ಕೀರ್ತನೆಗಳು 136 : 1 (OCVKN)
ಯೆಹೋವ ದೇವರಿಗೆ ಉಪಕಾರ ಸಲ್ಲಿಸಿರಿ; ಅವರು ಒಳ್ಳೆಯವರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.
ಕೀರ್ತನೆಗಳು 136 : 2 (OCVKN)
ದೇವಾಧಿ ದೇವರಿಗೆ ಕೃತಜ್ಞತಾಸ್ತುತಿ ಸಲ್ಲಿಸಿರಿ; ದೇವರ ಪ್ರೀತಿಯು ಎಂದೆಂದಿಗೂ ಇರುವುದು.
ಕೀರ್ತನೆಗಳು 136 : 3 (OCVKN)
ಪ್ರಭುಗಳ ಪ್ರಭುವಿಗೆ ಕೃತಜ್ಞತಾಸ್ತುತಿ ಸಲ್ಲಿಸಿರಿ; ದೇವರ ಪ್ರೀತಿಯು ಎಂದೆಂದಿಗೂ ಇರುವುದು.
ಕೀರ್ತನೆಗಳು 136 : 4 (OCVKN)
ಅವರೊಬ್ಬರೇ ಮಹಾ ಅದ್ಭುತಗಳನ್ನು ಮಾಡುತ್ತಾರೆ; ದೇವರ ಪ್ರೀತಿಯು ಎಂದೆಂದಿಗೂ ಇರುವುದು.
ಕೀರ್ತನೆಗಳು 136 : 5 (OCVKN)
ತಮ್ಮ ಜ್ಞಾನದಿಂದ ಪರಲೋಕಗಳನ್ನು ನಿರ್ಮಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.
ಕೀರ್ತನೆಗಳು 136 : 6 (OCVKN)
ನೀರಿನ ಮೇಲೆ ಭೂಮಿಯನ್ನು ವಿಸ್ತರಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.
ಕೀರ್ತನೆಗಳು 136 : 7 (OCVKN)
ದೊಡ್ಡ ಬೆಳಕುಗಳನ್ನು ನಿರ್ಮಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.
ಕೀರ್ತನೆಗಳು 136 : 8 (OCVKN)
ಸೂರ್ಯನು ಹಗಲನ್ನಾಳುವಂತೆ ಮಾಡಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.
ಕೀರ್ತನೆಗಳು 136 : 9 (OCVKN)
ರಾತ್ರಿಯನ್ನಾಳಲು ಚಂದ್ರನನ್ನೂ, ನಕ್ಷತ್ರಗಳನ್ನೂ ಇಟ್ಟರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.
ಕೀರ್ತನೆಗಳು 136 : 10 (OCVKN)
ಈಜಿಪ್ಟಿನವರ ಚೊಚ್ಚಲ ಮಕ್ಕಳನ್ನು ದಂಡಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.
ಕೀರ್ತನೆಗಳು 136 : 11 (OCVKN)
ಇಸ್ರಾಯೇಲರನ್ನು ಈಜಪ್ಟಿನಿಂದ ಹೊರಗೆ ಬರಮಾಡಿದವರನ್ನು ಕೊಂಡಾಡಿರಿ; ದೇವರ ಪ್ರೀತಿಯು ಎಂದೆಂದಿಗೂ ಇರುವುದು.
ಕೀರ್ತನೆಗಳು 136 : 12 (OCVKN)
ಬಲವಾದ ಕೈಯಿಂದಲೂ, ಚಾಚಿದ ತೋಳಿನಿಂದಲೂ ಅವರನ್ನು ಹೊರತಂದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.
ಕೀರ್ತನೆಗಳು 136 : 13 (OCVKN)
ಕೆಂಪು ಸಮುದ್ರವನ್ನು ವಿಭಾಗಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.
ಕೀರ್ತನೆಗಳು 136 : 14 (OCVKN)
ಇಸ್ರಾಯೇಲನ್ನು ಅದರ ನಡುವೆ ದಾಟಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.
ಕೀರ್ತನೆಗಳು 136 : 15 (OCVKN)
ಫರೋಹನನ್ನೂ, ಅವನ ಸೈನ್ಯವನ್ನೂ ಕೆಂಪು ಸಮುದ್ರದಲ್ಲಿ ಕೆಡವಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.
ಕೀರ್ತನೆಗಳು 136 : 16 (OCVKN)
ತಮ್ಮ ಜನರನ್ನು ಮರುಭೂಮಿಯಲ್ಲಿ ನಡೆಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.
ಕೀರ್ತನೆಗಳು 136 : 17 (OCVKN)
ದೊಡ್ಡ ಅರಸರನ್ನು ದಂಡಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.
ಕೀರ್ತನೆಗಳು 136 : 18 (OCVKN)
ಶ್ರೇಷ್ಠ ಅರಸರನ್ನು ಸಹ ದಂಡಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.
ಕೀರ್ತನೆಗಳು 136 : 19 (OCVKN)
ಅಮೋರಿಯರ ಅರಸನಾದ ಸೀಹೋನನು ದಂಡನೆಹೊಂದಿದನು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.
ಕೀರ್ತನೆಗಳು 136 : 20 (OCVKN)
ಬಾಷಾನಿನ ಅರಸನಾದ ಓಗನು ಸಂಹಾರವಾದ ಮತ್ತೊಬ್ಬನು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.
ಕೀರ್ತನೆಗಳು 136 : 21 (OCVKN)
ಅವರ ದೇಶವನ್ನು ಬಾಧ್ಯತೆಯಾಗಿ ದೇವರು ಕೊಟ್ಟರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.
ಕೀರ್ತನೆಗಳು 136 : 22 (OCVKN)
ತಮ್ಮ ಸೇವಕ ಇಸ್ರಾಯೇಲನಿಗೆ ಅದು ಸೊತ್ತಾಯಿತು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.
ಕೀರ್ತನೆಗಳು 136 : 23 (OCVKN)
ನಾವು ಹೀನ ಸ್ಥಿತಿಯಲ್ಲಿದ್ದಾಗ ನಮ್ಮನ್ನು ನೆನಪಿಸಿಕೊಂಡರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.
ಕೀರ್ತನೆಗಳು 136 : 24 (OCVKN)
ನಮ್ಮ ವೈರಿಗಳಿಂದ ನಮ್ಮನ್ನು ಬಿಡಿಸಿದರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.
ಕೀರ್ತನೆಗಳು 136 : 25 (OCVKN)
ಸಕಲ ಜೀವಿಗಳಿಗೂ ಆಹಾರವನ್ನು ಕೊಡುತ್ತಾರೆ; ದೇವರ ಪ್ರೀತಿಯು ಎಂದೆಂದಿಗೂ ಇರುವುದು.
ಕೀರ್ತನೆಗಳು 136 : 26 (OCVKN)
ಪರಲೋಕದ ದೇವರನ್ನು ಕೊಂಡಾಡಿರಿ; ದೇವರ ಪ್ರೀತಿಯು ಎಂದೆಂದಿಗೂ ಇರುವುದು.
❮
❯