ಕೀರ್ತನೆಗಳು 139 : 1 (OCVKN)
ಯೆಹೋವ ದೇವರೇ, ನೀವು ನನ್ನನ್ನು ಪರಿಶೋಧಿಸಿದ್ದೀರಿ; ನನ್ನನ್ನು ತಿಳಿದುಕೊಂಡಿದ್ದೀರಿ.
ಕೀರ್ತನೆಗಳು 139 : 2 (OCVKN)
ನಾನು ಕುಳಿತಿರುವುದನ್ನೂ, ಏಳುವುದನ್ನೂ ನೀವು ತಿಳಿದುಕೊಂಡಿದ್ದೀರಿ; ನನ್ನ ಆಲೋಚನೆಗಳನ್ನು ದೂರದಿಂದ ಗ್ರಹಿಸಿಕೊಂಡಿದ್ದೀರಿ.
ಕೀರ್ತನೆಗಳು 139 : 3 (OCVKN)
ನಾನು ನಡೆಯುವುದನ್ನೂ, ನಾನು ಮಲಗುವುದನ್ನೂ ನೀವು ವಿವೇಚಿಸಿದ್ದೀರಿ; ನನ್ನ ಮಾರ್ಗಗಳೆಲ್ಲಾ ನಿಮಗೆ ಸುಪರಿಚಿತವಾಗಿವೆ.
ಕೀರ್ತನೆಗಳು 139 : 4 (OCVKN)
ನನ್ನ ನಾಲಿಗೆಯಲ್ಲಿ ಒಂದು ಮಾತು ಆರಂಭಿಸುವುದಕ್ಕಿಂತ ಮುಂಚೆಯೇ ಯೆಹೋವ ದೇವರೇ, ಅದು ನಿಮಗೆ ಪೂರ್ಣವಾಗಿ ತಿಳಿದಿರುತ್ತದೆ.
ಕೀರ್ತನೆಗಳು 139 : 5 (OCVKN)
ನೀವು ನನ್ನ ಹಿಂದೆಯೂ, ಮುಂದೆಯೂ ಆವರಿಸಿಕೊಂಡು, ನಿಮ್ಮ ಕೈಯನ್ನು ನನ್ನ ಮೇಲೆ ಇಟ್ಟಿದ್ದೀರಿ.
ಕೀರ್ತನೆಗಳು 139 : 6 (OCVKN)
ಇಂಥ ಅರಿವು ನನಗೆ ಅತ್ಯಂತ ವಿಸ್ಮಯವಾಗಿದೆ, ಅದು ನನಗೆ ನಿಲುಕಲಾರದಷ್ಟು ಉನ್ನತವಾಗಿದೆ.
ಕೀರ್ತನೆಗಳು 139 : 7 (OCVKN)
ನಾನು ನಿಮ್ಮ ಆತ್ಮದಿಂದ ತಪ್ಪಿಸಿಕೊಂಡು ಎಲ್ಲಿಗೆ ಹೋಗಲಿ? ನಿಮ್ಮ ಸನ್ನಿಧಿಯಿಂದ ತಪ್ಪಿಸಿಕೊಂಡು ನಾನು ಎಲ್ಲಿಗೆ ಹೊರಟು ಹೋಗಲಿ?
ಕೀರ್ತನೆಗಳು 139 : 8 (OCVKN)
ನಾನು ಆಕಾಶಕ್ಕೆ ಏರಿ ಹೋದರೆ, ನೀವು ಅಲ್ಲಿ ಇದ್ದೀರಿ; ಪಾತಾಳಕ್ಕೆ ಹೋಗಿ ನಿದ್ರಿಸಿದರೂ ನೀವು ಅಲ್ಲಿಯೂ ಇದ್ದೀರಿ.
