ಕೀರ್ತನೆಗಳು 135 : 1 (OCVKN)
ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರ ಹೆಸರನ್ನು ಸ್ತುತಿಸಿರಿ; ಯೆಹೋವ ದೇವರ ಆಲಯದಲ್ಲಿಯೂ,
ಕೀರ್ತನೆಗಳು 135 : 2 (OCVKN)
ನಮ್ಮ ದೇವರ ಆಲಯದ ಅಂಗಳಗಳಲ್ಲಿಯೂ ಸೇವೆ ಮಾಡುವ ಯೆಹೋವ ದೇವರ ಸೇವಕರೇ, ಸ್ತುತಿಸಿರಿ.
ಕೀರ್ತನೆಗಳು 135 : 3 (OCVKN)
ಯೆಹೋವ ದೇವರನ್ನು ಸ್ತುತಿಸಿರಿ, ಯೆಹೋವ ದೇವರು ಒಳ್ಳೆಯವರು; ದೇವರ ಹೆಸರಿಗೆ ಸ್ತುತಿಗಳನ್ನು ಹಾಡಿರಿ, ಏಕೆಂದರೆ ಅದು ರಮ್ಯವಾದದ್ದು.
ಕೀರ್ತನೆಗಳು 135 : 4 (OCVKN)
ಯೆಹೋವ ದೇವರು ಯಾಕೋಬನನ್ನು ತಮಗೋಸ್ಕರ ಆಯ್ದುಕೊಂಡರು, ಇಸ್ರಾಯೇಲನ್ನು ತಮ್ಮ ಶ್ರೇಷ್ಠ ಸಂಪತ್ತಾಗಿಯೂ ಆಯ್ದುಕೊಂಡಿದ್ದಾರೆ.
ಕೀರ್ತನೆಗಳು 135 : 5 (OCVKN)
ಯೆಹೋವ ದೇವರು ದೊಡ್ಡವರು; ನಮ್ಮ ಯೆಹೋವ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವರೆಂದು ನಾನು ತಿಳಿದಿದ್ದೇನೆ.
ಕೀರ್ತನೆಗಳು 135 : 6 (OCVKN)
ಯೆಹೋವ ದೇವರು ಆಕಾಶದಲ್ಲಿಯೂ, ಭೂಮಿಯಲ್ಲಿಯೂ, ಸಮುದ್ರದಲ್ಲಿಯೂ, ಎಲ್ಲಾ ಅಗಾಧಗಳಲ್ಲಿಯೂ ತಾವು ಅಪೇಕ್ಷಿಸುವುದನ್ನೆಲ್ಲಾ ಮಾಡುತ್ತಾರೆ.
ಕೀರ್ತನೆಗಳು 135 : 7 (OCVKN)
ಭೂಮಿಯ ಎಲ್ಲಕಡೆಗಳಿಂದ ಮೋಡಗಳನ್ನು ಏಳುವಂತೆ ಮಾಡುತ್ತಾರೆ. ಮಳೆಯನ್ನೂ ಮಿಂಚನ್ನೂ ಕಳುಹಿಸುತ್ತಾರೆ. ಗಾಳಿಯನ್ನು ತಮ್ಮ ಉಗ್ರಾಣಗಳಿಂದ ಬೀಸುವಂತೆ ಮಾಡುತ್ತಾರೆ.
ಕೀರ್ತನೆಗಳು 135 : 8 (OCVKN)
ದೇವರು ಈಜಿಪ್ಟ್ ಜನರನ್ನು ಮೊದಲುಗೊಂಡು ಪಶುಗಳವರೆಗೂ ಚೊಚ್ಚಲುಗಳನ್ನೆಲ್ಲಾ ದಂಡಿಸಿದರು.
ಕೀರ್ತನೆಗಳು 135 : 9 (OCVKN)
ಈಜಿಪ್ಟೇ, ನಿಮ್ಮ ಮಧ್ಯದಲ್ಲಿ ಸೂಚಕಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ದೇವರು ಫರೋಹನಿಗೂ, ಅವನ ಸಕಲ ಸೇವಕರಿಗೂ ವಿರೋಧವಾಗಿ ಕಳುಹಿಸಿದನು.
ಕೀರ್ತನೆಗಳು 135 : 10 (OCVKN)
ದೇವರು ದೊಡ್ಡ ಜನಾಂಗಗಳನ್ನೂ, ಬಲವಾದ ಅರಸರನ್ನೂ ದಂಡಿಸಿದರು.
