ಕೀರ್ತನೆಗಳು 132 : 1 (OCVKN)
ಯೆಹೋವ ದೇವರೇ, ದಾವೀದನನ್ನೂ ಅವನ ಎಲ್ಲಾ ಶ್ರಮೆಗಳನ್ನೂ ಜ್ಞಾಪಕಮಾಡಿಕೊಳ್ಳಿರಿ.
ಕೀರ್ತನೆಗಳು 132 : 2 (OCVKN)
ದಾವೀದನು ಯೆಹೋವ ದೇವರಿಗೆ ಆಣೆ ಇಟ್ಟು, ಪರಾಕ್ರಮಿಯಾದ ಯಾಕೋಬನ ದೇವರಿಗೆ ಹೀಗೆಂದು ಪ್ರಮಾಣ ಮಾಡಿದನು:
ಕೀರ್ತನೆಗಳು 132 : 3 (OCVKN)
“ಯೆಹೋವ ದೇವರಿಗೆ ಒಂದು ಸ್ಥಳವನ್ನೂ, ಯಾಕೋಬನ ದೇವರಿಗೆ ನಿವಾಸವನ್ನೂ ಕಟ್ಟುವವರೆಗೆ ನಿಶ್ಚಯವಾಗಿ,
ಕೀರ್ತನೆಗಳು 132 : 4 (OCVKN)
ನಾನು ನನ್ನ ಮನೆ ಸೇರೆನು; ನನ್ನ ಮಂಚವನ್ನು ಏರೆನು.
ಕೀರ್ತನೆಗಳು 132 : 5 (OCVKN)
ನನ್ನ ಕಣ್ಣುಗಳಿಗೆ ನಿದ್ದೆಯನ್ನು ಕೊಡೆನು, ನನ್ನ ರೆಪ್ಪೆಗಳಿಗೆ ತೂಕಡಿಕೆಯನ್ನೂ ಕೊಡೆನು.”
ಕೀರ್ತನೆಗಳು 132 : 6 (OCVKN)
ನಾವು ಎಫ್ರಾತದಲ್ಲಿ ಇದನ್ನು ಕೇಳಿದೆವು; ಯಹಾರ್ ಅಡವಿಯ ಬಯಲುಗಳಲ್ಲಿ ಇದನ್ನು ಕಂಡು ಹೀಗೆಂದು ಕೇಳಿಸಿಕೊಂಡೆವು:
ಕೀರ್ತನೆಗಳು 132 : 7 (OCVKN)
“ಬನ್ನಿರಿ ನಾವು ದೇವರ ಮಂದಿರಕ್ಕೆ ಹೋಗಿ, ಅವರ ಪಾದಪೀಠದಲ್ಲಿ ಆರಾಧಿಸೋಣ.
ಕೀರ್ತನೆಗಳು 132 : 8 (OCVKN)
‘ಯೆಹೋವ ದೇವರೇ, ಎದ್ದು ನಿಮ್ಮ ವಿಶ್ರಾಂತಿಯ ಸ್ಥಳಕ್ಕೆ ಬನ್ನಿರಿ; ನೀವೂ, ನಿಮ್ಮ ಶಕ್ತಿಯುತ ಮಂಜೂಷವೂ ಬರಲಿ.
ಕೀರ್ತನೆಗಳು 132 : 9 (OCVKN)
ನಿಮ್ಮ ಯಾಜಕರು ನೀತಿಯೆಂಬ ವಸ್ತ್ರವನ್ನು ಧರಿಸಿಕೊಳ್ಳಲಿ; ನಿಮ್ಮ ಭಕ್ತರು ಉತ್ಸಾಹಧ್ವನಿ ಮಾಡಲಿ.’ ”
ಕೀರ್ತನೆಗಳು 132 : 10 (OCVKN)
ನಿಮ್ಮ ಸೇವಕನಾದ ದಾವೀದನ ನಿಮಿತ್ತ, ನಿಮ್ಮ ಅಭಿಷಿಕ್ತನನ್ನು ತಿರಸ್ಕರಿಸಬೇಡಿರಿ.
