ಕೀರ್ತನೆಗಳು 55 : 1 (OCVKN)
ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡಿರಿ, ನನ್ನ ವಿಜ್ಞಾಪನೆಗೆ ನಿಮ್ಮನ್ನು ಮರೆಮಾಡಿಕೊಳ್ಳಬೇಡಿರಿ.
ಕೀರ್ತನೆಗಳು 55 : 2 (OCVKN)
ನನ್ನನ್ನು ಆಲೈಸಿರಿ, ನನಗೆ ಉತ್ತರಕೊಡಿರಿ. ನಾನು ನನ್ನ ಚಿಂತೆಯಿಂದ ದುಃಖಿಸುತ್ತಾ ಬೇಸರವಾಗಿದ್ದೇನೆ.
ಕೀರ್ತನೆಗಳು 55 : 3 (OCVKN)
ಶತ್ರುವಿನ ಗರ್ಜನೆಯಿಂದಲೂ ದುಷ್ಟರ ಬೆದರಿಕೆಯಿಂದಲೂ ನರಳುತ್ತೇನೆ. ಏಕೆಂದರೆ ಅವರು ಅಪರಾಧವನ್ನು ನನ್ನ ಮೇಲೆ ಬರಮಾಡಿ, ಕೋಪದಿಂದ ನನ್ನನ್ನು ಹಗೆ ಮಾಡುತ್ತಾರೆ.
ಕೀರ್ತನೆಗಳು 55 : 4 (OCVKN)
ನನ್ನ ಹೃದಯವು ನನ್ನ ಅಂತರಂಗದಲ್ಲಿ ನೊಂದುಕೊಳ್ಳುತ್ತದೆ. ಮರಣದ ಬೆದರಿಕೆಗಳು ನನ್ನ ಮೇಲೆ ಬಿದ್ದಿವೆ.
ಕೀರ್ತನೆಗಳು 55 : 5 (OCVKN)
ಭಯವೂ ನಡುಗೂ ನನಗೆ ಬಂದಿವೆ; ಭೀತಿಯು ನನ್ನನ್ನು ಮುಚ್ಚಿದೆ.
ಕೀರ್ತನೆಗಳು 55 : 6 (OCVKN)
“ಓ, ಪಾರಿವಾಳದಂತೆ ನನಗೆ ರೆಕ್ಕೆಗಳು ಇರುತ್ತಿದ್ದರೆ, ಹಾರಿಹೋಗಿ ವಿಶ್ರಾಂತಿಯನ್ನು ತೆಗೆದುಕೊಳ್ಳುತ್ತಿದ್ದೆ.
ಕೀರ್ತನೆಗಳು 55 : 7 (OCVKN)
ನಾನು ದೂರ ಹಾರಿಹೋಗಿ ಮರುಭೂಮಿಯಲ್ಲಿ ವಾಸಿಸುತ್ತಿದ್ದೆ.
ಕೀರ್ತನೆಗಳು 55 : 8 (OCVKN)
ಚಂಡಮಾರುತದಿಂದಲೂ ಬಿರುಗಾಳಿಯಿಂದಲೂ ತಪ್ಪಿಸಿಕೊಳ್ಳುತ್ತಿದ್ದೆ,” ಎಂದುಕೊಂಡೆನು.
ಕೀರ್ತನೆಗಳು 55 : 9 (OCVKN)
ಯೆಹೋವ ದೇವರೇ, ದುಷ್ಟರನ್ನು ಕಳವಳಗೊಳಿಸಿರಿ, ಅವರ ಮಾತುಗಳನ್ನು ನಿಲ್ಲಿಸಿಬಿಡಿರಿ. ಬಲಾತ್ಕಾರವನ್ನೂ ವಿವಾದವನ್ನೂ ಪಟ್ಟಣದಲ್ಲಿ ನಾನು ಕಾಣುತ್ತಿದ್ದೇನೆ.
ಕೀರ್ತನೆಗಳು 55 : 10 (OCVKN)
ಅವರು ಹಗಲಿರುಳು ಪಟ್ಟಣದ ಗೋಡೆಗಳನ್ನು ಸುತ್ತುತ್ತಾರೆ. ಕೇಡು ಅನಾಚಾರಗಳು ಅದರ ಮಧ್ಯದಲ್ಲಿ ಇವೆ.
ಕೀರ್ತನೆಗಳು 55 : 11 (OCVKN)
ನಾಶಕರ ಶಕ್ತಿಗಳು ನಗರ ಮಧ್ಯದಲ್ಲಿ ಇವೆ. ಬೀದಿಗಳೊಳಗಿಂದ ಬೆದರಿಕೆಯೂ ವಂಚನೆಯೂ ತೊಲಗುವುದಿಲ್ಲ.
ಕೀರ್ತನೆಗಳು 55 : 12 (OCVKN)
ನನ್ನನ್ನು ನಿಂದಿಸುವವನು ಶತ್ರುವಲ್ಲ, ಶತ್ರುವಾದರೆ ತಾಳಿಕೊಳ್ಳುತ್ತಿದ್ದೆ. ನನಗೆ ವಿರೋಧವಾಗಿರುವವನು ನನ್ನ ವೈರಿಯಾಗಿದ್ದರೆ, ಅವನಿಂದ ಅಡಗಿಕೊಳ್ಳುತ್ತಿದ್ದೆನು.
