ಕೀರ್ತನೆಗಳು 33 : 1 (OCVKN)
ನೀತಿವಂತರೇ, ಯೆಹೋವ ದೇವರಿಗಾಗಿ ಸಂತೋಷದಿಂದ ಹಾಡಿರಿ; ಯಥಾರ್ಥರು ಅವರನ್ನು ಕೊಂಡಾಡುವುದು ಯೋಗ್ಯವಾಗಿದೆ.
ಕೀರ್ತನೆಗಳು 33 : 2 (OCVKN)
ಯೆಹೋವ ದೇವರನ್ನು ಕಿನ್ನರಿಯಿಂದ ಕೊಂಡಾಡಿರಿ; ಹತ್ತು ತಂತಿಗಳ ವೀಣೆಯಿಂದ ಅವರನ್ನು ಕೀರ್ತಿಸಿರಿ.
ಕೀರ್ತನೆಗಳು 33 : 3 (OCVKN)
ದೇವರಿಗೆ ಹೊಸಹಾಡನ್ನು ಹಾಡಿರಿ. ದೊಡ್ಡ ಶಬ್ದದಿಂದ ಇಂಪಾಗಿ ಹಾಡಿರಿ.
ಕೀರ್ತನೆಗಳು 33 : 4 (OCVKN)
ಏಕೆಂದರೆ ಯೆಹೋವ ದೇವರ ವಾಕ್ಯವು ಯಥಾರ್ಥವೂ ಸತ್ಯವೂ ಆಗಿರುತ್ತವೆ. ಅವರ ಮಾಡುವ ಎಲ್ಲಾ ಕೆಲಸಗಳಲ್ಲಿಯೂ ನಂಬಿಗಸ್ತರಾಗಿರುತ್ತಾರೆ.
ಕೀರ್ತನೆಗಳು 33 : 5 (OCVKN)
ಅವರು ನೀತಿಯನ್ನೂ, ನ್ಯಾಯವನ್ನೂ ಪ್ರೀತಿಸುತ್ತಾರೆ; ಭೂಲೋಕವೆಲ್ಲಾ ಯೆಹೋವ ದೇವರ ಒಡಂಬಡಿಕೆಯ ಪ್ರೀತಿಯಿಂದ ತುಂಬಿದೆ.
ಕೀರ್ತನೆಗಳು 33 : 6 (OCVKN)
ಯೆಹೋವ ದೇವರ ವಾಕ್ಯದಿಂದ ಆಕಾಶವೂ, ಅವರ ಬಾಯಿಯ ಉಸಿರಿನಿಂದ ನಕ್ಷತ್ರ ಮಂಡಲವೂ ಉಂಟಾದವು.
ಕೀರ್ತನೆಗಳು 33 : 7 (OCVKN)
ಅವರು ಸಮುದ್ರದ ನೀರನ್ನು ಒಟ್ಟುಗೂಡಿಸುತ್ತಾರೆ; ಅವರು ಅಗಾಧವನ್ನು ಉಗ್ರಾಣಗಳಲ್ಲಿ ಇಡುತ್ತಾರೆ.
ಕೀರ್ತನೆಗಳು 33 : 8 (OCVKN)
ಭೂಲೋಕವೆಲ್ಲಾ ಯೆಹೋವ ದೇವರಿಗೆ ಭಯಪಡಲಿ; ಭೂಲೋಕ ನಿವಾಸಿಗಳೆಲ್ಲರೂ ಅವರಿಗೆ ಭಯಭಕ್ತಿಯಿಂದಿರಲಿ.
ಕೀರ್ತನೆಗಳು 33 : 9 (OCVKN)
ಏಕೆಂದರೆ ಅವರು ಹೇಳಿದ ಮಾತ್ರಕ್ಕೆ ಸಮಸ್ತವೂ ಸೃಷ್ಟಿಯಾಯಿತು; ಅವರು ಆಜ್ಞಾಪಿಸಲು ಭೂಲೋಕವು ಸ್ಥಿರವಾಯಿತು.
ಕೀರ್ತನೆಗಳು 33 : 10 (OCVKN)
ಯೆಹೋವ ದೇವರು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವರು; ಜನರ ದುರುದ್ದೇಶಗಳನ್ನು ನಿಷ್ಪಲ ಮಾಡುತ್ತಾರೆ.
ಕೀರ್ತನೆಗಳು 33 : 11 (OCVKN)
ಆದರೆ ಯೆಹೋವ ದೇವರ ಆಲೋಚನೆಗಳು ಎಂದೆಂದಿಗೂ ಅವರ ಹೃದಯದ ಉದ್ದೇಶಗಳು ತಲತಲಾಂತರಕ್ಕೂ ನಿಲ್ಲುತ್ತವೆ.
