ಕೀರ್ತನೆಗಳು 122 : 1 (OCVKN)
“ಯೆಹೋವ ದೇವರ ಆಲಯಕ್ಕೆ ಹೋಗೋಣ,” ಎಂದು ಜನರು ನನ್ನನ್ನು ಕರೆದಾಗ, ನನಗೆ ಸಂತೋಷವಾಯಿತು.
ಕೀರ್ತನೆಗಳು 122 : 2 (OCVKN)
ಯೆರೂಸಲೇಮೇ, ನಮ್ಮ ಪಾದಗಳು ನಿನ್ನ ಬಾಗಿಲುಗಳಲ್ಲಿ ತಲುಪಿದೆ.
ಕೀರ್ತನೆಗಳು 122 : 3 (OCVKN)
ಯೆರೂಸಲೇಮು, ಗಂಭೀರವಾಗಿಯೂ ಗಟ್ಟಿಯಾಗಿಯೂ ಕಟ್ಟಿರುವ ಪಟ್ಟಣವಾಗಿದೆ.
ಕೀರ್ತನೆಗಳು 122 : 4 (OCVKN)
ಅಲ್ಲಿಗೆ ಗೋತ್ರಗಳು, ಯೆಹೋವ ದೇವರು ಇಸ್ರಾಯೇಲಿಗೆ ಕೊಟ್ಟ ಕಟ್ಟಳೆಗಳ ಪ್ರಕಾರ ಯೆಹೋವ ದೇವರ ಹೆಸರನ್ನು ಕೊಂಡಾಡುವುದಕ್ಕೆ ಗೋತ್ರಗಳು ಯಾತ್ರೆಯಾಗಿ ಬರುತ್ತಿದ್ದವು.
ಕೀರ್ತನೆಗಳು 122 : 5 (OCVKN)
ಏಕೆಂದರೆ ಅಲ್ಲಿ ನ್ಯಾಯ ನಿರ್ಣಯಕ್ಕೆ ಸಿಂಹಾಸನಗಳೂ, ಅಂದರೆ, ದಾವೀದನ ಮನೆಯ ಸಿಂಹಾಸನಗಳೂ ಇರುತ್ತವೆ.
ಕೀರ್ತನೆಗಳು 122 : 6 (OCVKN)
ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥನೆಮಾಡಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಅಭಿವೃದ್ಧಿಯಾಗಲಿ.
ಕೀರ್ತನೆಗಳು 122 : 7 (OCVKN)
ನಿನ್ನ ಪ್ರಾಕಾರದಲ್ಲಿ ಸಮಾಧಾನವಿರಲಿ, ನಿನ್ನ ಅರಮನೆಗಳಲ್ಲಿ ಅಭಿವೃದ್ಧಿಯೂ ಇರಲಿ.”
ಕೀರ್ತನೆಗಳು 122 : 8 (OCVKN)
ನನ್ನ ಸಹೋದರರ ನಿಮಿತ್ತವೂ ನನ್ನ ಸ್ನೇಹಿತರ ನಿಮಿತ್ತವೂ “ನಿನ್ನಲ್ಲಿ ಸಮಾಧಾನವಿರಲಿ,” ಎಂದು ಈಗ ಹೇಳುತ್ತೇನೆ.
ಕೀರ್ತನೆಗಳು 122 : 9 (OCVKN)
ನಮ್ಮ ದೇವರಾದ ಯೆಹೋವ ದೇವರ ಆಲಯದ ನಿಮಿತ್ತ ನಿನಗೆ ಸಮೃದ್ಧಿಯಾಗಲಿ ಎಂದು ಹಾರೈಸುತ್ತೇನೆ.

1 2 3 4 5 6 7 8 9