ಕೀರ್ತನೆಗಳು 28 : 1 (OCVKN)
ಯೆಹೋವ ದೇವರೇ, ನೀವು ನನಗೆ ಸಂರಕ್ಷಿಸುವ ಬಂಡೆಯಾಗಿದ್ದೀರಿ. ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ, ಮೌನವಾಗಿರಬೇಡಿರಿ; ನೀವು ಸುಮ್ಮನಿದ್ದರೆ ನಾನು ಸಮಾಧಿಯಲ್ಲಿದ್ದವನಿಗೆ ಸಮಾನನಾಗುವೆನು.
ಕೀರ್ತನೆಗಳು 28 : 2 (OCVKN)
ನಾನು ನಿಮಗೆ ಮೊರೆಯಿಡುವಾಗ, ನನ್ನ ಕೈಗಳನ್ನು ನಿಮ್ಮ ಮಹಾಪರಿಶುದ್ಧ ಸ್ಥಳದ ಕಡೆಗೆ ಎತ್ತುವಾಗ ನನ್ನ ವಿಜ್ಞಾಪನೆಯನ್ನು ಲಾಲಿಸಿರಿ.
ಕೀರ್ತನೆಗಳು 28 : 3 (OCVKN)
ದುಷ್ಟರ ಸಂಗಡವೂ ಅಪರಾಧ ಮಾಡುವವರ ಸಂಗಡವೂ ನನ್ನನ್ನು ಎಳೆಯಬೇಡಿರಿ; ಅವರು ತಮ್ಮ ನೆರೆಯವರೊಂದಿಗೆ ಸಮಾಧಾನವಾಗಿ ಮಾತನಾಡುತ್ತಾರೆ; ಆದರೆ ಕೇಡು ಅವರ ಹೃದಯದಲ್ಲಿ ಇದೆ.
ಕೀರ್ತನೆಗಳು 28 : 4 (OCVKN)
ಅವರ ಕೃತ್ಯಗಳ ಪ್ರಕಾರವಾಗಿಯೂ, ಅವರ ಕೆಟ್ಟತನಗಳ ಪ್ರಕಾರವಾಗಿಯೂ ಅವರಿಗೆ ಪ್ರತಿಫಲಕೊಡಿರಿ; ಅವರ ಕೈಕೃತ್ಯಗಳ ಪ್ರಕಾರವಾಗಿ ಅವರಿಗೆ ಕೊಡಿರಿ, ಅರ್ಹತೆಗೆ ತಕ್ಕಂತೆಯೇ ಅವರಿಗೆ ಬರಮಾಡಿರಿ.
ಕೀರ್ತನೆಗಳು 28 : 5 (OCVKN)
ಅವರು ಯೆಹೋವ ದೇವರ ಕೃತ್ಯಗಳನ್ನೂ, ಅವರ ಕೈಗಳ ಕೆಲಸವನ್ನೂ ಲಕ್ಷಿಸುವುದಿಲ್ಲ; ಆದ್ದರಿಂದ ದೇವರು ಅವರನ್ನು ವೃದ್ಧಿಗೊಳಿಸದೆ ದಂಡಿಸುವರು.
ಕೀರ್ತನೆಗಳು 28 : 6 (OCVKN)
ಯೆಹೋವ ದೇವರಿಗೆ ಸ್ತುತಿಯುಂಟಾಗಲಿ; ಕರುಣೆಗಾಗಿ ನನ್ನ ಮೊರೆಯನ್ನು ಅವರು ಕೇಳಿದ್ದಾರೆ.
ಕೀರ್ತನೆಗಳು 28 : 7 (OCVKN)
ಯೆಹೋವ ದೇವರು ನನ್ನ ಬಲವೂ, ನನ್ನ ಗುರಾಣಿಯೂ ಆಗಿದ್ದಾರೆ; ನನ್ನ ಹೃದಯವು ಅವರಲ್ಲಿ ಭರವಸೆ ಇಟ್ಟದ್ದರಿಂದ ನಾನು ಸಹಾಯ ಹೊಂದಿದೆನು; ನನ್ನ ಹೃದಯವು ಬಹಳವಾಗಿ ಉತ್ಸಾಹಪಡುವುದು; ನನ್ನ ಕೀರ್ತನೆಯಿಂದ ಅವರನ್ನು ಕೊಂಡಾಡುವೆನು.
ಕೀರ್ತನೆಗಳು 28 : 8 (OCVKN)
ಯೆಹೋವ ದೇವರು ತಮ್ಮ ಜನರಿಗೆ ಬಲವಾಗಿದ್ದಾರೆ; ತಮ್ಮ ಅಭಿಷಿಕ್ತನಿಗೆ ರಕ್ಷಣೆಯ ಕೋಟೆ ಆಗಿದ್ದಾರೆ.
ಕೀರ್ತನೆಗಳು 28 : 9 (OCVKN)
ನಿಮ್ಮ ಜನರನ್ನು ರಕ್ಷಿಸಿರಿ; ನಿಮ್ಮ ವಾರಸುದಾರರನ್ನು ಆಶೀರ್ವದಿಸಿರಿ; ನೀವು ಅವರ ಕುರುಬ ಆಗಿದ್ದು; ಅವರನ್ನು ಯಾವಾಗಲೂ ಮುನ್ನಡೆಸಿರಿ.

1 2 3 4 5 6 7 8 9