ಕೀರ್ತನೆಗಳು 56 : 1 (OCVKN)
ದೇವರೇ ಕರುಣಿಸು, ಏಕೆಂದರೆ ಮನುಷ್ಯರು ನನ್ನನ್ನು ಬೆನ್ನಟ್ಟುತ್ತಿದ್ದಾರೆ. ದಿನವೆಲ್ಲಾ ವಿರೋಧಿಸುತ್ತಾ ನನ್ನನ್ನು ಬಾಧಿಸುತ್ತಿದ್ದಾರೆ.
ಕೀರ್ತನೆಗಳು 56 : 2 (OCVKN)
ನನ್ನ ವಿರೋಧಿಗಳು ದಿನವೆಲ್ಲಾ ನನ್ನನ್ನು ಬೆನ್ನಟ್ಟುತ್ತಿದ್ದಾರೆ. ಗರ್ವದಿಂದ ನನಗೆ ವಿರೋಧವಾಗಿ ಯುದ್ಧ ಮಾಡುತ್ತಿದ್ದಾರೆ.
ಕೀರ್ತನೆಗಳು 56 : 3 (OCVKN)
ನಾನು ಭಯಪಡುವ ಸಮಯದಲ್ಲಿ ನಿಮ್ಮಲ್ಲಿ ಭರವಸೆ ಇಡುವೆನು.
ಕೀರ್ತನೆಗಳು 56 : 4 (OCVKN)
ದೇವರ ಮಾತುಗಳಲ್ಲಿ ನಾನು ಹೆಮ್ಮೆಪಡುವೆನು. ದೇವರಲ್ಲಿಯೇ ಭರವಸೆ ಇಡುವೆನು, ನಾನು ಭಯಪಡುವುದಿಲ್ಲ. ಸಾಯುವ ಮನುಷ್ಯನು ನನಗೇನು ಮಾಡಬಲ್ಲ?
ಕೀರ್ತನೆಗಳು 56 : 5 (OCVKN)
ಶತ್ರುಗಳು ನನ್ನ ಮಾತುಗಳನ್ನು ಸದಾ ಅಪಾರ್ಥ ಮಾಡಿಕೊಳ್ಳುತ್ತಾರೆ. ನನಗೆ ವಿರೋಧವಾಗಿರುವ ಅವರ ಆಲೋಚನೆಗಳೆಲ್ಲಾ ಕೇಡಿಗಾಗಿವೆ.
ಕೀರ್ತನೆಗಳು 56 : 6 (OCVKN)
ಅವರು ಕೂಡಿಕೊಂಡು ಹೊಂಚುಹಾಕುತ್ತಾರೆ. ನನ್ನ ಪ್ರಾಣ ತೆಗೆಯಲು ಕುತೂಹಲದಿಂದ ನನ್ನ ಹೆಜ್ಜೆಗಳನ್ನು ಗುರುತಿಸುತ್ತಾರೆ.
ಕೀರ್ತನೆಗಳು 56 : 7 (OCVKN)
ಅಪರಾಧದಿಂದ ಅವರು ತಪ್ಪಿಸಿಕೊಂಡಾರೋ? ದೇವರೇ ಜನರನ್ನು ಕಠಿಣವಾಗಿ ದಂಡಿಸಿರಿ.
ಕೀರ್ತನೆಗಳು 56 : 8 (OCVKN)
ನನ್ನ ಗೋಳಾಟವನ್ನು ಎಣಿಕೆ ಮಾಡಿರಿ, ನಿಮ್ಮ ಸುರುಳಿಯಲ್ಲಿ ನನ್ನ ಕಣ್ಣೀರ ಲೆಕ್ಕಮಾಡಿರಿ, ಅವು ನಿಮ್ಮ ಗ್ರಂಥದಲ್ಲಿ ಬರೆದಿದೆಯಲ್ಲವೇ?
ಕೀರ್ತನೆಗಳು 56 : 9 (OCVKN)
ನಾನು ನಿಮಗೆ ಮೊರೆಯಿಟ್ಟಾಗ, ನನ್ನ ಶತ್ರುಗಳು ಹಿಂದಿರುಗುವರು. ಇದರಿಂದ ದೇವರು ನನಗಿದ್ದಾರೆ ಎಂಬುದನ್ನು ತಿಳಿದುಕೊಳ್ಳುವೆನು.
ಕೀರ್ತನೆಗಳು 56 : 10 (OCVKN)
ನಾನು ದೇವರಲ್ಲಿಯೂ ದೇವರ ವಾಕ್ಯದಲ್ಲಿಯೂ ಹೆಮ್ಮೆಪಡುವೆನು. ಹೌದು, ದೇವರಲ್ಲಿಯೂ ಯೆಹೋವ ದೇವರ ವಾಕ್ಯದಲ್ಲಿಯೂ ಹೆಮ್ಮೆಪಡುವೆನು.
ಕೀರ್ತನೆಗಳು 56 : 11 (OCVKN)
ನಾನು ದೇವರಲ್ಲಿ ಭರವಸೆಯಿಡುವೆನು. ನಾನು ಭಯಪಡುವುದಿಲ್ಲ. ಮಾನವನು ನನಗೇನು ಮಾಡುವನು?
ಕೀರ್ತನೆಗಳು 56 : 12 (OCVKN)
ನನ್ನ ದೇವರೇ ನಾನು ನಿಮಗೆ ಸಲ್ಲಿಸಿದ ಹರಕೆಗಳಿಗೆ ಅಧೀನವಾಗಿದ್ದೇನೆ. ನಾನು ಉಪಕಾರ ಸ್ತುತಿಯ ಕಾಣಿಕೆಗಳನ್ನು ನಿಮಗೆ ಸಲ್ಲಿಸುವೆನು.
ಕೀರ್ತನೆಗಳು 56 : 13 (OCVKN)
ಏಕೆಂದರೆ ನೀವು ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀರಿ. ನಾನು ಜೀವದ ಬೆಳಕಿನಲ್ಲಿ ನಿಮ್ಮ ಮುಂದೆ ನಡೆದುಕೊಳ್ಳುವ ಹಾಗೆ ನೀವು ನನ್ನ ಪಾದಗಳನ್ನು ಎಡವದಂತೆ ಕಾಪಾಡಿದ್ದೀರಿ.

1 2 3 4 5 6 7 8 9 10 11 12 13