ಕೀರ್ತನೆಗಳು 18 : 1 (OCVKN)
ನನ್ನ ಬಲವಾಗಿರುವ ಯೆಹೋವ ದೇವರೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆ.
ಕೀರ್ತನೆಗಳು 18 : 2 (OCVKN)
ಯೆಹೋವ ದೇವರು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ವಿಮೋಚಕರೂ ಆಗಿದ್ದಾರೆ; ನನ್ನ ಬಂಡೆಯಾದ ದೇವರಲ್ಲಿ, ನಾನು ಭರವಸವಿಡುವೆನು ಅವರು ನನ್ನ ಗುರಾಣಿ* ಅಥವಾ ನನ್ನ ಕರ್ತ ಮತ್ತು ನನ್ನ ರಕ್ಷಣೆಯ ಕೊಂಬು, † ಕೊಂಬು ಇದು ಶಕ್ತಿಯನ್ನು ಸೂಚಿಸುತ್ತದೆ. ನನ್ನ ಉನ್ನತವಾದ ದುರ್ಗ ಆಗಿದ್ದಾರೆ.
ಕೀರ್ತನೆಗಳು 18 : 3 (OCVKN)
ಸ್ತುತಿ ಪಾತ್ರರಾಗಿರುವ ಯೆಹೋವ ದೇವರನ್ನು ನಾನು ಮೊರೆಯಿಟ್ಟದ್ದರಿಂದ, ಅವರು ನನ್ನ ಶತ್ರುಗಳಿಂದ ನನ್ನನ್ನು ಕಾಪಾಡಿದ್ದಾರೆ.
ಕೀರ್ತನೆಗಳು 18 : 4 (OCVKN)
ಮರಣದ ಪಾಶಗಳು ನನ್ನನ್ನು ಸುತ್ತಿಕೊಂಡವು; ವಿನಾಶಪ್ರವಾಹಗಳು ನನ್ನ ಮೇಲೆ ಹರಿದವು.
ಕೀರ್ತನೆಗಳು 18 : 5 (OCVKN)
ಪಾತಾಳದ ಪಾಶಗಳು ನನ್ನನ್ನು ಸುತ್ತಿಕೊಂಡವು; ಮರಣದ ಬಲೆಗಳು ನನ್ನನ್ನು ಎದುರಿಸಿದವು.
ಕೀರ್ತನೆಗಳು 18 : 6 (OCVKN)
ನನ್ನ ಇಕ್ಕಟ್ಟಿನಲ್ಲಿ ಯೆಹೋವ ದೇವರನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಅವರು ತಮ್ಮ ಮಂದಿರದೊಳಗಿಂದ ನನ್ನ ಧ್ವನಿಯನ್ನು ಕೇಳಿದರು; ನನ್ನ ಮೊರೆಯು ಅವರ ಸನ್ನಿಧಿ ಸೇರಿ ಅವರ ಕಿವಿಗೆ ಬಿತ್ತು.
ಕೀರ್ತನೆಗಳು 18 : 7 (OCVKN)
ದೇವರು ಬೇಸರಗೊಂಡಿದ್ದರಿಂದ ಭೂಮಿಯು ನಡುಗಿ ಕದಲಿದವು; ಪರ್ವತಗಳ ಅಸ್ತಿವಾರಗಳು ಸಹ ಕದಲಿದವು.
ಕೀರ್ತನೆಗಳು 18 : 8 (OCVKN)
ಮೂಗಿನಿಂದ ಹೊಗೆ ಬಂದಂತೆಯೂ ಬಾಯಿಯೊಳಗಿಂದ ದಹಿಸುವ ಅಗ್ನಿ ಹೊರಟಂತೆಯೂ; ಕೆಂಡಗಳು ಅದರಿಂದ ಜ್ವಾಲಿಸಿದಂತೆಯೂ ಇರಲು,
ಕೀರ್ತನೆಗಳು 18 : 9 (OCVKN)
ದೇವರು ಆಕಾಶಗಳನ್ನು ಬಾಗಿಸಿ ಕೆಳಗಿಳಿದು ಬಂದರು; ಅವರ ಪಾದಗಳ ಕೆಳಗೆ ಕಾರ್ಮೋಡಗಳಿದ್ದವು.
