ಕೀರ್ತನೆಗಳು 52 : 1 (OCVKN)
ಬಲಿಷ್ಠನೇ, ನೀನು ಕೆಟ್ಟತನದಲ್ಲಿ ಹೆಚ್ಚಳ ಪಡುವುದೇಕೆ? ದೇವರ ದೃಷ್ಟಿಯಲ್ಲಿ ಅಪಕೀರ್ತಿಯಾದವನೇ, ದೇವರ ಅನಂತ ಕೃಪೆಯು ಯಾವಾಗಲೂ ಇರುವದು.
ಕೀರ್ತನೆಗಳು 52 : 2 (OCVKN)
ಮೋಸ ಮಾಡುವವನೇ, ಹದವಾದ ಕ್ಷೌರ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡನ್ನು ಕಲ್ಪಿಸುತ್ತದೆ.
ಕೀರ್ತನೆಗಳು 52 : 3 (OCVKN)
ಒಳ್ಳೆಯದಕ್ಕಿಂತ ಕೆಟ್ಟದ್ದನ್ನೇ ನೀನು ಪ್ರೀತಿಸುತ್ತಿ. ಸತ್ಯವನಾಡುವುದಕ್ಕಿಂತ ಸುಳ್ಳನ್ನೇ ನೀನು ಮಾತನಾಡುತ್ತಿ.
ಕೀರ್ತನೆಗಳು 52 : 4 (OCVKN)
ಮೋಸದ ನಾಲಿಗೆಯೇ, ನಿನಗೆ ಹಾನಿಕರವಾದ ಮಾತುಗಳೇ ಇಷ್ಟ.
ಕೀರ್ತನೆಗಳು 52 : 5 (OCVKN)
ಆದ್ದರಿಂದ ದೇವರು ನಿಶ್ಚಯವಾಗಿ ನಿನ್ನನ್ನು ನಿತ್ಯ ನಾಶಕ್ಕೆ ತರುವರು. ದೇವರು ನಿನ್ನನ್ನು ನಿನ್ನ ವಾಸಸ್ಥಳದಿಂದ ಕಿತ್ತುಹಾಕುವರು. ಜೀವಿತರ ದೇಶದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವರು.
ಕೀರ್ತನೆಗಳು 52 : 6 (OCVKN)
ನೀತಿವಂತರು ಇದನ್ನು ಕಂಡು ಭಯಪಡುವರು. ಅವರು ನಿನ್ನ ಬಗ್ಗೆ ನಗಾಡಿ ಹೀಗನ್ನುವರು,
ಕೀರ್ತನೆಗಳು 52 : 7 (OCVKN)
“ಇಗೋ, ದೇವರನ್ನು ತನ್ನ ಬಲವನ್ನಾಗಿ ಮಾಡಿಕೊಳ್ಳದೆ, ತನ್ನ ಅಧಿಕ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡು ಇತರರನ್ನು ನಾಶಮಾಡಿದ ಮನುಷ್ಯನು ಇವನೇ!”
ಕೀರ್ತನೆಗಳು 52 : 8 (OCVKN)
ನಾನಾದರೋ ದೇವರ ಆಲಯದಲ್ಲಿರುವ ಅಭಿವರ್ದಿಸುವ ಓಲಿವ್ ಮರದ ಹಾಗೆ ಇರುವೆನು. ದೇವರ ಒಡಂಬಡಿಕೆಯ ಪ್ರೀತಿಯಲ್ಲಿ ಯುಗಯುಗಾಂತರವೂ ಭರವಸವಿಟ್ಟಿರುವೆನು.
ಕೀರ್ತನೆಗಳು 52 : 9 (OCVKN)
ದೇವರೇ ನಿಮ್ಮ ಉಪಕಾರಕ್ಕಾಗಿ ಯಾವಾಗಲೂ ನಿಮ್ಮ ಭಕ್ತರ ಮುಂದೆ ನಿಮ್ಮನ್ನು ಸ್ತುತಿಸುತ್ತಿರುವೆನು. ನಿಮ್ಮ ಹೆಸರು ಒಳ್ಳೆಯದು. ಆದುದರಿಂದ ನಿಮ್ಮ ಹೆಸರನ್ನೇ ನಿರೀಕ್ಷಿಸಿಕೊಂಡಿರುವೆನು.
❮
❯