ಕೀರ್ತನೆಗಳು 139 : 9 (OCVKN)
ಉದಯದ ರೆಕ್ಕೆಗಳನ್ನು ತೆಗೆದುಕೊಂಡು, ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಿದರೆ,
ಕೀರ್ತನೆಗಳು 139 : 10 (OCVKN)
ಅಲ್ಲಿಯೂ ನಿಮ್ಮ ಕೈ ನನ್ನನ್ನು ನಡೆಸುವುದು, ನಿಮ್ಮ ಬಲಗೈ ನನ್ನನ್ನು ಹಿಡಿದಿರುವುದು.
ಕೀರ್ತನೆಗಳು 139 : 11 (OCVKN)
“ಕತ್ತಲೆಯು ನನ್ನನ್ನು ಕವಿದುಕೊಳ್ಳಲಿ ಮತ್ತು ಬೆಳಕು ನನ್ನ ಸುತ್ತಲೂ ಇರುಳಾಗಲಿ,” ಎಂದು ನಾನು ಹೇಳಿದರೂ,
ಕೀರ್ತನೆಗಳು 139 : 12 (OCVKN)
ಕತ್ತಲು ನಿಮಗೆ ಕತ್ತಲಾಗಿರುವುದಿಲ್ಲ; ರಾತ್ರಿಯು ಹಗಲಿನ ಹಾಗೆ ಪ್ರಕಾಶಿಸುವುದು, ಏಕೆಂದರೆ ಕತ್ತಲು ನಿಮಗೆ ಬೆಳಕಿನಂತಿರುವುದು.
ಕೀರ್ತನೆಗಳು 139 : 13 (OCVKN)
ನನ್ನ ಅಂತರಾತ್ಮವನ್ನು ಉಂಟು ಮಾಡಿದವರು ನೀವೇ; ನನ್ನ ತಾಯಿಯ ಗರ್ಭದಲ್ಲಿ ನನ್ನನ್ನು ರೂಪಿಸಿದವರು ನೀವೇ.
ಕೀರ್ತನೆಗಳು 139 : 14 (OCVKN)
ನೀವು ನನ್ನನ್ನು ವಿಚಿತ್ರವಾಗಿಯೂ ವಿಸ್ಮಯವಾಗಿಯೂ ಸೃಷ್ಟಿಸಿದ್ದರಿಂದ ನಾನು ನಿಮ್ಮನ್ನು ಸ್ತುತಿಸುತ್ತೇನೆ; ನಿಮ್ಮ ಕೃತ್ಯಗಳು ಆಶ್ಚರ್ಯಕರವಾಗಿವೆ ಎಂದು, ನಾನು ಪೂರ್ಣವಾಗಿ ತಿಳಿದಿದ್ದೇನೆ.
ಕೀರ್ತನೆಗಳು 139 : 15 (OCVKN)
ನೀವು ನನ್ನನ್ನು ಮರೆಯಲ್ಲಿ ರೂಪಿಸಿದಾಗಲೂ, ಭೂಗರ್ಭದಲ್ಲಿ ನನ್ನನ್ನು ರಚಿಸಿದಾಗಲೂ ನನ್ನ ಅಸ್ಥಿಪಂಜರವು ನಿಮಗೆ ಮರೆಯಾಗಿರಲಿಲ್ಲ.
ಕೀರ್ತನೆಗಳು 139 : 16 (OCVKN)
ನಾನು ಇನ್ನೂ ಭ್ರೂಣವಾಗಿರುವಾಗಲೇ ನಿಮ್ಮ ಕಣ್ಣುಗಳು ನನ್ನನ್ನು ನೋಡಿದವು; ನೀವು ನನಗೆ ಅನುಮತಿಸಿರುವ ಪ್ರಥಮ ದಿನದಿಂದ ಕೊನೆಯದಿನದವರೆಗೆ ನನ್ನ ಎಲ್ಲಾ ದಿನಗಳೂ ನಿಮ್ಮ ಪುಸ್ತಕದಲ್ಲಿ ಬರೆಯಲಾಗಿವೆ.
