ಕೀರ್ತನೆಗಳು 41 : 1 (OCVKN)
ಬಡವರನ್ನು ಪರಾಮರಿಸುವವರು ಧನ್ಯರು; ಕೇಡಿನ ಸಮಯದಲ್ಲಿ ಯೆಹೋವ ದೇವರು ಅವರನ್ನು ತಪ್ಪಿಸುವರು.
ಕೀರ್ತನೆಗಳು 41 : 2 (OCVKN)
ಯೆಹೋವ ದೇವರು ಅವರನ್ನು ಕಾಪಾಡಿ ಸುರಕ್ಷಿತವಾಗಿಡುವರು; ಅವರು ಭೂಮಿಯಲ್ಲಿ ಧನ್ಯರಾಗಿರುವರು; ದೇವರು ಅವರ ಶತ್ರುಗಳ ಇಚ್ಛೆಗೆ ಅವರನ್ನು ಒಪ್ಪಿಸಿಕೊಡರು.
ಕೀರ್ತನೆಗಳು 41 : 3 (OCVKN)
ಬಡವರನ್ನು ಪರಾಮರಿಸುವವರನ್ನು ಯೆಹೋವ ದೇವರು ವ್ಯಾಧಿಯ ಮಂಚದಲ್ಲಿ ಬಲಪಡಿಸುವರು; ಅವರ ಅಸ್ವಸ್ಥತೆಯನ್ನು ಯೆಹೋವ ದೇವರು ಹೋಗಲಾಡಿಸಿ ಮರುಸ್ಥಾಪಿಸುವರು.
ಕೀರ್ತನೆಗಳು 41 : 4 (OCVKN)
“ಯೆಹೋವ ದೇವರೇ, ನನಗೆ ಕರುಣೆ ತೋರಿಸಿ ನನ್ನನ್ನು ಸ್ವಸ್ಥಮಾಡಿರಿ, ಏಕೆಂದರೆ ನಿಮಗೆ ವಿರೋಧವಾಗಿ ಪಾಪಮಾಡಿದ್ದೇನೆ,” ಎಂದು ನಾನು ಹೇಳಿ ಬೇಡುವೆನು.
ಕೀರ್ತನೆಗಳು 41 : 5 (OCVKN)
“ಅವನು ಸತ್ತು ಅವನ ಹೆಸರು ನಾಶವಾಗುವುದು ಯಾವಾಗ?” ಎಂದು ನನ್ನ ಶತ್ರುಗಳು ನನ್ನ ಕೇಡನ್ನು ಬಯಸಿ ಮಾತನಾಡುತ್ತಾರೆ.
ಕೀರ್ತನೆಗಳು 41 : 6 (OCVKN)
ನನ್ನನ್ನು ನೋಡುವುದಕ್ಕೆ ಅವರಲ್ಲಿ ಒಬ್ಬನು ಬಂದರೆ, ಕಪಟವಾಗಿ ಮಾತನಾಡುತ್ತಾನೆ. ಅವನ ಹೃದಯ ಕೇಡನ್ನು ಕೂಡಿಟ್ಟುಕೊಳ್ಳುತ್ತಿದೆ. ಅವನು ಹೊರಗೆ ಹೋದ ಮೇಲೆ ಕೇಡನ್ನು ಹಬ್ಬಿಸುತ್ತಾನೆ.
ಕೀರ್ತನೆಗಳು 41 : 7 (OCVKN)
ನನ್ನ ಶತ್ರುಗಳೆಲ್ಲರೂ ಸೇರಿ ನನ್ನ ಮೇಲೆ ಪಿಸುಗುಟ್ಟುತ್ತಾರೆ; ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸುತ್ತಾರೆ.
ಕೀರ್ತನೆಗಳು 41 : 8 (OCVKN)
“ಕೆಟ್ಟ ರೋಗವು ಅವನನ್ನು ಹಿಡಿದಿದೆ, ಈಗ ಅವನು ಹಾಸಿಗೆ ಹಿಡಿದಿದ್ದಾನೆ ಎಂದಿಗೂ ಏಳುವುದಿಲ್ಲ,” ಎಂದು ಹೇಳಿಕೊಳ್ಳುತ್ತಾರೆ.
ಕೀರ್ತನೆಗಳು 41 : 9 (OCVKN)
ನನ್ನ ರೊಟ್ಟಿಯನ್ನು ತಿಂದವನೂ ನಾನು ನಂಬಿದ್ದವನೂ ಆಗಿರುವ ನನ್ನ ಆಪ್ತ ಸ್ನೇಹಿತನು ಸಹ ನನಗೆ ವಿರೋಧವಾಗಿ ತನ್ನ ಕಾಲನ್ನು ಎತ್ತಿದ್ದಾನೆ.
ಕೀರ್ತನೆಗಳು 41 : 10 (OCVKN)
ಆದರೆ ಯೆಹೋವ ದೇವರೇ, ನೀವು ನನ್ನನ್ನು ಕರುಣಿಸಿ ನಾನು ಏಳುವಂತೆ ಮಾಡಿರಿ. ನಾನು ಅವರಿಗೆ ಮುಯ್ಯಿಗೆ ಮುಯ್ಯಿತೀರಿಸುವೆನು.
ಕೀರ್ತನೆಗಳು 41 : 11 (OCVKN)
ನನ್ನ ಶತ್ರು ನನ್ನ ಮೇಲೆ ಜಯ ಹೊಂದದೆ ಇರುವುದರಿಂದಲೇ, ನೀವು ನನ್ನನ್ನು ಮೆಚ್ಚಿದ್ದೀರಿ ಎಂದು ನಾನು ತಿಳಿದುಕೊಳ್ಳುವೆ.
ಕೀರ್ತನೆಗಳು 41 : 12 (OCVKN)
ಆದರೆ ನೀವು ನನ್ನ ಪ್ರಾಮಾಣಿಕತೆಯ ಕಾರಣ ನನ್ನನ್ನು ಎತ್ತಿ ಹಿಡಿದಿರುವಿರಿ; ನೀವು ನನ್ನನ್ನು ನಿತ್ಯವಾಗಿ ನಿಮ್ಮ ಸಮ್ಮುಖದಲ್ಲಿ ಇರಿಸುವಿರಿ.
ಕೀರ್ತನೆಗಳು 41 : 13 (OCVKN)
ಇಸ್ರಾಯೇಲರ ದೇವರಾಗಿರುವ ಯೆಹೋವ ದೇವರಿಗೆ, ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಆಮೆನ್.
❮
❯
1
2
3
4
5
6
7
8
9
10
11
12
13