ಕೀರ್ತನೆಗಳು 148 : 1 (OCVKN)
ಯೆಹೋವ ದೇವರನ್ನು ಸ್ತುತಿಸಿರಿ. ಆಕಾಶ ಮಂಡಲದಿಂದ ಯೆಹೋವ ದೇವರಿಗೆ ಸ್ತುತಿ ಸಲ್ಲಲಿ! ಮಹೋನ್ನತದ ದೇವರನ್ನು ಸ್ತುತಿಸಿರಿ.
ಕೀರ್ತನೆಗಳು 148 : 2 (OCVKN)
ದೇವರ ದೂತರುಗಳೇ, ದೇವರನ್ನು ಸ್ತುತಿಸಿರಿ; ದೇವರ ಪರಲೋಕದ ಎಲ್ಲಾ ಸೈನ್ಯಗಳೇ, ದೇವರನ್ನು ಸ್ತುತಿಸಿರಿ.
ಕೀರ್ತನೆಗಳು 148 : 3 (OCVKN)
ಸೂರ್ಯ, ಚಂದ್ರರೇ, ದೇವರನ್ನು ಸ್ತುತಿಸಿರಿ; ಬೆಳಕುಳ್ಳ ಎಲ್ಲಾ ನಕ್ಷತ್ರಗಳೇ, ದೇವರನ್ನು ಸ್ತುತಿಸಿರಿ.
ಕೀರ್ತನೆಗಳು 148 : 4 (OCVKN)
ಉನ್ನತ ಆಕಾಶಗಳೇ, ಆಕಾಶಗಳ ಮೇಲೆ ಇರುವ ಜಲಸಮೂಹವೇ, ದೇವರನ್ನು ಸ್ತುತಿಸಿರಿ.
ಕೀರ್ತನೆಗಳು 148 : 5 (OCVKN)
ಯೆಹೋವ ದೇವರ ಹೆಸರನ್ನು ಅವು ಸ್ತುತಿಸಲಿ, ಏಕೆಂದರೆ ದೇವರು ಆಜ್ಞಾಪಿಸಲು, ಅವು ನಿರ್ಮಿಸಲಾದವು.
ಕೀರ್ತನೆಗಳು 148 : 6 (OCVKN)
ಅವುಗಳನ್ನು ಯುಗ ಯುಗಗಳಿಗೂ ಸ್ಥಾಪಿಸಿದ್ದಾರೆ; ದೇವರು ತೀರ್ಪನ್ನು ಕೊಟ್ಟಿದ್ದಾರೆ, ಅದು ಮೀರಿ ಹೋಗುವುದಿಲ್ಲ.
ಕೀರ್ತನೆಗಳು 148 : 7 (OCVKN)
ಭೂಮಿಯಿಂದ ಯೆಹೋವ ದೇವರನ್ನು ಸ್ತುತಿಸಿರಿ; ಎಲ್ಲಾ ಅಗಾಧಗಳೇ,
ಕೀರ್ತನೆಗಳು 148 : 8 (OCVKN)
ಮಿಂಚೇ, ಕಲ್ಮಳೆಯೇ, ಹಿಮವೇ, ಹಬೆಯೇ, ದೇವರ ಮಾತನ್ನು ಕೇಳುವ ಬಿರುಗಾಳಿಯೇ,
ಕೀರ್ತನೆಗಳು 148 : 9 (OCVKN)
ಬೆಟ್ಟಗಳೇ, ಎಲ್ಲಾ ಗುಡ್ಡಗಳೇ, ಹಣ್ಣಿನ ಮರಗಳೇ, ಎಲ್ಲಾ ದೇವದಾರುಗಳೇ,
ಕೀರ್ತನೆಗಳು 148 : 10 (OCVKN)
ಕಾಡುಮೃಗಗಳೇ, ಎಲ್ಲಾ ಪಶುಗಳೇ, ಹರಿದಾಡುವ ಜೀವಜಂತುಗಳೇ, ಹಾರುವ ಪಕ್ಷಿಗಳೇ,
ಕೀರ್ತನೆಗಳು 148 : 11 (OCVKN)
ಭೂರಾಜರೇ, ಎಲ್ಲಾ ಪ್ರಜೆಗಳೇ, ಪ್ರಧಾನರೇ, ಭೂಮಿಯ ಎಲ್ಲಾ ನ್ಯಾಯಾಧಿಪತಿಗಳೇ,
ಕೀರ್ತನೆಗಳು 148 : 12 (OCVKN)
ಪ್ರಾಯಸ್ಥರೇ, ಕನ್ಯೆಯರೇ, ಮಕ್ಕಳೇ, ವೃದ್ಧರೇ.
ಕೀರ್ತನೆಗಳು 148 : 13 (OCVKN)
ಯೆಹೋವ ದೇವರ ಹೆಸರನ್ನು ಸ್ತುತಿಸಿರಿ; ಅವರ ಹೆಸರು ಮಾತ್ರ ಶ್ರೇಷ್ಠವಾಗಿದೆ; ಅವರ ಮಹಿಮೆಯು ಭೂಮ್ಯಾಕಾಶಗಳನ್ನು ಆವರಿಸಿದೆ.
ಕೀರ್ತನೆಗಳು 148 : 14 (OCVKN)
ದೇವರು ತಮ್ಮ ಜನರ ಬಲವನ್ನು ಮೇಲಕ್ಕೆತ್ತಿದ್ದಾರೆ. ದೇವರ ಇಸ್ರಾಯೇಲರೆಲ್ಲರೂ, ಭಕ್ತರೆಲ್ಲರೂ, ದೇವರಿಗೆ ಸಮೀಪವಾದ ಜನರೂ ದೇವರನ್ನು ಕೊಂಡಾಡಿರಿ. ಯೆಹೋವ ದೇವರನ್ನು ಸ್ತುತಿಸಿರಿ.

1 2 3 4 5 6 7 8 9 10 11 12 13 14