ಕೀರ್ತನೆಗಳು 38 : 1 (OCVKN)
ಯೆಹೋವ ದೇವರೇ, ನೀವು ಬೇಸರದಿಂದ ನನ್ನನ್ನು ಗದರಿಸಬೇಡಿರಿ; ಮನನೊಂದು ನನ್ನನ್ನು ಶಿಕ್ಷಿಸಬೇಡಿರಿ.
ಕೀರ್ತನೆಗಳು 38 : 2 (OCVKN)
ಏಕೆಂದರೆ, ನಿಮ್ಮ ಬಾಣಗಳು ನನ್ನಲ್ಲಿ ನಾಟಿವೆ. ನಿಮ್ಮ ಶಿಕ್ಷಾ ಹಸ್ತವು ನನ್ನ ಮೇಲೆ ಭಾರವಾಗಿದೆ.
ಕೀರ್ತನೆಗಳು 38 : 3 (OCVKN)
ನಿಮ್ಮ ಬೇಸರದ ನಿಮಿತ್ತ ನನ್ನ ಶರೀರದಲ್ಲಿ ಸ್ವಸ್ಥತೆ ಏನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ಕ್ಷೇಮವೇ ಇಲ್ಲ.
ಕೀರ್ತನೆಗಳು 38 : 4 (OCVKN)
ಏಕೆಂದರೆ, ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿ ಹೋಗಿವೆ; ದೋಷ ಭಾವನೆಯ ಹೊರೆಯು ನನಗೆ ಬಹುಭಾರವಾಗಿವೆ.
ಕೀರ್ತನೆಗಳು 38 : 5 (OCVKN)
ನನ್ನ ಮೂರ್ಖತನದ ನಿಮಿತ್ತ ನನಗಾದ ಗಾಯಗಳು ದುರ್ವಾಸನೆಯಿಂದ ಕೀವು ತುಂಬಿವೆ.
ಕೀರ್ತನೆಗಳು 38 : 6 (OCVKN)
ನಾನು ಬಹಳವಾಗಿ ಬಾಗಿ ಕುಗ್ಗಿದ್ದೇನೆ. ದಿನವೆಲ್ಲಾ ದುಃಖದಿಂದ ನಾನು ಅಲೆಯುತ್ತಿದ್ದೇನೆ.
ಕೀರ್ತನೆಗಳು 38 : 7 (OCVKN)
ನನ್ನ ಸೊಂಟ ಬಹು ಬೇನೆಯಿಂದ ತುಂಬಿದೆ. ನನ್ನ ದೇಹದಲ್ಲಿ ಕ್ಷೇಮವೇ ಇಲ್ಲ.
ಕೀರ್ತನೆಗಳು 38 : 8 (OCVKN)
ಬಲಹೀನನಾಗಿದ್ದೇನೆ, ಬಹಳ ಜಜ್ಜಿ ಹೋಗಿದ್ದೇನೆ; ನನ್ನ ಹೃದಯದ ವೇದನೆಯಿಂದ ನರಳುತ್ತಾ ಇದ್ದೇನೆ.
ಕೀರ್ತನೆಗಳು 38 : 9 (OCVKN)
ಯೆಹೋವ ದೇವರೇ, ನಿಮಗೆ ನನ್ನ ಅಪೇಕ್ಷೆಗಳೆಲ್ಲಾ ಗೊತ್ತೇ ಇದೆ; ನನ್ನ ನಿಟ್ಟುಸಿರು ನಿಮಗೆ ಮರೆಯಾದದ್ದಲ್ಲ.
ಕೀರ್ತನೆಗಳು 38 : 10 (OCVKN)
ನನ್ನ ಹೃದಯ ಬಡಿದುಕೊಳ್ಳುತ್ತದೆ. ನನ್ನ ಶಕ್ತಿಯು ನನ್ನನ್ನು ಬಿಟ್ಟುಹೋಗಿದೆ; ನನ್ನ ಕಣ್ಣುಗಳ ಬೆಳಕು ಸಹ ಹೋಗಿಬಿಟ್ಟಿದೆ.
ಕೀರ್ತನೆಗಳು 38 : 11 (OCVKN)
ನನ್ನ ಪ್ರಿಯರೂ, ನನ್ನ ಸ್ನೇಹಿತರೂ ನನ್ನ ಬಾಧೆಗೆ ಓರೆಯಾಗಿ ನಿಲ್ಲುತ್ತಾರೆ; ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ.
