ಕೀರ್ತನೆಗಳು 50 : 1 (OCVKN)
ದೇವಾಧಿ ದೇವರಾದ ಯೆಹೋವ ದೇವರು ತಾವೇ ಮಾತನಾಡುತ್ತಿದ್ದಾರೆ, ಸೂರ್ಯೋದಯದಿಂದ ಅಸ್ತಮಾನದವರೆಗೂ ಇರುವ ಭೂಲೋಕದವರು ಕರೆಯುತ್ತಿದ್ದಾರೆ.
ಕೀರ್ತನೆಗಳು 50 : 2 (OCVKN)
ಪರಿಪೂರ್ಣ ಸೌಂದರ್ಯದ ಚೀಯೋನಿನಿಂದ ದೇವರು ಪ್ರಕಾಶಿಸುತ್ತಿದ್ದಾರೆ.
ಕೀರ್ತನೆಗಳು 50 : 3 (OCVKN)
ನಮ್ಮ ದೇವರು ಬರುತ್ತಾರೆ, ಎಷ್ಟು ಮಾತ್ರವೂ ಮೌನವಾಗಿರುವುದಿಲ್ಲ. ಬೆಂಕಿಯು ಅವರ ಮುಂದೆ ಪ್ರಜ್ವಲಿಸುವುದು; ಅವರ ಸುತ್ತಲೂ ದೊಡ್ಡ ಬಿರುಗಾಳಿಯು ಬೀಸುವುದು.
ಕೀರ್ತನೆಗಳು 50 : 4 (OCVKN)
ತಮ್ಮ ಜನರಿಗೆ ನ್ಯಾಯತೀರಿಸುವುದಕ್ಕೆ ಭೂಮಿ ಆಕಾಶಗಳನ್ನೂ ಹೀಗೆಂದು ಕರೆಯುತ್ತಿದ್ದಾರೆ:
ಕೀರ್ತನೆಗಳು 50 : 5 (OCVKN)
“ಯಜ್ಞದಿಂದ ನನ್ನ ಸಂಗಡ ಒಡಂಬಡಿಕೆ ಮಾಡಿಕೊಂಡ ನನ್ನ ಭಕ್ತರನ್ನು ನನ್ನ ಬಳಿಗೆ ಒಟ್ಟುಗೂಡಿಸಿರಿ.”
ಕೀರ್ತನೆಗಳು 50 : 6 (OCVKN)
ಮತ್ತು ದೇವರು ನ್ಯಾಯಾಧಿಪತಿಯಾಗಿದ್ದಾರೆ. ಆಕಾಶಗಳು ದೇವರ ನೀತಿಯನ್ನು ಪ್ರಕಟಿಸುತ್ತವೆ.
ಕೀರ್ತನೆಗಳು 50 : 7 (OCVKN)
“ನನ್ನ ಜನರೇ, ಕೇಳಿರಿ, ನಾನು ಮಾತನಾಡುತ್ತಿದ್ದೇನೆ, ಇಸ್ರಾಯೇಲೇ, ನಿಮಗೆ ವಿರೋಧವಾಗಿ ಹೀಗೆಂದು ನಾನು ಸಾಕ್ಷಿ ಕೊಡುವೆನು: ನಾನು ದೇವರು, ಹೌದು ನಿಮ್ಮ ದೇವರು ನಾನೇ.
ಕೀರ್ತನೆಗಳು 50 : 8 (OCVKN)
ನಿಮ್ಮ ಯಜ್ಞಗಳ ವಿರೋಧವಾಗಿ ನಾನು ತಪ್ಪು ಹೊರಿಸುತ್ತಾಯಿಲ್ಲ, ಅಥವಾ ನನ್ನ ಮುಂದೆ ಯಾವಾಗಲೂ ಇರುವ ದಹನಬಲಿಗಳ ವಿರೋಧವಾಗಿಯೂ ನಾನು ತಪ್ಪು ಹೊರಿಸುತ್ತಾಯಿಲ್ಲ.
ಕೀರ್ತನೆಗಳು 50 : 9 (OCVKN)
ನಿಮ್ಮ ಮನೆಯಿಂದ ಹೋರಿಯಾಗಲಿ ಕೊಟ್ಟಿಗೆಯಿಂದ ಹೋತಗಳಾಗಲಿ ನನಗೆ ಅವಶ್ಯವಿಲ್ಲ.
ಕೀರ್ತನೆಗಳು 50 : 10 (OCVKN)
ಏಕೆಂದರೆ ಅಡವಿಯ ಮೃಗಗಳೆಲ್ಲವೂ ನನ್ನವೇ. ಸಾವಿರ ಬೆಟ್ಟಗಳಲ್ಲಿರುವ ಪಶುಗಳೂ ಸಹ ನನ್ನವೇ.
ಕೀರ್ತನೆಗಳು 50 : 11 (OCVKN)
ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆನು; ಬಯಲಿನ ಮೃಗಗಳು ನನ್ನವುಗಳಾಗಿವೆ.
ಕೀರ್ತನೆಗಳು 50 : 12 (OCVKN)
ನನಗೆ ಹಸಿವಾದರೆ ನಿಮಗೆ ಹೇಳಬೇಕಾಗಿಲ್ಲ, ಏಕೆಂದರೆ ಭೂಲೋಕವೂ ಅದರಲ್ಲಿರುವುದೆಲ್ಲವೂ ನನ್ನವೇ.
