು ಹೀನೈಸಿ, ದೇವರ ಮಾತನ್ನು ನಂಬದೆ ಹೋದರು.
ಕೀರ್ತನೆಗಳು 106 : 25 (OCVKN)
ತಮ್ಮ ಗುಡಾರಗಳಲ್ಲಿ ಗೊಣಗುಟ್ಟಿ ಯೆಹೋವ ದೇವರ ಮಾತನ್ನು ಹೇಳದೆ ಹೋದರು.
ಕೀರ್ತನೆಗಳು 106 : 26 (OCVKN)
ಆದ್ದರಿಂದ ದೇವರು ಅವರನ್ನು ಮರುಭೂಮಿಯಲ್ಲಿ ಬೀಳುವಂತೆಯೂ, ಅವರ ಸಂತತಿಯರು ದೇಶಗಳಲ್ಲಿ ಚದರಿಸುವಂತೆಯೂ
ಕೀರ್ತನೆಗಳು 106 : 27 (OCVKN)
ತಮ್ಮ ಕೈಯನ್ನು ಎತ್ತಿ ಅವರಿಗೆ ಪ್ರಮಾಣ ಮಾಡಬೇಕಾಯಿತು.
ಕೀರ್ತನೆಗಳು 106 : 28 (OCVKN)
ಇಸ್ರಾಯೇಲರು ಬಾಳ್ ಪೆಯೋರನ ದೇವತೆಗೆ ತಮ್ಮನ್ನು ಒಪ್ಪಿಸಿಕೊಟ್ಟರು; ಜೀವವಿಲ್ಲದ ದೇವರುಗಳಿಗೆ ಅರ್ಪಿಸಿದ ಯಜ್ಞಗಳನ್ನು ತಿಂದರು.
ಕೀರ್ತನೆಗಳು 106 : 29 (OCVKN)
ತಮ್ಮ ಕ್ರಿಯೆಗಳಿಂದ ದೇವರನ್ನು ಅಸಂತೋಷಪಡಿಸಿದರು. ಆದ್ದರಿಂದ ವ್ಯಾಧಿಯು ಅವರಲ್ಲಿ ಹಬ್ಬಿತು.
ಕೀರ್ತನೆಗಳು 106 : 30 (OCVKN)
ಆಗ ಫೀನೆಹಾಸನು ಎದ್ದು ಬಂದು ದಂಡಿಸಿದ್ದರಿಂದ ವ್ಯಾಧಿ ನಿಂತುಹೋಯಿತು.
ಕೀರ್ತನೆಗಳು 106 : 31 (OCVKN)
ಇದು ತಲತಲಾಂತರಕ್ಕೂ, ಯುಗಯುಗಕ್ಕೂ ಫೀನೆಹಾಸನಿಗೆ ನೀತಿ ಎಂದು ಎಣಿಸಲಾಯಿತು.
ಕೀರ್ತನೆಗಳು 106 : 32 (OCVKN)
ಮೆರೀಬಾದ* ಮೆರೀಬಾದ ಅಂದರೆ ಜಗಳ ಎಂದು ಅರ್ಥ. ನೋಡಿರಿ ವಿಮೋ 17:7 ನೀರಿನ ಬಳಿಯಲ್ಲಿ ಆತನಿಗೆ ಕೋಪವನ್ನೆಬ್ಬಿಸಿದರು. ಅಲ್ಲಿ ಅವರ ನಿಮಿತ್ತ ಮೋಶೆಗೆ ಕೇಡು ಬಂತು.
ಕೀರ್ತನೆಗಳು 106 : 33 (OCVKN)
ಏಕೆಂದರೆ ಇಸ್ರಾಯೇಲರು ದೇವರ ಆತ್ಮನಿಗೆ ತಿರುಗಿ ಬಿದ್ದದ್ದರಿಂದ, ಮೋಶೆ ದುಡುಕಿ ಮಾತನಾಡಿದನು.
ಕೀರ್ತನೆಗಳು 106 : 34 (OCVKN)
ಯೆಹೋವ ದೇವರು ಅವರಿಗೆ ಆಜ್ಞಾಪಿಸಿದ ಜನಗಳನ್ನು ಅವರು ದಂಡಿಸದೆ ಹೋದರು.
ಕೀರ್ತನೆಗಳು 106 : 35 (OCVKN)
ಆದರೆ ಇತರ ಜನಾಂಗಗಳ ಸಂಗಡ ಕೂಡಿಕೊಂಡು, ಅವರ ಪದ್ಧತಿಗಳನ್ನು ಕಲಿತುಕೊಂಡರು.
ಕೀರ್ತನೆಗಳು 106 : 36 (OCVKN)
ಅವರ ವಿಗ್ರಹಗಳಿಗೆ ಆರಾಧನೆ ಮಾಡಿದರು; ಅವು ಅವರಿಗೆ ಉರುಲಿನಂತಾದವು.
