ಕೀರ್ತನೆಗಳು 47 : 1 (OCVKN)
ಎಲ್ಲಾ ಜನರೇ, ಕೈ ತಟ್ಟಿರಿ; ಜಯಾರ್ಭಟದಿಂದ ದೇವರಿಗೆ ಧ್ವನಿಗೈಯಿರಿ.
ಕೀರ್ತನೆಗಳು 47 : 2 (OCVKN)
ಏಕೆಂದರೆ ಮಹೋನ್ನತರಾದ ಯೆಹೋವ ದೇವರು ಭಯಭಕ್ತಿಗೆ ಪಾತ್ರರೂ ಭೂಮಿಯ ಮೇಲೆಲ್ಲಾ ಮಹಾರಾಜರೂ ಆಗಿದ್ದಾರೆ.
ಕೀರ್ತನೆಗಳು 47 : 3 (OCVKN)
ಜನರನ್ನು ನಮ್ಮ ಕೆಳಗೆ ತಂದಿದ್ದಾರೆ. ಜನಾಂಗಗಳನ್ನು ನಮಗೆ ಅಧೀನಮಾಡಿದ್ದಾರೆ.
ಕೀರ್ತನೆಗಳು 47 : 4 (OCVKN)
ಅವರು ಪ್ರೀತಿಸುವ ಯಾಕೋಬಿನ ಘನತೆಯಾಗಿರುವ ನಮ್ಮ ಬಾಧ್ಯತೆಯನ್ನು ನಮಗಾಗಿ ಆಯ್ದುಕೊಂಡಿದ್ದಾರೆ.
ಕೀರ್ತನೆಗಳು 47 : 5 (OCVKN)
ದೇವರು ಜಯಘೋಷದಿಂದ ಉನ್ನತರಾಗಿದ್ದಾರೆ. ಯೆಹೋವ ದೇವರು ತುತೂರಿಯ ಧ್ವನಿಯೊಡನೆ ಸಾಗಿದ್ದಾರೆ.
ಕೀರ್ತನೆಗಳು 47 : 6 (OCVKN)
ದೇವರಿಗೆ ಸ್ತುತಿಯನ್ನು ಹಾಡಿರಿ, ಸ್ತುತಿಯನ್ನು ಹಾಡಿರಿ; ನಮ್ಮ ರಾಜರಿಗೆ ಸ್ತುತಿಯನ್ನು ಹಾಡಿರಿ, ಸ್ತುತಿಯನ್ನು ಹಾಡಿರಿ.
ಕೀರ್ತನೆಗಳು 47 : 7 (OCVKN)
ಏಕೆಂದರೆ, ದೇವರು ಭೂಮಿಗೆಲ್ಲಾ ಮಹಾರಾಜರು. ದೇವರನ್ನು ಸ್ತೋತ್ರದ ಕೀರ್ತನೆಯಿಂದ ಕೀರ್ತಿಸಿರಿ.
ಕೀರ್ತನೆಗಳು 47 : 8 (OCVKN)
ದೇವರು ಜನಾಂಗಗಳನ್ನು ಆಳುತ್ತಾರೆ. ದೇವರು ತಮ್ಮ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾರೆ.
ಕೀರ್ತನೆಗಳು 47 : 9 (OCVKN)
ರಾಷ್ಟ್ರಗಳ ಅಧಿಪತಿಗಳು ಅಬ್ರಹಾಮನ ದೇವರ ಜನರಾಗಿ ಕೂಡಿಬಂದಿದ್ದಾರೆ. ಏಕೆಂದರೆ, ಭೂಮಿಯ ರಾಜರೆಲ್ಲರೂ ದೇವರಿಗೆ ಸೇರಿದವರು. ದೇವರು ಬಹಳವಾಗಿ ಘನ ಹೊಂದಿದ್ದಾರೆ.
❮
❯