ಕೀರ್ತನೆಗಳು 149 : 1 (OCVKN)
ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ, ಭಕ್ತರ ಸಭೆಯಲ್ಲಿ ದೇವರ ಸ್ತೋತ್ರವನ್ನೂ ಹಾಡಿರಿ.
ಕೀರ್ತನೆಗಳು 149 : 2 (OCVKN)
ಇಸ್ರಾಯೇಲು ತನ್ನನ್ನು ಉಂಟುಮಾಡಿದ ದೇವರಲ್ಲಿ ಸಂತೋಷಿಸಲಿ; ಚೀಯೋನಿನ ಜನರು ತಮ್ಮ ಅರಸರಲ್ಲಿ ಉಲ್ಲಾಸಿಸಲಿ.
ಕೀರ್ತನೆಗಳು 149 : 3 (OCVKN)
ದೇವರ ಹೆಸರನ್ನು ನರ್ತಿಸುತ್ತಾ ಸ್ತುತಿಸಲಿ; ದಮ್ಮಡಿಯಿಂದಲೂ ಕಿನ್ನರಿಯಿಂದಲೂ ದೇವರನ್ನು ಕೀರ್ತಿಸಲಿ.
ಕೀರ್ತನೆಗಳು 149 : 4 (OCVKN)
ಏಕೆಂದರೆ ಯೆಹೋವ ದೇವರು ತಮ್ಮ ಜನರಲ್ಲಿ ಹರ್ಷಿಸುತ್ತಾರೆ. ದೀನರನ್ನು ಜಯದ ಕಿರೀಟದಿಂದ ಅಲಂಕರಿಸುತ್ತಾರೆ.
ಕೀರ್ತನೆಗಳು 149 : 5 (OCVKN)
ಇಂಥಾ ಸನ್ಮಾನದಲ್ಲಿ ನಂಬಿಗಸ್ತರು ಸಂತೋಷಪಡಲಿ ಹಾಸಿಗೆಯಲ್ಲಿರುವಾಗಲೂ ಆನಂದಗಾನ ಹಾಡಲಿ.
ಕೀರ್ತನೆಗಳು 149 : 6 (OCVKN)
ಉನ್ನತ ದೇವರ ಸ್ತೋತ್ರವು ಅವರ ಬಾಯಿಯಲ್ಲಿ ಇರಲಿ. ಇಬ್ಬಾಯಿ ಖಡ್ಗ ಅವರ ಕೈಯಲ್ಲಿಯೂ ಇರಲಿ.
ಕೀರ್ತನೆಗಳು 149 : 7 (OCVKN)
ಜನಾಂಗಗಳಲ್ಲಿ ನ್ಯಾಯ ಪ್ರತೀಕಾರವಾಗಲಿ, ಅಪರಾಧಿಗಳಿಗೆ ಶಿಕ್ಷೆಯಾಗಲಿ.
ಕೀರ್ತನೆಗಳು 149 : 8 (OCVKN)
ಅಪರಾಧದ ಅರಸರನ್ನು ಸಂಕೋಲೆಗಳಿಂದಲೂ, ಪ್ರಮುಖರನ್ನು ಕಬ್ಬಿಣದ ಬೇಡಿಗಳಿಂದಲೂ ಬಂಧಿಸಲಿ.
ಕೀರ್ತನೆಗಳು 149 : 9 (OCVKN)
ಬರೆದಿರುವ ನ್ಯಾಯವಿಧಿಯು ಅವರಲ್ಲಿ ನೆರವೇರಲಿ, ದೇವರ ಭಕ್ತರೆಲ್ಲರಿಗೆ ಈ ಗೌರವವಿರುತ್ತದೆ. ಯೆಹೋವ ದೇವರನ್ನು ಸ್ತುತಿಸಿರಿ.
❮
❯