ಕೀರ್ತನೆಗಳು 25 : 1 (OCVKN)
ಯೆಹೋವ ದೇವರೇ, ನಿಮ್ಮಲ್ಲಿ ಭರವಸೆಯಿಟ್ಟಿದ್ದೇನೆ.
ಕೀರ್ತನೆಗಳು 25 : 2 (OCVKN)
ನನ್ನ ದೇವರೇ, ನಾನು ನಿಮ್ಮಲ್ಲಿ ಭರವಸೆಯಿಟ್ಟಿದ್ದೇನೆ; ನಾನು ನಾಚಿಕೆಪಡದಂತೆ ಮಾಡಿರಿ; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ.
ಕೀರ್ತನೆಗಳು 25 : 3 (OCVKN)
ನಿಮ್ಮನ್ನು ನಿರೀಕ್ಷಿಸುವವರಲ್ಲಿ ಯಾರೂ ನಾಚಿಕೆಪಡದಿರಲಿ; ನಿಷ್ಕಾರಣವಾಗಿ ವಂಚನೆ ಮಾಡುವವರು ನಾಚಿಕೆಪಡಲಿ.
ಕೀರ್ತನೆಗಳು 25 : 4 (OCVKN)
ಯೆಹೋವ ದೇವರೇ, ನಿಮ್ಮ ಮಾರ್ಗಗಳನ್ನು ನನಗೆ ತೋರಿಸಿರಿ; ನಿಮ್ಮ ದಾರಿಗಳನ್ನು ನನಗೆ ಕಲಿಸಿರಿ.
ಕೀರ್ತನೆಗಳು 25 : 5 (OCVKN)
ನಿಮ್ಮ ಸತ್ಯದಲ್ಲಿ ಮಾರ್ಗದರ್ಶನ ನೀಡಿ ನನಗೆ ಬೋಧಿಸಿರಿ; ಏಕೆಂದರೆ ನೀವು ನನ್ನ ರಕ್ಷಕ ಆಗಿರುವ ದೇವರಾಗಿದ್ದೀರಿ; ನಿಮ್ಮನ್ನು ನಾನು ದಿನವೆಲ್ಲಾ ನಿರೀಕ್ಷಿಸುತ್ತಿದ್ದೇನೆ.
ಕೀರ್ತನೆಗಳು 25 : 6 (OCVKN)
ಯೆಹೋವ ದೇವರೇ, ಆದಿಯಿಂದಿರುವ ನಿಮ್ಮ ಅನುಕಂಪವನ್ನೂ ನಿಮ್ಮ ಪ್ರೀತಿಯನ್ನೂ, ಕರುಣೆಯನ್ನೂ ಜ್ಞಾಪಕಮಾಡಿಕೊಳ್ಳಿರಿ.
ಕೀರ್ತನೆಗಳು 25 : 7 (OCVKN)
ಯೆಹೋವ ದೇವರೇ, ನನ್ನ ಯೌವನದ ಪಾಪಗಳನ್ನೂ, ನನ್ನ ತಿರುಗಿ ಬೀಳುವಿಕೆಗಳನ್ನೂ ಜ್ಞಾಪಕ ಮಾಡಿಕೊಳ್ಳಬೇಡಿರಿ. ನೀವು ಒಳ್ಳೆಯವರಾಗಿರುವುದರಿಂದ ನಿಮ್ಮ ಪ್ರೀತಿಯ ಪ್ರಕಾರ ನನ್ನನ್ನು ಜ್ಞಾಪಕಮಾಡಿಕೊಳ್ಳಿರಿ.
ಕೀರ್ತನೆಗಳು 25 : 8 (OCVKN)
ಯೆಹೋವ ದೇವರು ಒಳ್ಳೆಯವರೂ ನ್ಯಾಯವುಳ್ಳವರೂ ಆಗಿದ್ದಾರೆ; ಆದ್ದರಿಂದ ಅವರು ಪಾಪಿಗಳಿಗೆ ತಮ್ಮ ಮಾರ್ಗಗಳನ್ನು ಬೋಧಿಸುತ್ತಾರೆ.
ಕೀರ್ತನೆಗಳು 25 : 9 (OCVKN)
ದೀನರನ್ನು ನ್ಯಾಯ ಮಾರ್ಗದಲ್ಲಿ ನಡೆಸಿ, ದೀನರಿಗೆ ತಮ್ಮ ಮಾರ್ಗವನ್ನು ಬೋಧಿಸುತ್ತಾರೆ.
ಕೀರ್ತನೆಗಳು 25 : 10 (OCVKN)
ಯೆಹೋವ ದೇವರ ಒಡಂಬಡಿಕೆಯನ್ನು ಕೈಗೊಳ್ಳುವವರಿಗೆ ಅವರ ದಾರಿಯೆಲ್ಲವು ಪ್ರೀತಿ, ಸತ್ಯದಿಂದ ತುಂಬಿರುತ್ತವೆ.
ಕೀರ್ತನೆಗಳು 25 : 11 (OCVKN)
ನನ್ನ ಅನ್ಯಾಯವು ಬಹು ಘೋರವಾಗಿದ್ದರೂ ನಿಮ್ಮ ಹೆಸರಿನ ನಿಮಿತ್ತ ಯೆಹೋವ ದೇವರೇ ನನ್ನನ್ನು ಮನ್ನಿಸಿರಿ.