ಕೀರ್ತನೆಗಳು 33 : 12 (OCVKN)
ಯೆಹೋವ ದೇವರು ಯಾರ ದೇವರಾಗಿದ್ದಾರೋ, ಅಂಥ ಭಾಗ್ಯವಂತರು. ದೇವರು ತಮಗಾಗಿ ಆಯ್ದುಕೊಂಡ ಜನರೂ ಭಾಗ್ಯವಂತರು.
ಕೀರ್ತನೆಗಳು 33 : 13 (OCVKN)
ಪರಲೋಕದಿಂದ ಯೆಹೋವ ದೇವರು ದೃಷ್ಟಿಸಿ, ಮಾನವರೆಲ್ಲರನ್ನೂ ನೋಡುತ್ತಾರೆ.
ಕೀರ್ತನೆಗಳು 33 : 14 (OCVKN)
ತಮ್ಮ ನಿವಾಸ ಸ್ಥಳದಿಂದ ಭೂನಿವಾಸಿಗಳೆಲ್ಲರ ಮೇಲೆ ಕಣ್ಣಿಡುತ್ತಾರೆ.
ಕೀರ್ತನೆಗಳು 33 : 15 (OCVKN)
ಎಲ್ಲರ ಹೃದಯಗಳನ್ನು ರೂಪಿಸುವವರು ದೇವರೇ, ಜನರು ಮಾಡುವ ಕೆಲಸಗಳನ್ನೆಲ್ಲಾ ಗಮನಿಸುವವರೂ ಅವರೇ.
ಕೀರ್ತನೆಗಳು 33 : 16 (OCVKN)
ಅಧಿಕ ಸೈನ್ಯದಿಂದ ಅರಸನು ಜಯಹೊಂದುವುದಿಲ್ಲ; ಪರಾಕ್ರಮಶಾಲಿಯು ಅಧಿಕ ಶಕ್ತಿಯಿಂದ ಬಿಡುಗಡೆಯಾಗುವುದಿಲ್ಲ.
ಕೀರ್ತನೆಗಳು 33 : 17 (OCVKN)
ಬಿಡುಗಡೆಗೆ ಕುದುರೆಯ ಬಲ ವ್ಯರ್ಥವಾಗಿದೆ; ಅದಕ್ಕೆ ಮಹಾಶಕ್ತಿ ಇದ್ದರೂ ಅದು ರಕ್ಷಿಸಲಾರದು.
ಕೀರ್ತನೆಗಳು 33 : 18 (OCVKN)
ಯೆಹೋವ ದೇವರ ಕಣ್ಣು ತಮಗೆ ಭಯಪಡುವವರ ಮೇಲಿರುತ್ತದೆ, ಅವರ ಒಡಂಬಡಿಕೆಯ ಪ್ರೀತಿಯನ್ನು ಎದುರು ನೋಡುವವರ ಮೇಲೆಯೂ ಇರುತ್ತೆ.
ಕೀರ್ತನೆಗಳು 33 : 19 (OCVKN)
ಇದರಿಂದ ದೇವರು ಅವರ ಪ್ರಾಣವನ್ನು ಮರಣದಿಂದ ಬಿಡಿಸಿ, ಬರಗಾಲದಲ್ಲಿ ಅವರ ಜೀವವನ್ನು ಕಾಪಾಡುತ್ತಾರೆ.
ಕೀರ್ತನೆಗಳು 33 : 20 (OCVKN)
ನಮ್ಮ ಪ್ರಾಣವು ಯೆಹೋವ ದೇವರಿಗಾಗಿ ಕಾದಿದೆ; ನಮ್ಮ ಸಹಾಯವೂ ನಮ್ಮ ಗುರಾಣಿಯೂ ಅವರೇ.
ಕೀರ್ತನೆಗಳು 33 : 21 (OCVKN)
ದೇವರಲ್ಲಿ ನಮ್ಮ ಹೃದಯವು ಸಂತೋಷಿಸುತ್ತದೆ; ನಾವು ಅವರ ಪರಿಶುದ್ಧ ಹೆಸರಿನಲ್ಲಿ ಭರವಸೆ ಇಟ್ಟಿದ್ದೇವೆ.
ಕೀರ್ತನೆಗಳು 33 : 22 (OCVKN)
ನಾವು ನಿಮ್ಮನ್ನು ನಿರೀಕ್ಷಿಸುವ ಪ್ರಕಾರ, ಯೆಹೋವ ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯು ನಮ್ಮ ಮೇಲೆ ಇರಲಿ.
❮
❯
1
2
3
4
5
6
7
8
9
10
11
12
13
14
15
16
17
18
19
20
21
22