ಕೀರ್ತನೆಗಳು 42 : 1 (OCVKN)
ಭಾಗ 2
ಕೀರ್ತನೆಗಳು 42–72
*ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಕೋರಹೀಯರ ಮಕ್ಕಳ ಮಾಸ್ಕಿಲ* ಮಾಸ್ಕಿಲ ಬಹುಶಃ ಸಾಹಿತ್ಯಿಕ ಅಥವಾ ಸಂಗೀತ ಪದ ಪದ್ಯ. *ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವುದೋ, ಹಾಗೆಯೇ ನನ್ನ ಪ್ರಾಣವು ನಿಮ್ಮನ್ನು ಬಯಸುತ್ತದೆ.
ಕೀರ್ತನೆಗಳು 42 : 2 (OCVKN)
ದೇವರಿಗೋಸ್ಕರ ಹೌದು ಜೀವವುಳ್ಳ ದೇವರಿಗೋಸ್ಕರ ನನ್ನ ಪ್ರಾಣವು ದಾಹಗೊಳ್ಳುತ್ತದೆ. ನಾನು ಯಾವಾಗ ಹೋಗಿ ದೇವರ ಮುಂದೆ ಕಾಣಿಸಿಕೊಳ್ಳಲಿ?
ಕೀರ್ತನೆಗಳು 42 : 3 (OCVKN)
“ನಿನ್ನ ದೇವರು ಎಲ್ಲಿ?” ಎಂದು ಜನರು, ದಿನವೆಲ್ಲಾ ನನ್ನನ್ನು ಕೇಳುವುದರಿಂದ ಹಗಲುರಾತ್ರಿ ನನ್ನ ಕಣ್ಣೀರೇ ನನಗೆ ಆಹಾರವಾಗಿದೆ.
ಕೀರ್ತನೆಗಳು 42 : 4 (OCVKN)
ಜನಸಮೂಹದೊಂದಿಗೆ ನಾನು ಉತ್ಸಾಹದಿಂದಲೂ ಸ್ತೋತ್ರದಿಂದಲೂ ಹಬ್ಬವನ್ನಾಚರಿಸಲು ದೇವರ ಆಲಯಕ್ಕೆ ಹೋಗಿದ್ದನ್ನು ನೆನಪಿಸಿಕೊಳ್ಳುತ್ತಾ ನನ್ನೊಳಗೆ ನಾನೇ ಹಂಬಲಿಸುತ್ತಿರುವೆನು.
ಕೀರ್ತನೆಗಳು 42 : 5 (OCVKN)
ನನ್ನ ಪ್ರಾಣವೇ, ನೀನು ಏಕೆ ಕುಗ್ಗಿ ಹೋಗಿದ್ದೀ? ನನ್ನಲ್ಲಿ ನೀನು ಏಕೆ ವ್ಯಥೆಪಡುತ್ತೀ? ದೇವರನ್ನು ನಿರೀಕ್ಷಿಸು; ಅವರೇ ನನ್ನ ರಕ್ಷಕರೂ ದೇವರೂ ಆಗಿದ್ದಾರೆ. ಹೌದು, ನಾನು ದೇವರನ್ನೇ ಕೊಂಡಾಡುತ್ತಿರುವೆನು.
ಕೀರ್ತನೆಗಳು 42 : 6 (OCVKN)
ನನ್ನ ದೇವರೇ, ನನ್ನ ಪ್ರಾಣವು ನನ್ನಲ್ಲಿ ಕುಗ್ಗಿಹೋಗಿದೆ; ಆದ್ದರಿಂದ ಯೊರ್ದನ್ ನಾಡಿನಿಂದಲೂ ಹೆರ್ಮೋನ್ ಬೆಟ್ಟಗಳಿಂದಲೂ ಮಿಸಾರ್ ಬೆಟ್ಟದಿಂದಲೂ ನಿಮ್ಮನ್ನು ಜ್ಞಾಪಕಮಾಡಿಕೊಳ್ಳುತ್ತೇನೆ.
ಕೀರ್ತನೆಗಳು 42 : 7 (OCVKN)
ನಿಮ್ಮ ಜಲಪಾತಗಳ ಶಬ್ದವು ಒಂದು ಪ್ರವಾಹವು ಮತ್ತೊಂದು ಪ್ರವಾಹಕ್ಕೆ ಕರೆಯುವಂತಿದೆ. ಅದರಂತೆಯೇ ನಿಮ್ಮ ಎಲ್ಲಾ ಅಲೆಗಳೂ ತೆರೆಗಳೂ ನನ್ನ ಮೇಲೆ ಹಾದು ಹೋದಂತಿವೆ.
ಕೀರ್ತನೆಗಳು 42 : 8 (OCVKN)
ಆದರೂ ಹಗಲಿನಲ್ಲಿ ಯೆಹೋವ ದೇವರು ತಮ್ಮ ಪ್ರೀತಿಯನ್ನು ಆಜ್ಞಾಪಿಸುವರು. ರಾತ್ರಿಯಲ್ಲಿ ದೇವರ ಹಾಡನ್ನು ಹಾಡುವೆನು. ನನ್ನ ಜೀವವಾಗಿರುವ ದೇವರಿಗೆ ನಾನು ಪ್ರಾರ್ಥನೆ ಮಾಡುವೆನು.
ಕೀರ್ತನೆಗಳು 42 : 9 (OCVKN)
“ದೇವರೇ, ಏಕೆ ನನ್ನನ್ನು ಮರೆತುಬಿಟ್ಟಿದ್ದೀರಿ? ಏಕೆ ನಾನು ಶತ್ರುವಿನ ಬಾಧೆಪೀಡಿತನಾಗಿ ದುಃಖದಲ್ಲಿ ಸಾಗಬೇಕು?” ಎಂದು ನನ್ನ ಶರಣನಾದ ದೇವರಿಗೆ ಮೊರೆಯಿಡುವೆನು.
ಕೀರ್ತನೆಗಳು 42 : 10 (OCVKN)
“ನಿನ್ನ ದೇವರು ಎಲ್ಲಿ?” ಎಂದು ದಿನವೆಲ್ಲಾ ನನಗೆ ಹೇಳಿ ನನ್ನ ವೈರಿಗಳು ಅಪಹಾಸ್ಯ ಮಾಡುವುದರಿಂದ ನನ್ನ ಎಲಬುಗಳೆಲ್ಲಾ ಮುರಿದುಹೊದಂತೆ ಇವೆ.
ಕೀರ್ತನೆಗಳು 42 : 11 (OCVKN)
ನನ್ನ ಪ್ರಾಣವೇ, ನೀನು ಏಕೆ ಕುಗ್ಗಿ ಹೋಗಿದ್ದೀ? ನನ್ನಲ್ಲಿ ನೀನು ಏಕೆ ವ್ಯಥೆಪಡುತ್ತೀ? ದೇವರನ್ನು ನಿರೀಕ್ಷಿಸು; ಅವರೇ ನನ್ನ ರಕ್ಷಕರೂ ದೇವರೂ ಆಗಿದ್ದಾರೆ. ಹೌದು, ನಾನು ದೇವರನ್ನೇ ಕೊಂಡಾಡುತ್ತಿರುವೆನು.

1 2 3 4 5 6 7 8 9 10 11