ಕೀರ್ತನೆಗಳು 18 : 10 (OCVKN)
ಅವರು ಕೆರೂಬಿಯ‡ ಕೆರೂಬಿ ಒಂದು ವಿಧವಾದ ದೇವದೂತರು ಮೇಲೆ ಕೂತು ಹಾರಿದರು, ಗಾಳಿಯ ರೆಕ್ಕೆಗಳ ಮೇಲೆ ಕಾಣಿಸಿಕೊಂಡರು.
ಕೀರ್ತನೆಗಳು 18 : 11 (OCVKN)
ಅವರು ಕತ್ತಲನ್ನು ತಮ್ಮ ಹೊದಿಕೆಯನ್ನಾಗಿಯೂ ಮಳೆ ತರುವ ಆಕಾಶದ ಕಾರ್ಮೋಡಗಳನ್ನು ತಮ್ಮ ಸುತ್ತಲಿನ ಪರದೆಯನ್ನಾಗಿಯೂ ಮಾಡಿಕೊಂಡರು.
ಕೀರ್ತನೆಗಳು 18 : 12 (OCVKN)
ಅವರ ಸನ್ನಿಧಿಯ ಪ್ರಕಾಶದಿಂದ ಮೋಡಗಳು, ಕಲ್ಮಳೆ ಹಾಗೂ ಗುಡುಗು ಮಿಂಚುಗಳು ಹೊರಹೊಮ್ಮಿದವು.
ಕೀರ್ತನೆಗಳು 18 : 13 (OCVKN)
ಯೆಹೋವ ದೇವರು ಆಕಾಶಗಳಲ್ಲಿ ಗುಡುಗಿದರು; ಮಹೋನ್ನತ ದೇವರ ಧ್ವನಿಯು ಕಲ್ಮಳೆ ಹಾಗೂ ಮಿಂಚುಗಳಿಂದ§ ಕೆಲವು ಪ್ರತಿಗಳಲ್ಲಿ ಕಲ್ಮಳೆ ಹಾಗೂ ಮಿಂಚುಗಳಿಂದ ಎಂದು ಈ ವಾಕ್ಯದಲ್ಲಿ ಇಲ್ಲ. ಪ್ರತಿಧ್ವನಿಸಿತು.
ಕೀರ್ತನೆಗಳು 18 : 14 (OCVKN)
ಅವರು ತಮ್ಮ ಬಾಣಗಳನ್ನು ಎಸೆದು ವೈರಿಗಳನ್ನು ಚದರಿಸಿದರು; ಸಿಡಿಲಿನಿಂದ ವೈರಿಗಳನ್ನೆಲ್ಲ ಅಟ್ಟಿಸಿಬಿಟ್ಟರು.
ಕೀರ್ತನೆಗಳು 18 : 15 (OCVKN)
ಯೆಹೋವ ದೇವರೇ, ನಿಮ್ಮ ಗದರಿಕೆಯಿಂದಲೂ, ನಿಮ್ಮ ಮೂಗಿನ ಶ್ವಾಸದ ಗಾಳಿಯಿಂದಲೂ ಸಮುದ್ರದ ತಳವು ಕಾಣಿಸಿದವು, ಭೂಲೋಕದ ಅಸ್ತಿವಾರಗಳು ಬಯಲಾದವು.
ಕೀರ್ತನೆಗಳು 18 : 16 (OCVKN)
ಅವರು ಮೇಲಿನಿಂದ ಕೈಚಾಚಿ ನನ್ನನ್ನು ಹಿಡಿದು ಅಗಾಧವಾದ ಜಲರಾಶಿಗಳಿಂದ ಹೊರಗೆಳೆದರು.
