ಕೀರ್ತನೆಗಳು 65 : 1 (OCVKN)
ದೇವರೇ, ಚೀಯೋನಿನಲ್ಲಿ ನಿಮಗೋಸ್ಕರ ಸ್ತೋತ್ರವು ಕಾದಿದೆ. ನಿಮಗೆ ನಮ್ಮ ಹರಕೆಗಳನ್ನು ಪೂರೈಸುವೆವು.
ಕೀರ್ತನೆಗಳು 65 : 2 (OCVKN)
ಪ್ರಾರ್ಥನೆಯನ್ನು ಕೇಳುವವರೇ, ಎಲ್ಲಾ ಜನರು ನಿಮ್ಮ ಬಳಿಗೆ ಬರುವರು.
ಕೀರ್ತನೆಗಳು 65 : 3 (OCVKN)
ನಾವು ನಮ್ಮ ಪಾಪಗಳಿಂದ ತುಂಬಿಹೋಗಿರುವಾಗ ನೀವೇ ನಮ್ಮ ದ್ರೋಹಗಳಿಗಾಗಿ ದೋಷಪರಿಹಾರಕರು.
ಕೀರ್ತನೆಗಳು 65 : 4 (OCVKN)
ನೀವು ಆಯ್ದುಕೊಂಡು ನಿಮ್ಮ ಬಳಿಗೆ ಬರಮಾಡಿಕೊಳ್ಳುವವನು ಧನ್ಯನು. ಏಕೆಂದರೆ ನಿಮ್ಮ ಅಂಗಳಗಳಲ್ಲಿ ಅವನು ವಾಸವಾಗಿರುವನು. ನಿಮ್ಮ ಪರಿಶುದ್ಧ ಮಂದಿರವಾದ ನಿಮ್ಮ ಆಲಯದ ಒಳ್ಳೆಯ ಸಂಗತಿಗಳಿಂದ ನಮಗೆ ತೃಪ್ತಿಯಾಗಲಿ.
ಕೀರ್ತನೆಗಳು 65 : 5 (OCVKN)
ಅತಿಶಯ ಹಾಗು ನೀತಿಯ ಕೃತ್ಯಗಳನ್ನು ನಡೆಸಿ, ನೀವು ನಮಗೆ ಉತ್ತರ ಕೊಡುವಿರಿ. ನಮ್ಮ ರಕ್ಷಣೆಯ ದೇವರೇ, ಭೂಮಿಯಲ್ಲಿರುವವರಿಗೂ, ಸಮುದ್ರದ ಆಚೆ ದೂರವಾಗಿರುವವರಿಗೂ ನೀವು ಭರವಸೆಯಾಗಿದ್ದೀರಿ.
ಕೀರ್ತನೆಗಳು 65 : 6 (OCVKN)
ಬೆಟ್ಟಗಳನ್ನು ನಿಮ್ಮ ಶಕ್ತಿಯಿಂದ ರೂಪಿಸಿದವರು ನೀವೇ. ಜಲದಿಂದ ನಡು ಕಟ್ಟಿಕೊಂಡಿರುವವರೂ ನೀವೇ.
ಕೀರ್ತನೆಗಳು 65 : 7 (OCVKN)
ಸಮುದ್ರಗಳ ಘೋಷವನ್ನೂ, ಅವುಗಳ ತೆರೆಗಳ ಘೋಷವನ್ನೂ, ಪ್ರಜೆಗಳ ಕೋಲಾಹಲವನ್ನೂ ಶಮನಗೊಳಿಸುವವರು ನೀವೇ.
ಕೀರ್ತನೆಗಳು 65 : 8 (OCVKN)
ಇಡೀ ಭೂಮಿಯಲ್ಲಿರುವವರು ನಿಮ್ಮ ಅದ್ಭುತಕಾರ್ಯಗಳಿಗೆ ಅತಿಶಯಗೊಂಡಿದ್ದಾರೆ. ಉದಯಾಸ್ತಮಾನಗಳಲ್ಲಿ ಇರುವವರನ್ನು ಉತ್ಸಾಹ ಧ್ವನಿಗೈಯುವಂತೆ ಮಾಡುತ್ತೀರಿ.
ಕೀರ್ತನೆಗಳು 65 : 9 (OCVKN)
ಭೂಮಿಯನ್ನು ಸಂಧಿಸಿ, ಅದಕ್ಕೆ ಮಳೆಬರುವಂತೆ, ಅದನ್ನು ಫಲವತ್ತಾಗಿ ಮಾಡುತ್ತೀರಿ. ದೇವರ ನದಿಯು ನೀರಿನಿಂದ ತುಂಬಿದೆ. ಹೀಗೆ ಭೂಮಿಯನ್ನು ಸಿದ್ಧಮಾಡಿ, ಜನರಿಗೆ ನೀವು ಧಾನ್ಯವನ್ನು ಒದಗಿಸುತ್ತೀರಿ.
ಕೀರ್ತನೆಗಳು 65 : 10 (OCVKN)
ನೇಗಿಲ ಸಾಲುಗಳನ್ನು ಸಮಮಾಡುತ್ತೀರಿ. ಸುರಿಯುವ ಮಳೆಯಿಂದ ಅದನ್ನು ಮೃದು ಮಾಡುತ್ತೀರಿ, ಅದರ ಮೊಳಕೆಯನ್ನು ಆಶೀರ್ವದಿಸುತ್ತೀರಿ.
ಕೀರ್ತನೆಗಳು 65 : 11 (OCVKN)
ವರ್ಷಕ್ಕೆ ನಿಮ್ಮ ಉದಾರತೆಯ ಕಿರೀಟವನ್ನು ಇಡುತ್ತೀರಿ. ನಿಮ್ಮ ಹಾದಿಗಳು ಸಮೃದ್ಧಿಯಿಂದ ತುಂಬಿ ಪ್ರವಾಹಿಸುತ್ತಿದೆ.
ಕೀರ್ತನೆಗಳು 65 : 12 (OCVKN)
ಮರುಭೂಮಿಯ ಹುಲ್ಲುಗಾವಲಲ್ಲಿ ವೃಷ್ಟಿಯಾಗಿದೆ. ಗುಡ್ಡಗಳು ಉಲ್ಲಾಸವನ್ನು ಧರಿಸಿಕೊಂಡಿವೆ.
ಕೀರ್ತನೆಗಳು 65 : 13 (OCVKN)
ಹುಲ್ಲುಗಾವಲುಗಳು ಮಂದೆಗಳಿಂದ ಹೊದಿಕೆಯಾಗಿವೆ. ಕಣಿವೆಗಳು ಸಹ ಧಾನ್ಯದಿಂದ ಮುಚ್ಚಿರುತ್ತವೆ. ಅವು ಉತ್ಸಾಹಗೊಂಡು ಹಾಡುತ್ತವೆ.

1 2 3 4 5 6 7 8 9 10 11 12 13