ಕೀರ್ತನೆಗಳು 6 : 1 (OCVKN)
ಯೆಹೋವ ದೇವರೇ, ನೀವು ಬೇಸರದಿಂದ ನನ್ನನ್ನು ಗದರಿಸಬೇಡಿರಿ, ರೋಷದಿಂದಲೂ ನನ್ನನ್ನು ದಂಡಿಸಬೇಡಿರಿ.
ಕೀರ್ತನೆಗಳು 6 : 2 (OCVKN)
ಯೆಹೋವ ದೇವರೇ, ನನ್ನನ್ನು ಕರುಣಿಸಿರಿ, ನಾನು ಬಲಹೀನನಾಗಿದ್ದೇನೆ; ಯೆಹೋವ ದೇವರೇ, ನನ್ನನ್ನು ಸ್ವಸ್ಥಮಾಡಿರಿ, ನನ್ನ ಎಲುಬುಗಳು ಬಹು ವ್ಯಥೆಗೊಳಗಾಗಿವೆ.
ಕೀರ್ತನೆಗಳು 6 : 3 (OCVKN)
ನನ್ನ ಪ್ರಾಣವು ಬಹು ಸಂಕಟದಲ್ಲಿದೆ. ಎಲ್ಲಿಯತನಕ, ಯೆಹೋವ ದೇವರೇ, ಇನ್ನೂ ಎಲ್ಲಿಯತನಕ?
ಕೀರ್ತನೆಗಳು 6 : 4 (OCVKN)
ಯೆಹೋವ ದೇವರೇ, ನನ್ನ ಕಡೆಗೆ ಹಿಂದಿರುಗಿರಿ, ನನ್ನನ್ನು ಬಿಡುಗಡೆ ಮಾಡಿರಿ; ನಿಮ್ಮ ಒಡಂಬಡಿಕೆಯ ಪ್ರೀತಿಯ ನಿಮಿತ್ತ ನನ್ನನ್ನು ರಕ್ಷಿಸಿರಿ.
ಕೀರ್ತನೆಗಳು 6 : 5 (OCVKN)
ಸತ್ತವರಲ್ಲಿ ನಿಮ್ಮನ್ನು ಸ್ಮರಿಸುವವರಿಲ್ಲ. ಪಾತಾಳದಲ್ಲಿ ನಿಮ್ಮನ್ನು ಸ್ತುತಿಸುವವರು ಯಾರು?
ಕೀರ್ತನೆಗಳು 6 : 6 (OCVKN)
ನನ್ನ ನರಳಾಟದಿಂದ ದಣಿದು ಹೋಗಿದ್ದೇನೆ. ರಾತ್ರಿಯೆಲ್ಲಾ ನಾನು ಅಳುವುದರಿಂದ ನನ್ನ ಹಾಸಿಗೆಯು ಕಣ್ಣೀರಿನ ಪ್ರವಾಹದಿಂದ ತೇಲಾಡುತ್ತದೆ, ಕಣ್ಣೀರಿನಿಂದ ನನ್ನ ಮಂಚವನ್ನು ತೊಯಿಸಿದ್ದೇನೆ.
ಕೀರ್ತನೆಗಳು 6 : 7 (OCVKN)
ದುಃಖದಿಂದ ನನ್ನ ಕಣ್ಣುಗಳು ಬಲಹೀನವಾಗಿವೆ, ನನ್ನ ಸಕಲ ವೈರಿಗಳಿಂದ ಅವು ಮೊಬ್ಬಾಗಿವೆ.
ಕೀರ್ತನೆಗಳು 6 : 8 (OCVKN)
ಕೆಟ್ಟದ್ದನ್ನು ಮಾಡುವವರೇ, ನೀವೆಲ್ಲರು ನನ್ನಿಂದ ತೊಲಗಿಹೋಗಿರಿ, ಏಕೆಂದರೆ ಯೆಹೋವ ದೇವರು ನನ್ನ ಗೋಳಾಟವನ್ನು ಕೇಳಿದ್ದಾರೆ.
ಕೀರ್ತನೆಗಳು 6 : 9 (OCVKN)
ಯೆಹೋವ ದೇವರು ನಾನು ಕರುಣೆಗಾಗಿ ಕೇಳಿದ ನನ್ನ ಮೊರೆಯನ್ನು ಆಲಿಸಿದ್ದಾರೆ; ಯೆಹೋವ ದೇವರು ನನ್ನ ಪ್ರಾರ್ಥನೆಯನ್ನು ಸ್ವೀಕರಿಸುವರು.
ಕೀರ್ತನೆಗಳು 6 : 10 (OCVKN)
ನನ್ನ ಶತ್ರುಗಳೆಲ್ಲರೂ ನಾಚಿಕೆಪಟ್ಟು ತತ್ತರಿಸುವರು; ಕ್ಷಣಮಾತ್ರದಲ್ಲಿ ಅವರು ಅವಮಾನಗೊಂಡು ಹಿಂದಿರುಗಿ ಹೋಗುವರು.

1 2 3 4 5 6 7 8 9 10