ಕೀರ್ತನೆಗಳು 26 : 1 (OCVKN)
ಯೆಹೋವ ದೇವರೇ, ನನ್ನನ್ನು ನಿರ್ದೋಷನನ್ನಾಗಿ ನಿರ್ಣಯಿಸಿರಿ, ನಾನು ದೋಷವಿಲ್ಲದ ಜೀವನ ನಡೆಸಿದ್ದೇನೆ; ನಾನು ಯೆಹೋವ ದೇವರಲ್ಲಿ ಕದಲದೆ ಭರವಸೆ ಇಟ್ಟಿದ್ದೇನೆ.
ಕೀರ್ತನೆಗಳು 26 : 2 (OCVKN)
ಯೆಹೋವ ದೇವರೇ, ನನ್ನನ್ನು ಶೋಧಿಸಿ, ಪರೀಕ್ಷಿಸಿರಿ; ನನ್ನ ಅಂತರಿಂದ್ರಿಯಗಳನ್ನೂ ನನ್ನ ಹೃದಯವನ್ನೂ ಶೋಧಿಸಿರಿ.
ಕೀರ್ತನೆಗಳು 26 : 3 (OCVKN)
ನಿಮ್ಮ ಒಡಂಬಡಿಕೆಯ ಪ್ರೀತಿಯು ಯಾವಾಗಲೂ ನನ್ನ ಮನಸ್ಸು ತುಂಬ ಇದೆ; ನಿಮ್ಮ ನಂಬಿಗಸ್ತಿಕೆಯಲ್ಲಿ ನಾನು ಬಾಳುತ್ತಿದ್ದೇನೆ.
ಕೀರ್ತನೆಗಳು 26 : 4 (OCVKN)
ಮೋಸಗಾರರ ಸಂಗಡ ನಾನು ಕುಳಿತುಕೊಳ್ಳಲಿಲ್ಲ; ವಂಚಕರ ಸಂಗಡ ನಾನು ಹೋಗುವುದಿಲ್ಲ.
ಕೀರ್ತನೆಗಳು 26 : 5 (OCVKN)
ದುರ್ಮಾರ್ಗಿಗಳ ಸಭೆಯನ್ನು ದ್ವೇಷಿಸಿದ್ದೇನೆ; ದುಷ್ಟರ ಸಂಗಡ ಕುಳಿತುಕೊಳ್ಳುವುದಿಲ್ಲ.
ಕೀರ್ತನೆಗಳು 26 : 6 (OCVKN)
ನನ್ನ ಕೈಗಳನ್ನು ನಿರ್ಮಲವಾಗಿ ತೊಳೆದುಕೊಂಡು, ಯೆಹೋವ ದೇವರೇ, ನಿಮ್ಮ ಬಲಿಪೀಠವನ್ನು ಸುತ್ತುತ್ತಾ,
ಕೀರ್ತನೆಗಳು 26 : 7 (OCVKN)
ಸ್ತೋತ್ರ ಧ್ವನಿಯೆತ್ತಿ ಸಾರುತ್ತಾ ನಿಮ್ಮ ಅದ್ಭುತಗಳನ್ನೆಲ್ಲಾ ತಿಳಿಸುವೆನು.
ಕೀರ್ತನೆಗಳು 26 : 8 (OCVKN)
ಯೆಹೋವ ದೇವರೇ, ನೀವು ವಾಸಿಸುವ ಆಲಯವನ್ನೂ, ನಿಮ್ಮ ಮಹಿಮೆಯ ನಿವಾಸವನ್ನೂ ಪ್ರೀತಿಸುತ್ತೇನೆ.
ಕೀರ್ತನೆಗಳು 26 : 9 (OCVKN)
ಪಾಪಿಗಳ ಸಂಗಡ ನನ್ನ ಪ್ರಾಣವನ್ನೂ, ರಕ್ತಸುರಿಸುವವರ ಸಂಗಡ ನನ್ನ ಜೀವವನ್ನೂ ತೆಗೆಯಬೇಡಿರಿ.
ಕೀರ್ತನೆಗಳು 26 : 10 (OCVKN)
ಅವರ ಕೈಗಳಲ್ಲಿ ಕೇಡು ಇದೆ; ಅವರ ಬಲಗೈ ಲಂಚಗಳಿಂದ ತುಂಬಿದೆ.
ಕೀರ್ತನೆಗಳು 26 : 11 (OCVKN)
ನಾನಾದರೋ ನನ್ನ ಯಥಾರ್ಥತೆಯಲ್ಲಿ ನಡೆಯುತ್ತೇನೆ; ನನ್ನನ್ನು ವಿಮೋಚಿಸಿರಿ; ನನಗೆ ಕರುಣೆಯುಳ್ಳವರಾಗಿರಿ.
ಕೀರ್ತನೆಗಳು 26 : 12 (OCVKN)
ನನ್ನ ಪಾದವು ಸಮ ನೆಲದಲ್ಲಿ ನಿಂತಿದೆ; ನಾನು ಮಹಾಸಭೆಯಲ್ಲಿ ಯೆಹೋವ ದೇವರನ್ನು ಸ್ತುತಿಸುವೆನು.

1 2 3 4 5 6 7 8 9 10 11 12