ಕೀರ್ತನೆಗಳು 4 : 1 (OCVKN)
ನನ್ನ ನೀತಿಯಾಗಿರುವ ದೇವರೇ, ನಾನು ಕರೆಯುವಾಗ ನನಗೆ ಸದುತ್ತರವನ್ನು ಕೊಡಿರಿ. ನನ್ನ ಸಂಕಟದಿಂದ ನನಗೆ ನೆಮ್ಮದಿಯನ್ನು ನೀಡಿರಿ; ನನ್ನನ್ನು ಕರುಣಿಸಿ, ನನ್ನ ಪ್ರಾರ್ಥನೆಯನ್ನು ಕೇಳಿರಿ.
ಕೀರ್ತನೆಗಳು 4 : 2 (OCVKN)
ಓ ಮಾನವ, ನೀನು ಎಲ್ಲಿಯತನಕ ನನ್ನ ಮಹಿಮೆಯನ್ನು ಅವಮಾನಕ್ಕೆ ಗುರಿಪಡಿಸುವಿ? ನೀನು ಎಲ್ಲಿಯತನಕ ವ್ಯರ್ಥವಾದದ್ದನ್ನು ಪ್ರೀತಿಸಿ, ಸುಳ್ಳನ್ನು* ಅಥವಾ, ಸುಳ್ಳು ದೇವರನ್ನು ಹುಡುಕುವಿ?
ಕೀರ್ತನೆಗಳು 4 : 3 (OCVKN)
ಯೆಹೋವ ದೇವರು ತಮ್ಮ ನಂಬಿಗಸ್ತರನ್ನು ತಮಗಾಗಿ ಪ್ರತ್ಯೇಕಿಸಿದ್ದಾರೆ ಎಂದು ತಿಳಿದುಕೊಳ್ಳಿರಿ; ನಾನು ಬೇಡಿಕೊಳ್ಳಲು ಯೆಹೋವ ದೇವರು ನನಗೆ ಉತ್ತರ ನೀಡುವರು.
ಕೀರ್ತನೆಗಳು 4 : 4 (OCVKN)
ನಡುಗಿರಿ,† ನಡುಗಿರಿ ಹೀಬ್ರೂ ಭಾಷೆಯಲ್ಲಿ ಕೋಪಗೊಂಡರೂ ಪಾಪಮಾಡಬೇಡಿರಿ; ನೀವು ನಿಮ್ಮ ಹಾಸಿಗೆಯ ಮೇಲೆ ಇರುವಾಗ, ನಿಮ್ಮ ಹೃದಯಗಳಲ್ಲಿ ಧ್ಯಾನಮಾಡಿ ಮೌನವಾಗಿರಿ.
ಕೀರ್ತನೆಗಳು 4 : 5 (OCVKN)
ನೀತಿಯ ಬಲಿಗಳನ್ನು ಅರ್ಪಿಸಿರಿ ಯೆಹೋವ ದೇವರಲ್ಲಿ ನಿಮ್ಮ ಭರವಸೆಯನ್ನು ಇಡಿರಿ.
ಕೀರ್ತನೆಗಳು 4 : 6 (OCVKN)
ಯೆಹೋವ ದೇವರೇ, “ನಮಗೆ ಒಳ್ಳೆಯದನ್ನು ಮಾಡುವವರು ಯಾರು?” ಎಂದು ಕೇಳುವವರು ಅನೇಕರಿದ್ದಾರೆ. ನಿಮ್ಮ ಮುಖಪ್ರಕಾಶವು ನಮ್ಮ ಮೇಲೆ ಬೆಳಗಲಿ.
ಕೀರ್ತನೆಗಳು 4 : 7 (OCVKN)
ಧಾನ್ಯವೂ ಹೊಸ ದ್ರಾಕ್ಷಾರಸವೂ ಸುಗ್ಗಿಕಾಲದಲ್ಲಿ ಸಮೃದ್ಧಿಯಾದಾಗ ಇರುವುದಕ್ಕಿಂತಲೂ ಅಧಿಕವಾದ ಆನಂದವನ್ನು ನೀವು ನನ್ನ ಹೃದಯದಲ್ಲಿ ಇಟ್ಟಿದ್ದೀರಿ.
ಕೀರ್ತನೆಗಳು 4 : 8 (OCVKN)
ಸಮಾಧಾನವಾಗಿ ಮಲಗಿ ನಿದ್ರೆ ಮಾಡುವೆನು, ಏಕೆಂದರೆ ಯೆಹೋವ ದೇವರೇ, ನೀವೊಬ್ಬರೇ ನನ್ನನ್ನು ಸುರಕ್ಷಿತವಾಗಿ ವಾಸಿಸುವಂತೆ ಮಾಡುತ್ತೀರಿ.
❮
❯
1
2
3
4
5
6
7
8