ಕೀರ್ತನೆಗಳು 142 : 1 (OCVKN)
ನನ್ನ ಸ್ವರವೆತ್ತಿ ಯೆಹೋವ ದೇವರಿಗೆ ಮೊರೆಯಿಟ್ಟಿದ್ದೇನೆ; ಸ್ವರವೆತ್ತಿ ನನ್ನ ಯೆಹೋವ ದೇವರಿಗೆ ವಿಜ್ಞಾಪನೆ ಮಾಡಿದ್ದೇನೆ.
ಕೀರ್ತನೆಗಳು 142 : 2 (OCVKN)
ದೇವರ ಮುಂದೆ ನನ್ನ ಚಿಂತೆಯನ್ನು ಹೊಯ್ದಿದ್ದೇನೆ; ನನ್ನ ಇಕ್ಕಟ್ಟನ್ನು ದೇವರ ಮುಂದೆ ತಿಳಿಸಿದ್ದೇನೆ.
ಕೀರ್ತನೆಗಳು 142 : 3 (OCVKN)
ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ, ದೇವರೇ ನೀವು ನನ್ನ ದಾರಿಯನ್ನು ಕಾಯುತ್ತೀರಿ; ನಾನು ನಡೆಯುವ ದಾರಿಯಲ್ಲಿ ವೈರಿಗಳು ಗುಪ್ತವಾಗಿ ನನಗೆ ಉರುಲನ್ನು ಒಡ್ಡಿದ್ದಾರೆ.
ಕೀರ್ತನೆಗಳು 142 : 4 (OCVKN)
ನೋಡಿರಿ ನನ್ನ ಬಲಗಡೆಯಲ್ಲಿ, ನನ್ನ ಪರವಾಗಿ ಯಾರೂ ಇಲ್ಲ; ಆಶ್ರಯವು ನನಗೆ ಇಲ್ಲ; ನನಗಾಗಿ ಚಿಂತಿಸುವವರು ಯಾರೂ ಇಲ್ಲ.
ಕೀರ್ತನೆಗಳು 142 : 5 (OCVKN)
ಯೆಹೋವ ದೇವರೇ, ನಿಮಗೆ ಹೀಗೆಂದು ಮೊರೆಯಿಡುತ್ತೇನೆ: “ನೀವು ನನ್ನ ಆಶ್ರಯವೂ, ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀರಿ.”
ಕೀರ್ತನೆಗಳು 142 : 6 (OCVKN)
ನನ್ನ ಕೂಗನ್ನು ಆಲೈಸಿರಿ, ಏಕೆಂದರೆ ನಾನು ಬಹಳ ಕುಂದಿಹೋಗಿದ್ದೇನೆ; ನನ್ನನ್ನು ಹಿಂಸಿಸುವವರಿಂದ ನನ್ನನ್ನು ಬಿಡಿಸಿರಿ, ಏಕೆಂದರೆ ಅವರು ನನಗಿಂತ ಬಲಿಷ್ಠರಾಗಿದ್ದಾರೆ.
ಕೀರ್ತನೆಗಳು 142 : 7 (OCVKN)
ನಿಮ್ಮ ಹೆಸರನ್ನು ಕೊಂಡಾಡುವ ಹಾಗೆ ನನ್ನ ಸೆರೆಯಿಂದ ನನ್ನನ್ನು ಬಿಡಿಸಿರಿ; ಆಗ ನೀವು ನನಗೆ ಮಾಡಿದ ಉಪಕಾರವನ್ನು ಕಂಡು ನೀತಿವಂತರು ನನ್ನ ಹತ್ತಿರ ಸೇರಿಬರುವರು.

1 2 3 4 5 6 7