ಕೀರ್ತನೆಗಳು 66 : 1 (OCVKN)
ಸಮಸ್ತ ದೇಶಗಳೇ, ದೇವರಿಗೆ ಉತ್ಸಾಹಧ್ವನಿ ಮಾಡಿರಿ.
ಕೀರ್ತನೆಗಳು 66 : 2 (OCVKN)
ದೇವರ ಹೆಸರಿನ ಮಹಿಮೆಯನ್ನು ಕೊಂಡಾಡಿರಿ. ದೇವರ ಸ್ತೋತ್ರವನ್ನು ಘನವುಳ್ಳದ್ದಾಗಿ ಮಾಡಿರಿ.
ಕೀರ್ತನೆಗಳು 66 : 3 (OCVKN)
ನೀವು ದೇವರಿಗೆ, “ನಿಮ್ಮ ಕೃತ್ಯಗಳು ಅತಿಶಯವಾದವುಗಳಾಗಿವೆ. ನಿಮ್ಮ ಶತ್ರುಗಳು ನಿಮ್ಮೆದುರಿನಲ್ಲಿ ಮುದುರಿ ಬೀಳುವಷ್ಟು ನಿಮ್ಮ ಶಕ್ತಿ ದೊಡ್ಡದಾಗಿದೆ.
ಕೀರ್ತನೆಗಳು 66 : 4 (OCVKN)
ಭೂಮಿಯೆಲ್ಲಾ ನಿಮ್ಮನ್ನು ಆರಾಧಿಸುವುದು. ನಿಮ್ಮನ್ನು ಕೀರ್ತಿಸುತ್ತಾ ಲೋಕವು ನಿಮ್ಮ ನಾಮವನ್ನು ಕೀರ್ತಿಸುತ್ತಿರುವುದು,” ಎಂದು ಹೇಳಿರಿ.
ಕೀರ್ತನೆಗಳು 66 : 5 (OCVKN)
ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ. ಮಾನವರ ಪರವಾಗಿ ಮಾಡಿರುವ ದೇವರ ಕಾರ್ಯಗಳು ಅತಿಶಯವಾಗಿವೆ.
ಕೀರ್ತನೆಗಳು 66 : 6 (OCVKN)
ದೇವರು ಸಮುದ್ರವನ್ನು ಒಣ ಭೂಮಿಯನ್ನಾಗಿ ಮಾಡಿದರು. ಜನರು ಕಾಲಿನಿಂದ ನದಿಯನ್ನು ದಾಟಿದರು. ಬನ್ನಿರಿ, ದೇವರಲ್ಲಿ ಆನಂದಿಸೋಣ.
ಕೀರ್ತನೆಗಳು 66 : 7 (OCVKN)
ದೇವರು ತಮ್ಮ ಶಕ್ತಿಯಿಂದ ಎಂದೆಂದಿಗೂ ಆಳುವವರಾಗಿದ್ದಾರೆ. ದೇವರ ಕಣ್ಣುಗಳು ಜನಾಂಗಗಳನ್ನು ದೃಷ್ಟಿಸುತ್ತವೆ; ದೇವರಿಗೆ ವಿರೋಧವಾಗಿ ದಂಗೆಕೋರರು ಏಳದಿರಲಿ.
ಕೀರ್ತನೆಗಳು 66 : 8 (OCVKN)
ಸಮಸ್ತ ಜನರೇ, ನೀವು ನಮ್ಮ ದೇವರನ್ನು ಸ್ತುತಿಸಿರಿ. ದೇವರನ್ನು ಸ್ತುತಿಸುವ ಶಬ್ದವು ಕೇಳಿಸಲಿ.
ಕೀರ್ತನೆಗಳು 66 : 9 (OCVKN)
ದೇವರು ನಮ್ಮ ಜೀವನವನ್ನು ಕಾಪಾಡಿ, ನಮ್ಮ ಕಾಲು ಎಡವದಂತೆ ಮಾಡಿದ್ದಾರೆ.
ಕೀರ್ತನೆಗಳು 66 : 10 (OCVKN)
ದೇವರೇ, ನೀವು ನಮ್ಮನ್ನು ಪರಿಶೋಧಿಸಿದ್ದೀರಿ. ಬೆಳ್ಳಿಯನ್ನು ಪುಟಕ್ಕೆ ಹಾಕುವ ಪ್ರಕಾರ ನಮ್ಮನ್ನು ಶುದ್ಧೀಕರಿಸಿದ್ದೀರಿ.