ಕೀರ್ತನೆಗಳು 38 : 12 (OCVKN)
ನನ್ನ ಪ್ರಾಣವನ್ನು ಹುಡುಕುವವರು ಬಲೆ ಒಡ್ಡುತ್ತಾರೆ; ನನ್ನ ಕೇಡನ್ನು ಹುಡುಕುವವರು ಕೇಡಿನ ಮಾತುಗಳನ್ನಾಡುತ್ತಾರೆ; ದಿನವೆಲ್ಲಾ ಮೋಸಗಳನ್ನು ಆಲೋಚಿಸುತ್ತಾರೆ.
ಕೀರ್ತನೆಗಳು 38 : 13 (OCVKN)
ಆದರೆ ನಾನು ಕಿವುಡನ ಹಾಗೆ ಕೇಳಿಸಿಕೊಳ್ಳುವುದಿಲ್ಲ; ತನ್ನ ಬಾಯಿ ತೆರೆಯದ ಮೂಕನ ಹಾಗಿದ್ದೇನೆ.
ಕೀರ್ತನೆಗಳು 38 : 14 (OCVKN)
ನಾನು ಕಿವಿ ಕೇಳಿಸದವನಂತೆ ಇದ್ದೇನೆ. ನಾನು ಪ್ರತ್ಯುತ್ತರ ಕೊಡಲಾರದಂತೆಯೂ ಇದ್ದೇನೆ.
ಕೀರ್ತನೆಗಳು 38 : 15 (OCVKN)
ಯೆಹೋವ ದೇವರೇ, ನಿಮ್ಮನ್ನೇ ಎದುರು ನೋಡುತ್ತೇನೆ; ನನ್ನ ದೇವರಾದ ಯೆಹೋವ ದೇವರೇ, ನೀವು ಉತ್ತರ ಕೊಡುವಿರಿ.
ಕೀರ್ತನೆಗಳು 38 : 16 (OCVKN)
ಏಕೆಂದರೆ ನಾನು, “ಅವರು ನನಗೋಸ್ಕರ ಸಂತೋಷಪಡದೆ ಇರಲಿ ನನ್ನ ಪಾದ ಜಾರುವಾಗ ಅವರು ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿಕೊಳ್ಳದಿರಲಿ,” ಎಂದುಕೊಂಡೆನು.
ಕೀರ್ತನೆಗಳು 38 : 17 (OCVKN)
ನಾನು ಎಡವಿ ಬೀಳಲಿದ್ದೇನೆ; ನನ್ನ ನೋವು ಯಾವಾಗಲೂ ನನ್ನ ಮುಂದೆ ಇದೆ.
ಕೀರ್ತನೆಗಳು 38 : 18 (OCVKN)
ನನ್ನ ಅಕ್ರಮವನ್ನು ಅರಿಕೆ ಮಾಡುವೆನು; ನನ್ನ ಪಾಪಕ್ಕೋಸ್ಕರ ದುಃಖಪಡುವೆನು.
ಕೀರ್ತನೆಗಳು 38 : 19 (OCVKN)
ನನ್ನ ಶತ್ರುಗಳು ಬಲಗೊಂಡಿದ್ದಾರೆ. ನನ್ನನ್ನು ವಿನಾಕಾರಣವಾಗಿ ದ್ವೇಷಿಸುವವರು ಹೆಚ್ಚಿದ್ದಾರೆ.
ಕೀರ್ತನೆಗಳು 38 : 20 (OCVKN)
ನನ್ನ ಶತ್ರುಗಳು ಒಳ್ಳೆಯದಕ್ಕೆ ಬದಲಾಗಿ ಕೇಡನ್ನು ಸಲ್ಲಿಸುತ್ತಿದ್ದಾರೆ. ನಾನು ಒಳ್ಳೆಯದನ್ನು ಹಿಂದಟ್ಟುವ ಕಾರಣ ನನ್ನನ್ನು ಎದುರಿಸುತ್ತಾರೆ.
ಕೀರ್ತನೆಗಳು 38 : 21 (OCVKN)
ಯೆಹೋವ ದೇವರೇ, ನನ್ನನ್ನು ಬಿಡಬೇಡಿರಿ; ನನ್ನ ದೇವರೇ, ನನಗೆ ದೂರವಾಗಿರಬೇಡಿರಿ.
ಕೀರ್ತನೆಗಳು 38 : 22 (OCVKN)
ನನ್ನ ರಕ್ಷಕ ಆಗಿರುವ ಯೆಹೋವ ದೇವರೇ, ನನ್ನ ಸಹಾಯಕ್ಕೆ ಬೇಗ ಬನ್ನಿರಿ.

1 2 3 4 5 6 7 8 9 10 11 12 13 14 15 16 17 18 19 20 21 22