ಕೀರ್ತನೆಗಳು 48 : 1 (OCVKN)
ಯೆಹೋವ ದೇವರು ಮಹೋನ್ನತರೂ ನಮ್ಮ ದೇವರು ತಮ್ಮ ಪರಿಶುದ್ಧ ಪರ್ವತ ಪಟ್ಟಣದಲ್ಲಿ ಬಹಳವಾಗಿ ಸ್ತುತಿಗೆ ಪಾತ್ರರಾಗಿದ್ದಾರೆ.
ಕೀರ್ತನೆಗಳು 48 : 2 (OCVKN)
ಉತ್ತರ ದಿಕ್ಕಿನಲ್ಲಿರುವ ಮಹಾರಾಜರ ಪಟ್ಟಣವಾದ ಚೀಯೋನ್ ಪರ್ವತವು ಸುಂದರವಾಗಿ ಚಾಪೋನಿನ ಶಿಖರದಂತೆ ಇಡೀ ಭೂಮಿಗೆ ಸಂತೋಷಕರವಾದದ್ದಾಗಿದೆ.
ಕೀರ್ತನೆಗಳು 48 : 3 (OCVKN)
ದೇವರು ಅದರ ಅರಮನೆಗಳಲ್ಲಿ ವಾಸಿಸುತ್ತಾರೆ. ದೇವರು ತಾವೇ ಅದರ ಭದ್ರಕೋಟೆಯಾಗಿದ್ದಾರೆ.
ಕೀರ್ತನೆಗಳು 48 : 4 (OCVKN)
ಏಕೆಂದರೆ, ಇಗೋ, ಅರಸರು ಕೂಡಿಬಂದರು. ಅವರು ಒಟ್ಟಾಗಿ ದಾಳಿಮಾಡಲು ಬಂದರು.
ಕೀರ್ತನೆಗಳು 48 : 5 (OCVKN)
ಅವರು ಪಟ್ಟಣವನ್ನು ಕಂಡು, ಬೆರಗಾದರು. ಅವರು ಭಯಪಟ್ಟು ಓಡಿಹೋದರು.
ಕೀರ್ತನೆಗಳು 48 : 6 (OCVKN)
ಅಲ್ಲಿ ನಡುಕವವೂ ಹೆರುವವಳ ಹಾಗೆ ನೋವೂ ಅವರನ್ನು ಹಿಡಿಯಿತು.
ಕೀರ್ತನೆಗಳು 48 : 7 (OCVKN)
ಪೂರ್ವದಿಕ್ಕಿನ ಗಾಳಿಯಿಂದ ತಾರ್ಷೀಷ್ ಹಡಗುಗಳನ್ನು ನೀವು ಒಡೆಯುತ್ತೀರಲ್ಲಾ.
ಕೀರ್ತನೆಗಳು 48 : 8 (OCVKN)
ನಾವು ಹೇಗೆ ಕೇಳಿದೆವೋ ಹಾಗೆಯೇ ಕಣ್ಣಾರೆ ಕಂಡೆವು, ಸೇನಾಧೀಶ್ವರ ಯೆಹೋವ ದೇವರ ಪಟ್ಟಣವಾಗಿರುವ, ನಮ್ಮ ದೇವರ ಪಟ್ಟಣದಲ್ಲಿ ಇದನ್ನು ಕಂಡೆವು: ದೇವರು ಪಟ್ಟಣವನ್ನು ಎಂದೆಂದಿಗೂ ಸ್ಥಿರಪಡಿಸುವರು.
ಕೀರ್ತನೆಗಳು 48 : 9 (OCVKN)
ದೇವರೇ, ನಿಮ್ಮ ಒಡಂಬಡಿಕೆಯ ಪ್ರೀತಿಯನ್ನು ನಿಮ್ಮ ಮಂದಿರದಲ್ಲಿ ನಾವು ಸ್ಮರಿಸುತ್ತೇವೆ.
ಕೀರ್ತನೆಗಳು 48 : 10 (OCVKN)
ದೇವರೇ, ನಿಮ್ಮ ಹೆಸರಿಗೆ ತಕ್ಕಂತೆಯೇ ನಿಮ್ಮ ಸ್ತೋತ್ರವು ಭೂಮಿಯ ಕಟ್ಟಕಡೆಯವರೆಗೂ ಇದೆ; ನಿಮ್ಮ ಬಲಗೈ ನೀತಿಯಿಂದ ತುಂಬಿದೆ.
ಕೀರ್ತನೆಗಳು 48 : 11 (OCVKN)
ನಿಮ್ಮ ನ್ಯಾಯ ನಿರ್ಣಯಗಳ ನಿಮಿತ್ತ ಚೀಯೋನ್ ಪರ್ವತವು ಸಂತೋಷಪಡಲಿ; ಯೆಹೂದ ಪುತ್ರಿಯರು ಉಲ್ಲಾಸಪಡಲಿ.
ಕೀರ್ತನೆಗಳು 48 : 12 (OCVKN)
ಚೀಯೋನನ್ನು ಸುತ್ತಿ ಅದರ ಸುತ್ತಲೂ ತಿರುಗಾಡಿ ಅದರ ಗೋಪುರಗಳನ್ನು ಎಣಿಸಿರಿ.
ಕೀರ್ತನೆಗಳು 48 : 13 (OCVKN)
ಮುಂದಿನ ತಲಾಂತರಕ್ಕೆ ತಿಳಿಸುವುದಕ್ಕೋಸ್ಕರ ಅದರ ಗೋಪುರಗಳನ್ನು ಕಣ್ಣಿಟ್ಟು ನೋಡಿರಿ, ಅದರ ಅರಮನೆಗಳನ್ನು ಲಕ್ಷಿಸಿರಿ.
ಕೀರ್ತನೆಗಳು 48 : 14 (OCVKN)
ಏಕೆಂದರೆ, ಈ ದೇವರು ಯುಗಯುಗಾಂತರಗಳಿಗೂ ನಮ್ಮ ದೇವರಾಗಿದ್ದಾರೆ; ಅವರು ಅಂತ್ಯದವರೆಗೂ ನಮ್ಮ ಮಾರ್ಗದರ್ಶಿಯಾಗಿರುವರು.

1 2 3 4 5 6 7 8 9 10 11 12 13 14