ಕೀರ್ತನೆಗಳು 18 : 17 (OCVKN)
ಅವರು ನನಗಿಂತ ಶಕ್ತಿಶಾಲಿಯಾದ ಶತ್ರುಗಳಿಂದ, ದ್ವೇಷಿಸುತ್ತಿದ್ದ ವೈರಿಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದರು.
ಕೀರ್ತನೆಗಳು 18 : 18 (OCVKN)
ನನ್ನ ಆಪತ್ತಿನ ದಿನದಲ್ಲಿ ನನ್ನನ್ನು ಆ ಶತ್ರುಗಳು ದಾಳಿಮಾಡಿದರು; ಆದರೆ ಯೆಹೋವ ದೇವರು ನನಗೆ ಆಧಾರವಾಗಿದ್ದರು.
ಕೀರ್ತನೆಗಳು 18 : 19 (OCVKN)
ದೇವರು ನನ್ನನ್ನು ಹೊರಗೆ ವಿಶಾಲ ಸ್ಥಳಕ್ಕೆ ತಂದರು; ನನ್ನಲ್ಲಿ ಸಂತೋಷಪಟ್ಟದ್ದರಿಂದ ನನ್ನನ್ನು ಕಾಪಾಡಿದರು.
ಕೀರ್ತನೆಗಳು 18 : 20 (OCVKN)
ಯೆಹೋವ ದೇವರು ನನ್ನ ನೀತಿಯ ಪ್ರಕಾರ ನನ್ನೊಂದಿಗೆ ವ್ಯವಹರಿಸಿದರು; ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಪ್ರತಿಫಲಕೊಟ್ಟರು.
ಕೀರ್ತನೆಗಳು 18 : 21 (OCVKN)
ಏಕೆಂದರೆ ನಾನು ಯೆಹೋವ ದೇವರ ಮಾರ್ಗಗಳನ್ನು ಕೈಗೊಂಡೆನು; ನನ್ನ ದೇವರನ್ನು ಬಿಟ್ಟುಹೋಗುವ ದುಷ್ಟತ್ವವನ್ನು ನಾನು ಮಾಡಲಿಲ್ಲ.
ಕೀರ್ತನೆಗಳು 18 : 22 (OCVKN)
ದೇವರ ಆಜ್ಞೆಗಳೆಲ್ಲಾ ನನ್ನ ಮುಂದೆ ಇಟ್ಟುಕೊಂಡೆನು; ಅವರ ತೀರ್ಪುಗಳಿಂದ ನಾನು ತೊಲಗಿಹೋಗಲಿಲ್ಲ.
ಕೀರ್ತನೆಗಳು 18 : 23 (OCVKN)
ನಾನು ಅವರ ದೃಷ್ಟಿಯಲ್ಲಿ ನಿರ್ದೋಷಿಯು ನಾನು ಪಾಪದಿಂದ ನನ್ನನ್ನು ಕಾಪಾಡಿಕೊಂಡೆನು.
ಕೀರ್ತನೆಗಳು 18 : 24 (OCVKN)
ಆದ್ದರಿಂದ ಯೆಹೋವ ದೇವರು ನನ್ನ ನೀತಿಯ ಪ್ರಕಾರವೂ ಅವರ ದೃಷ್ಟಿಯಲ್ಲಿ ನನ್ನ ಕೈಗಳ ಶುದ್ಧತ್ವದ ಪ್ರಕಾರವೂ ನನಗೆ ಪ್ರತಿಫಲಕೊಟ್ಟರು.
ಕೀರ್ತನೆಗಳು 18 : 25 (OCVKN)
ದಯವಂತರಿಗೆ ನೀವು ನಿಮ್ಮನ್ನು ದಯವಂತರಾಗಿ ತೋರಿಸುತ್ತೀರಿ. ನಿರ್ದೋಷಿಗೆ ನೀವು ನಿರ್ದೋಷಿಯಾಗಿ ತೋರಿಸುತ್ತೀರಿ.
