ಕೀರ್ತನೆಗಳು 34 : 1 (OCVKN)
ನಾನು ಎಲ್ಲಾ ಕಾಲಗಳಲ್ಲಿ ಯೆಹೋವ ದೇವರನ್ನು ಸ್ತುತಿಸುವೆನು; ಅವರ ಸ್ತೋತ್ರವು ಯಾವಾಗಲೂ ನನ್ನ ಬಾಯಲ್ಲಿ ಇರುವುದು.
ಕೀರ್ತನೆಗಳು 34 : 2 (OCVKN)
ಯೆಹೋವ ದೇವರಲ್ಲಿ ನನ್ನ ಪ್ರಾಣವು ಹಿಗ್ಗುವುದು; ಇದನ್ನು ದೀನರು ಕೇಳಿ ಸಂತೋಷಪಡುವರು.
ಕೀರ್ತನೆಗಳು 34 : 3 (OCVKN)
ನನ್ನ ಸಂಗಡ ಯೆಹೋವ ದೇವರನ್ನು ಮಹಿಮೆಪಡಿಸಿರಿ; ನಾವು ಒಟ್ಟಾಗಿ ಅವರ ಹೆಸರನ್ನು ಘನಪಡಿಸೋಣ.
ಕೀರ್ತನೆಗಳು 34 : 4 (OCVKN)
ನಾನು ಯೆಹೋವ ದೇವರನ್ನು ಹುಡುಕಿದೆನು; ಆಗ ಅವರು ನನಗೆ ಉತ್ತರಕೊಟ್ಟು, ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದರು.
ಕೀರ್ತನೆಗಳು 34 : 5 (OCVKN)
ದೇವರನ್ನು ದೃಷ್ಟಿಸಿದವರು ಪ್ರಕಾಶ ಹೊಂದಿದರು; ಅಂಥವರ ಮುಖಗಳು ನಾಚಿಕೆಯಿಂದ ಕುಂದಿಹೋಗುವುದಿಲ್ಲ.
ಕೀರ್ತನೆಗಳು 34 : 6 (OCVKN)
ಬಡವನಾದ ನಾನು ಕರೆಯಲು ಯೆಹೋವ ದೇವರು ಕೇಳಿ ನನ್ನ ಎಲ್ಲಾ ಇಕ್ಕಟ್ಟುಗಳೊಳಗಿಂದ ನನ್ನನ್ನು ರಕ್ಷಿಸಿದರು.
ಕೀರ್ತನೆಗಳು 34 : 7 (OCVKN)
ದೇವರಿಗೆ ಭಯಪಡುವವರ ಸುತ್ತಲೂ ಯೆಹೋವ ದೇವರ ದೂತನು ಇಳಿದುಕೊಂಡು ಅವರನ್ನು ಕಾಪಾಡುತ್ತಾನೆ.
ಕೀರ್ತನೆಗಳು 34 : 8 (OCVKN)
ಯೆಹೋವ ದೇವರು ಒಳ್ಳೆಯವರೆಂದು ರುಚಿಸಿ ನೋಡಿರಿ; ಅವರನ್ನು ಆಶ್ರಯಿಸುವ ಮನುಷ್ಯನು ಭಾಗ್ಯವಂತನು.
ಕೀರ್ತನೆಗಳು 34 : 9 (OCVKN)
ದೇವರ ಭಕ್ತರೇ, ನೀವು ಯೆಹೋವ ದೇವರಿಗೆ ಭಯಪಡಿರಿ; ಏಕೆಂದರೆ ದೇವಭಕ್ತಿಯುಳ್ಳವರಿಗೆ ಯಾವ ಕೊರತೆಯೂ ಇಲ್ಲ.
ಕೀರ್ತನೆಗಳು 34 : 10 (OCVKN)
ಸಿಂಹಗಳು ಹಸಿದು ಬಳಲಬಹುದು, ಆದರೆ ಯೆಹೋವ ದೇವರನ್ನು ಹುಡುಕುವವರಿಗೆ ಯಾವ ಒಳ್ಳೆಯದರ ಕೊರತೆಯೂ ಇರುವುದಿಲ್ಲ.
ಕೀರ್ತನೆಗಳು 34 : 11 (OCVKN)
ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಯೆಹೋವ ದೇವರ ಬಗ್ಗೆ ಭಯವನ್ನು ನಿಮಗೆ ಕಲಿಸುವೆನು.