ಕೀರ್ತನೆಗಳು 132 : 11 (OCVKN)
ಯೆಹೋವ ದೇವರು ದಾವೀದನಿಗೆ ಸತ್ಯದ ಆಣೆ ಇಟ್ಟಿದ್ದಾರೆ; ತಾವು ಹೀಗೆಂದು ಆಣೆಯಿಟ್ಟುಕೊಟ್ಟ ಮಾತನ್ನು ದೇವರು ಬದಲಿಸುವುದಿಲ್ಲ, “ನಿನ್ನ ಸಂತತಿಯವನನ್ನೇ ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು.
ಕೀರ್ತನೆಗಳು 132 : 12 (OCVKN)
ನಿಮ್ಮ ಮಕ್ಕಳು ನನ್ನ ಶಾಸನಗಳನ್ನೂ ನನ್ನ ಒಡಂಬಡಿಕೆಯನ್ನು ಸನ್ಮಾನಿಸಿ, ಕೈಗೊಂಡರೆ, ಅವರ ಮಕ್ಕಳು ಸಹ ಎಂದೆಂದಿಗೂ ನಿನ್ನ ಸಿಂಹಾಸನದಲ್ಲಿ ಕೂರುವರು.”
ಕೀರ್ತನೆಗಳು 132 : 13 (OCVKN)
ಏಕೆಂದರೆ, ಯೆಹೋವ ದೇವರು ಚೀಯೋನನ್ನು ಆಯ್ದುಕೊಂಡು ಅದನ್ನು ತಮ್ಮ ವಾಸಕ್ಕಾಗಿ ಅಪೇಕ್ಷಿಸಿ ಹೀಗೆಂದಿದ್ದಾರೆ:
ಕೀರ್ತನೆಗಳು 132 : 14 (OCVKN)
“ಇದೇ ಎಂದೆಂದಿಗೂ ನನ್ನ ವಿಶ್ರಾಂತಿಯ ಸ್ಥಳವಾಗಿರುವುದು; ಇಲ್ಲೇ ವಾಸಿಸುವೆನು; ಇದನ್ನು ನಾನು ಅಪೇಕ್ಷಿಸಿದ್ದೇನೆ; ಇಲ್ಲಿಯೇ ಸಿಂಹಾಸನಾರೂಢನಾಗಿರುವೆನು.
ಕೀರ್ತನೆಗಳು 132 : 15 (OCVKN)
ಧಾರಾಳವಾಗಿ ದವಸಧಾನ್ಯಗಳಿರಲೆಂದು ನಾನು ಚೀಯೋನನ್ನು ಆಶೀರ್ವದಿಸುವೆನು; ಇಲ್ಲಿ ವಾಸಿಸುವ ಬಡವರು ಉಂಡು ಸಂತೃಪ್ತಿಯಿಂದಿರುವರು.
ಕೀರ್ತನೆಗಳು 132 : 16 (OCVKN)
ಇಲ್ಲಿನ ಯಾಜಕರಿಗೆ ರಕ್ಷಣೆಯನ್ನು ಹೊದಿಸುವೆನು; ಚೀಯೋನಿನ ನಂಬಿಗಸ್ತ ಸೇವಕರು ಉತ್ಸಾಹಧ್ವನಿಯಿಂದ ಹಾಡುವರು.
ಕೀರ್ತನೆಗಳು 132 : 17 (OCVKN)
“ಇಲ್ಲಿ ದಾವೀದನಿಗೆ ಬಲದಾಯಕ ಅರಸನನ್ನು ಚಿಗುರುವಂತೆ ಮಾಡುವೆನು; ನನ್ನ ಅಭಿಷಿಕ್ತನಿಗೆ ದೀಪವನ್ನು ಸಿದ್ಧಮಾಡಿದ್ದೇನೆ.
ಕೀರ್ತನೆಗಳು 132 : 18 (OCVKN)
ಇಲ್ಲಿ ಆತನ ಶತ್ರುಗಳಿಗೆ ನಾಚಿಕೆಯ ವಸ್ತ್ರವನ್ನು ಹೊದಿಸುವೆನು; ಆದರೆ ಆತನ ತೆರೆಯ ಮೇಲೆ ಕಿರೀಟವು ಶೋಭಿಸುವುದು.”
❮
❯
1
2
3
4
5
6
7
8
9
10
11
12
13
14
15
16
17
18