ಕೀರ್ತನೆಗಳು 2 : 1 (OCVKN)
ರಾಷ್ಟ್ರಗಳು ಒಳಸಂಚು ಮಾಡುವುದೂ ಜನಾಂಗಗಳು ವ್ಯರ್ಥವಾಗಿ ಕುತಂತ್ರ ಮಾಡುವುದೂ ಏಕೆ?
ಕೀರ್ತನೆಗಳು 2 : 2 (OCVKN)
ಯೆಹೋವ ದೇವರಿಗೂ ಅವರ ಅಭಿಷಿಕ್ತನಿಗೂ ವಿರೋಧವಾಗಿ, ಭೂಲೋಕದ ಅರಸರು ನಿಂತುಕೊಳ್ಳುತ್ತಾರೆ. ಅಧಿಪತಿಗಳೂ ಒಂದಾಗಿ ಕೂಡಿಕೊಳ್ಳುತ್ತಿರುವರು.
ಕೀರ್ತನೆಗಳು 2 : 3 (OCVKN)
“ಅವರು ಹಾಕಿದ ಬೇಡಿಗಳನ್ನು ಮುರಿದು ಬಂಧಗಳನ್ನು ಹರಿದು ಬೀಸಾಡೋಣ,” ಎನ್ನುತ್ತಾರೆ.
ಕೀರ್ತನೆಗಳು 2 : 4 (OCVKN)
ಪರಲೋಕದಲ್ಲಿ ಕೂತಿರುವ ದೇವರು ಅದಕ್ಕೆ ನಗುವರು, ಕರ್ತದೇವರು ಅವರನ್ನು ಕಂಡು ಅಪಹಾಸ್ಯ ಮಾಡುವರು.
ಕೀರ್ತನೆಗಳು 2 : 5 (OCVKN)
ಕರ್ತದೇವರು ತಮ್ಮ ಕೋಪದಿಂದ ಅವರನ್ನು ಗದರಿಸುತ್ತಾ, ತಮ್ಮ ಬೇಸರದಿಂದ ಅವರನ್ನು ಕಳವಳಪಡಿಸಿ ಹೀಗೆ ಹೇಳುವರು,
ಕೀರ್ತನೆಗಳು 2 : 6 (OCVKN)
“ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.”
ಕೀರ್ತನೆಗಳು 2 : 7 (OCVKN)
ನಾನು ಯೆಹೋವ ದೇವರ ತೀರ್ಪನ್ನು ಹೀಗೆ ಪ್ರಕಟಿಸುವೆನು: ಅವರು ನನಗೆ ಹೇಳಿದ್ದು, “ನೀನು ನನ್ನ ಪುತ್ರನು; ಇಂದು ನಾನು ನಿನ್ನ ತಂದೆಯಾಗಿದ್ದೇನೆ.
ಕೀರ್ತನೆಗಳು 2 : 8 (OCVKN)
ನನ್ನನ್ನು ಕೇಳು, ಆಗ ನಾನು ರಾಷ್ಟ್ರಗಳನ್ನು ನಿನ್ನ ವಾರಸಾಗಿಯೂ, ಭೂಮಿಯ ಕಟ್ಟಕಡೆಯವರೆಗೂ ಇರುವ ದೇಶಗಳನ್ನೂ ನಿಮ್ಮ ಸೊತ್ತಾಗಿಯೂ ಕೊಡುವೆನು.
ಕೀರ್ತನೆಗಳು 2 : 9 (OCVKN)
ಕಬ್ಬಿಣದ ಗದೆಯಿಂದ ನೀನು ಅವರನ್ನು ದಂಡಿಸಿ, ಮಣ್ಣಿನ ಮಡಕೆಯಂತೆ ಚೂರುಚೂರಾಗಿ ಅವರನ್ನು ಒಡೆದುಹಾಕುವೆ.”
ಕೀರ್ತನೆಗಳು 2 : 10 (OCVKN)
ಆದ್ದರಿಂದ, ರಾಜರುಗಳೇ, ಈಗ ಜ್ಞಾನವಂತರಾಗಿರಿ. ಭೂಲೋಕದ ಅಧಿಕಾರಿಗಳೇ, ಎಚ್ಚರಿಕೆಯಿಂದಿರಿ.
ಕೀರ್ತನೆಗಳು 2 : 11 (OCVKN)
ಭಯಭಕ್ತಿಯಿಂದ ಯೆಹೋವ ದೇವರ ಸೇವೆಮಾಡಿರಿ, ನಡುಗುತ್ತಾ ಅವರ ಆಳ್ವಿಕೆಯಲ್ಲಿ ಉಲ್ಲಾಸಪಡಿರಿ.
ಕೀರ್ತನೆಗಳು 2 : 12 (OCVKN)
ಯೆಹೋವ ದೇವರು ಬೇಸರಗೊಂಡು, ನೀವು ನಿಮ್ಮ ಮಾರ್ಗದಲ್ಲಿ ನಾಶವಾಗದಂತೆ ಅವರ ಮಗನನ್ನು ಮುದ್ದಿಸಿರಿ. ಏಕೆಂದರೆ ದೇವರ ರೋಷವು ಕ್ಷಣಮಾತ್ರದಲ್ಲಿ ಜ್ವಾಲಿಸುವುದು. ದೇವರ ಆಶ್ರಯ ಪಡೆಯುವವರೆಲ್ಲಾ ಧನ್ಯರು.

1 2 3 4 5 6 7 8 9 10 11 12