ಕೀರ್ತನೆಗಳು 64 : 1 (OCVKN)
ದೇವರೇ, ನನ್ನ ದೂರುಗಳನ್ನು ನಿಮ್ಮ ಮುಂದಿಡುವಾಗ ನನ್ನ ಬಿನ್ನಹವನ್ನು ಕೇಳಿರಿ. ಶತ್ರುವಿನ ಹೆದರಿಕೆಯಿಂದ ನನ್ನ ಜೀವವನ್ನು ಕಾಪಾಡಿರಿ.
ಕೀರ್ತನೆಗಳು 64 : 2 (OCVKN)
ದುರ್ಮಾರ್ಗಿಗಳ ಗುಪ್ತ ಆಲೋಚನೆಗಳಿಗೂ, ದುಷ್ಟರ ಒಳಸಂಚಿಗೂ ನನ್ನನ್ನು ಮರೆಮಾಡಿರಿ.
ಕೀರ್ತನೆಗಳು 64 : 3 (OCVKN)
ಅವರು ತಮ್ಮ ನಾಲಿಗೆಯನ್ನು ಖಡ್ಗದಂತೆ ಮಸೆಯುತ್ತಾರೆ.
ಕೀರ್ತನೆಗಳು 64 : 4 (OCVKN)
ನಿರ್ದೋಷಿಯ ಕಡೆಗೆ ಕಹಿಮಾತುಗಳನ್ನು ಬಾಣದಂತೆ ಗುರಿಯಿಟ್ಟಿದ್ದಾರೆ. ಅಂಜದೆ ಫಕ್ಕನೆ ಅವನ ಕಡೆಗೆ ಎಸೆಯುತ್ತಾರೆ.
ಕೀರ್ತನೆಗಳು 64 : 5 (OCVKN)
ತಮ್ಮೊಳಗೆ ಕೇಡನ್ನು ಪ್ರೋತ್ಸಾಹ ಮಾಡುತ್ತಾರೆ. ರಹಸ್ಯವಾಗಿ ಬಲೆಗಳನ್ನು ಒಡ್ಡುವುದಕ್ಕೆ ಮಾತನಾಡುತ್ತಾ, “ನಮ್ಮನ್ನು ಕಾಣುವವರು ಯಾರು?” ಎಂದುಕೊಳ್ಳುತ್ತಾರೆ.
ಕೀರ್ತನೆಗಳು 64 : 6 (OCVKN)
ಅವರು ಅನ್ಯಾಯಗಳನ್ನು ಕಲ್ಪಿಸಿ, “ನಾವು ಒಳ್ಳೇ ಉಪಾಯವನ್ನು ಮಾಡಿದ್ದೇವೆ,” ಅಂದುಕೊಳ್ಳುತ್ತಾರೆ. ನಿಶ್ಚಯವಾಗಿ ಮಾನವರ ಆಂತರ್ಯವೂ ಹೃದಯವೂ ಕುಯುಕ್ತಿಯಿಂದ ಕೂಡಿದೆ.
ಕೀರ್ತನೆಗಳು 64 : 7 (OCVKN)
ಆದರೆ ದೇವರು ಅವರ ಬಾಣದಿಂದಲೇ, ಫಕ್ಕನೆ ಅವರಿಗೆ ಗಾಯಗಳಾಗುವಂತೆ ಅನುಮತಿಸುವರು.
ಕೀರ್ತನೆಗಳು 64 : 8 (OCVKN)
ಹೀಗೆ ಅವರು ತಮ್ಮ ನಾಲಿಗೆಯಿಂದ ತಾವೇ ಎಡವಿ ಬೀಳುವಂತೆ ಮಾಡಿಕೊಳ್ಳುವರು. ಅವರನ್ನು ಕಾಣುವವರೆಲ್ಲರೂ ತಲೆಯಾಡಿಸಿ ಅಣಕಿಸುವರು.
ಕೀರ್ತನೆಗಳು 64 : 9 (OCVKN)
ಎಲ್ಲಾ ಮನುಷ್ಯರೂ ಭಯಪಟ್ಟು ದೇವರ ಕಾರ್ಯಗಳನ್ನು ಸಾರುವರು. ದೇವರು ಮಾಡಿದವುಗಳನ್ನು ಆಲೋಚಿಸಿಕೊಳ್ಳುವರು.
ಕೀರ್ತನೆಗಳು 64 : 10 (OCVKN)
ನೀತಿವಂತರು ಯೆಹೋವ ದೇವರಲ್ಲಿ ಆನಂದಪಟ್ಟು ದೇವರನ್ನೇ ಆಶ್ರಯಿಸಿಕೊಳ್ಳುವರು. ಸರಳ ಹೃದಯದವರೆಲ್ಲರೂ ದೇವರನ್ನು ಮಹಿಮೆಪಡಿಸುವರು.

1 2 3 4 5 6 7 8 9 10