ಕೀರ್ತನೆಗಳು 140 : 1 (OCVKN)
ಯೆಹೋವ ದೇವರೇ, ಕೆಡುಕರಿಂದ ನನ್ನನ್ನು ತಪ್ಪಿಸಿರಿ, ಬಲಾತ್ಕಾರಿಗಳಿಂದ ನನ್ನನ್ನು ತಪ್ಪಿಸಿ ಕಾಪಾಡಿರಿ.
ಕೀರ್ತನೆಗಳು 140 : 2 (OCVKN)
ಅವರು ಹೃದಯದಲ್ಲಿ ಕೇಡನ್ನು ಕಲ್ಪಿಸುತ್ತಾರೆ; ಅವರು ಪ್ರತಿದಿನ ಕಲಹವೆಬ್ಬಿಸುತ್ತಾರೆ.
ಕೀರ್ತನೆಗಳು 140 : 3 (OCVKN)
ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ.
ಕೀರ್ತನೆಗಳು 140 : 4 (OCVKN)
ಯೆಹೋವ ದೇವರೇ, ದುಷ್ಟರ ಕೈಗಳಿಂದ ನನ್ನನ್ನು ತಪ್ಪಿಸಿ ಕಾಯಿರಿ. ಹಿಂಸಕರಿಂದ ನನ್ನನ್ನು ರಕ್ಷಿಸು, ಅವರು ನನ್ನ ಮಾರ್ಗಗಳನ್ನು ಕೆಡಿಸುವುದಕ್ಕೆ ಉದ್ದೇಶಿಸುತ್ತಾರೆ.
ಕೀರ್ತನೆಗಳು 140 : 5 (OCVKN)
ಗರ್ವಿಷ್ಠರು ನನಗೆ ಉರುಲನ್ನೂ, ಪಾಶಗಳನ್ನೂ ರಹಸ್ಯವಾಗಿ ಇಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನನಗೆ ಬೋನಿಟ್ಟಿದ್ದಾರೆ.
ಕೀರ್ತನೆಗಳು 140 : 6 (OCVKN)
ನಾನು ಯೆಹೋವ ದೇವರಿಗೆ ಹೀಗೆ ಹೇಳಿದೆನು, “ನೀವು ನನ್ನ ದೇವರಾಗಿದ್ದೀರಿ; ಯೆಹೋವ ದೇವರೇ, ಕರುಣೆಗಾಗಿ ಬೇಡುವ ನನ್ನ ಮೊರೆಗೆ ಕಿವಿಗೊಡಿರಿ.
ಕೀರ್ತನೆಗಳು 140 : 7 (OCVKN)
ನನ್ನ ರಕ್ಷಣೆಯ ಬಲವಾಗಿರುವ ಸಾರ್ವಭೌಮ ಯೆಹೋವ ದೇವರೇ, ನನ್ನ ತಲೆಯನ್ನು ಯುದ್ಧದ ದಿವಸದಲ್ಲಿ ಕಾಪಾಡುತ್ತೀರಿ.
ಕೀರ್ತನೆಗಳು 140 : 8 (OCVKN)
ಯೆಹೋವ ದೇವರೇ, ದುಷ್ಟರಿಗೆ ಅವರ ಇಷ್ಟಾರ್ಥವನ್ನು ಕೊಡಬೇಡಿರಿ; ಅವರು ಉನ್ನತಕ್ಕೇರುವ ಹಾಗೆ ಅವರ ಯುಕ್ತಿಯನ್ನು ಪೂರೈಸಬೇಡಿರಿ.”
ಕೀರ್ತನೆಗಳು 140 : 9 (OCVKN)
ನನ್ನನ್ನು ಸುತ್ತಿಕೊಂಡಿರುವವರ ತುಟಿಗಳ ಕೇಡು, ಅವರ ತಲೆಯ ಮೇಲೇ ಬರಲಿ.
ಕೀರ್ತನೆಗಳು 140 : 10 (OCVKN)
ಉರಿ ಕೆಂಡಗಳು ಅವರ ಮೇಲೆ ಬೀಳಲಿ; ಬೆಂಕಿಯಲ್ಲಿಯೂ ಅವರು ಏಳಲಾರದ ಹಾಗೆ, ಇತರರು ಅವರನ್ನು ಕುಣಿಯಲ್ಲಿ ಕೆಡವಲಿ.
ಕೀರ್ತನೆಗಳು 140 : 11 (OCVKN)
ಚಾಡಿಕೋರರು ದೇಶದಲ್ಲಿ ಉಳಿಯದಿರಲಿ; ಬಲಾತ್ಕಾರಿಯನ್ನು ಕೇಡು ಬೇಟೆಯಾಡಿ ಕೆಡವಲಿ.
ಕೀರ್ತನೆಗಳು 140 : 12 (OCVKN)
ಯೆಹೋವ ದೇವರು ಬಡವನಿಗೆ ವ್ಯಾಜ್ಯವನ್ನು, ಬಲಹೀನರಿಗೆ ನ್ಯಾಯವನ್ನೂ ತೀರಿಸುವರೆಂದೂ ನಾನು ಬಲ್ಲೆನು.
ಕೀರ್ತನೆಗಳು 140 : 13 (OCVKN)
ನಿಶ್ಚಯವಾಗಿ ನೀತಿವಂತರು ನಿಮ್ಮ ಹೆಸರಿಗೆ ಉಪಕಾರ ಸ್ತುತಿಯನ್ನು ಮಾಡುವರು; ಯಥಾರ್ಥರು ನಿಮ್ಮ ಸನ್ನಿಧಿಯಲ್ಲಿ ಬಾಳುವರು.

1 2 3 4 5 6 7 8 9 10 11 12 13