ಕೀರ್ತನೆಗಳು 18 : 26 (OCVKN)
ಶುದ್ಧರಿಗೆ ನೀವು ಶುದ್ಧರಾಗಿ ತೋರಿಸುತ್ತೀರಿ. ವಕ್ರ ವ್ಯಕ್ತಿಗೆ ನಿಮ್ಮ ಬುದ್ಧಿವಂತಿಕೆಯನ್ನು ತೋರಿಸುತ್ತೀರಿ.
ಕೀರ್ತನೆಗಳು 18 : 27 (OCVKN)
ದೀನರನ್ನು ರಕ್ಷಿಸುತ್ತೀರಿ, ಆದರೆ ನೀವು ಗರ್ವಿಷ್ಠರ ಕಣ್ಣುಗಳನ್ನು ತಗ್ಗಿಸುತ್ತೀರಿ.
ಕೀರ್ತನೆಗಳು 18 : 28 (OCVKN)
ಯೆಹೋವ ದೇವರೇ, ನೀವು ನನ್ನ ದೀಪವನ್ನು ಬೆಳಗಿಸಿರಿ. ನನ್ನ ದೇವರು ನನ್ನ ಕತ್ತಲೆಯನ್ನು ಬೆಳಕನ್ನಾಗಿ ಮಾರ್ಪಡಿಸುವರು.
ಕೀರ್ತನೆಗಳು 18 : 29 (OCVKN)
ನಿಮ್ಮ ಸಹಾಯದಿಂದ ವೈರಿಸೇನೆಯ ವಿರುದ್ಧ ಹೋಗುವೆನು, ನನ್ನ ದೇವರೊಂದಿಗೆ ಕೋಟೆಗೋಡೆಯನ್ನೂ ಹಾರುವೆನು.
ಕೀರ್ತನೆಗಳು 18 : 30 (OCVKN)
ದೇವರ ಮಾರ್ಗವು ಪರಿಪೂರ್ಣವಾದದ್ದು, ಯೆಹೋವ ದೇವರ ವಾಕ್ಯವು ದೋಷವಿಲ್ಲದ್ದು; ತಮ್ಮಲ್ಲಿ ಆಶ್ರಯ ಹೊಂದಿದ ಎಲ್ಲರಿಗೂ ಅವರು ಗುರಾಣಿಯಾಗಿದ್ದಾರೆ.
ಕೀರ್ತನೆಗಳು 18 : 31 (OCVKN)
ಏಕೆಂದರೆ ಯೆಹೋವ ದೇವರಲ್ಲದೆ ಬೇರೆ ದೇವರು ಯಾರು? ಮತ್ತು ನಮ್ಮ ದೇವರನ್ನು ಹೊರತುಪಡಿಸಿ ರಕ್ಷಕ* ರಕ್ಷಕ ಹೀಬ್ರೂ ಭಾಷೆಯಲ್ಲಿ ಬಂಡೆ ಯಾರು?
ಕೀರ್ತನೆಗಳು 18 : 32 (OCVKN)
ಬಲದಿಂದ ನನಗೆ ಆಯುಧವನ್ನು ಧರಿಸುವಂತೆ ಮಾಡಿ, ನನ್ನ ಮಾರ್ಗವನ್ನು ಸುರಕ್ಷಿತಗೊಳಿಸುವ ದೇವರು ಅವರೇ.
ಕೀರ್ತನೆಗಳು 18 : 33 (OCVKN)
ನನ್ನ ಕಾಲುಗಳನ್ನು ಜಿಂಕೆಗಳ ಕಾಲುಗಳಂತೆ ಚುರುಕು ಮಾಡಿ, ಅವರು ನನ್ನನ್ನು ಉನ್ನತ ಸ್ಥಳಗಳ ಮೇಲೆ ನಿಲ್ಲಿಸುತ್ತಾರೆ.