ಕೀರ್ತನೆಗಳು 66 : 11 (OCVKN)
ನೀವು ಬಲೆಯೊಳಗೆ ನಮ್ಮನ್ನು ಸಿಕ್ಕಿಸಿದ್ದೀರಿ. ನಮ್ಮ ಬೆನ್ನಿನ ಮೇಲೆ ಭಾರವನ್ನು ಹೊರಿಸಿದ್ದೀರಿ.
ಕೀರ್ತನೆಗಳು 66 : 12 (OCVKN)
ಮನುಷ್ಯರು ನಮ್ಮ ತಲೆ ಮೇಲೆ ಸವಾರಿ ಮಾಡುವಂತೆ ಮಾಡಿದ್ದೀರಿ. ನಾವು ಬೆಂಕಿಯನ್ನೂ ನೀರನ್ನೂ ದಾಟುವಂತೆ ಮಾಡಿದ್ದೀರಿ. ಆದರೆ ನೀವು ನಮ್ಮನ್ನು ಸಮೃದ್ಧಿಯ ಸ್ಥಳದೊಳಗೆ ಬರಮಾಡಿದ್ದೀರಿ.
ಕೀರ್ತನೆಗಳು 66 : 13 (OCVKN)
ನಾನು ದಹನಬಲಿಯೊಂದಿಗೆ ನಿಮ್ಮ ಆಲಯಕ್ಕೆ ಬರುವೆನು.
ಕೀರ್ತನೆಗಳು 66 : 14 (OCVKN)
ನನ್ನ ಇಕ್ಕಟ್ಟಿನಲ್ಲಿ ತುಟಿ ಬಿಚ್ಚಿ ನನ್ನ ಬಾಯಿಂದ ನುಡಿದ ನನ್ನ ಹರಕೆಗಳನ್ನು ನಾನು ನಿಮಗೆ ಸಲ್ಲಿಸುವೆನು.
ಕೀರ್ತನೆಗಳು 66 : 15 (OCVKN)
ಕೊಬ್ಬಿದ ದಹನಬಲಿಗಳನ್ನು ಕಾಣಿಕೆಯಾಗಿ ಟಗರುಗಳನ್ನು; ಹೋತ ಹೋರಿಗಳ ಯಜ್ಞವನ್ನು ಅರ್ಪಿಸುವೆನು.
ಕೀರ್ತನೆಗಳು 66 : 16 (OCVKN)
ಸಮಸ್ತ ದೇವಭಕ್ತರೇ, ಬಂದು ಕೇಳಿರಿ. ದೇವರು ನನಗೆ ಮಾಡಿದ್ದನ್ನು ನಾನು ನಿಮಗೆ ತಿಳಿಸುವೆನು.
ಕೀರ್ತನೆಗಳು 66 : 17 (OCVKN)
ನನ್ನ ದೇವರಿಗೆ ಮೊರೆಯಿಟ್ಟೆನು, ನನ್ನ ನಾಲಿಗೆಯಲ್ಲಿ ದೇವರ ಸ್ತೋತ್ರವಿತ್ತು.
ಕೀರ್ತನೆಗಳು 66 : 18 (OCVKN)
ಪಾಪವನ್ನು ನಾನು ನನ್ನ ಹೃದಯದಲ್ಲಿ ಬೆಳೆಸಿಕೊಂಡಿದ್ದರೆ, ಯೆಹೋವ ದೇವರು ನನ್ನ ಪ್ರಾರ್ಥನೆಯನ್ನು ಕೇಳುತ್ತಿರಲಿಲ್ಲ.
ಕೀರ್ತನೆಗಳು 66 : 19 (OCVKN)
ಆದರೆ ಈಗ ನಿಜವಾಗಿ ನನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾರೆ.
ಕೀರ್ತನೆಗಳು 66 : 20 (OCVKN)
ನನ್ನ ಪ್ರಾರ್ಥನೆಯನ್ನು ತಿರಸ್ಕರಿಸದ ದೇವರಿಗೆ ಸ್ತೋತ್ರವಾಗಲಿ. ತಮ್ಮ ಪ್ರೀತಿಯನ್ನು ನನ್ನಿಂದ ತೊಲಗಿಸದೆ ಇರುವೆ. ದೇವರಿಗೆ ಸ್ತೋತ್ರವಾಗಲಿ.
❮
❯
1
2
3
4
5
6
7
8
9
10
11
12
13
14
15
16
17
18
19
20