ಕೀರ್ತನೆಗಳು 34 : 12 (OCVKN)
ನಿಮ್ಮಲ್ಲಿ ಜೀವನವನ್ನು ಪ್ರೀತಿಸುವವನು ಮತ್ತು ಬಹಳ ದಿನಗಳವರೆಗೆ ಬದುಕಬೇಕೆ?
ಕೀರ್ತನೆಗಳು 34 : 13 (OCVKN)
ನೀನು ಕೇಡಿನಿಂದ ನಿನ್ನ ನಾಲಿಗೆಯನ್ನು, ಮೋಸವನ್ನು ನುಡಿಯದ ಹಾಗೆ ನಿನ್ನ ತುಟಿಗಳನ್ನೂ ನಿಯಂತ್ರಿಸಿಕೋ.
ಕೀರ್ತನೆಗಳು 34 : 14 (OCVKN)
ಕೇಡಿನಿಂದ ತೊಲಗಿ ಒಳ್ಳೆಯದನ್ನು ಮಾಡು; ಸಮಾಧಾನವನ್ನು ಹುಡುಕಿ ಅದನ್ನು ಹಿಂಬಾಲಿಸು.
ಕೀರ್ತನೆಗಳು 34 : 15 (OCVKN)
ನೀತಿವಂತರ ಮೇಲೆ ಯೆಹೋವ ದೇವರು ದೃಷ್ಟಿ ಇಡುತ್ತಾರೆ, ಅವರು ಮೊರೆಯಿಡುವಾಗ ದೇವರು ಕಿವಿಗೊಡುತ್ತಾರೆ.
ಕೀರ್ತನೆಗಳು 34 : 16 (OCVKN)
ಆದರೆ ಕೆಟ್ಟದ್ದನ್ನು ಮಾಡುವವರಿಗೆ ಯೆಹೋವ ದೇವರು ವಿಮುಖರಾಗಿದ್ದಾರೆ, ಅಂಥವರ ಹೆಸರನ್ನು ಭೂಮಿಯೊಳಗಿಂದ ತೆಗೆದುಹಾಕುವರು.
ಕೀರ್ತನೆಗಳು 34 : 17 (OCVKN)
ನೀತಿವಂತರ ಕೂಗನ್ನು ಯೆಹೋವ ದೇವರು ಕೇಳಿ, ಅವರನ್ನು ಎಲ್ಲಾ ಇಕ್ಕಟ್ಟುಗಳೊಳಗಿಂದ ಬಿಡಿಸುತ್ತಾರೆ.
ಕೀರ್ತನೆಗಳು 34 : 18 (OCVKN)
ಮುರಿದ ಹೃದಯದವರಿಗೆ ಯೆಹೋವ ದೇವರು ಸಮೀಪವಾಗಿದ್ದಾರೆ; ಜಜ್ಜಿದ ಆತ್ಮವುಳ್ಳವರನ್ನು ರಕ್ಷಿಸುತ್ತಾರೆ.
ಕೀರ್ತನೆಗಳು 34 : 19 (OCVKN)
ನೀತಿವಂತನಿಗೆ ತೊಂದರೆಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಯೆಹೋವ ದೇವರು ಅವನನ್ನು ಬಿಡಿಸುತ್ತಾರೆ.
ಕೀರ್ತನೆಗಳು 34 : 20 (OCVKN)
ಅವರು ಅವನ ಎಲುಬುಗಳನ್ನೆಲ್ಲಾ ಕಾಪಾಡುತ್ತಾರೆ; ಅವುಗಳಲ್ಲಿ ಒಂದಾದರೂ ಮುರಿದು ಹೋಗುವುದಿಲ್ಲ.
ಕೀರ್ತನೆಗಳು 34 : 21 (OCVKN)
ಕೇಡು ದುಷ್ಟನನ್ನೇ ಕೊಲ್ಲುವುದು; ನೀತಿವಂತನನ್ನು ದ್ವೇಷಿಸುವವರು ಶಿಕ್ಷೆಗೆ ಒಳಗಾಗುವರು.
ಕೀರ್ತನೆಗಳು 34 : 22 (OCVKN)
ಯೆಹೋವ ದೇವರು ತಮ್ಮ ಸೇವಕರ ಪ್ರಾಣವನ್ನು ವಿಮೋಚಿಸುತ್ತಾರೆ; ದೇವರನ್ನು ಆಶ್ರಯಿಸುವವರು ಯಾರೂ ಶಿಕ್ಷೆಗೆ ಒಳಗಾಗುವುದಿಲ್ಲ.
❮
❯
1
2
3
4
5
6
7
8
9
10
11
12
13
14
15
16
17
18
19
20
21
22