ಕೀರ್ತನೆಗಳು 135 : 11 (OCVKN)
ಅಮೋರಿಯರ ಅರಸನಾದ ಸೀಹೋನನನ್ನು, ಬಾಷಾನಿನ ಅರಸನಾದ ಓಗನನ್ನೂ, ಕಾನಾನಿನ ಎಲ್ಲಾ ಅರಸರನ್ನೂ ದಂಡಿಸಿದರು.
ಕೀರ್ತನೆಗಳು 135 : 12 (OCVKN)
ದೇವರು ದೇಶವನ್ನು ಸೊತ್ತಾಗಿ ತಮ್ಮ ಪ್ರಜೆಯಾದ ಇಸ್ರಾಯೇಲಿಗೆ ಕೊಟ್ಟರು.
ಕೀರ್ತನೆಗಳು 135 : 13 (OCVKN)
ಯೆಹೋವ ದೇವರೇ, ನಿಮ್ಮ ನಾಮವೂ, ನಿಮ್ಮ ಪ್ರಭಾವವೂ ತಲತಲಾಂತರಕ್ಕೂ ಸ್ಮರಣೆಯಾಗಿರುವುದು.
ಕೀರ್ತನೆಗಳು 135 : 14 (OCVKN)
ಯೆಹೋವ ದೇವರು ತಮ್ಮ ಜನರಿಗೆ ನ್ಯಾಯವನ್ನು ಸ್ಥಾಪಿಸುವರು, ತಮ್ಮ ಸೇವಕರ ಮೇಲೆ ಅನುಕಂಪವನ್ನೂ ತೋರಿಸುವರು.
ಕೀರ್ತನೆಗಳು 135 : 15 (OCVKN)
ವಿಗ್ರಹಗಳು ಬೆಳ್ಳಿ, ಬಂಗಾರದವುಗಳು, ಅವು ಮನುಷ್ಯರ ಕೈಯಿಂದ ಮಾಡಲಾಗಿವೆ.
ಕೀರ್ತನೆಗಳು 135 : 16 (OCVKN)
ಅವುಗಳಿಗೆ ಬಾಯಿಯಿದೆ, ಮಾತನಾಡುವುದಿಲ್ಲ; ಕಣ್ಣುಗಳಿವೆ, ಕಾಣುವುದಿಲ್ಲ.
ಕೀರ್ತನೆಗಳು 135 : 17 (OCVKN)
ಕಿವಿಗಳಿವೆ, ಕೇಳಿಸಿಕೊಳ್ಳುವುದಿಲ್ಲ; ಅವುಗಳ ಬಾಯಲ್ಲಿ ಶ್ವಾಸ ಇಲ್ಲ.
ಕೀರ್ತನೆಗಳು 135 : 18 (OCVKN)
ಅವುಗಳನ್ನು ಮಾಡುವವರು ಅವುಗಳಂತೆಯೇ ಇದ್ದಾರೆ; ಅವುಗಳಲ್ಲಿ ಭರವಸವಿಡುವವರು ಅವುಗಳಂತಾಗುವರು.
ಕೀರ್ತನೆಗಳು 135 : 19 (OCVKN)
ಇಸ್ರಾಯೇಲ್ ಮನೆತನದವರೇ, ಯೆಹೋವ ದೇವರನ್ನು ಕೊಂಡಾಡಿರಿ ಸ್ತುತಿಸಿರಿ; ಆರೋನನ ಮನೆತನದವರೇ, ಯೆಹೋವ ದೇವರನ್ನು ಕೊಂಡಾಡಿರಿ ಸ್ತುತಿಸಿರಿ.
ಕೀರ್ತನೆಗಳು 135 : 20 (OCVKN)
ಲೇವಿಯ ಮನೆತನದವರೇ, ಯೆಹೋವ ದೇವರನ್ನು ಕೊಂಡಾಡಿರಿ ಸ್ತುತಿಸಿರಿ; ದೇವರಲ್ಲಿ ಭಯಭಕ್ತಿಯುಳ್ಳವರೇ, ಯೆಹೋವ ದೇವರನ್ನು ಕೊಂಡಾಡಿರಿ ಸ್ತುತಿಸಿರಿ.
ಕೀರ್ತನೆಗಳು 135 : 21 (OCVKN)
ಯೆರೂಸಲೇಮಿನಲ್ಲಿ ವಾಸಿಸುವವ ಯೆಹೋವ ದೇವರನ್ನು ಕೊಂಡಾಡಿ ಸ್ತುತಿಸಿರಿ; ಅವರ ಕೀರ್ತಿಯು ಚೀಯೋನಿನಿಂದ ಹೊರಗೂ ಹಬ್ಬಲಿ. ಯೆಹೋವ ದೇವರಿಗೆ ಸ್ತೋತ್ರ.
❮
❯
1
2
3
4
5
6
7
8
9
10
11
12
13
14
15
16
17
18
19
20
21