ಕೀರ್ತನೆಗಳು 55 : 13 (OCVKN)
ಆದರೆ ನನ್ನ ಜೊತೆಗಾರನೂ ನನ್ನ ಆಪ್ತನೂ, ನನಗೆ ಸಮನಾದವನೇ ವಿರೋಧವಾಗಿದ್ದಾನೆ.
ಕೀರ್ತನೆಗಳು 55 : 14 (OCVKN)
ದೇವರ ಆಲಯಕ್ಕೆ ಆರಾಧಕರ ಗುಂಪಿನೊಂದಿಗೆ ನಾವಿಬ್ಬರೂ ನಡೆದು ಹೋಗುವಾಗ ಮಧುರ ಅನ್ಯೋನ್ಯತೆಯನ್ನು ಅನುಭವಿಸಿದೆವು.
ಕೀರ್ತನೆಗಳು 55 : 15 (OCVKN)
ಮರಣ ನನ್ನ ವೈರಿಗಳನ್ನು ತಟ್ಟನೆ ಹಿಡಿಯಲಿ. ಜೀವಸಹಿತ ಪಾತಾಳಕ್ಕೆ ಅವರು ಇಳಿಯಲಿ, ಅವರ ಮನೆಯಲ್ಲಿ ದುಷ್ಟತನವು ಇದೆ.
ಕೀರ್ತನೆಗಳು 55 : 16 (OCVKN)
ಆದರೆ ನಾನು ದೇವರನ್ನು ಕರೆಯುವೆನು. ಯೆಹೋವ ದೇವರು ನನ್ನನ್ನು ರಕ್ಷಿಸುವರು.
ಕೀರ್ತನೆಗಳು 55 : 17 (OCVKN)
ಸಂಜೆ, ಮುಂಜಾನೆ, ಮಧ್ಯಾಹ್ನಗಳಲ್ಲಿ ಹಂಬಲಿಸಿ ಮೊರೆಯಿಡುವೆನು. ದೇವರು ನನ್ನ ಧ್ವನಿಯನ್ನು ಕೇಳುವರು.
ಕೀರ್ತನೆಗಳು 55 : 18 (OCVKN)
ಅನೇಕರು ನನ್ನನ್ನು ವಿರೋಧಿಸಿದರೂ ನನಗೆ ವಿರೋಧವಾಗಿ ಆಗುವ ಯುದ್ಧಗಳಲ್ಲಿ ದೇವರು ನನ್ನನ್ನು ಯಾವುದೇ ಹಾನಿಯಾಗದಂತೆ ವಿಮೋಚಿಸುವರು.
ಕೀರ್ತನೆಗಳು 55 : 19 (OCVKN)
ಆದಿಯಿಂದ ಸಿಂಹಾಸನಾರೂಢರಾಗಿರುವ ದೇವರು, ಅವರ ಮೊರೆಯನ್ನು ಕೇಳಿ ಅವರನ್ನು ತಗ್ಗಿಸುವರು, ಏಕೆಂದರೆ, ಅವರು ದೇವರಿಗೆ ಭಯಪಡುವುದಿಲ್ಲ. ದೇವರು ಬದಲಾಗುವುದಿಲ್ಲ.
ಕೀರ್ತನೆಗಳು 55 : 20 (OCVKN)
ನನ್ನ ಜೊತೆಗಾರನು ತನ್ನ ಸ್ನೇಹಿತನ ಮೇಲೆ ದಾಳಿಮಾಡಿದ್ದಾನೆ. ತಾನು ಮಾಡಿದ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ.
ಕೀರ್ತನೆಗಳು 55 : 21 (OCVKN)
ಅವನ ಬಾಯಿಯ ಮಾತುಗಳು ಬೆಣ್ಣೆಗಿಂತ ನುಣ್ಣಗಾಗಿವೆ; ಆದರೆ ಅವನ ಹೃದಯದಲ್ಲಿ ಕಾಳಗವಿದೆ; ಅವನ ಮಾತುಗಳು ಎಣ್ಣೆಗಿಂತ ನಯವಾಗಿವೆ; ಆದರೆ ಅವು ಬಿಚ್ಚುಗತ್ತಿಗಳಾಗಿವೆ.
ಕೀರ್ತನೆಗಳು 55 : 22 (OCVKN)
ಯೆಹೋವ ದೇವರ ಮೇಲೆ ನಿಮ್ಮ ಭಾರವನ್ನು ಹಾಕಿರಿ. ಅವರು ನಿಮಗೆ ಆಧಾರವಾಗಿರುವರು. ದೇವರು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸುವುದಿಲ್ಲ.
ಕೀರ್ತನೆಗಳು 55 : 23 (OCVKN)
ಆದರೆ ದೇವರೇ, ದುಷ್ಟರನ್ನು ನಾಶದ ಕುಣಿಯಲ್ಲಿ ಇಳಿಯ ಮಾಡುವಿರಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಕಾಲದಲ್ಲಿ ಅರ್ಧವನ್ನೂ ಜೀವಿಸುವುದಿಲ್ಲ. ನಾನಾದರೋ ನಿಮ್ಮಲ್ಲಿ ಭರವಸವಿಡುತ್ತೇನೆ.

1 2 3 4 5 6 7 8 9 10 11 12 13 14 15 16 17 18 19 20 21 22 23