ಕೀರ್ತನೆಗಳು 21 : 1 (OCVKN)
ಯೆಹೋವ ದೇವರೇ, ನಿಮ್ಮ ಬಲದಲ್ಲಿ ಅರಸನು ಆನಂದಿಸುತ್ತಾನೆ; ನೀವು ಆತನಿಗೆ ಕೊಡುವ ಜಯಗಳಲ್ಲಿ ಎಷ್ಟೋ ಅಧಿಕವಾಗಿ ಉಲ್ಲಾಸಪಡುತ್ತಾನೆ!
ಕೀರ್ತನೆಗಳು 21 : 2 (OCVKN)
ಅರಸನ ಹೃದಯದ ಆಶೆಯನ್ನು ನೀವು ಈಡೇರಿಸಿದ್ದೀರಿ; ಆತನ ತುಟಿಗಳ ಬಿನ್ನಹವನ್ನು ಹಿಂದಿಟ್ಟುಕೊಳ್ಳಲಿಲ್ಲ.
ಕೀರ್ತನೆಗಳು 21 : 3 (OCVKN)
ನೀವು ಉತ್ತಮ ಆಶೀರ್ವಾದಗಳಿಂದ ಅರಸನನ್ನು ಸ್ವಾಗತಿಸಿದ್ದೀರಿ; ಚೊಕ್ಕ ಬಂಗಾರದ ಕಿರೀಟವನ್ನು ಆತನ ತಲೆಯ ಮೇಲಿಟ್ಟಿದ್ದೀರಿ.
ಕೀರ್ತನೆಗಳು 21 : 4 (OCVKN)
ಜೀವವನ್ನು ಅರಸನು ನಿಮ್ಮಿಂದ ಬೇಡಲು, ನೀವು ಆತನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟಿದ್ದೀರಿ.
ಕೀರ್ತನೆಗಳು 21 : 5 (OCVKN)
ನೀವು ಕೊಟ್ಟ ಜಯಗಳ ಮೂಲಕ ಅರಸನ ಪ್ರಭಾವ ಹೆಚ್ಚಾಗಿದೆ; ಗೌರವವನ್ನೂ ಘನತೆಯನ್ನೂ ಆತನ ಮೇಲೆ ಇಟ್ಟಿರುತ್ತೀರಿ.
ಕೀರ್ತನೆಗಳು 21 : 6 (OCVKN)
ನೀವು ನಿಶ್ಚಯವಾಗಿ ಅರಸನಿಗೆ ನಿತ್ಯ ಆಶೀರ್ವಾದ ದಯಪಾಲಿಸಿದ್ದೀರಿ; ನಿಮ್ಮ ಸನ್ನಿಧಿಯಲ್ಲಿ ಆತನು ಅಧಿಕ ಆನಂದಪಡುವಂತೆ ಮಾಡಿದ್ದೀರಿ.
ಕೀರ್ತನೆಗಳು 21 : 7 (OCVKN)
ಏಕೆಂದರೆ ಅರಸನು ಯೆಹೋವ ದೇವರಲ್ಲಿ ಭರವಸೆ ಇಡುತ್ತಾನೆ; ಮಹೋನ್ನತರ ಒಡಂಬಡಿಕೆಯ ಪ್ರೀತಿಯಿಂದ ಅರಸನು ಕದಲದೆ ಇರುವನು.
ಕೀರ್ತನೆಗಳು 21 : 8 (OCVKN)
ನಿಮ್ಮ ಹಸ್ತವು ನಿಮ್ಮ ಶತ್ರುಗಳನ್ನೆಲ್ಲಾ ವಶಪಡಿಸಿಕೊಳ್ಳುವುದು. ನಿಮ್ಮ ಬಲಗೈ ನಿಮ್ಮ ವೈರಿಗಳನ್ನು ಸಿಕ್ಕಿಸುವುದು.
ಕೀರ್ತನೆಗಳು 21 : 9 (OCVKN)
ನೀವು ಬರುವ ಕಾಲದಲ್ಲಿ ಅವರನ್ನು ಅಗ್ನಿಕುಂಡದಂತೆ ದಹಿಸಿಬಿಡುವಿರಿ. ಯೆಹೋವ ದೇವರು ತಮ್ಮ ಬೇಸರದಿಂದ ಅವರನ್ನು ದಂಡಿಸಿಬಿಡುವರು; ಬೆಂಕಿಯು ಅವರನ್ನು ಭಸ್ಮ ಮಾಡುವುದು.
ಕೀರ್ತನೆಗಳು 21 : 10 (OCVKN)
ಅವರ ವಂಶವನ್ನು ಭೂಲೋಕದೊಳಗಿಂದಲೂ ಅವರ ಸಂತತಿಯನ್ನು ಮಾನವರೊಳಗಿಂದಲೂ ಉಳಿಯದಿರಲಿ.
ಕೀರ್ತನೆಗಳು 21 : 11 (OCVKN)
ಅವರು ನಿಮಗೆ ವಿರೋಧವಾಗಿ ಕೇಡನ್ನು ಯತ್ನಿಸಿದರು, ಅವರು ಕುಯುಕ್ತಿಯನ್ನು ಕಲ್ಪಿಸಿದರೂ ಅದು ಕೈಗೂಡದಿರಲಿ.
ಕೀರ್ತನೆಗಳು 21 : 12 (OCVKN)
ನಿಮ್ಮ ಬಿಲ್ಲನ್ನು ಅವರಿಗೆ ವಿರೋಧವಾಗಿ ಎತ್ತುವಾಗ ಅವರು ನಿಮಗೆ ಬೆನ್ನುಮಾಡಿ ಓಡಿಹೋಗಲಿ.
ಕೀರ್ತನೆಗಳು 21 : 13 (OCVKN)
ಯೆಹೋವ ದೇವರೇ, ನಿಮ್ಮ ಬಲದಲ್ಲಿ ಉನ್ನತರಾಗಿದ್ದೀರಿ, ನಾವು ನಿಮ್ಮ ಪರಾಕ್ರಮವನ್ನು ಹಾಡಿ ಕೀರ್ತಿಸುವೆವು.
❮
❯
1
2
3
4
5
6
7
8
9
10
11
12
13