ಕೀರ್ತನೆಗಳು 19 : 1 (OCVKN)
ಆಕಾಶವು ದೇವರ ಮಹಿಮೆಯನ್ನು ಸಾರುತ್ತದೆ; ಅಂತರಿಕ್ಷವು ಅವರ ಕೈಕೆಲಸವನ್ನು ಘೋಷಿಸುತ್ತದೆ.
ಕೀರ್ತನೆಗಳು 19 : 2 (OCVKN)
ಹಗಲೆಲ್ಲಾ ಅವು ಮಾತನಾಡುತ್ತವೆ; ರಾತ್ರಿಯೆಲ್ಲಾ ಅವು ಅರಿವನ್ನು ಪ್ರಕಟಿಸುತ್ತವೆ.
ಕೀರ್ತನೆಗಳು 19 : 3 (OCVKN)
ಅವುಗಳಿಗೆ ಮಾತೂ ಇಲ್ಲ, ಪದವೂ ಇಲ್ಲ, ಅವುಗಳ ಸ್ವರವು ಕೇಳುವುದೂ ಇಲ್ಲ.
ಕೀರ್ತನೆಗಳು 19 : 4 (OCVKN)
ಅವುಗಳ ಧ್ವನಿ ಭೂಲೋಕವೆಲ್ಲಾ ಹರಡಿವೆ; ಅವುಗಳ ಮಾತುಗಳೋ ಲೋಕದ ಕಟ್ಟಕಡೆಯವರೆಗೂ ಹೋಗುತ್ತವೆ; ಆಕಾಶದಲ್ಲಿ ದೇವರು ಸೂರ್ಯನಿಗೆ ಗುಡಾರ ಹಾಕಿದ್ದಾರೆ.
ಕೀರ್ತನೆಗಳು 19 : 5 (OCVKN)
ಸೂರ್ಯನು ಮದುಮಗನಂತೆ ತನ್ನ ಕೊಠಡಿಯಿಂದ ಹೊರಟುಬಂದು, ಪಂದ್ಯಕ್ಕೆ ಹರ್ಷದಿಂದ ಓಡುವ ಪರಾಕ್ರಮಶಾಲಿಯಂತೆ ಇದ್ದಾನೆ.
ಕೀರ್ತನೆಗಳು 19 : 6 (OCVKN)
ಆಕಾಶದ ಒಂದು ಕಡೆಯಿಂದ ಉದಯಿಸಿ ಮತ್ತೊಂದು ಕಡೆಯವರೆಗೆ ಹೊರಟು ಪ್ರಯಾಣಿಸುತ್ತಾನೆ; ಅದರ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ.
ಕೀರ್ತನೆಗಳು 19 : 7 (OCVKN)
ಯೆಹೋವ ದೇವರ ನಿಯಮವು ಸಂಪೂರ್ಣವಾಗಿದ್ದು, ಪ್ರಾಣಕ್ಕೆ ಜೀವಕರವಾಗಿದೆ; ಯೆಹೋವ ದೇವರ ಶಾಸನಗಳು ವಿಶ್ವಾಸಪಾತ್ರವಾಗಿದ್ದು, ಮುಗ್ಧನನ್ನು ಜ್ಞಾನಿಗಳನ್ನಾಗಿ ಮಾಡುತ್ತವೆ.
ಕೀರ್ತನೆಗಳು 19 : 8 (OCVKN)
ಯೆಹೋವ ದೇವರ ಸೂತ್ರಗಳು ನೀತಿಯುಳ್ಳವುಗಳಾಗಿದ್ದು ಅವು ಹೃದಯಕ್ಕೆ ಆನಂದಕರವಾಗಿವೆ; ಯೆಹೋವ ದೇವರ ಆಜ್ಞೆಗಳು ಸ್ಪಷ್ಟವಾಗಿದ್ದು, ಕಣ್ಣುಗಳಿಗೆ ಪ್ರಕಾಶಕರವಾಗಿವೆ.
ಕೀರ್ತನೆಗಳು 19 : 9 (OCVKN)
ಯೆಹೋವ ದೇವರ ಭಯವು ಶುದ್ಧವಾಗಿದ್ದು, ಎಂದೆಂದಿಗೂ ಶಾಶ್ವತವಾಗಿದೆ. ಯೆಹೋವ ದೇವರ ತೀರ್ಪುಗಳು ಸತ್ಯವಾಗಿದ್ದು, ಅವೆಲ್ಲವೂ ನೀತಿಯುಳ್ಳದ್ದಾಗಿವೆ.
ಕೀರ್ತನೆಗಳು 19 : 10 (OCVKN)
ಅವು ಬಂಗಾರಕ್ಕಿಂತಲೂ, ಅಪರಂಜಿಗಿಂತಲೂ ಅಮೂಲ್ಯವಾಗಿವೆ; ಅವು ಜೇನಿಗಿಂತಲೂ, ಅಪ್ಪಟ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.
ಕೀರ್ತನೆಗಳು 19 : 11 (OCVKN)
ನಿಮ್ಮ ಸೇವಕನು ಅವುಗಳಿಂದ ಎಚ್ಚರಿಕೆ ಪಡೆಯುತ್ತಾನೆ; ಅವುಗಳನ್ನು ಕೈಗೊಳ್ಳುವುದರಲ್ಲಿ ದೊಡ್ಡ ಪ್ರತಿಫಲವುಂಟು.
ಕೀರ್ತನೆಗಳು 19 : 12 (OCVKN)
ತಮ್ಮ ತಪ್ಪುಗಳನ್ನು ತಿಳಿದುಕೊಳ್ಳಲು ಯಾರಿಗೆ ಸಾಧ್ಯ? ನನ್ನ ಗುಪ್ತ ಪಾಪಗಳನ್ನು ಕ್ಷಮಿಸು.
ಕೀರ್ತನೆಗಳು 19 : 13 (OCVKN)
ಬೇಕುಬೇಕೆಂದು ಪಾಪಮಾಡದಂತೆ ನಿಮ್ಮ ಸೇವಕನನ್ನು ಕಾಪಾಡು; ಅಂಥ ಪಾಪಗಳು ನನ್ನ ಮೇಲೆ ಆಳಿಕೆ ಮಾಡದಿರಲಿ. ಆಗ ನಾನು ತಪ್ಪಿಲ್ಲದವನಾಗಿ, ಮಹಾಪರಾಧದಿಂದ ಬಿಡುಗಡೆಯಾಗಿರುವೆನು.
ಕೀರ್ತನೆಗಳು 19 : 14 (OCVKN)
ಯೆಹೋವ ದೇವರೇ, ನನ್ನ ಬಂಡೆಯೇ, ನನ್ನ ವಿಮೋಚಕರೇ, ನನ್ನ ಬಾಯಿಯ ಮಾತುಗಳೂ ನನ್ನ ಹೃದಯದ ಧ್ಯಾನವೂ ನಿಮ್ಮ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿರಲಿ.
❮
❯
1
2
3
4
5
6
7
8
9
10
11
12
13
14