ಕೀರ್ತನೆಗಳು 18 : 34 (OCVKN)
ಅವರು ಯುದ್ಧಕ್ಕಾಗಿ ನನ್ನ ಕೈಗಳಿಗೆ ತರಬೇತುಕೊಟ್ಟು, ನನ್ನ ಭುಜದಿಂದ ಕಂಚಿನ ಬಿಲ್ಲನ್ನು ಬಗ್ಗಿಸುವಂತೆ ಮಾಡುತ್ತಾರೆ.
ಕೀರ್ತನೆಗಳು 18 : 35 (OCVKN)
ನಿಮ್ಮ ರಕ್ಷಣೆಯ ಸಹಾಯವನ್ನು ನನಗೆ ಗುರಾಣಿಯನ್ನಾಗಿ ಮಾಡಿದ್ದೀರಿ. ನಿಮ್ಮ ಬಲಗೈ ನನಗೆ ಆಧಾರವಾಗಿದೆ; ನಿಮ್ಮ ಸಹಾಯವು ನನ್ನನ್ನು ಘನವಂತನನ್ನಾಗಿ ಮಾಡಿದೆ.
ಕೀರ್ತನೆಗಳು 18 : 36 (OCVKN)
ನೀವು ನನ್ನ ಕಾಲಡಿಗಳಿಗೆ ವಿಶಾಲಸ್ಥಳ ಒದಗಿಸಿದ್ದೀರಿ, ಆದುದರಿಂದ ನನ್ನ ಹಿಮ್ಮಡಿಗಳು ಜಾರುವುದಿಲ್ಲ.
ಕೀರ್ತನೆಗಳು 18 : 37 (OCVKN)
ನನ್ನ ಶತ್ರುಗಳನ್ನು ಹಿಂದಟ್ಟಿ ಹಿಡಿದಿದ್ದೇನೆ; ಅವರನ್ನು ಸಂಹರಿಸಿಬಿಡುವವರೆಗೂ ನಾನು ಹಿಂದಿರುಗಲಿಲ್ಲ.
ಕೀರ್ತನೆಗಳು 18 : 38 (OCVKN)
ಏಳಲಾರದಂತೆ ಅವರನ್ನು ತುಳಿದುಬಿಟ್ಟೆನು; ಅವರು ನನ್ನ ಪಾದಗಳ ಕೆಳಗೆ ಬಿದ್ದರು.
ಕೀರ್ತನೆಗಳು 18 : 39 (OCVKN)
ನೀವು ಯುದ್ಧಕ್ಕಾಗಿ ನನಗೆ ಬಲವನ್ನು ಆಯುಧವನ್ನಾಗಿ ನೀಡಿ, ನನ್ನ ಎದುರಾಳಿಗಳನ್ನು ನನಗೆ ಅಧೀನ ಮಾಡಿದ್ದೀರಿ.
ಕೀರ್ತನೆಗಳು 18 : 40 (OCVKN)
ನನ್ನ ಶತ್ರುಗಳು ನನಗೆ ಬೆನ್ನುಮಾಡಿ ಓಡಿಹೋಗುವಂತೆ ಮಾಡಿದಿರಿ; ನಾನು ನನ್ನ ವೈರಿಗಳನ್ನು ಸಂಹರಿಸಿದೆನು.
ಕೀರ್ತನೆಗಳು 18 : 41 (OCVKN)
ಅವರು ಸಹಾಯಕ್ಕಾಗಿ ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇರಲಿಲ್ಲ ಯೆಹೋವ ದೇವರಿಗೂ ಮೊರೆಯಿಟ್ಟರು, ಆದರೆ ಅವರೂ ಉತ್ತರ ಕೊಡಲಿಲ್ಲ.
ಕೀರ್ತನೆಗಳು 18 : 42 (OCVKN)
ಅವರನ್ನು ಗಾಳಿಯಿಂದ ಬಡಿಸಿಕೊಂಡು ಹೋಗುವ ಧೂಳಿನಂತೆ ಪುಡಿಪುಡಿ ಮಾಡಿದೆನು; ಬೀದಿಯಲ್ಲಿನ ಕೆಸರು ಎಂಬಂತೆ ತುಳಿದು ಎಸೆದುಬಿಟ್ಟೆನು.