ಕೀರ್ತನೆಗಳು 106 : 37 (OCVKN)
ತಮ್ಮ ಗಂಡು ಮಕ್ಕಳನ್ನೂ, ಹೆಣ್ಣು ಮಕ್ಕಳನ್ನೂ ಸುಳ್ಳು ದೇವರುಗಳಿಗೆ ಬಲಿಕೊಟ್ಟರು.
ಕೀರ್ತನೆಗಳು 106 : 38 (OCVKN)
ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ, ದೇಶವನ್ನು ರಕ್ತದಿಂದ ಅಶುದ್ಧ ಮಾಡಿದರು.
ಕೀರ್ತನೆಗಳು 106 : 39 (OCVKN)
ಹೀಗೆ ತಮ್ಮ ದುಷ್ಕೃತ್ಯಗಳಿಂದ ತಮ್ಮನ್ನು ಅಪವಿತ್ರ ಮಾಡಿಕೊಂಡು, ತಮ್ಮ ಕ್ರಿಯೆಗಳಿಂದ ದುರಾಚಾರಿಗಳಾದರು.
ಕೀರ್ತನೆಗಳು 106 : 40 (OCVKN)
ಆಗ ಯೆಹೋವ ದೇವರು ತಮ್ಮ ಜನರ ಮೇಲೆ ಬಹು ಬೇಸರಗೊಂಡರು. ದೇವರು ತಮ್ಮ ವಾರಸುದಾರರಾದ ಇಸ್ರಾಯೇಲರ ಮೇಲೆ ಅಸಂತೋಷಗೊಂಡು,
ಕೀರ್ತನೆಗಳು 106 : 41 (OCVKN)
ಅವರನ್ನು ಇತರ ಜನಾಂಗಗಳ ಕೈಗೆ ಒಪ್ಪಿಸಿಕೊಟ್ಟರು. ಹೀಗೆ ಅವರ ವೈರಿಗಳು ಅವರನ್ನು ಆಳಿದರು.
ಕೀರ್ತನೆಗಳು 106 : 42 (OCVKN)
ಅವರ ಶತ್ರುಗಳು ಅವರನ್ನು ಬಾಧೆಪಡಿಸಿದರು; ಅವರ ಕೈಕೆಳಗೆ ಅವರು ಅಧೀನರಾದರು.
ಕೀರ್ತನೆಗಳು 106 : 43 (OCVKN)
ಅನೇಕ ಸಾರಿ ದೇವರು ಇಸ್ರಾಯೇಲರನ್ನು ಬಿಡಿಸಿದರು, ಆದರೆ ಅವರು ತಿರುಗಿಬೀಳುತ್ತಲೇ ಇದ್ದರು; ತಮ್ಮ ಅಕ್ರಮದಿಂದಲೇ ಅವರು ಕುಗ್ಗಿಹೋದರು;
ಕೀರ್ತನೆಗಳು 106 : 44 (OCVKN)
ಆದರೂ ಅವರ ಕೂಗನ್ನು ದೇವರು ಕೇಳಿದಾಗ ಇಕ್ಕಟ್ಟಿನಲ್ಲಿದ್ದ ಅವರ ಮೇಲೆ ಲಕ್ಷ್ಯವಿಟ್ಟು,
ಕೀರ್ತನೆಗಳು 106 : 45 (OCVKN)
ಅವರಿಗಾಗಿ ತಮ್ಮ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಂಡು, ತಮ್ಮ ಅತಿಶಯವಾದ ಪ್ರೀತಿಯ ಪ್ರಕಾರ,
ಕೀರ್ತನೆಗಳು 106 : 46 (OCVKN)
ಅವರನ್ನು ಸೆರೆಹಿಡಿದವರ ಕರುಣೆ ತೋರುವಂತೆ ಮಾಡಿದರು.
ಕೀರ್ತನೆಗಳು 106 : 47 (OCVKN)
ನಮ್ಮ ದೇವರಾದ ಯೆಹೋವ ದೇವರೇ, ನಾವು ನಿಮ್ಮ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ, ನಿಮ್ಮ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ, ನಮ್ಮನ್ನು ರಕ್ಷಿಸಿರಿ.
ಕೀರ್ತನೆಗಳು 106 : 48 (OCVKN)
ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ಯುಗಯುಗಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲರೂ, “ಆಮೆನ್!” ಎಂದು ಹೇಳಲಿ. ನೀವು ಯೆಹೋವ ದೇವರನ್ನು ಸ್ತುತಿಸಿರಿ.

1 2 3 4 5 6 7 8 9 10 11 12 13 14 15 16 17 18 19 20 21 22 23 24 25 26 27 28 29 30 31 32 33 34 35 36 37 38 39 40 41 42 43 44 45 46 47 48