ಕೀರ್ತನೆಗಳು 111 : 1 (OCVKN)
ಯೆಹೋವ ದೇವರನ್ನು ಸ್ತುತಿಸಿರಿ. ನಾನು ಯೆಹೋವ ದೇವರನ್ನು ಪೂರ್ಣಹೃದಯದಿಂದ ಯಥಾರ್ಥರ ಕೂಟದಲ್ಲಿಯೂ, ಸಭೆಯಲ್ಲಿಯೂ ಕೊಂಡಾಡುವೆನು.
ಕೀರ್ತನೆಗಳು 111 : 2 (OCVKN)
ಯೆಹೋವ ದೇವರ ಕೆಲಸಗಳು ದೊಡ್ಡವು; ಅವುಗಳಲ್ಲಿ ಸಂತೋಷ ಪಡುವವರೆಲ್ಲರು ಅವುಗಳನ್ನೇ ಧ್ಯಾನಿಸುತ್ತಾರೆ.
ಕೀರ್ತನೆಗಳು 111 : 3 (OCVKN)
ದೇವರ ಕೆಲಸವು ಘನತೆಯೂ, ಮಹಿಮೆಯೂ ಉಳ್ಳದ್ದು; ದೇವರ ನೀತಿಯು ಎಂದೆಂದಿಗೂ ನಿಲ್ಲುವುದು.
ಕೀರ್ತನೆಗಳು 111 : 4 (OCVKN)
ದೇವರು ತಮ್ಮ ಅದ್ಭುತಗಳ ಜ್ಞಾಪಕವನ್ನು ಉಳಿದಿರುವಂತೆ ಮಾಡಿದ್ದಾರೆ; ಯೆಹೋವ ದೇವರು ಕೃಪೆಯೂ, ಅನುಕಂಪವೂ ಉಳ್ಳವರು.
ಕೀರ್ತನೆಗಳು 111 : 5 (OCVKN)
ಅವರು ತಮಗೆ ಭಯಪಡುವವರಿಗೆ ಆಹಾರ ಕೊಟ್ಟಿದ್ದಾರೆ; ಯುಗಯುಗಕ್ಕೂ ತಮ್ಮ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವರು.
ಕೀರ್ತನೆಗಳು 111 : 6 (OCVKN)
ಜನಾಂಗಗಳ ಬಾಧ್ಯತೆಯನ್ನು ಅವರಿಗೆ ಕೊಡುವ ಹಾಗೆ ದೇವರು ಶಕ್ತಿಯ ಕ್ರಿಯೆಗಳನ್ನು ತಮ್ಮ ಜನರಿಗೆ ತಿಳಿಸಿದ್ದಾರೆ.
ಕೀರ್ತನೆಗಳು 111 : 7 (OCVKN)
ದೇವರ ಕೈಕೆಲಸಗಳು ಸತ್ಯವೂ, ನ್ಯಾಯವೂ ಆಗಿವೆ; ಅವರ ಸೂತ್ರಗಳೆಲ್ಲಾ ವಿಶ್ವಾಸಕ್ಕೆ ಯೋಗ್ಯವಾದವುಗಳು.
ಕೀರ್ತನೆಗಳು 111 : 8 (OCVKN)
ಅವು ಯುಗಯುಗಾಂತರಗಳಿಗೂ ನೆಲೆಯಾಗಿ ನಿಲ್ಲುತ್ತವೆ; ಅವು ಸತ್ಯದಲ್ಲಿಯೂ, ಯಥಾರ್ಥತೆಯಲ್ಲಿಯೂ ಒಳಗೊಂಡಿರುತ್ತದೆ.
ಕೀರ್ತನೆಗಳು 111 : 9 (OCVKN)
ದೇವರು ತಮ್ಮ ಜನರಿಗೆ ವಿಮೋಚನೆಯನ್ನು ಕಳುಹಿಸಿದರು; ಯುಗಯುಗಕ್ಕೂ ತಮ್ಮ ಒಡಂಬಡಿಕೆಯನ್ನು ಸ್ಥಾಪಿಸಿದ್ದಾರೆ; ದೇವರ ಹೆಸರು ಪರಿಶುದ್ಧರು, ಅತಿಶಯರು ಎಂಬುದು.
ಕೀರ್ತನೆಗಳು 111 : 10 (OCVKN)
ಯೆಹೋವ ದೇವರ ಭಯವು ಜ್ಞಾನದ ಮೂಲವು; ಅವರ ಸೂತ್ರಗಳನ್ನು ಕೈಗೊಳ್ಳುವವರಿಗೆ ಒಳ್ಳೆಯ ತಿಳುವಳಿಕೆ ಉಂಟಾಗುವುದು; ನಿತ್ಯ ಸ್ತೋತ್ರವು ದೇವರಿಗೆ ಸಲ್ಲಲಿ.

1 2 3 4 5 6 7 8 9 10