ಕೀರ್ತನೆಗಳು 25 : 12 (OCVKN)
ಯಾವನು ಯೆಹೋವ ದೇವರಿಗೆ ಭಯಪಡುವನೋ, ಅಂಥವನಿಗೆ ಅವರು ಆಯ್ದುಕೊಳ್ಳತಕ್ಕ ಮಾರ್ಗವನ್ನು ಬೋಧಿಸುವರು.
ಕೀರ್ತನೆಗಳು 25 : 13 (OCVKN)
ಅಂಥವರು ಜೀವಮಾನವೆಲ್ಲಾ ಸಫಲರಾಗಿರುವರು. ಅಂಥವರ ಸಂತಾನವು ದೇಶವನ್ನು ಸ್ವಾಧೀನ ಮಾಡಿಕೊಳ್ಳುವುದು.
ಕೀರ್ತನೆಗಳು 25 : 14 (OCVKN)
ಯೆಹೋವ ದೇವರ ರಹಸ್ಯವು ಅವರಿಗೆ ಭಯಪಡುವವರೊಂದಿಗೆ ಇರುವುದು; ತಮ್ಮ ಒಡಂಬಡಿಕೆಯನ್ನು ಅವರು ಅಂಥವರಿಗೇ ತಿಳಿಸುವರು.
ಕೀರ್ತನೆಗಳು 25 : 15 (OCVKN)
ನನ್ನ ಕಣ್ಣುಗಳು ಯಾವಾಗಲೂ ಯೆಹೋವ ದೇವರ ಕಡೆಗೆ ಇರುತ್ತವೆ; ಏಕೆಂದರೆ ಅವರೇ ನನ್ನ ಪಾದಗಳನ್ನು ಬಲೆಯಿಂದ ಬಿಡಿಸುವವರು.
ಕೀರ್ತನೆಗಳು 25 : 16 (OCVKN)
ನೀವು ನನ್ನ ಕಡೆಗೆ ತಿರುಗಿ ನನ್ನನ್ನು ಕರುಣಿಸಿರಿ; ನಾನು ಒಬ್ಬಂಟಿಗನಾಗಿಯೂ ಬಾಧೆಪಡುವವನಾಗಿಯೂ ಇದ್ದೇನೆ.
ಕೀರ್ತನೆಗಳು 25 : 17 (OCVKN)
ನನ್ನ ಹೃದಯದ ಕಷ್ಟಗಳನ್ನು ಪರಿಹರಿಸಿರಿ; ನೀವು ನನ್ನ ಸಂಕಟಗಳಿಂದ ನನ್ನನ್ನು ಬಿಡಿಸಿರಿ.
ಕೀರ್ತನೆಗಳು 25 : 18 (OCVKN)
ನನ್ನ ಬಾಧೆಯನ್ನೂ ವ್ಯಥೆಯನ್ನೂ ನೋಡಿರಿ; ನನ್ನ ಪಾಪಗಳನ್ನೆಲ್ಲಾ ತೆಗೆದುಹಾಕಿರಿ.
ಕೀರ್ತನೆಗಳು 25 : 19 (OCVKN)
ನನ್ನ ಶತ್ರುಗಳನ್ನು ನೋಡಿರಿ, ಅವರು ಹೆಚ್ಚಾಗಿದ್ದಾರೆ; ತೀವ್ರ ಹಗೆಯಿಂದ ಅವರು ನನ್ನನ್ನು ದ್ವೇಷಿಸುತ್ತಾರೆ.
ಕೀರ್ತನೆಗಳು 25 : 20 (OCVKN)
ನನ್ನ ಪ್ರಾಣವನ್ನು ಕಾಪಾಡಿ, ನನ್ನನ್ನು ಬಿಡಿಸಿರಿ; ನಾನು ನಾಚಿಕೆಪಡದಂತೆ ಮಾಡಿರಿ, ಏಕೆಂದರೆ ನಾನು ನಿಮ್ಮಲ್ಲಿ ಆಶ್ರಯಪಡೆದಿದ್ದೇನೆ.
ಕೀರ್ತನೆಗಳು 25 : 21 (OCVKN)
ಯಥಾರ್ಥತೆಯೂ ನಿಷ್ಕಪಟವೂ ನನ್ನನ್ನು ಕಾಯಲಿ, ಏಕೆಂದರೆ ನನ್ನ ನಿರೀಕ್ಷೆಯು ನಿಮ್ಮ ಮೇಲೆ ಇದೆ.
ಕೀರ್ತನೆಗಳು 25 : 22 (OCVKN)
ದೇವರೇ, ಇಸ್ರಾಯೇಲರನ್ನು ಅವರ ಎಲ್ಲಾ ಇಕ್ಕಟ್ಟುಗಳೊಳಗಿಂದ ವಿಮೋಚಿಸಿರಿ.
❮
❯
1
2
3
4
5
6
7
8
9
10
11
12
13
14
15
16
17
18
19
20
21
22