ಕೀರ್ತನೆಗಳು 50 : 13 (OCVKN)
ಹೋರಿಗಳ ಮಾಂಸವನ್ನು ನಾನು ಭುಜಿಸುವುದಿಲ್ಲ. ಹೋತಗಳ ರಕ್ತವನ್ನು ನಾನು ಕುಡಿಯುವುದಿಲ್ಲ.
ಕೀರ್ತನೆಗಳು 50 : 14 (OCVKN)
“ದೇವರಾಗಿರುವ ನನಗೆ ಸ್ತೋತ್ರವನ್ನು ಬಲಿಯಾಗಿ ಅರ್ಪಿಸಿರಿ. ಮಹೋನ್ನತನಾಗಿರುವ ನನಗೆ ಹರಕೆಗಳನ್ನು ಸಲ್ಲಿಸಿರಿ.
ಕೀರ್ತನೆಗಳು 50 : 15 (OCVKN)
ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆಯಿರಿ, ನಾನು ನಿಮ್ಮನ್ನು ಬಿಡಿಸುವೆನು, ನೀವು ನನ್ನನ್ನು ಘನಪಡಿಸುವಿರಿ.”
ಕೀರ್ತನೆಗಳು 50 : 16 (OCVKN)
ಆದರೆ ದುಷ್ಟನಿಗೆ ದೇವರು ಹೇಳುವುದೇನೆಂದರೆ: “ನನ್ನ ನಿಯಮಗಳನ್ನು ಪಠಿಸುವುದಕ್ಕೆ ಹಕ್ಕು ನಿಮಗೆ ಏನಿದೆ? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಛರಿಸುವುದೇಕೆ?
ಕೀರ್ತನೆಗಳು 50 : 17 (OCVKN)
ನೀನು ನನ್ನ ಶಿಕ್ಷಣವನ್ನು ದ್ವೇಷಿಸಿ, ನನ್ನ ವಾಕ್ಯಗಳನ್ನು ನಿಮ್ಮ ಹಿಂದೆ ಬಿಸಾಡಿಬಿಟ್ಟೀರಲ್ಲಾ.
ಕೀರ್ತನೆಗಳು 50 : 18 (OCVKN)
ಕಳ್ಳನನ್ನು ಕಂಡರೆ ಅವನೊಂದಿಗೆ ಸೇರಿಕೊಳ್ಳುತ್ತೀರಿ. ವ್ಯಭಿಚಾರಿಗಳ ಸಂಗಡ ನಿಮಗೆ ಪಾಲು ಇದೆ.
ಕೀರ್ತನೆಗಳು 50 : 19 (OCVKN)
ನೀವು ನಿಮ್ಮ ಬಾಯನ್ನು ಕೇಡಿಗೆ ಉಪಯೋಗಿಸುತ್ತೀರಿ. ನಿಮ್ಮ ನಾಲಿಗೆಯು ಮೋಸವನ್ನು ಜೋಡಿಸುತ್ತದೆ.
ಕೀರ್ತನೆಗಳು 50 : 20 (OCVKN)
ನೀವು ಕುಳಿತುಕೊಂಡು ನಿಮ್ಮ ಸಹೋದರರಿಗೆ ವಿರೋಧವಾಗಿ ಸುಳ್ಳಾಡುತ್ತೀರಿ. ನಿಮ್ಮ ಒಡಹುಟ್ಟಿದವರ ಮೇಲೆ ಚಾಡಿ ಹೇಳುತ್ತೀರಿ.
ಕೀರ್ತನೆಗಳು 50 : 21 (OCVKN)
ಇವುಗಳನ್ನೆಲ್ಲಾ ನೀವು ಮಾಡಿದ್ದೀರಿ, ಆದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ಸಹ ನಿಮ್ಮ ಹಾಗೆ ಒಬ್ಬನೆಂದು ನೀವು ನೆನಸಿಕೊಂಡಿದ್ದೀರಿ. ಆದರೆ ಈಗ ನಾನು ನಿಮ್ಮನ್ನು ಗದರಿಸಿ ನಿಮ್ಮ ಕಣ್ಣು ಮುಂದೆಯೇ ನಿಮ್ಮ ಅಪರಾಧ ಪ್ರಕಟಿಸುವೆನು.
ಕೀರ್ತನೆಗಳು 50 : 22 (OCVKN)
“ದೇವರನ್ನು ಮರೆತು ಬಿಡುವವರೇ, ಇದನ್ನು ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ. ಇಲ್ಲವಾದರೆ ಎಚ್ಚರಿಕೆಯಾಗಿರಿ. ನನ್ನ ಕೈಯಿಂದ ಬಿಡಿಸುವವರು ಯಾರೂ ಇರುವುದಿಲ್ಲವೆಂಬುದನ್ನು ಗ್ರಹಿಸಿಕೊಳ್ಳಿರಿ.
ಕೀರ್ತನೆಗಳು 50 : 23 (OCVKN)
ಯಾರು ಧನ್ಯವಾದದ ಬಲಿಯನ್ನು ಅರ್ಪಿಸುವರೋ ಅವರೇ ನನ್ನನ್ನು ಘನಪಡಿಸುವರು. ತಮ್ಮ ನಡವಳಿಕೆಯನ್ನು ಕ್ರಮಪಡಿಸಿಕೊಳ್ಳುವವರಿಗೆ ನನ್ನ ರಕ್ಷಣೆಯನ್ನು ತೋರಿಸುವೆನು.”
❮
❯
1
2
3
4
5
6
7
8
9
10
11
12
13
14
15
16
17
18
19
20
21
22
23