ಕೀರ್ತನೆಗಳು 139 : 17 (OCVKN)
ದೇವರೇ, ನಿಮ್ಮ ಆಲೋಚನೆಗಳು ನನಗೆ ಎಷ್ಟೋ ಅಮೂಲ್ಯವಾಗಿವೆ! ಅವುಗಳ ಎಣಿಕೆ ನನಗೆ ಎಷ್ಟೋ ಅಸಂಖ್ಯವಾಗಿವೆ!
ಕೀರ್ತನೆಗಳು 139 : 18 (OCVKN)
ನಾನು ಅವುಗಳನ್ನು ಎಣಿಸಿದರೆ, ಅವು ಮರಳಿಗಿಂತಲೂ ಹೆಚ್ಚಾಗಿವೆ! ನಾನು ಎಚ್ಚರವಾಗುವಾಗ, ನಿಶ್ಚಯವಾಗಿಯೂ ನಿಮ್ಮ ಸಂಗಡ ಇರುವೆನು.
ಕೀರ್ತನೆಗಳು 139 : 19 (OCVKN)
ದೇವರೇ, ಒಂದು ವೇಳೆ ನೀವು ದುಷ್ಟರೆಲ್ಲರನ್ನು ದಂಡಿಸಿಬಿಟ್ಟರೆ ಎಷ್ಟೋ ಒಳ್ಳೆಯದಾಗಿರುವುದು! ಕೊಲೆಪಾತಕರೇ, ನೀವು ನನ್ನಿಂದ ತೊಲಗಿ ಹೋದರೆ ಎಷ್ಟೋ ಹಿತ!
ಕೀರ್ತನೆಗಳು 139 : 20 (OCVKN)
ಅವರು ನಿಮಗೆ ವಿರೋಧವಾಗಿ ಮಾತಾಡುತ್ತಾರೆ; ನಿಮ್ಮ ವೈರಿಗಳು ನಿಮ್ಮ ಹೆಸರನ್ನು ದುರುಪಯೋಗ ಮಾಡುತ್ತಾರೆ.
ಕೀರ್ತನೆಗಳು 139 : 21 (OCVKN)
ಯೆಹೋವ ದೇವರೇ, ನಿಮ್ಮನ್ನು ದ್ವೇಷಿಸುವವರನ್ನು ನಾನು ದ್ವೇಷಿಸದಿರುವೆನೋ? ನಿಮಗೆ ವಿರೋಧವಾಗಿ ತಿರುಗಿ ಬಿದ್ದವರನ್ನು ನಾನು ಹೀನೈಸದಿರುವೆನೋ?
ಕೀರ್ತನೆಗಳು 139 : 22 (OCVKN)
ನಾನು ಪೂರ್ಣ ದ್ವೇಷದಿಂದ ಅವರನ್ನು ಹಗೆಮಾಡುತ್ತೇನೆ; ನಾನು ಅವರನ್ನು ನನ್ನ ಶತ್ರುಗಳಂತೆ ಪರಿಗಣಿಸುತ್ತೇನೆ.
ಕೀರ್ತನೆಗಳು 139 : 23 (OCVKN)
ದೇವರೇ, ನನ್ನನ್ನು ಪರಿಶೋಧಿಸಿ, ನನ್ನ ಹೃದಯವನ್ನು ತಿಳಿದುಕೊಳ್ಳಿರಿ; ನನ್ನನ್ನು ಪರೀಕ್ಷಿಸಿ, ನನ್ನ ಚಿಂತಾಲೋಚನೆಗಳನ್ನು ತಿಳಿದುಕೊಳ್ಳಿರಿ.
ಕೀರ್ತನೆಗಳು 139 : 24 (OCVKN)
ನನ್ನಲ್ಲಿ ಕೇಡಿನ ಮಾರ್ಗವಿದೆಯೋ ಎಂದು ನೋಡಿರಿ, ನನ್ನನ್ನು ನಿತ್ಯ ಮಾರ್ಗದಲ್ಲಿ ನಡೆಸಿರಿ.
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23
24