ಕೀರ್ತನೆಗಳು 18 : 43 (OCVKN)
ನೀವು ನನ್ನ ಜನರ ಒಳಕಲಹದಿಂದ ನನ್ನನ್ನು ತಪ್ಪಿಸಿದ್ದೀರಿ; ನನ್ನನ್ನು ಜನಾಂಗಗಳಿಗೆ ನಾಯಕನನ್ನಾಗಿ ಮಾಡಿರುವಿರಿ. ನಾನು ಅರಿಯದ ಜನರು ನನಗೆ ವಿಧೇಯರಾಗುವರು.
ಕೀರ್ತನೆಗಳು 18 : 44 (OCVKN)
ವಿದೇಶಿಯರು ನನಗೆ ಅಧೀನರಾದರು; ನನ್ನ ಸುದ್ದಿ ಕೇಳಿದ ಕೂಡಲೇ ನನಗೆ ವಿಧೇಯರಾಗುವರು.
ಕೀರ್ತನೆಗಳು 18 : 45 (OCVKN)
ಅವರು ಭಯಗೊಳ್ಳುವರು; ನಡುಗುತ್ತಾ ತಮ್ಮ ಕೋಟೆಗಳಿಂದ ಹೊರಬರುವರು.
ಕೀರ್ತನೆಗಳು 18 : 46 (OCVKN)
ಯೆಹೋವ ದೇವರು ಜೀವಿಸುವ ದೇವರು! ನನ್ನ ಆಶ್ರಯವಾಗಿರುವ ದೇವರಿಗೆ ಸ್ತೋತ್ರವಾಗಲಿ. ನನ್ನ ರಕ್ಷಕರಾದ ದೇವರು ಮಹಿಮೆ ಹೊಂದಲಿ.
ಕೀರ್ತನೆಗಳು 18 : 47 (OCVKN)
ದೇವರೇ ನನಗೋಸ್ಕರ ಮುಯ್ಯಿಗೆ ಮುಯ್ಯಿ ತೀರಿಸುವವರೂ ಜನರನ್ನು ನನಗೆ ಅಧೀನಪಡಿಸುವವರೂ ಆಗಿದ್ದಾರೆ.
ಕೀರ್ತನೆಗಳು 18 : 48 (OCVKN)
ದೇವರು ನನ್ನ ಶತ್ರುಗಳಿಂದ ನನ್ನನ್ನು ಬಿಡಿಸುತ್ತಾರೆ; ನೀವು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀರಿ, ಬಲಾತ್ಕಾರ ಮಾಡುವವನಿಂದ ನನ್ನನ್ನು ರಕ್ಷಿಸುತ್ತೀರಿ.
ಕೀರ್ತನೆಗಳು 18 : 49 (OCVKN)
ಆದ್ದರಿಂದ ಯೆಹೋವ ದೇವರೇ, ನಾನು ಜನಾಂಗಗಳಲ್ಲಿ ನಿಮ್ಮನ್ನು ಕೊಂಡಾಡುವೆನು, ನಿಮ್ಮನ್ನು ಕೊಂಡಾಡಿ ನಿಮ್ಮ ಹೆಸರನ್ನು ಕೀರ್ತಿಸುವೆನು.
ಕೀರ್ತನೆಗಳು 18 : 50 (OCVKN)
ದೇವರು ತಮ್ಮ ಅರಸನಿಗೆ ವಿಶೇಷ ರಕ್ಷಣೆಯನ್ನು ಕೊಡುವರು; ತಮ್ಮ ಅಭಿಷಿಕ್ತನಿಗೂ ದಾವೀದನಿಗೂ ಅವನ ಸಂತತಿಯವರಿಗೂ ಒಡಂಬಡಿಕೆಯ ಪ್ರೀತಿಯನ್ನು ಯುಗಯುಗಕ್ಕೂ ಅನುಗ್ರಹಿಸುವರು.
❮
❯