ಕೀರ್ತನೆಗಳು 12 : 1 (OCVKN)
ಯೆಹೋವ ದೇವರೇ, ರಕ್ಷಿಸಿರಿ, ಏಕೆಂದರೆ ದೇವಭಕ್ತರು ಮುಗಿದು ಹೋಗುತ್ತಿದ್ದಾರೆ; ಜನರಲ್ಲಿ ನಂಬಿಗಸ್ತರು ಇಲ್ಲದೆ ಹೋಗುತ್ತಿದ್ದಾರೆ.
ಕೀರ್ತನೆಗಳು 12 : 2 (OCVKN)
ಪ್ರತಿಯೊಬ್ಬರು ತಮ್ಮ ನೆರೆಯವರ ಸಂಗಡ ಸುಳ್ಳಾಡುತ್ತಾರೆ; ಅವರು ತಮ್ಮ ತುಟಿಯಿಂದ ಹೊಗಳಿ, ಹೃದಯದಲ್ಲಿ ವಂಚನೆಯನ್ನು ಮಾತನಾಡುತ್ತಾರೆ.
ಕೀರ್ತನೆಗಳು 12 : 3 (OCVKN)
ಹೊಗಳಿಕೆಯ ಎಲ್ಲಾ ತುಟಿಗಳನ್ನೂ ಗರ್ವ ಮಾತನಾಡುವ ಎಲ್ಲಾ ನಾಲಿಗೆಯನ್ನೂ ಯೆಹೋವ ದೇವರು ಮೌನವಾಗಿರಿಸಲಿ.
ಕೀರ್ತನೆಗಳು 12 : 4 (OCVKN)
ಅವರು ಹೀಗೆನ್ನುತ್ತಾರೆ, “ನಾವು ನಮ್ಮ ನಾಲಿಗೆಯಿಂದ ಜಯಿಸುವೆವು; ನಮ್ಮ ತುಟಿಗಳೇ ನಮಗೆ ಸಂರಕ್ಷಣೆ ನಮ್ಮ ಮೇಲೆ ಒಡೆಯನು ಯಾರು?”
ಕೀರ್ತನೆಗಳು 12 : 5 (OCVKN)
“ಬಡವರು ಹಿಂಸೆಗೆ ಒಳಗಾಗಿರುವುದರಿಂದಲೂ ಗತಿಯಿಲ್ಲದವರು ನರಳಾಡುವುದರಿಂದಲೂ ನಾನು ಈಗಲೇ ಏಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಪೀಡಿಸುವವರಿಂದ ನಾನು ಬಡವರನ್ನು ಕಾಪಾಡುವೆನು.”
ಕೀರ್ತನೆಗಳು 12 : 6 (OCVKN)
ಯೆಹೋವ ದೇವರ ವಾಕ್ಯಗಳು ದೋಷವಿಲ್ಲದ್ದು. ಅವು ಮಣ್ಣಿನ ಕುಲುಮೆಯಲ್ಲಿ ಶುದ್ಧೀಕರಿಸಿದ ಬೆಳ್ಳಿಯಂತೆಯೂ ಏಳು ಸಾರಿ ಪುಟಕ್ಕೆ ಹಾಕಿದ ಬಂಗಾರದಂತೆಯೂ ಇವೆ.
ಕೀರ್ತನೆಗಳು 12 : 7 (OCVKN)
ಯೆಹೋವ ದೇವರೇ, ನೀವು ಗತಿಯಿಲ್ಲದವರನ್ನು ದುಷ್ಟರಿಂದ ಯಾವಾಗಲೂ ಕಾಪಾಡಿ ಸಂರಕ್ಷಿಸುತ್ತೀರಿ,
ಕೀರ್ತನೆಗಳು 12 : 8 (OCVKN)
ಮನುಷ್ಯರು ಅಸಹ್ಯವಾದದ್ದನ್ನು ಗೌರವಿಸುವಾಗ, ಆ ದುಷ್ಟರು ಎಲ್ಲಾ ಕಡೆಗಳಲ್ಲಿಯೂ ಸ್ವತಂತ್ರವಾಗಿ ಅಲೆದಾಡುತ್ತಿರುವರು.
❮
❯